ಮಹೀಂದ್ರಾ ಥಾರ್ ಪ್ರತಿಸ್ಪರ್ಧಿಯಾಗಿ ಬರುತ್ತಿದೆ ಮಾರುತಿ ಸುಜುಕಿ ಜಿಮ್ನಿ
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಸ್ತುತ ತಲೆಮಾರಿನ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿಯು 2018ರಿಂದ ಮಾರಾಟವಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಈ ಐಕಾನಿಕ್ ಆಫ್-ರೋಡರ್ ಸುಜುಕಿ ಜಿಮ್ನಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗುತ್ತಿದೆ.

2020ರ ಆಟೋ ಎಕ್ಸ್‌ಪೋ ಸಂದರ್ಭದಲ್ಲಿ ಮಾರುತಿ ಸುಜುಕಿ ಭಾರತದಲ್ಲಿ ಜಿಮ್ನಿಯನ್ನು ಪ್ರದರ್ಶಿಸಿದರು. ಇದು ಆಫ್-ರೋಡ್ ವಾಹನ ಪ್ರಿಯರಿಗೆ ಹೆಚ್ಚಿನ ಕುತೂಹಲ ಹುಟ್ಟು ಹಾಕಿತು. ಮಾರುತಿ ಸುಜುಕಿ ಈ ಜಿಮ್ನಿ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ. ವರದಿಗಳ ಪ್ರಕಾರ, ಜಿಮ್ನಿ ಎಸ್‍ಯುವಿಯನ್ನು 5-ಡೋರಿನ ರೂಪದಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಲಾಗುತ್ತದೆ.

ಇದನ್ನು ಭಾರತದಲ್ಲಿ 5-ಡೋರಿನ ಮಾದರಿಯಾಗಿ ಪ್ರತ್ಯೇಕವಾಗಿ ಮಾರಾಟ ಮಾಡಲಾಗುವುದು. ವರದಿ ಪ್ರಕಾರ, 2022ರ ಜುಲೈ ತಿಂಗಳಲ್ಲಿ ಈ ಐಕಾನಿಕ್-ಆಫ್ ರೋಡರ್ ಜಿಮ್ನಿ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಬಹುದು.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಈ ಐಕಾನಿಕ್ ಆಫ್-ರೋಡರ್ ಜಿಮ್ನಿ ಎಸ್‍ಯುವಿಯ ಉತ್ಪಾನೆಯು ಭಾರತದಲ್ಲಿ ಪ್ರಾರಂಭವಾಗಿದೆ ಎಂದು ವರದಿಗಳಾಗಿದೆ. ಭಾರತದಲ್ಲಿ ಜಿಮ್ನಿ ಎಸ್‍ಯುವಿಯನ್ನು ಉತ್ಪಾದಿಸಿ ವಿದೇಶಗಳಿಗೆ ರಫ್ತು ಮಾಡುತ್ತಾರೆ.

ಈ ಸುಜುಕಿ ಜಿಮ್ನಿ ಎಸ್‍ಯುವಿಯು ಯುರೋಪಿಯನ್ ದೇಶಗಳಲ್ಲಿ ಬಹುಬೇಡಿಕೆಯನ್ನು ಪಡೆದುಕೊಂಡಿದೆ, ಅಲ್ಲದೇ ಸುಜುಕಿ ಜಿಮ್ನಿ ತವರು ಜಪಾನ್ ನಲ್ಲಿಯು ಬೇಡಿಕೆ ಹೆಚ್ಚಾಗಿದೆ. ಸುಜುಕಿ ಕಂಪನಿಯ ಜಪಾನ್ ನಲ್ಲಿರುವ ಕೊಸೈನ ಘಟಕದಲ್ಲಿ ಉತ್ಪಾದನೆಯನ್ನು ಗರಿಷ್ಠ ಪ್ರಮಾಣಕ್ಕೆ ಏರಿಸಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಆದರೂ ಬೇಡಿಕೆಗೆ ಅನುಗುಣವಾಗಿ ಪೂರೈಸಲು ಸಾಧ್ಯವಾಗುತ್ತಿಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಐಕಾನಿಕ್ ಆಪ್-ರೋಡರ್ ಜಿಮ್ನಿ ಬೇಡಿಕೆಯು ಅಷ್ಟರ ಪ್ರಮಾಣಕ್ಕೆ ಇದೆ. ಇದರಿಂದ ಭಾರತದಲ್ಲಿ ಮಾರುತಿ ಸುಜುಕಿಯ ಗುರುಗಾಂವ್‌ನಲ್ಲಿರುವ ಘಟಕದಲ್ಲಿ ಉತ್ಪಾದನೆಯನ್ನು ಪ್ರಾರಂಭಿಸಿದ್ದಾರೆ.

ಇನ್ನು ಜಿಮ್ನಿಯನ್ನು ಇತ್ತೀಚೆಗೆ ಮೆಕ್ಸಿಕೊದಲ್ಲಿ ಸುಜುಕಿ ಕಂಪನಿಯು ಬಿಡುಗಡೆಗೊಳಿಸಿತ್ತು. ಇದು ಕೇವಲ 72 ಗಂಟೆಗಳ ಅವಧಿಯಲ್ಲಿ ಸೋಲ್ಡ್ ಔಟ್ ಆಯ್ತು. ಈ ಮಿನಿ ಎಸ್‍ಯುವಿಯನ್ನು 2018ರಲ್ಲಿ ಜಾಗತಿಕವಾಗಿ ಅನಾವರಣಗೊಂಡಿತು. ಜಾಗತಿಕವಾಗಿ ಅನಾವರಣಗೊಂಡು 1.5 ವರ್ಷಗಳ ಬಳಿಕ ಭಾರತದ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಮಿನಿ-ಎಸ್‌ಯುವಿ 2019 ರ 'ವರ್ಲ್ಡ್ ಅರ್ಬನ್ ಕಾರ್ ಅಫ್ ದಿ ಇಯರ್' ಎಂಬ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಹೊಸ ಜಿಮ್ನಿ ಲ್ಯಾಡರ್-ಫ್ರೇಮ್ ಚಾಸಿಸ್ ಅನ್ನು ಆಧರಿಸಿದೆ. ಇದು 3 ಲಿಂಕ್ ಆಕ್ಸಲ್ ಸಸ್ಪೆಂಷನ್ ಅನ್ನು ಹೊಂದಿದೆ. ಇದು ಕಠಿಣ ಭೂಪ್ರದೇಶಗಳಲ್ಲಿ ಸುಗಮವಾಗಿ ಸಾಗಲು ನೆರವಾಗುತ್ತದೆ. ಈ ಮಿನಿ ಎಸ್‍ಯುವಿಯಲ್ಲಿ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಅಥವಾ 4 ಸ್ಪೀಡ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಮಿನಿ ಎಸ್‍ಯುವಿಯನ್ನು ಡೀಸೆಲ್ ಅಥವಾ ಹೈಬ್ರಿಡ್ ಆಯ್ಕೆಗಳಲ್ಲಿ ಬಿಡುಗಡೆಗೊಳಿಸುವುದಿಲ್ಲ. ಭಾರತದಲ್ಲಿ ಬಿಡುಗಡೆಯಾದರೆ ಈ ಜಿಮ್ನಿ ಎಸ್‍ಯುವಿ 33 ವರ್ಷಗಳ ಕಾಲ ದೇಶದಲ್ಲಿ ಮಾರಾಟವಾಗಿದ್ದ ಜನಪ್ರಿಯ ಜಿಪ್ಸಿ ಎಸ್‍ಯುವಿಯ ಉತ್ತರಾಧಿಕಾರಿಯಾಗಲಿದೆ.

ಭಾರತದಲ್ಲಿ ಆಫ್-ರೋಡ್ ವಾಹನ ಎಂದು ಹೇಳಿದಾಗ ಮೊದಲು ಯೋಚನೆಗೆ ಬರುವುದು ಮಹೀಂದ್ರಾ ಥಾರ್ ಎಂದು ಹೇಳಬಹುದು. ಆದರೆ ಅದೇ ರೀತಿ ಉತ್ತಮ ಆಫ್-ರೋಡ್ ಸಾಮರ್ಥ್ಯವನ್ನು ಹೊಂದಿರುವ ಜಿಮ್ನಿ ಭಾರತದಲ್ಲಿ ಬಿಡುಗಡೆಗೊಂಡ ಬಳಿಕ ಥಾರ್ ಎಸ್‍ಯುವಿಗೆ ಪ್ರಬಲ ಎದುರಾಳಿ ಆಗುತ್ತದೆ.


Click it and Unblock the Notifications