ಮಹೀಂದ್ರಾ ಥಾರ್ ಎಸ್‍ಯುವಿಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಾರುತಿ ಸುಜುಕಿ ಜಿಮ್ನಿ

ದೇಶದ ಅತಿ ದೊದ್ದ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ದೇಶೀಯ ಮಾರುಕಟ್ಟೆಯಲ್ಲಿ ಜಿಮ್ನಿ ಆಫ್-ರೋಡರ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ. ಈ ಜಿಮ್ನಿ ಎಸ್‍ಯುವಿಯನ್ನು ಮಾರುತಿ ಸುಜುಕಿ ಕಂಪನಿಯು 2020ರ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಲಾಗಿತ್ತು.

ಮಹೀಂದ್ರಾ ಥಾರ್ ಎಸ್‍ಯುವಿಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಾರುತಿ ಸುಜುಕಿ ಜಿಮ್ನಿ

ಇನ್ನು ವರದಿಗಳ ಪ್ರಕಾರ ಮಾರುತಿ ಸುಜುಕಿ ಜಿಮ್ನಿ 5-ಡೋರ್ ಎಸ್‍ಯುವಿಯು ಮುಂದಿನ ವರ್ಷದ ಜುಲೈ ತಿಂಗಳಿನಲ್ಲಿ ಬಿಡುಗಡೆಗೊಳಿಸಬಹುದು. ಇನ್ನು ಸುಜುಕಿ ಜಿಮ್ನಿ 5-ಡೋರ್ ಎಸ್‍ಯುವಿಯ ಉತ್ಪಾದನೆಗೆ ಸಿದ್ಧಗೊಂಡಿರುವ ಮಾದರಿಯನ್ನು ಮುಂದಿನ ವರ್ಷ ನಡೆಯುವ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಬಹುದು ಎಂದು ನಿರೀಕ್ಷಿಸುತ್ತೇವೆ. ವರದಿಗಳ ಪ್ರಕಾರ, ಈ ಜಿಮ್ನಿ ಎಸ್‌ಯುವಿಯು ಒಟ್ಟಾರೆ 3,850 ಎಂಎಂ ಉದ್ದ, 1,645 ಎಂಎಂ ಅಗಲ ಮತ್ತು 1,730 ಎಂಎಂ ಎತ್ತರವನ್ನು ಹೊಂದಿದೆ.

ಮಹೀಂದ್ರಾ ಥಾರ್ ಎಸ್‍ಯುವಿಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಾರುತಿ ಸುಜುಕಿ ಜಿಮ್ನಿ

ಇನ್ನು ಈ ಎಸ್‍ಯುವಿ 2,550 ಎಂಎಂ ವ್ಹೀಲ್‌ಬೇಸ್ ಅನ್ನು ಹೊಂದಿದೆ. ಸಾಮಾನ್ಯ 3-ಡೋರಿನ ರೂಪಾಂತರಕ್ಕೆ ಹೋಲಿಸಿದರೆ, ಒಟ್ಟಾರೆ ಉದ್ದವು 300 ಎಂಎಂ ಮತ್ತು ವ್ಹೀಲ್‌ಬೇಸ್ ಉದ್ದವು 300 ಎಂಎಂ ನಷ್ಟು ಹೆಚ್ಚಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮಹೀಂದ್ರಾ ಥಾರ್ ಎಸ್‍ಯುವಿಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಾರುತಿ ಸುಜುಕಿ ಜಿಮ್ನಿ

ಈ ಜಿಮ್ನಿ ಆಫ್-ರೋಡ್ ಎಸ್‍ಯುವಿಯಲ್ಲಿ 15 ಇಂಚಿನ ವ್ಹೀಲ್ ಅನ್ನು ಹೊಂದಿರುತ್ತದೆ. ಇನ್ನು 5-ಡೋರ್ ಸುಜುಕಿ ಜಿಮ್ನಿ ಎಸ್‍ಯುವಿಯಲ್ಲಿ 1.5-ಲೀಟರ್ ನಾಲ್ಕು ಸಿಲಿಂಡರ್ ಕೆ-ಸೀರಿಸ್ ಇನ್-ಲೈನ್ ಡಿಒಹೆಚ್ಸಿ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿರಲಿದೆ.

ಮಹೀಂದ್ರಾ ಥಾರ್ ಎಸ್‍ಯುವಿಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಾರುತಿ ಸುಜುಕಿ ಜಿಮ್ನಿ

ಈ ಎಂಜಿನ್ 6,000 ಆರ್‌ಪಿಎಂನಲ್ಲಿ 101 ಬಿಹೆಚ್‌ಪಿ ಪವರ್ ಮತ್ತು 4,000 ಆರ್‌ಪಿಎಂನಲ್ಲಿ 130 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಸ್ಟ್ಯಾಂಡರ್ಡ್‌ನಂತೆ ಜೋಡಿಸಲಾಗಿದ್ದು, ನಾಲ್ಕು-ಸ್ಪೀಡ್ ಟಾರ್ಕ್ ಕರ್ನವಾಟರ್ ಯುನಿಟ್ ಆಯ್ಕೆಯನ್ನು ನೀಡಲಾಗಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಮಹೀಂದ್ರಾ ಥಾರ್ ಎಸ್‍ಯುವಿಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಾರುತಿ ಸುಜುಕಿ ಜಿಮ್ನಿ

ಐದು ಡೋರುಗಳ ಜಿಮ್ನಿ ಇನ್ನು ನಾಲ್ಕು ಮೀಟರ್ ಉದ್ದದ ಮಾದರಿಯಾಗಿದೆ. ಭಾರತದಲ್ಲಿ ಇದು ತೆರಿಗೆ ಪ್ರಯೋಜನಗಳನ್ನು ಪಡೆಯುತ್ತದೆ. 2,550 ಎಂಎಂ ವ್ಹೀಲ್ ಬೇಸ್ ಉದ್ದವು ಕಾಂಪ್ಯಾಕ್ಟ್ ಎಸ್‌ಯುವಿಗಳಿಗಿಂತ ಹೆಚ್ಚಿನದಾಗಿದೆ.

ಮಹೀಂದ್ರಾ ಥಾರ್ ಎಸ್‍ಯುವಿಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಾರುತಿ ಸುಜುಕಿ ಜಿಮ್ನಿ

ಇದು ಸುಮಾರು 2,500 ಎಂಎಂ ವ್ಹೀಲ್‌ಬೇಸ್ ಹೊಂದಿದೆ ಆದರೆ ಮಧ್ಯಮ ಗಾತ್ರದ ಎಸ್‍ಯುವಿಗಿಂತ ಚಿಕ್ಕದಾಗಿದೆ. ಇದರಿಂದ 5-ಡೋರ್ ಜಿಮ್ನಿ ಮಾದರಿಯು ಕಾಂಪ್ಯಾಕ್ಟ್ ಎಸ್‌ಯುವಿ ಮತ್ತು ಮಧ್ಯಮ ಗಾತ್ರದ ಎಸ್‍ಯುವಿಯ ನಡುವಿನ ವಿಭಾಗದಲ್ಲಿ ಇರಿಸಬಹುದು.

ಮಹೀಂದ್ರಾ ಥಾರ್ ಎಸ್‍ಯುವಿಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಾರುತಿ ಸುಜುಕಿ ಜಿಮ್ನಿ

5-ಡೋರ್ ಜಿಮ್ನಿ ಎಸ್‍ಯುವಿಯ ವ್ಹೀಲ್‌ಬೇಸ್ ಮಹೀಂದ್ರಾ ಥಾರ್‌ಗಿಂತ 100 ಎಂಎಂ ಉದ್ದವಿರುತ್ತದೆ, ಒಟ್ಟಾರೆ ಜಿಮ್ನಿ ಆಫ್-ರೋಡ್ ಎಸ್‍ಯುವಿಯು ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ, ಅಗ್ರೇಸಿವ್ ಲುಕ್ ಮತ್ತು ಸಾಟಿಯಿಲ್ಲದ ಆಫ್-ರೋಡ್ ಸಾಮರ್ಥ್ಯವನ್ನು ಹೊಂದಿರುತ್ತದೆ.

ಮಹೀಂದ್ರಾ ಥಾರ್ ಎಸ್‍ಯುವಿಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಾರುತಿ ಸುಜುಕಿ ಜಿಮ್ನಿ

ಸದ್ಯ ಭಾರತದಲ್ಲಿ ಆಫ್-ರೋಡ್ ವಾಹನ ಎಂದು ಹೇಳಿದಾಗ ಮೊದಲು ಯೋಚನೆಗೆ ಬರುವುದು ಮಹೀಂದ್ರಾ ಥಾರ್ ಎಂದೇ ಹೇಳಬಹುದು. ಆದರೆ ಅದೇ ರೀತಿ ಉತ್ತಮ ಆಫ್-ರೋಡ್ ಸಾಮರ್ಥ್ಯವನ್ನು ಹೊಂದಿರುವ ಜಿಮ್ನಿ ಭಾರತದಲ್ಲಿ ಬಿಡುಗಡೆಗೊಂಡರೆ ಥಾರ್ ಎಸ್‍ಯುವಿಗೆ ಪ್ರಬಲ ಎದುರಾಳಿ ಆಗುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮಹೀಂದ್ರಾ ಥಾರ್ ಎಸ್‍ಯುವಿಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಾರುತಿ ಸುಜುಕಿ ಜಿಮ್ನಿ

ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಭರ್ಜರಿ ಬೇಡಿಕೆಯೊಂದಿಗೆ ಸುಜುಕಿ ಜಿಮ್ನಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಪ್ರಸ್ತುತ ತಲೆಮಾರಿನ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿಯು 2018 ರಿಂದ ಮಾರಾಟವಾಗುತ್ತಿದೆ.

ಮಹೀಂದ್ರಾ ಥಾರ್ ಎಸ್‍ಯುವಿಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಾರುತಿ ಸುಜುಕಿ ಜಿಮ್ನಿ

2020ರ ಆಟೋ ಎಕ್ಸ್‌ಪೋ ಸಂದರ್ಭದಲ್ಲಿ ಮಾರುತಿ ಸುಜುಕಿ ಭಾರತದಲ್ಲಿ ಜಿಮ್ನಿಯನ್ನು ಪ್ರದರ್ಶಿಸಿದಾಗ ಆಫ್-ರೋಡ್ ವಾಹನ ಪ್ರಿಯರಿಗೆ ಹೆಚ್ಚಿನ ಕುತೂಹಲ ಹುಟ್ಟು ಹಾಕಿತು. ಒಟ್ಟಿನಲ್ಲಿ ಭಾರತದಲ್ಲಿ ಬಿಡುಗಡೆಯಾದರೆ ಈ ಜಿಮ್ನಿ ಎಸ್‍‍ಯುವಿ 33 ವರ್ಷಗಳ ಕಾಲ ದೇಶದಲ್ಲಿ ಮಾರಾಟವಾಗಿದ್ದ ಜನಪ್ರಿಯ ಜಿಪ್ಸಿ ಎಸ್‍‍ಯುವಿಯ ಉತ್ತರಾಧಿಕಾರಿಯಾಗಲಿದೆ ಎಂದು ಹೇಳಲಾಗುತ್ತಿದೆ..

Most Read Articles

Kannada
English summary
Maruti Suzuki Jimny India Launch Timeline Revealed. Read In Kannada.
Story first published: Friday, May 7, 2021, 12:35 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X