ಶೀಘ್ರದಲ್ಲೇ ಬಿಡುಗಡೆಯಾಗಲಿದೆ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಮಾರುತಿ ಸುಜುಕಿ ಕಂಪನಿಯು ತನ್ನ ಬಹುನಿರೀಕ್ಷಿತ 2021ರ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಕೆಲವು ವರದಿಗಳ ಪ್ರಕಾರ, 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರು ಭಾರತದಲ್ಲಿ ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾಗಬಹುದು. ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ವಿಫ್ಟ್ ಕಾರು 2018ರ ಆಟೋ ಎಕ್ಸ್‌ಪೋದಲ್ಲಿ ಪರಿಚಯಿಸಲಾಯಿತು. ಮಾರುತಿ ಸ್ವಿಫ್ಟ್ ದೀರ್ಘಕಾಲದಿಂದಲೇ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಭಾರತೀಯ ಮಾರುಕಟ್ಟೆಯಲ್ಲಿ ಈ ಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ 23 ಲಕ್ಷ ಯುನಿಟ್ ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದೆ. ಜನಪ್ರಿಯ ಹ್ಯಾಚ್‌ಬ್ಯಾಕ್ ಸ್ವಿಫ್ ಕಾರನ್ನು ಮಿಡ್-ಲೈಫ್ ನವೀಕರಣವನ್ನು ಮಾಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸ್ವಿಫ್ಟ್ ಕಾರಿಗೆ ಹೋಲಿಸಿದರೆ ಮುಂಭಾಗದಲ್ಲಿ ಕೆಲವು ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಹೊಸ ರೇಡಿಯೇಟರ್ ಗ್ರಿಲ್ ವಿನ್ಯಾಸವನ್ನು ಹೊಂದಿದೆ ಮತ್ತು ಬ್ಲ್ಯಾಕ್ ರೂಫ್ ಮತ್ತು ಡ್ಯುಯಲ್ ಟೋನ್ ಬಣ್ಣಗಳ ಅಂಶಗಳನ್ನು ಹೊಂದಿರುತ್ತದೆ. ಸ್ಪಾಟ್ ಟೆಸ್ಟ್ ವೇಳೆ ಮುಂಭಾಗದ ಏರ್ ಟೆಕ್ ಭಾಗವನ್ನು ಕವರ್ ಮಾಡಲಾಗಿದೆ. ಆದ್ದರಿಂದ ಈ ಸಮಯದಲ್ಲಿ, ನಾವು ಹೊಸ ವಿನ್ಯಾಸದ ಬಗ್ಗೆ ಮಾತನಾಡಲು ಸಾಧ್ಯವಾಗುವುದಿಲ್ಲ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಗ್ಲೋಬಲ್-ಸ್ಪೆಕ್ ಕಾರಿನ ಆಧಾರದ ಮೇಲೆ, ಸ್ವಿಫ್ಟ್ ಡೈಮಂಡ್-ಸ್ಟಡ್-ಪ್ಯಾಟರ್ನ್ ಮೆಶ್ ಗ್ರಿಲ್ ಪಡೆಯುವ ಸಾಧ್ಯತೆಯಿದೆ. ಚಿತ್ರಗಳಲ್ಲಿ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಡ್ಯುಯಲ್-ಟೋನ್ ಅಲಾಯ್ ವ್ಹೀಲ್‌ಗಳನ್ನು ಹೊಂದಿದೆ. ಉಳಿದಂತೆ ಯಾವುದೇ ಪ್ರಮುಖ ಬದಲಾವನೆಗಳಿರುವುದಿಲ್ಲ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಶೀಘ್ರದಲ್ಲೇ ಬಿಡುಗಡೆಯಾಗಲಿದೆ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಜಾಗತಿಕ ಸ್ಪೆಕ್ ಕಾರಿನ ಆಧಾರದ ಮೇಲೆ, ಯಾವುದೇ ಪ್ರಮುಖ ಬದಲಾವಣೆಗಳನ್ನು ಹೊಂದಿರುವುದಿಲ್ಲ. ಇದು ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಮತ್ತು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗೆ ಸ್ಮಾರ್ಟ್ ಸ್ಟುಡಿಯೋ 2.0 ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಂದಿರುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಇದರೊಂದಿಗೆ ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್, ಸೆನ್ಸಾರ್ ಗಳೊಂದಿಗೆ ರೇರ್ ಕ್ಯಾಮೆರಾ, ಇಬಿಡಿಯೊಂದಿಗೆ ಎಬಿಎಸ್ ಮತ್ತು ಡ್ಯುಯಲ್ ಏರ್‌ಬ್ಯಾಗ್‌ಗಳನ್ನು ಒಳಗೊಂಡಿರುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಶೀಘ್ರದಲ್ಲೇ ಬಿಡುಗಡೆಯಾಗಲಿದೆ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರಿನಲ್ಲಿ ಲೀಟರ್ ಡ್ಯುಯಲ್ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಅಳಡಿಸುವ ಸಾಧ್ಯತೆಗಳಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್‌ಎಂ ಟಾರ್ಕ್ ಅನ್ನು ಸಾಮರ್ಥ್ಯ ಹೊಂದಿದೆ,

ಶೀಘ್ರದಲ್ಲೇ ಬಿಡುಗಡೆಯಾಗಲಿದೆ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಬಹುದು. ಇನ್ನು ಹೊಸ ಸ್ವಿಫ್ಟ್ ಕಾರಿನಲ್ಲಿ ಡೀಸೆಲ್ ಎಂಜಿನ್ ಆಯ್ಕೆ ಲಭ್ಯವಿರುವುದಿಲ್ಲ. ಇನ್ನು ಈ ಹೊಸ ಸ್ವಿಫ್ಟ್ ಫೇಸ್‌ಲಿಫ್ಟ್ ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಬಹುದು.

Most Read Articles

Kannada
English summary
Maruti Suzuki Swift Facelift India Launch Expected Very Soon. Read In Kannada.
Story first published: Monday, January 25, 2021, 19:21 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X