Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 3 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಕಾರು ಬಿಡುಗಡೆ ದಿನಾಂಕ ಬಹಿರಂಗ
ಜರ್ಮನ್ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಎ-ಕ್ಲಾಸ್ ಲಿಮೋಸಿನ್ ಕಾರನ್ನು ಇತ್ತೀಚೆಗೆ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಇದೀಗ ಮರ್ಸಿಡಿಸ್ ಬೆಂಝ್ ಕಂಪನಿಯು ತನ್ನ ಹೊಸ ಎ-ಕ್ಲಾಸ್ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ.

ಕರೋನಾ ಸೋಂಕಿನ ಭೀತಿಯಿಂದಾಗಿ ಎ-ಕ್ಲಾಸ್ ಲಿಮೋಸಿನ್ ಕಾರಿನ ಬಿಡುಗಡೆ ವಿಳಂಬವಾಗಿದೆ. ಆದರೆ ಇದೀಗ ಮರ್ಸಿಡಿಸ್ ಬೆಂಝ್ ತನ್ನ ಎ-ಕ್ಲಾಸ್ ಲಿಮೋಸಿನ್ ಕಾರಿನ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿದೆ. ಈ ಐಷಾರಾಮಿ ಎ-ಕ್ಲಾಸ್ ಕಾರು ಮಾರ್ಚ್ 25ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಕಾರು ಎ 200, ಎ 200 ಡಿ, ಮತ್ತು ಮೇಡ್-ಇನ್ ಇಂಡಿಯಾ ಎ 35 ಎಎಂಜಿ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿರುತ್ತದೆ.

ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಅನ್ನು ಅಳವಡಿಸಿದೆ. ಇಂಟಿಗ್ರೇಟೆಡ್ ಡಿಆರ್‍ಎಲ್‍ಗಳನ್ನು ಹೊಂದಿರುವ ಎಲ್‍ಇಡಿ ಹೆಡ್‍ಲ್ಯಾಂಪ್‍ಗಳನ್ನು ಹೊಂದಿದೆ. ಐಷಾರಾಮಿ ಸೆಡಾನ್ ಎ-ಕ್ಲಾಸ್‍ನಲ್ಲಿ ದೊಡ್ಡ ರೂಫ್ ಅನ್ನು ಹೊಂದಿದೆ. ದೊಡ್ಡದಾದ ಸ್ವೆಫ್ಟ್ ಲೈಟ್ ಮತ್ತು ಹಿಂಭಾಗದಲ್ಲಿ ಆಕರ್ಷಕ ಬಂಪರ್ ಅನ್ನು ಹೊಂದಿದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ವಿಶೇಷವಾಗಿ ಎ-ಕ್ಲಾಸ್ ಲಿಮೋಸಿನ್ ಕಾರಿನಲ್ಲಿ ಟ್ವೀಕ್ಡ್ ಫ್ರಂಟ್ ಗ್ರಿಲ್ ಮತ್ತು ಬಂಪರ್, ಸ್ಪೋರ್ಟಿಯರ್ ಅಲಾಯ್ ವ್ಹೀಲ್, ಆಗ್ರೆಸಿವ್ ಹಿಂಭಾಗದ ಡಿಫ್ಯೂಸರ್ ಮತ್ತು ವೃತ್ತಕಾರದ ಡ್ಯುಯಲ್ ಟಿಪ್ ಎಕ್ಸಾಸ್ಟ್ ಪೈಪ್‍ಗಳನ್ನು ಒಳಗೊಂಡಿದೆ.

ಎ-ಕ್ಲಾಸ್ ಲಿಮೋಸಿನ್ ಕಾರಿನ ಇಂಟಿರಿಯರ್‍ನಲ್ಲಿ ದೊಡ್ಡ ಸಲೂನ್‍ಗಳನ್ನು ಹೊಂದಿದೆ. ಮರ್ಸಿಡಿಸ್ ಬೆಂಝ್ ಎಂಬಿಯುಎಕ್ಸ್ ಸಿಸ್ಟಂ, ವಾಯ್ಸ್ ಕಂಟ್ರೋಲ್ ಮತ್ತು ಫ್ರೀಸ್ಟ್ಯಾಂಡಿಂಗ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇನ್ಫೋಟೇನ್‍ಮೆಂಟ್ ಡಿಸ್‍ಪ್ಲೇ ಸುತ್ತಲೂ ಮೂರು ವೃತ್ತಾಕಾರದ ಕ್ರೋಮ್ ಮತ್ತು ಕ್ರೋಮ್ ಕವರ್ ಆಗಿರುವ ಸ್ಟೀಯರಿಂಗ್ ನಿಂದ ಕಾರಿನ ಇಂಟಿರಿಯರ್ ಐಷಾರಾಮಿ ಲುಕ್ ಅನ್ನು ಹೊಂದಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಕಾರಿನ ಪೆಟ್ರೋಲ್ ಎ 200 ರೂಪಾಂತರದಲ್ಲಿ 1.4-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 161 ಬಿಹೆಚ್‌ಪಿ ಮತ್ತು 250 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಇನ್ನು ಡೀಸೆಲ್ ಆವೃತ್ತಿಯು 2.0-ಲೀಟರ್ ನಾಲ್ಕು ಸಿಲಿಂಡರ್ ಆಯಿಲ್ ಬರ್ನರ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 147 ಬಿಹೆಚ್‌ಪಿ ಮತ್ತು 320 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಪೆಟ್ರೋಲ್ ಎಂಜಿನ್ ಅನ್ನು 7-ಸ್ಪೀಡ್ ಡಿಸಿಟಿಯೊಂದಿಗೆ ಜೋಡಿಸಲಾಗಿದ್ದರೆ, ಡೀಸೆಲ್ 8-ಸ್ಪೀಡ್ ಡಿಸಿಟಿಯನ್ನು ಪಡೆಯುತ್ತದೆ.
MOST READ: ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ

ರೇಂಜ್-ಟಾಪಿಂಗ್ ಮರ್ಸಿಡಿಸ್-ಎಎಂಜಿ ಎ 35 ರೂಪಾಂತರವು 2.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 302 ಬಿಹೆಚ್‌ಪಿ ಮತ್ತು 400 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಇನ್ನು ಈ ಕಾರಿನಲ್ಲಿ 4 ಮ್ಯಾಟಿಕ್ ಆಲ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ಕೂಡ ಅಳವಡಿಸಲಾಗಿದೆ. ಈ ಎಎಂಜಿ ಎ35 ಕಾರು ಕೇವಲ 4.8 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ 225 ಕಿ.ಮೀ ಟಾಪ್ ಸ್ಫೀಡ್ ಅನ್ನು ಹೊಂದಿರುತ್ತದೆ.

ಈ ಐಷಾರಾಮಿ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಕಾರು ಭಾರತದಲ್ಲಿ ಬಿಡುಗಡೆಯಾದ ಬಳಿಕ ಆಡಿ ಎ2 ಮತ್ತು ಬಿಎಂಡಬ್ಲೂ 2 ಸೀರಿಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಈ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.40 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.