Just In
- 11 hrs ago
ಹೊಸ ಫೀಚರ್ಸ್ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- 13 hrs ago
ಫೋರ್ಡ್ ಮುಸ್ಟಾಂಗ್ ಕಾರಿನಂತೆ ಮಾಡಿಫೈಗೊಂಡ ಬಲೆನೊ ಸೆಡಾನ್ ಕಾರು
- 15 hrs ago
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- 24 hrs ago
ಎಕ್ಸ್ಯುವಿ700 ಎಸ್ಯುವಿ ಕಾರಿನ ಮತ್ತಷ್ಟು ಹೊಸ ಮಾಹಿತಿ ಹಂಚಿಕೊಂಡ ಮಹೀಂದ್ರಾ
Don't Miss!
- Sports
ಐಪಿಎಲ್ 2021: ಕೊಲ್ಕತ್ತಾ ವಿರುದ್ಧದ ಸೋಲಿಗೆ ಕಾರಣ ಹೇಳಿದ ಡೇವಿಡ್ ವಾರ್ನರ್
- News
ಕರ್ಫ್ಯೂ ನಡುವೆಯೂ ಮೋಜು ಮಸ್ತಿ! ಪಾರ್ಟಿ ಮಾಡುತ್ತಿದ್ದ ಗ್ಯಾಂಗ್ ಕಂಬಿ ಹಿಂದೆ..!
- Movies
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅನಾವರಣವಾಯ್ತು 480 ಕಿ.ಮೀ ಮೈಲೇಜ್ ನೀಡುವ ಮರ್ಸಿಡಿಸ್ ಬೆಂಝ್ ಇಕ್ಯೂಎ ಎಲೆಕ್ಟ್ರಿಕ್ ಎಸ್ಯುವಿ
ಜರ್ಮನ್ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಇಕ್ಯೂಎ ಎಲೆಕ್ಟ್ರಿಕ್ ಎಸ್ಯುವಿಯನ್ನು ಜಾಗಾತಿಕವಾಗಿ ಅನಾವರಣಗೊಳಿಸಿದೆ. ಈ ಮರ್ಸಿಡಿಸ್ ಬೆಂಝ್ ಇಕ್ಯೂಎ ಬ್ರ್ಯಾಂಡ್ನ ಹೊಸ ಎಂಟ್ರಿ ಲೆವೆಲ್ ಎಲೆಕ್ಟ್ರಿಕ್ ಮಾದರಿಯಾಗಿದೆ.

ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಎ ಎಲೆಕ್ಟ್ರಿಕ್ ಎಸ್ಯುವಿಯು ಈ ವರ್ಷದ ಅಂತ್ಯದಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಬಹುದು. ಈ ಮರ್ಸಿಡಿಸ್ ಬೆಂಝ್ ಇಕ್ಯೂಎ ಎಲೆಕ್ಟ್ರಿಕ್ ಎಸ್ಯುವಿ ಬ್ರ್ಯಾಂಡ್ನ ಜಿಎಲ್ಎ ಎಸ್ಯುವಿಯನ್ನು ಆಧರಿಸಿದೆ, ಇದೇ ರೀತಿಯ ಸಿಲೂಯೆಟ್ ಮತ್ತು ಆಯಾಮಗಳನ್ನು ಒಳಗೊಂಡಿದೆ. ಇನ್ನು ಹೊಸ ಇಕ್ಯೂಎ ತನ್ನದೇ ಆದ ಸ್ಟೈಲಿಂಗ್ ಅಂಶಗಳು ಮತ್ತು ಫೀಚರ್ ಗಳನ್ನು ಕೂಡ ಒಳಗೊಂಡಿರುತ್ತದೆ.

ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಎ ಎಲೆಕ್ಟ್ರಿಕ್ ಎಸ್ಯುವಿಯ ಮುಂಭಾಗ ಬ್ಲ್ಯಾಕ್ ಬಣ್ಣದ ಫಿನಿಶಿಂಗ್ ಗ್ರಿಲ್, ಇಂಟಿಗ್ರೇಟೆಡ್ ಎಲ್ಇಡಿ ಡಿಆರ್ಎಲ್ ಮತ್ತು ಟರ್ನ್ ಇಂಡಿಕೇಟರ್ಗಳೊಂದಿಗೆ ಫುಲ್-ಎಲ್ಇಡಿ ಹೆಡ್ಲ್ಯಾಂಪ್ ಯುನಿಟ್ ಗಳನ್ನು ಹೊಂದಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್ಯುವಿ300

ಇಕ್ಯೂಎ ಎಲೆಕ್ಟ್ರಿಕ್ ಎಸ್ಯುವಿಯ ಸೈಡ್ ಫ್ರೊಪೈಲ್ ಬಗ್ಗೆ ಹೇಳುವುದಾದರೆ, 20 ಇಂಚುಗಳಷ್ಟು ದೊಡ್ಡದಾದ ಅಲಾಯ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಈ ಅಲಾಯ್ ವ್ಹೀಲ್ ಗಳು ಗೋಲ್ಡನ್ ಬಣ್ಣದೊಂದಿಗೆ ಆಕರ್ಷಕವಾಗಿದೆ.

ಇನ್ನು ಮರ್ಸಿಡಿಸ್ ಬೆಂಝ್ ಇಕ್ಯೂಎ ಎಲೆಕ್ಟ್ರಿಕ್ ಎಸ್ಯುವಿಯ ಹಿಂಭಾಗದಲ್ಲಿ ವಿಭಿನ್ನ ಬೂಟ್ ವಿನ್ಯಾಸವನ್ನು ಹೊಂದಿದ್ದು, ಇದು ಹೊಸ ಎಲ್ಇಡಿ ಟೈಲ್ಲೈಟ್ಗಳೊಂದಿಗೆ ಬರುತ್ತದೆ, ಇದನ್ನು ಎಲ್ಇಡಿ ಸ್ಟ್ರಿಪ್ ಮೂಲಕ ಸಂಪರ್ಕಿಸಲಾಗಿದೆ. ಹೊಸ ಟೈಲ್ಲೈಟ್ ವಿನ್ಯಾಸವು ಎದ್ದು ಕಾಣುವಂತೆ ಇದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಎ ಎಲೆಕ್ಟ್ರಿಕ್ ಎಸ್ಯುವಿಯ ಇಂಟಿರಿಯರ್ ನಲ್ಲಿ ಸ್ಟ್ಯಾಂಡರ್ಡ್ ಜಿಎಲ್ಎ ಮಾದರಿಯನ್ನು ಹೋಲುವ ವಿನ್ಯಾಸವನ್ನು ಹೊಂದಿದೆ. ಆದರೆ ಕೆಲವು ಬದಲಾವಣೆಗಳು ಮತ್ತು ನವೀಕರಣಗಳನ್ನು ಒಳಗೊಂಡಿದೆ. ಇದರಲ್ಲಿ ಎಸಿ ವೆಂಟ್, ಸೀಟುಗಳು ಮತ್ತು ಗೋಲ್ಡನ್ ಇನ್ಸರ್ಟ್ ಗಳು ಸೇರಿವೆ.

ಇನ್ನು ಇಕ್ಯೂಎ ಎಲೆಕ್ಟ್ರಿಕ್ ಎಸ್ಯುವಿಯಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದ್ದು, ಇದರ ಸುತ್ತಲೂ ರೂಸ್-ಗೋಲ್ಡನ್ ಬಣ್ಣಗಳ ಅಂಶಗಳನ್ನು ಹೊಂದಿದೆ. ಇನ್ನು ಈ ಮರ್ಸಿಡಿಸ್ ಬೆಂಝ್ ಇಕ್ಯೂಎ ಎಲೆಕ್ಟ್ರಿಕ್ ಎಸ್ಯುವಿ ಆಕ್ಸಲ್ನಲ್ಲಿ ಎಲೆಕ್ಟ್ರಿಕ್ ಮೋಟಾರ್ ಅನ್ನು ಹೊಂದಿದ್ದು, ಇದನ್ನು ಡಬಲ್ ಡೆಕ್ಕರ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್ಗೆ ಜೋಡಿಸಲಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಎಲೆಕ್ಟ್ರಿಕ್ ಮೋಟರ್ ಹೊಂದಿರುವ 66.5 ಕಿ.ವ್ಯಾಟ್ ಬ್ಯಾಟರಿ ಪ್ಯಾಕ್ 188 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಒಂದು ಬಾರಿ ಪೂರ್ಣ ಪ್ರಮಾಣದ ಚಾರ್ಜ್ ಮಾಡಿದರೆ ಇಕ್ಯೂಎ 480 ಕಿ.ಮೀ ಚಲಿಸುತ್ತದೆ. ಭವಿಷ್ಯದಲ್ಲಿ ಡ್ಯುಯಲ್-ಮೋಟಾರ್ ರೂಪಾಂತರ ಇರಲಿದ್ದು, ಇದು 500 ಕಿಲೋಮೀಟರ್ಗಿಂತ ಹೆಚ್ಚಿನ ಮೈಲೇಜ್ ಅನ್ನು ನೀಡುತ್ತದೆ ಎಂದು ಕಂಪನಿ ಹೇಳಿದೆ.

ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಎ ಎಲೆಕ್ಟ್ರಿಕ್ ಎಸ್ಯುವಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಆದರೆ ಈ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವುದರ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ.