1.0-ಲೀಟರ್ ಟರ್ಬೊ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ MG Astor ಕಂಪ್ಯಾಂಕ್ಟ್ ಎಸ್‌ಯುವಿ

ದೇಶಿಯ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ವಿವಿಧ ಕಾರು ಮಾದರಿಗಳ ಅಬ್ಬರ ಜೋರಾಗಿದ್ದು, MG Motor ಕಂಪನಿಯು ಸಹ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಹೊಸ Astor ಕಾರು ಮದರಿಯನ್ನು ಬಿಡುಗಡೆ ಮಾಡುತ್ತಿದೆ.

ಬಿಡುಗಡೆಯಾಗಲಿದೆ MG ಹೊಸ Astor

MG Astor ಕಾರು ಮುಂದಿನ ತಿಂಗಳು ಸೆಪ್ಟೆಂಬರ್ ಎರಡನೇ ವಾರದಲ್ಲಿ ದೇಶಿಯ ಮಾರುಕಟ್ಟೆಯನ್ನು ಪ್ರವೇಶಿಸುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಎಂಜಿನ್ ಆಯ್ಕೆ ಕುರಿತಂತೆ ಕೆಲವು ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಟುತ್ತಿವೆ. ಹೊಸ ಕಾರಿನ ಅನಾವರಣದ ಹೊರತು MG ಕಂಪನಿಯು ಯಾವುದೇ ಮಾಹಿತಿ ಹಂಚಿಕೊಂಡಿಲ್ಲವಾದರೂ Astor ಕಾರಿನ ಬಗೆಗೆ ಕೆಲವು ಮಾಹಿತಿಗಳು ಕಂಪ್ಯಾಕ್ಟ್ ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದೆ.

ಬಿಡುಗಡೆಯಾಗಲಿದೆ MG ಹೊಸ Astor

Hector, Hectro Plus, Gloster ಮತ್ತು ZS EV ಕಾರು ಮಾದರಿಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ MG Motor ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆ ಅನುಸಾರವಾಗಿ Astor ಕಾರು ಮಾದರಿಯನ್ನು ಅಭಿವೃದ್ದಿಪಡಿಸಿದ್ದು, Hyundai Creta, Kia Seltos, Skoda Kushaq ಕಾರುಗಳಿಗೆ ಪೈಪೋಟಿಯಾಗಿ ಬಿಡುಗಡೆ ಮಾಡಲಾಗುತ್ತಿದೆ.

ಬಿಡುಗಡೆಯಾಗಲಿದೆ MG ಹೊಸ Astor

ವಿನೂತನ ವಿನ್ಯಾಸ ಮತ್ತು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿರುವ ಹೊಸ Astor ಕಾರು ಪ್ರಮುಖ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳ ಜೊತೆಗೆ ಆಕರ್ಷಕ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ.

ಬಿಡುಗಡೆಯಾಗಲಿದೆ MG ಹೊಸ Astor

ಹೊಸ MG Astor ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಸಾಮಾನ್ಯ ಪೆಟ್ರೋಲ್ ಮಾದರಿಯನ್ನು ಮತ್ತು ಪರ್ಫಾಮೆನ್ಸ್ ಬಯಸುವ ಗ್ರಾಹಕರು ಟರ್ಬೊ ಪೆಟ್ರೋಲ್ ಮಾದರಿಯನ್ನು ಖರೀದಿಸಬಹುದಾಗಿದೆ.

ಬಿಡುಗಡೆಯಾಗಲಿದೆ MG ಹೊಸ Astor

ಸಾಮಾನ್ಯ ಮಾದರಿಯಾಗಿ 1.5-ಲೀಟರ್ ಪೆಟ್ರೋಲ್ ಆವೃತ್ತಿಯನ್ನು ಮತ್ತು ಪರ್ಫಾಮೆನ್ಸ್ ಮಾದರಿಯಾಗಿ 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

ಬಿಡುಗಡೆಯಾಗಲಿದೆ MG ಹೊಸ Astor

ಹೊಸ ಕಾರಿನ 1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯನ್ನು ಯುಕೆಯಲ್ಲಿ ಮಾರಾಟವಾಗುತ್ತಿರುವ ZS ಪೆಟ್ರೋಲ್ ಮಾದರಿಯಿಂದ ಎರವಲು ಪಡೆದುಕೊಳ್ಳಬಹುದಾಗಿದೆ ಎನ್ನಲಾಗಿದ್ದು, ಇದು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 111 ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.

ಬಿಡುಗಡೆಯಾಗಲಿದೆ MG ಹೊಸ Astor

ಹಾಗೆಯೇ 1.5-ಲೀಟರ್ ಪೆಟ್ರೋಲ್ ಮಾದರಿಯು 115-ಬಿಎಚ್‌ಪಿ ಪ್ರೇರಣೆಯೊಂದಿಗೆ ಮಾರಾಟಗೊಳ್ಳಬಹುದಾಗಿದ್ದು, ಹೊಸ ಕಾರಿನಲ್ಲಿ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗುತ್ತಿಲ್ಲ ಎನ್ನಲಾಗದೆ.

ಬಿಡುಗಡೆಯಾಗಲಿದೆ MG ಹೊಸ Astor

ಇನ್ನು ಸ್ಟ್ಯಾಂಡರ್ಡ್ Hector ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದ್ದು, ವ್ಯಯಕ್ತಿಕರಣಗೊಳಿಸಿದ ಮೊದಲ ಕೃತಕ ಬುದ್ಧಿಮತ್ತೆ ಸೌಲಭ್ಯ ಹೊಂದಿರುವ ಭಾರತದ ಮೊದಲ ಕಾರು ಮಾದರಿಯಾಗಲಿದೆ.

ಬಿಡುಗಡೆಯಾಗಲಿದೆ MG ಹೊಸ Astor

ರಿಲಯನ್ಸ್ ಜಿಯೋದಿಂದ ಎರವಲು ಪಡೆಯಲಾದ ರಿಯಲ್-ಟೈಮ್ ಇನ್ಫೋಟೈನ್‌ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್‌ಗಾಗಿ ಇ-ಸಿಮ್ ಮತ್ತು ಐಒಟಿ ಟೆಕ್ ಅನ್ನು ಒಳಗೊಂಡಿರುವ ಹೊಸ ಕಾರು ಗರಿಷ್ಠ ಸುರಕ್ಷತೆ ಖಚಿತಪಡಿಸಲಿದ್ದು, 4ಜಿ ಇಂಟರ್‌ನೆಟ್ ಸೌಲಭ್ಯದೊಂದಿಗೆ ಹಲವಾರು ಆಟೋಮೋಟಿವ್ ಸಂಬಂಧಿತ ಗ್ರಾಹಕರ ಸೇವೆಗಳನ್ನು ಸುಲಭವಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಮೂಲಕ ಪಡೆದುಕೊಳ್ಳಬಹುದು.

ಬಿಡುಗಡೆಯಾಗಲಿದೆ MG ಹೊಸ Astor

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಸೌಲಭ್ಯದೊಂದಿಗೆ ಮನರಂಜನೆ, ಕಾರಿನ ತಾಂತ್ರಿಕ ಅಂಶಗಳ ನ್ಯೂನತೆಗಳ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವುದರ ಜೊತೆ ವಾಯ್ಸ್ ಅಸಿಸ್ಟ್ ಮೂಲಕ ಚಾಲನೆಯನ್ನು ಸರಳಗೊಳಿಸುತ್ತದೆ.

ಬಿಡುಗಡೆಯಾಗಲಿದೆ MG ಹೊಸ Astor

ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್)ನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವಡ್ ಕೂಲಿಷನ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೈನ್ ಡಿಫಾರ್ಚರ್ ಪ್ರಿವೆಷನ್, ಸ್ಪೀಡ್ ವಾರ್ನಿಂಗ್, ಇಂಟೆಲಿಜೆಂಟ್ ಮೋಡ್ ಹೊಂದಿರುವ ಸ್ಪಿಡ್ ಅಸಿಸ್ಟ್ ಸಿಸ್ಟಂ, ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ಗಳಲಿವೆ.

ಬಿಡುಗಡೆಯಾಗಲಿದೆ MG ಹೊಸ Astor

ಹಾಗೆಯೇ ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ಗಳಲಿವೆ.

ಬಿಡುಗಡೆಯಾಗಲಿದೆ MG ಹೊಸ Astor

ಜೊತೆಗೆ ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ಎಡಿಎಎಸ್ ತಂತ್ರಜ್ಞಾನದಲ್ಲಿ ರಡಾರ್ ಸೌಲಭ್ಯವಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ಮೂಲಕ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು.

ಬಿಡುಗಡೆಯಾಗಲಿದೆ MG ಹೊಸ Astor

ಅಪಾಯದ ಮುನ್ಸೂಚನೆಯನ್ನು ಚಾಲಕನಿಗೆ ಧ್ವನಿ ಸಂದೇಶ ಮೂಲಕ ಎಚ್ಚರಿಕೆ ನೀಡುವ ಎಡಿಎಎಸ್ ಸೌಲಭ್ಯವು ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸಲಿದ್ದು, ಜೊತೆಗೆ 10-ಇಂಚಿನ ಇನ್ಪೋಟೈನ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪ್ಲ್ಯಾಟ್-ಬಾಟಮ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಹಿಂಬದಿಯ ಪ್ರಯಾಣಿಕರಿಗೆ ಅರಾಮದಾಯಕವಾದ ಆಸನ ಸೌಲಭ್ಯಗಳಿವೆ.

ಬಿಡುಗಡೆಯಾಗಲಿದೆ MG ಹೊಸ Astor

ಈ ಮೂಲಕ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 11 ಲಕ್ಷ ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗಿದೆ.

Article Published On: Friday, August 27, 2021, 8:45 [IST]
English summary
New mg astor compact suv engine details revealed ahead of india launch
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+