ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ MG Astor ಕಂಪ್ಯಾಕ್ಟ್ ಎಸ್‌ಯುವಿ

MG Motor ಕಂಪನಿಯು ತನ್ನ ಬಹುನೀರಿಕ್ಷಿತ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ Astor ಕಾರನ್ನು ಮುಂದಿನ ತಿಂಗಳು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಉತ್ಪಾದನಾ ಮಾದರಿಯೊಂದಿಗೆ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ಪೂರ್ಣಗೊಳಿಸುತ್ತಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ MG Astor ಕಂಪ್ಯಾಕ್ಟ್ ಎಸ್‌ಯುವಿ

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಹಲವು ವಿಶೇಷತೆಗಳೊಂದಿಗೆ ಬಿಡುಗಡೆಯಾಗಲಿರುವ Astor ಕಾರು ಮಾದರಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಬಿಡುಗಡೆಯಾಗಲಿದ್ದು, ಶೀತವಲಯದಲ್ಲಿ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಪರೀಕ್ಷಿಸಲು ಕಣಿವೆ ರಾಜ್ಯಗಳಲ್ಲಿ ರೋಡ್ ಟೆಸ್ಟಿಂಗ್ ನಡೆಸಲಾಗಿದೆ. ನಿನ್ನೆಯಷ್ಟೇ ಹಿಮಾಚಲಪ್ರದೇಶದ ರೋಹ್ಟಂಗ್ ಅಟಲ್ ಟ್ಯುನಲ್ ಬಳಿ MG ಹೊಸ ಕಾರು ವಿವಿಧ ಎಂಜಿನ್ ಆಯ್ಕೆಯೊಂದಿಗೆ ಪರೀಕ್ಷೆ ನಡೆಸುತ್ತಿರುವುದು ಕಂಡುಬಂದಿತು.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ MG Astor ಕಂಪ್ಯಾಕ್ಟ್ ಎಸ್‌ಯುವಿ

MG Astor ಕಾರು ಮುಂದಿನ ತಿಂಗಳು ಸೆಪ್ಟೆಂಬರ್ ಎರಡನೇ ವಾರದಲ್ಲಿ ದೇಶಿಯ ಮಾರುಕಟ್ಟೆಯನ್ನು ಪ್ರವೇಶಿಸುವುದು ಬಹುತೇಕವಾಗಿದ್ದು, Astor ಕಾರಿನ ಬಗೆಗೆ ಕೆಲವು ಮಾಹಿತಿಗಳು ಕಂಪ್ಯಾಕ್ಟ್ ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿವೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ MG Astor ಕಂಪ್ಯಾಕ್ಟ್ ಎಸ್‌ಯುವಿ

ಹೊಸ Astor ಕಾರು Hyundai Creta, Kia Seltos, Skoda Kushaq ಕಾರುಗಳಿಗೆ ಪೈಪೋಟಿಯಾಗಿ ಬಿಡುಗಡೆ ಮಾಡಲಾಗುತ್ತಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳ ಜೊತೆಗೆ ಆಕರ್ಷಕ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ MG Astor ಕಂಪ್ಯಾಕ್ಟ್ ಎಸ್‌ಯುವಿ

ಸ್ಟ್ಯಾಂಡರ್ಡ್ Hector ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದ್ದು, ವ್ಯಯಕ್ತಿಕರಣಗೊಳಿಸಿದ ಮೊದಲ ಕೃತಕ ಬುದ್ಧಿಮತ್ತೆ ಸೌಲಭ್ಯ ಹೊಂದಿರುವ ಭಾರತದ ಮೊದಲ ಕಾರು ಮಾದರಿಯಾಗಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ MG Astor ಕಂಪ್ಯಾಕ್ಟ್ ಎಸ್‌ಯುವಿ

ರಿಲಯನ್ಸ್ ಜಿಯೋದಿಂದ ಎರವಲು ಪಡೆಯಲಾದ ರಿಯಲ್-ಟೈಮ್ ಇನ್ಫೋಟೈನ್‌ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್‌ಗಾಗಿ ಇ-ಸಿಮ್ ಮತ್ತು ಐಒಟಿ ಟೆಕ್ ಅನ್ನು ಒಳಗೊಂಡಿರುವ ಹೊಸ ಕಾರು ಗರಿಷ್ಠ ಸುರಕ್ಷತೆ ಖಚಿತಪಡಿಸಲಿದ್ದು, 4ಜಿ ಇಂಟರ್‌ನೆಟ್ ಸೌಲಭ್ಯದೊಂದಿಗೆ ಹಲವಾರು ಆಟೋಮೋಟಿವ್ ಸಂಬಂಧಿತ ಗ್ರಾಹಕರ ಸೇವೆಗಳನ್ನು ಸುಲಭವಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಮೂಲಕ ಪಡೆದುಕೊಳ್ಳಬಹುದು.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ MG Astor ಕಂಪ್ಯಾಕ್ಟ್ ಎಸ್‌ಯುವಿ

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಸೌಲಭ್ಯದೊಂದಿಗೆ ಮನರಂಜನೆ, ಕಾರಿನ ತಾಂತ್ರಿಕ ಅಂಶಗಳ ನ್ಯೂನತೆಗಳ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವುದರ ಜೊತೆ ವಾಯ್ಸ್ ಅಸಿಸ್ಟ್ ಮೂಲಕ ಚಾಲನೆಯನ್ನು ಸರಳಗೊಳಿಸುತ್ತದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ MG Astor ಕಂಪ್ಯಾಕ್ಟ್ ಎಸ್‌ಯುವಿ

ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್)ನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವಡ್ ಕೂಲಿಷನ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೈನ್ ಡಿಫಾರ್ಚರ್ ಪ್ರಿವೆಷನ್, ಸ್ಪೀಡ್ ವಾರ್ನಿಂಗ್, ಇಂಟೆಲಿಜೆಂಟ್ ಮೋಡ್ ಹೊಂದಿರುವ ಸ್ಪಿಡ್ ಅಸಿಸ್ಟ್ ಸಿಸ್ಟಂ, ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ಗಳಲಿವೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ MG Astor ಕಂಪ್ಯಾಕ್ಟ್ ಎಸ್‌ಯುವಿ

ಹಾಗೆಯೇ ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ಗಳಲಿವೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ MG Astor ಕಂಪ್ಯಾಕ್ಟ್ ಎಸ್‌ಯುವಿ

ಜೊತೆಗೆ ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ಎಡಿಎಎಸ್ ತಂತ್ರಜ್ಞಾನದಲ್ಲಿ ರಡಾರ್ ಸೌಲಭ್ಯವಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ಮೂಲಕ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ MG Astor ಕಂಪ್ಯಾಕ್ಟ್ ಎಸ್‌ಯುವಿ

ಅಪಾಯದ ಮುನ್ಸೂಚನೆಯನ್ನು ಚಾಲಕನಿಗೆ ಧ್ವನಿ ಸಂದೇಶ ಮೂಲಕ ಎಚ್ಚರಿಕೆ ನೀಡುವ ಎಡಿಎಎಸ್ ಸೌಲಭ್ಯವು ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸಲಿದ್ದು, ಜೊತೆಗೆ 10-ಇಂಚಿನ ಇನ್ಪೋಟೈನ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪ್ಲ್ಯಾಟ್-ಬಾಟಮ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಹಿಂಬದಿಯ ಪ್ರಯಾಣಿಕರಿಗೆ ಅರಾಮದಾಯಕವಾದ ಆಸನ ಸೌಲಭ್ಯಗಳಿವೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ MG Astor ಕಂಪ್ಯಾಕ್ಟ್ ಎಸ್‌ಯುವಿ

ಇನ್ನು ಹೊಸ MG Astor ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಸಾಮಾನ್ಯ ಪೆಟ್ರೋಲ್ ಮಾದರಿಯನ್ನು ಮತ್ತು ಪರ್ಫಾಮೆನ್ಸ್ ಬಯಸುವ ಗ್ರಾಹಕರು ಟರ್ಬೊ ಪೆಟ್ರೋಲ್ ಮಾದರಿಯನ್ನು ಖರೀದಿಸಬಹುದಾಗಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ MG Astor ಕಂಪ್ಯಾಕ್ಟ್ ಎಸ್‌ಯುವಿ

ಸಾಮಾನ್ಯ ಮಾದರಿಯಾಗಿ 1.5-ಲೀಟರ್ ಪೆಟ್ರೋಲ್ ಆವೃತ್ತಿಯನ್ನು ಮತ್ತು ಪರ್ಫಾಮೆನ್ಸ್ ಮಾದರಿಯಾಗಿ 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ MG Astor ಕಂಪ್ಯಾಕ್ಟ್ ಎಸ್‌ಯುವಿ

ಈ ಮೂಲಕ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 11 ಲಕ್ಷ ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
New mg aster suv spied testing details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X