ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಎಂಜಿ ಜೆಡ್ಎಸ್ ಪೆಟ್ರೋಲ್ ಎಸ್‍ಯುವಿ

ಎಂಜಿ ಮೋಟಾರ್ ಇಂಡಿಯಾ ಕಂಪನಿಯು ತನ್ನ ಜೆಡ್ಎಸ್ ಪೆಟ್ರೋಲ್ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿಯು ಇತ್ತೀಚೆಗೆ ಭಾರತದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಜೆಡ್ಎಸ್ ಪೆಟ್ರೋಲ್ ಎಸ್‍ಯುವಿ

ಈ ಹೊಸ ಎಂಜಿ ಜೆಡ್ಎಸ್ ಪೆಟ್ರೋಲ್ ಎಸ್‍ಯುವಿಯು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಜೆಡ್ಎಸ್ ಇವಿಯು ಭಾರತೀಯ ಮಾರುಕಟ್ಟೆಯಲ್ಲಿ ಯಶ್ವಸಿಯಾಗಿದೆ ಎಂದು ಎಂಜಿ ಮೋಟಾರ್ ಕಂಪಮಿಯು ನಂಬಿದೆ. ಇದಕ್ಕಾಗಿ ಜೆಡ್ಎಸ್ ಎಸ್‍ಯುವಿಯನ್ನು ಪೆಟ್ರೋಲ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ. ಇನ್ನು ಎಂಜಿ ಮೋಟಾರ್ ಕಂಪನಿಯು ಜೆಡ್ಎಸ್ ಪೆಟ್ರೋಲ್ ಆವೃತ್ತಿಯನ್ನು ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದ್ದರು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಜೆಡ್ಎಸ್ ಪೆಟ್ರೋಲ್ ಎಸ್‍ಯುವಿ

ಈ ಹೊಸ ಜೆಡ್ಎಸ್ ಪೆಟ್ರೋಲ್ ಆವೃತ್ತಿಯು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ಎಸ್‌ಯುವಿಯು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್‌ಬೆಸ್ ಅನ್ನು ಹೊಂದಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಜೆಡ್ಎಸ್ ಪೆಟ್ರೋಲ್ ಎಸ್‍ಯುವಿ

ಈ ಹೊಸ ಜೆಡ್ಎಸ್ ಎಸ್‍ಯುವಿಯಲ್ಲಿ 1.0 ಲೀಟರ್ ಪೆಟ್ರೋಲ್ ಟರ್ಬೋಚಾರ್ಜ್ಡ್, 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 109 ಬಿಹೆಚ್‍ಪಿ ಪವರ್ ಮತ್ತು 160 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಜೆಡ್ಎಸ್ ಪೆಟ್ರೋಲ್ ಎಸ್‍ಯುವಿ

ಇದರೊಂದಿಗೆ 1.3 ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ ಮತ್ತು 1.5 ಲೀಟರ್ ಎಂಜಿನ್ ಆಯ್ಕೆಯನ್ನು ಕೂಡ ನೀಡಬಹುದು. ಈ ಜೆಡ್ಎಸ್ ಪೆಟ್ರೋಲ್ ಆವೃತ್ತಿಯ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.13 ಲಕ್ಷಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಜೆಡ್ಎಸ್ ಪೆಟ್ರೋಲ್ ಎಸ್‍ಯುವಿ

ಈ ಎಸ್‍ಯುವಿಯಲ್ಲಿ ಸಿಗ್ನೆಚರ್ ಹನಿಕೊಂಬ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಡಿಆರ್‌ಎಲ್ಎಸ್, ಎಲ್ಇಡಿ ಟೇಲ್ ಲ್ಯಾಂಪ್, ಅಲ್ಯುನಿಯಂ ಸ್ಕಿಡ್ ಪ್ಲೇಟ್ ಮತ್ತು 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್ ಅನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಜೆಡ್ಎಸ್ ಪೆಟ್ರೋಲ್ ಎಸ್‍ಯುವಿ

ಇದರೊಂದಿಗೆ ಈ ಎಸ್‍ಯುವಿಯಲ್ಲಿ ಪ್ರೀಮಿಯಂ ಕ್ಯಾಬಿನ್, ಎಂಟು ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಜೊತೆ ಅಂಡ್ರಾಯಿಡ್ ಆಟೋ, ರೈನ್ ಸೆನ್ಸಾರ್ ವೈಪರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಕ್ಲೈಮೆಟ್ ಕಂಟ್ರೊಲ್ ಮತ್ತು ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ಸ್ ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಜೆಡ್ಎಸ್ ಪೆಟ್ರೋಲ್ ಎಸ್‍ಯುವಿ

ಈ ಜೆಡ್ಎಸ್ ಪೆಟ್ರೋಲ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಎರ್ಮಜೆನ್ಸಿ ಬ್ರೇಕಿಂಗ್, ಲೈನ್ ಕೀಪ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, ಹಿಲ್ ಲಾಂಚ್ ಅಸಿಸ್ಟ್ ಅನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಜೆಡ್ಎಸ್ ಪೆಟ್ರೋಲ್ ಎಸ್‍ಯುವಿ

ಈ ಹೊಸ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿಯು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಈ ಜೆಡ್ಎಸ್ ಪೆಟ್ರೋಲ್ ಆವೃತ್ತಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮತ್ತು ನಿಸ್ಸಾನ್ ಕಿಕ್ಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Article Published On: Tuesday, February 9, 2021, 12:44 [IST]
English summary
MG Motor ZS Petrol SUV Spotted Testing Once Again. Read In Kananda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+