ಎಂಜಿ ಮೋಟಾರ್ ಹೊಸ ಜೆಡ್ಎಸ್ ಪೆಟ್ರೋಲ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಎಂಜಿ ಮೋಟಾರ್ ಕಂಪನಿಯು ಹೆಕ್ಟರ್, ಹೆಕ್ಟರ್ ಪ್ಲಸ್, ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಗ್ಲೊಸ್ಟರ್ ಎಸ್‌ಯುವಿ ಕಾರುಗಳ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲೇ ಜೆಡ್ಎಸ್ ಪೆಟ್ರೋಲ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಎಂಜಿ ಮೋಟಾರ್ ಹೊಸ ಜೆಡ್ಎಸ್ ಪೆಟ್ರೋಲ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಜೆಡ್ಎಸ್ ಪೆಟ್ರೋಲ್ ಮಾದರಿಯ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿರುವ ಎಂಜಿ ಮೋಟಾರ್ ಕಂಪನಿಯು ಹೊಸ ಕಾರಿನಲ್ಲಿ ಅತ್ಯುತ್ತಮ ಫೀಚರ್ಸ್ ಜೋಡಣೆ ಮಾಡಲಿದ್ದು, ಹೊಸ ಕಾರಿನ ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಮುಂದುವರಿಸಿದೆ. ಸ್ಟ್ಯಾಂಡರ್ಡ್ ಹೆಕ್ಟರ್ ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಜೆಡ್ಎಸ್ ಕಾರು ಮಾರುತಿ ಎಸ್-ಕ್ರಾಸ್, ರೆನಾಲ್ಟ್ ಡಸ್ಟರ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಎಂಜಿ ಮೋಟಾರ್ ಹೊಸ ಜೆಡ್ಎಸ್ ಪೆಟ್ರೋಲ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

2020ರ ಫೆಬ್ರುವರಿಯಲ್ಲಿ ನಡೆದಿದ್ದ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಜೆಡ್ಎಸ್ ಪೆಟ್ರೋಲ್ ಕಾರು ಮಾದರಿಯು ಕಳೆದ ಅಗಸ್ಟ್ ಅಥವಾ ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಕೋವಿಡ್ ಪರಿಣಾಮ ಹೊಸ ಕಾರಿನ ಬಿಡುಗಡೆಯನ್ನು ಮುಂದೂಡಿಕೆ ಮಾಡಿಕೊಂಡ ಬಂದಿರುವ ಎಂಜಿ ಕಂಪನಿಯು ಇದೀಗ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಿದ್ದು, ಹೊಸ ಕಾರು ಮುಂಬರುವ ಜೂನ್ ಅಥವಾ ಜುಲೈನಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಎಂಜಿ ಮೋಟಾರ್ ಹೊಸ ಜೆಡ್ಎಸ್ ಪೆಟ್ರೋಲ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಎಂಜಿ ಕಂಪನಿಯು ಹೊಸ ಕಾರಿನಲ್ಲಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಭಿನ್ನವಾದ ತಾಂತ್ರಿಕ ಅಂಶಗಳನ್ನು ಅಳವಡಿಸಿ ಗ್ರಾಹಕರನ್ನು ಸೆಳೆಯುವ ಯೋಜನೆಯಲ್ಲಿದ್ದು, ಹೊಸ ಕಾರಿನಲ್ಲಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೌಲಭ್ಯವು ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ನೀರಿಕ್ಷೆಯಿದೆ.

ಎಂಜಿ ಮೋಟಾರ್ ಹೊಸ ಜೆಡ್ಎಸ್ ಪೆಟ್ರೋಲ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಎಡಿಎಎಸ್ ಸೌಲಭ್ಯ ಅಳವಡಿಕೆಯಿಂದ ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ರಡಾರ್ ಬಳಕೆಯಾಗಲಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು. ಜೊತೆಗೆ ಚಾಲಕನಿಗೆ ಧ್ವನಿ ಸಂದೇಶ ಮೂಲಕ ಎಚ್ಚರಿಕೆ ನೀಡಲಿದ್ದು, ರಿವರ್ಸ್ ಸಂದರ್ಭದಲ್ಲಿ 3ಡಿ ಪನೊರಮಿಕ್ ವ್ಯೂ ಸೌಲಭ್ಯ ಒದಗಿಸುತ್ತದೆ.

ಎಂಜಿ ಮೋಟಾರ್ ಹೊಸ ಜೆಡ್ಎಸ್ ಪೆಟ್ರೋಲ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಇದರೊಂದಿಗೆ ಹೊಸ ಕಾರಿನಲ್ಲಿ ಅತ್ಯುತ್ತಮ ಲೆದರ್ ವ್ಯಾರ್ಪ್ ಆಸನಗಳು, ಹಿಂಬದಿಯ ಪ್ರಯಾಣಿಕರಿಗೆ ಎಸಿ ವೆಂಟ್ಸ್, 10-ಇಂಚಿನ ಇನ್ಪೋಟೈನ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪ್ಲ್ಯಾಟ್-ಬಾಟಮ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಹಿಂಬದಿಯ ಪ್ರಯಾಣಿಕರಿಗೆ ಅರಾಮದಾಯಕವಾದ ಆಸನ ಸೌಲಭ್ಯಗಳಿವೆ.

ಎಂಜಿ ಮೋಟಾರ್ ಹೊಸ ಜೆಡ್ಎಸ್ ಪೆಟ್ರೋಲ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮಾದರಿಯಲ್ಲೇ ತುಸು ವಿಭಿನ್ನ ವಿನ್ಯಾಸವನ್ನು ಹೊಂದಿರುವ ಜೆಡ್ಎಸ್ ಪೆಟ್ರೋಲ್ ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಸಾಮಾನ್ಯ ಪೆಟ್ರೋಲ್ ಮಾದರಿಯನ್ನು ಮತ್ತು ಪರ್ಫಾಮೆನ್ಸ್ ಬಯಸುವ ಗ್ರಾಹಕರು ಟರ್ಬೊ ಪೆಟ್ರೋಲ್ ಮಾದರಿಯನ್ನು ಖರೀದಿಸಬಹುದು.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಎಂಜಿ ಮೋಟಾರ್ ಹೊಸ ಜೆಡ್ಎಸ್ ಪೆಟ್ರೋಲ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಜೆಡ್ಎಸ್ ಕಾರಿನಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಕಾರು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್‌ಬೆಸ್ ಪಡೆದುಕೊಂಡಿದೆ.

ಎಂಜಿ ಮೋಟಾರ್ ಹೊಸ ಜೆಡ್ಎಸ್ ಪೆಟ್ರೋಲ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 15 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

MOST READ: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಎಂಜಿ ಮೋಟಾರ್ ಹೊಸ ಜೆಡ್ಎಸ್ ಪೆಟ್ರೋಲ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಉತ್ತಮ ಬೆಲೆ ಆಯ್ಕೆಯೊಂದಿಗೆ ಕ್ರ್ಯಾಶ್ ಟೆಸ್ಟಿಂಗ್‌ನಲ್ಲೂ ಉತ್ತಮ ರೇಟಿಂಗ್ಸ್ ಪಡೆದುಕೊಳ್ಳುವ ಮೂಲಕ ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿರುವ ಹೊಸ ಕಾರು ಹೆಕ್ಟರ್ ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆ.

Most Read Articles

Kannada
English summary
MG Motor is planning to launch ZS petrol model in India by mid of this year. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X