ನ್ಯೂ ಜನರೇಷನ್ ಸ್ಕೋಡಾ ಫ್ಯಾಬಿಯಾ ಕಾರಿನ ಟೀಸರ್ ಬಿಡುಗಡೆ
ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ಆಟೋ ಈ ಹೊಸ ಫ್ಯಾಬಿಯಾ ಕಾರನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಸಜ್ಜಾಗುತ್ತಿದೆ. ಈ ನ್ಯೂ ಜನರೇಷನ್ ಸ್ಕೋಡಾ ಫ್ಯಾಬಿಯಾ 2021ರ ಮೇ ತಿಂಗಳಲ್ಲಿ ಜಾಗತಿಕ ಮಟ್ಟದಲ್ಲಿ ಅನಾವರಣವಾಗಲಿದೆ.

ಇದೀಗ ಸ್ಕೋಡಾ ಕಂಪನಿಯು ಈ ಹೊಸ ಫ್ಯಾಬಿಯಾ ಕಾರಿನ ರೇಖಾಚಿತ್ರಗಳ ಮಾದರಿಯಲ್ಲಿ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಹೊಸ ಸ್ಕೋಡಾ ಫ್ಯಾಬಿಯಾ ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಕಾರಿನ ಮುಂಭಾಗದ ಗ್ರಿಲ್ ಮೊದಲಿಗಿಂತ ದೊಡ್ಡದಾಗಿದೆ, ಮತ್ತು ಹೆಡ್‌ಲೈಟ್‌ಗಳು ಸಂಯೋಜಿತ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ತೀಕ್ಷ್ಣವಾಗಿ ಕಾಣುತ್ತವೆ. ಎಲ್ಇಡಿ ಟೈಲ್‌ಲೈಟ್‌ಗಳು ಸುಂದರವಾಗಿ ಕಾಣುತ್ತವೆ.

ಇನ್ನು ಹಿಂಭಾಗದ ವಿಂಡ್‌ಸ್ಕ್ರೀನ್ ಕೂಪ್ ತರಹದ ಶೈಲಿಯನ್ನು ಹೊಂದಿದೆ. ಒಳಾಂಗಣ ವಿನ್ಯಾಸವನ್ನು ಇನ್ನೂ ಅನಾವರಣಗೊಳಿಸಲಾಗಿಲ್ಲ, ಆದರೆ ಕಂಪನಿಯು ಕೆಲವು ಫೀಚರ್ ಗಳ ಮಾಹಿತಿಯನ್ನು ಇತ್ತೀಚೆಗೆ ಬಹಿರಂಗಪಡಿಸಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಅದರಂತೆ ಹೊಸ ಸ್ಕೋಡಾ ಫ್ಯಾಬಿಯಾ ಕಾರಿನ ಒಳಭಾಗದಲ್ಲಿ 6.8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ. ಇದನ್ನು 9.2-ಇಂಚಿನ ಯುನಿಟ್ ಆಗಿ ಅಪ್‌ಗ್ರೇಡ್ ಮಾಡಬಹುದಾಗಿದೆ.

ಇನ್ನು ಡಿಜಿಟಲ್ ಕಾಕ್‌ಪಿಟ್ ಮತ್ತು ಎಲ್ಲಾ ಪ್ರಯಾಣಿಕರ ಸೀಟುಗಳಲ್ಲಿ ಐಎಸ್‌ಒಫಿಕ್ಸ್ ಮೌಂಟ್ಸ್ ಅನ್ನು ಒಳಗೊಂಡಿರುತ್ತದೆ. ಇನ್ನು ಈ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖತೆ ನೀಡಲಾಗಿದೆ. ಇದಕ್ಕಾಗಿ ಇದರಲ್ಲಿ 9 ಏರ್‌ಬ್ಯಾಗ್‌ಗಳನ್ನು ನೀಡಲಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಹೊಸ ಸ್ಕೋಡಾ ಫ್ಯಾಬಿಯಾ ಕಾರು ಈ ವರ್ಷದ ಅಂತ್ಯದಲ್ಲಿ ಯುರೋಪ್ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಇನ್ನು ಈ ಹೊಸ ಕಾರು ವಿಡಬ್ಲ್ಯೂ ಸಮೂಹದ ಎಮ್‌ಕ್ಯೂಬಿ ಎಒ ಪ್ಲಾಟ್‌ಫಾರ್ಮ್‌ನಲ್ಲಿ ನಿರ್ಮಿಸಲಾಗಿದೆ. ಇದು ಪ್ರಸ್ತುತದ ಮಾದರಿಗಿಂತ ಗಾತ್ರಕ್ಕಿಂತ ದೊಡ್ಡದಾಗಿದೆ.

ಹೊಸ ಸ್ಕೋಡಾ ಫ್ಯಾಬಿಯಾ ಕಾರು 4,107 ಎಂಎಂ ಉದ್ದ, 1,780 ಎಂಎಂ ಅಗಲ ಮತ್ತು 2,564 ಎಂಎಂ ಉದ್ದದ ವೀಲ್‌ಬೇಸ್ ಹೊಂದಿದೆ. ಇನ್ನು ಹೊಸ ಸ್ಕೋಡಾ ಫ್ಯಾಬಿಯಾ ಕಾರಿನಲ್ಲಿ 380 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದೆ. ಇನ್ನು ಹಿಂಭಾಗದ ಸೀಟುಗಳನ್ನು ಮಡಿಚಿದಾಗ 1,190 ಲೀಟರ್ ನಷ್ಟು ಬೂಟ್ ಸ್ಪೇಸ್ ಲಭ್ಯವಿರುತ್ತದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಹೊಸ ಸ್ಕೋಡಾ ಫ್ಯಾಬಿಯಾ ಮೂರು ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಇದರಲ್ಲಿ 1.0-ಲೀಟರ್, ಇನ್-ಲೈನ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ ಅನ್ನು ಎರಡು ರೀತಿಯಲ್ಲಿ ಟ್ಯೂನ್ ಮಾಡಲಾಗಿರುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

ಎರಡನೇ ಎಂಜಿನ್ ಆಯ್ಕೆಯು 1.0-ಲೀಟರ್, ಟರ್ಬೋಚಾರ್ಜ್ಡ್ ಎಂಜಿನ್ ಆಗಿದೆ. ಈ ಎಂಜಿನ್ ಅನ್ನು ಕೂಡ ಎರಡು ರೀತಿಯಲ್ಲಿ ಟ್ಯೂನ್ ಮಾಡಲಾಗುತ್ತದೆ. ಮೂರನೇ ಎಂಜಿನ್ 1.5 ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಗಿರುತ್ತದೆ.

ಇನ್ನು ಈ ಹೊಸ ಸ್ಕೋಡಾ ಫ್ಯಾಬಿಯಾ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳು ಕಡಿಮೆಯಾಗಿದೆ. ಇದರ ಬದಲು ಸ್ಕೋಡಾ ಕಂಪನಿಯು ಭಾರತೀಯ ಮಾರುಕಟ್ಟೆಯಲಿ ಕುಶಾಕ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.


Click it and Unblock the Notifications