ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಹೊಸ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ ಆಕರ್ಷಕ ಲುಕ್ ಮತ್ತು ನೂತನ ಫೀಚರ್ಸ್‍ಗಳೊಂದಿಗೆ ಬಿಡುಗಡೆಯಾಗಲಿದೆ.

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪಾತ್ಯ ಸಾಧಿಸಲು ಸಜ್ಜಾಗುತ್ತಿದೆ. ಭಾರತದಲ್ಲಿ 2.0 ಯೋಜನೆಯಡಿ ಹೆಚ್ಚು ಸ್ಥಳೀಯವಾಗಿ ವಾಹನಗಳನ್ನು ಉತ್ಪಾದಿಸಲು ಪ್ರಾಮುಖ್ಯತೆಯನ್ನು ನೀಡುತ್ತದೆ. ಮುಂಬರುವ ವರ್ಷಗಳಲ್ಲಿ ಫೋಕ್ಸ್ ವ್ಯಾಗನ್ ಕಂಪನಿಯೊಂದಿಗೆ ಜೊತೆಗೂಡಿ ಒಂದು ಬಿಲಿಯನ್ ಯುರೋಗಳಿಗಿಂತ ಹೆಚ್ಚಿನ ಹೂಡಿಕೆಯೊಂದಿಗೆ ತನ್ನ ಮಾರುಕಟ್ಟೆ ಪಾಲನ್ನು ವಿಸ್ತರಿಸಲು ಯೋಜನೆ ರೂಪಿಸಿದೆ.

ಹೊಸ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಈ ಎಸ್‍ಯುವಿಯು ಈ ವರ್ಷದ ಆಗಸ್ಟ್ ಅಥವಾ ಸೆಪ್ಟೆಂಬರ್ ವೇಳೆಗೆ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಹೊಸ ಕೊಡಿಯಾಕ್ ಆಕರ್ಷಕ ಲುಕ್ ಮತ್ತು ನೂತನ ಫೀಚರ್ಸ್‍ಗಳಲ್ಲಿ ಬಿಡುಗಡೆಯಾಗಲಿದೆ. ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಈಗಾಗಲೇ ಭಾರತದಲ್ಲಿ ರೋಡ್ ಟೆಸ್ಟ್ ಅನ್ನು ನಡೆಸಿದೆ.

2020ರ ಆಟೋ ಎಕ್ಸ್ ಪೋದಲ್ಲಿ ಈ ಹೊಸ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಅನಾವರಣಗೊಳಿಸಲಾಗಿತ್ತು. ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ ಡೀಸೆಲ್ ಎಂಜಿನ್ ನೊಂದಿಗೆ ಬಿಡುಗಡೆಯಾಗಲಿದೆ ಎಂದು ವರದಿಗಳಾಗಿತ್ತು.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಆದರೆ ಕಂಪನಿಯು ಈ ಎಸ್‍ಯುವಿಯು 2.0 ಲೀಟರ್ ಟಿಎಸ್ಐ, ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 187 ಬಿಹೆಚ್‍ಪಿ ಪವರ್ ಮತ್ತು 320 ಎನ್‌ಎಂ ಟಾರ್ಕ್ ಅನ್ನು ಅಭಿವೃದ್ಧಿಪಡಿಸುತ್ತದೆ.

ಈ ಎಂಜಿನ್ ನೊಂದಿಗೆ 7-ಸ್ಪೀಡ್ ಡ್ಯುಯಲ್-ಕ್ಲಚ್ ಟ್ರಾನ್ಸ್‌ಮಿಷ ಅನ್ನು ನೀಡಲಾಗುತ್ತದೆ. ಕೊಡಿಯಾಕ್ ಆಲ್-ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಈ ಎಸ್‍ಯುವಿಯಲ್ಲಿ 360 ಡಿಗ್ರಿ ಕ್ಯಾಮರವನ್ನು ಅಳವಡಿಸಲಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಕೊಡಿಯಾಕ್ ಫೇಸ್‌ಲಿಫ್ಟ್ ಆಫ್-ರೋಡ್ ಫೀಚರ್ಸ್‍ಗಳನ್ನು ಹೊಂದಿದೆ. ಹೊಸ ಎಸ್‌ಯುವಿಯು ಸ್ಟೈಲ್ ಎಂಬ ಮೂಲ ಮಾದರಿ ಹಾಗೂ ಲೌರಿನ್ ಅಂಡ್ ಕ್ಲೆಮೆಂಟ್ ಎಂಬ ಟಾಪ್ ಮಾದರಿಗಳಲ್ಲಿ ಲಭ್ಯವಿದೆ. ಕೊಡಿಯಾಕ್ ಸ್ಕೌಟ್ ಈ ಸೆಗ್‍ಮೆಂಟಿನಲ್ಲಿರುವ ಇತರ ಎರಡು ರೂಪಾಂತರಗಳಿಗಿಂತ ಉತ್ತಮವಾದ ಆಫ್-ರೋಡರ್ ಆಗಿರಲಿದೆ.

ಈ ಎಸ್‍ಯುವಿನಲ್ಲಿ 18 ಇಂಚಿನ ಅಲಾಯ್ ವ್ಹೀಲ್‍ಗಳು, ಎಲ್‍ಇಡಿ ಹೆಡ್‍ಲ್ಯಾಂಪ್, ಗ್ರಿಲ್, ರೂಫ್ ರೈಲ್ಸ್, ವಿಂಡೋಸ್ ಮತ್ತು ಒಆರ್‍ವಿಎಂ ಹೌಸಿಂಗ್, ಮುಂಭಾಗ ಮತ್ತು ಹಿಂಭಾಗದ ಅಂಡರ್‍ಬಾಡಿ ಪ್ರೊಟೆಕ್ಷನ್ ಸೇರಿದಂತೆ ಹಲವಾರು ಫೀಚರ್‍ಗಳಿವೆ.

ಸ್ಕೋಡಾ ಕೊಡಿಯಾಕ್ ಇಂಟಿರಿಯರ್‍ನಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಇಂಟಿರಿಯರ್ ಪ್ರೀಮಿಯಂ ಲುಕ್ ಅನ್ನು ಹೊಂದಿದೆ. ಇಂಟಿರಿಯರ್‍ನಲ್ಲಿ ಸೀಟ್‍ಗಳು, ಏರ್‍ಬ್ಯಾಗ್‍ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಪವರ್ ಹೊಂದಾಣಿಕೆ ಮಾಡಬಹುದಾದ ಫ್ರಂಟ್ ಡ್ರೈವರ್ ಮತ್ತು ಪ್ರಯಾಣಿಕರ ಸೀಟ್‍ಗಳು ಮತ್ತು ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್‍ಗಳಿವೆ.

ಕೊಡಿಯಾಕ್ ಎಸ್‍ಯುವಿಯು ಸ್ಕೋಡಾ ಕಂಪನಿಯ ಪ್ರಮುಖ ಎಸ್‍ಯುವಿಗಳಲ್ಲಿ ಒಂದಾಗಿದೆ. ಕೊಡಿಯಾಕ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಹೀಂದ್ರಾ ಜಿ4, ಟೊಯೋಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications