ಹೊಸ Kodiaq ಎಸ್‍ಯುವಿಯ ಉತ್ಪಾದನೆಯನ್ನು ಪ್ರಾರಂಭಿಸಿದ Skoda
ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ತನ್ನ ಬಹುನಿರೀಕ್ಷಿತ 2022ರ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಬಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ 2022ರ ಸ್ಕೋಡಾ ಕೊಡಿಯಾಕ್ (Skoda Kodiaq ) ಎಸ್‍ಯುವಿಯ ಹೊಸ ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.

ಇದೀಗ ಸ್ಕೋಡಾ ತನ್ನ ಹೊಸ ಕೊಡಿಯಾಕ್ ಎಸ್‍ಯುವಿಯ ಉತ್ಪಾದನೆಯನ್ನು ಕಂಪನಿಯ ಮಹಾರಾಷ್ಟ್ರದ ಔರಂಗಾಬಾದ್ ಮೂಲದ ಘಟಕದಲ್ಲಿ ಪ್ರಾರಂಭಿಸಲಾಗಿದೆ. ಸ್ಕೋಡಾ ಕಂಪನಿಯು ಕೊಡಿಯಾಕ್ ಎಸ್‍ಯುವಿಯನ್ನು ಮೊದಲ ಬಾರಿಗೆ 2016ರಲ್ಲಿ ಪರಿಚಯಿಸಲಾಯಿತು ಮತ್ತು ಕಳೆದ 5 ವರ್ಷಗಳಲ್ಲಿ ಪ್ರಪಂಚದಾದ್ಯಂತ 6 ಲಕ್ಷಕ್ಕೂ ಹೆಚ್ಚು ಯುನಿಟ್ ಗಳನ್ನು ಮಾರಾಟ ಮಾಡಲಾಗಿತ್ತು. ಈ ಹೊಸ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದಲ್ಲೇ ಬಿಡುಗಡೆಯಾಗಬಹುದು ಎಂಬ ವದಂತಿಗಳಿತ್ತು.

ಆದರೆ ಸ್ಕೋಡಾ ಇಂಡಿಯಾದ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ನಿರ್ದೇಶಕ ಝಾಕ್ ಹೊಲಿಸ್ ಅವರು ಕೊಡಿಯಾಕ್ 7-ಸೀಟರ್ ಎಸ್‍ಯುವಿಯು 2022ರ ಜನವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ ಎಂದು ಇತ್ತೀಚೆಗೆ ಬಹಿರಂಗಪಡಿಸಿದ್ದಾರೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದರಲ್ಲಿ ಪರಿಷ್ಕೃತ ಗ್ರಿಲ್ ಅನ್ನು ಹೊಂದಿದೆ. ಇದು ಹೆಚ್ಚು ನೇರವಾದ ಪ್ರೊಫೈಲ್ ನೀಡುತ್ತದೆ. ಗ್ರಿಲ್ ಅನ್ನು ಸ್ಲಿಮ್ಮರ್ ಹೆಡ್‌ಲ್ಯಾಂಪ್ ಯುನಿಟ್ ನಿಂದ ಸುತ್ತುವರಿಯಲಾಗುತ್ತದೆ. ಈ ಯುನಿಟ್ ಅಡಿಯಲ್ಲಿ ಪ್ರತ್ಯೇಕ ಎಲ್ಇಡಿ ಮಾಡ್ಯೂಲ್ ಅನ್ನು ಹೊಂದಿದೆ.

ಹೊಸ ಹೆಡ್‌ಲ್ಯಾಂಪ್ ಸೆಟಪ್ ಹೊಸ ಫೋರ್-ಹೈಡ್ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿ ಕ್ರಿಸ್ಟಲ್ ಎಫೆಕ್ಟ್ ಹೊಂದಿರುವ ಎಲ್ಇಡಿ ಟೈಲ್-ಲ್ಯಾಂಪ್ ಗಳನ್ನು ಕೂಡ ಪಡೆಯುತ್ತದೆ.ಇನ್ನು ಈ ಹೊಸ ಕೊಡಿಯಾಕ್ ಎಸ್‍ಯುವಿಯು ಆಕ್ಟಿವ್, ಆಂಬಿಷನ್ ಮತ್ತು ಸ್ಟೈಲ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿರುತ್ತದೆ.

ನವೀಕರಿಸಿದ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 20 ಇಂಚಿನ ಹೊಸ ಅಲಾಯ್ ವ್ಹೀಲ್ ಗಳನ್ನು ಪಡೆಯುತ್ತದೆ. ಗ್ಲೋಸ್ ಬ್ಲ್ಯಾಕ್‌ನಲ್ಲಿ ಹೊಸ ರಿಯರ್ ಸ್ಪಾಯ್ಲರ್ ಅನ್ನು ಸಹ ಪಡೆಯುತ್ತದೆ, ಇದು ಬ್ರೇಕ್ ಲೈಟ್‌ಗಳೊಂದಿಗೆ ಸಂಯೋಜಿಸಲ್ಪಟ್ಟಿದೆ. 2022ರ ಕೊಡಿಯಾಕ್ ಮಾದರಿಯ ಕ್ಯಾಬಿನ್ ಒಳಗೆ ಹೊಸ ಅಲಂಕಾರಿಕ ಸ್ಟ್ರೀಪ್ ಗಳನ್ನು ಕೂಡ ಪಡೆಯುತ್ತದೆ.

ಹೊಸ ಕೊಡಿಯಾಕ್ ಡ್ಯಾಶ್‌ಬೋರ್ಡ್ ಮತ್ತು ಡೋರ್ ಪ್ಯಾನೆಲ್‌ಗಳಲ್ಲಿ ಸ್ಟ್ರೀಚಿಂಗ್ ಅನ್ನು ಕೂಡ ಪಡೆಯುತ್ತದೆ. ಕೊಡಿಯಾಕ್ ಮಾದರಿಯು 7-ಸೀಟರ್ ಮಾದರಿಯಾಗಿದೆ. ಇದರಲ್ಲಿ ವೆಂಟಿಲೆಟಡ್ ಸೀಟುಗಳು ಸೇರಿದಂತೆ ಮಸಾಜ್ ಫಂಕ್ಷನ್ ಅನ್ನು ಹೊಂದಿರುತ್ತದೆ. ಇದು ದೂರ ಪ್ರಯಾಣಗಳಲ್ಲಿ ಮಾಡುವಾಗ ಹೆಚ್ಚು ಸಹಕಾರಿಯಾಗುವ ಫೀಚರ್ ಇದಾಗಿದೆ.

ಇನ್ನು ಮೊದಲ ಬಾರಿಗೆ ನವೀಕರಿಸಿದ ಕೊಡಿಯಾಕ್ ಮಲ್ಟಿ-ವೇ ಎಲೆಕ್ಟ್ರಿಕ್ ಸೀಟ್ ಹೊಂದಾಣಿಕೆಯ ಜೊತೆ ಮಸಾಜ್ ಫಂಕ್ಷನ್ ಪಡೆಯಲಿದೆ, ಕ್ಯಾಂಟನ್ ಸೌಂಡ್ ಸಿಸ್ಟಂ ಮತ್ತು ಈಗ ಹತ್ತು ಸ್ಪೀಕರ್‌ಗಳನ್ನು ನೀಡುತ್ತದೆ. ಈ ಎಸ್‍ಯುವಿಯಲ್ಲಿ ವರ್ಚುವಲ್ ಕಾಕ್‌ಪಿಟ್‌ನಲ್ಲಿ 10.25-ಇಂಚಿನ ಡಿಸ್ ಪ್ಲೇ ಮತ್ತು ಇದು ನಾಲ್ಕು ವಿಭಿನ್ನ ವಿನ್ಯಾಸಗಳನ್ನು ಹೊಂದಿರುತ್ತದೆ.

ಡೀಸೆಲ್ ಎಂಜಿನ್ ಮಾದರಿ ಶ್ರೇಣಿಯಿಂದ ಕೈಬಿಡಲಾಗುವುದು. ಇದರ ಗ್ಯಾಸೋಲಿನ್ ಘಟಕವು 7-ಸ್ಪೀಡ್ DSG ಸ್ವಯಂಚಾಲಿತ ಗೇರ್‌ಬಾಕ್ಸ್‌ನೊಂದಿಗೆ 190PS ಮೌಲ್ಯದ ಶಕ್ತಿಯನ್ನು ಮತ್ತು 320Nm ಟಾರ್ಕ್ ಅನ್ನು ನೀಡುತ್ತದೆ. SUV AWD (ಆಲ್-ವೀಲ್ ಡ್ರೈವ್) ವ್ಯವಸ್ಥೆಯೊಂದಿಗೆ ಲಭ್ಯವಿರುತ್ತದೆ.

ಈ ಹೊಸ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯಲ್ಲಿ ಹೊಸ 2.0-ಲೀಟರ್ ಟರ್ಬೂ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 190 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನ್ 7-ಸ್ಪೀಡ್ DSG ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗುತ್ತದೆ. ಇನ್ನು ಡೀಸೆಲ್ ಎಂಜಿನ್ ಮಾದರಿ ಶ್ರೇಣಿಯಿಂದ ಕೈಬಿಡಲಾಗುವುದು.

ಸ್ಕೋಡಾ ತನ್ನ ಬಹುನಿರೀಕ್ಷಿತ ಸ್ಲಾವಿಯಾ ಸೆಡಾನ್ ಕಾರನ್ನು ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಮುಂದಿನ ವರ್ಷದಲ್ಲಿ ಬಿಡುಗಡೆಯಾಗಲಿರುವ ಹೊಸ ಸ್ಲಾವಿಯಾ ಸೆಡಾನ್ ಹೋಂಡಾ ಸಿಟಿ ಮತ್ತು ಹ್ಯುಂಡೈ ವೆರ್ನಾ ಕಾರುಗಳಿಗೆ ಪ್ರತಿಸ್ಪರ್ಧಿಯಾಗಲಿದೆ. ಫೋಕ್ಸ್‌ವ್ಯಾಗನ್ ಗ್ರೂಪ್‌ನ ಇಂಡಿಯಾ ಪ್ಲಾನ್ 2.0 ಅಡಿಯಲ್ಲಿ ಇದು ಬ್ರಾಂಡ್‌ನ ಎರಡನೇ ಮಾದರಿಯಾಗಿದೆ, ಇದು ಹೊಸ ಹೂಡಿಕೆ ಮತ್ತು ಉತ್ಪನ್ನಗಳ ಶ್ರೇಣಿಯನ್ನು ತರುತ್ತದೆ. ರ‍್ಯಾಪಿಡ್ ಸೆಡಾನ್ ಅನ್ನು ಬದಲಿಸಲು ಹೊಸ ಸ್ಕೋಡಾ ಸ್ಲಾವಿಯಾ ಅನ್ನು ತರುತ್ತಿದೆ.

ಹೊಸ ಸ್ಲಾವಿಯಾ ಸೆಡಾನ್ ಫೋಕ್ಸ್‌ವ್ಯಾಗನ್ ಹೆಚ್ಚು ಸ್ಥಳೀಕರಿಸಿದ ಎಂಕ್ಯೂಬಿ ಎಒ ಇನ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಈ ಪ್ಲಾಟ್‌ಫಾರ್ಮ್ ವಿವಿಧ ದೇಹದ ಶೈಲಿಗಳು ಮತ್ತು ಎಂಜಿನ್ ಆಯ್ಕೆಗಳನ್ನು ಸರಿಹೊಂದಿಸಲು ಸಾಕಷ್ಟು ಬಹುಮುಖವಾಗಿದೆ. ಈ ಹೊಸ ಸ್ಕೋಡಾ ಸ್ಲಾವಿಯಾ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಟಿ, ಹ್ಯುಂಡೈ ವೆರ್ನಾ ಮತ್ತು ಮಾರುತಿ ಸುಜುಕಿ ಸಿಯಾಜ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಲ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ಕೂಡ ಹೊಂದಿರಲಿದೆ. ಈ ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿದೆ. ಈ ಕೊಡಿಯಾಕ್ ಎಸ್‍ಯುವಿಯು ಮಾದರಿಯು ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಎಸ್‌ಯುವಿಗಳಲ್ಲಿ ಕೂಡ ಒಂದಾಗಿದೆ.


Click it and Unblock the Notifications








