Just In
- 11 hrs ago
ಹೊಸ ಫೀಚರ್ಸ್‍ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- 13 hrs ago
ಫೋರ್ಡ್ ಮುಸ್ಟಾಂಗ್ ಕಾರಿನಂತೆ ಮಾಡಿಫೈಗೊಂಡ ಬಲೆನೊ ಸೆಡಾನ್ ಕಾರು
- 16 hrs ago
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- 1 day ago
ಎಕ್ಸ್‌ಯುವಿ700 ಎಸ್ಯುವಿ ಕಾರಿನ ಮತ್ತಷ್ಟು ಹೊಸ ಮಾಹಿತಿ ಹಂಚಿಕೊಂಡ ಮಹೀಂದ್ರಾ
Don't Miss!
- Sports
ಐಪಿಎಲ್ 2021: ಕೊಲ್ಕತ್ತಾ ವಿರುದ್ಧದ ಸೋಲಿಗೆ ಕಾರಣ ಹೇಳಿದ ಡೇವಿಡ್ ವಾರ್ನರ್
- News
ಕರ್ಫ್ಯೂ ನಡುವೆಯೂ ಮೋಜು ಮಸ್ತಿ! ಪಾರ್ಟಿ ಮಾಡುತ್ತಿದ್ದ ಗ್ಯಾಂಗ್ ಕಂಬಿ ಹಿಂದೆ..!
- Movies
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2021ರ ಕೊಡಿಯಾಕ್ ಎಸ್‍ಯುವಿಯ ಹೊಸ ಟೀಸರ್ ಬಿಡುಗಡೆಗೊಳಿಸಿದ ಸ್ಕೋಡಾ
ಸ್ಕೋಡಾ ಆಟೋ ಕಂಪನಿಯು ತನ್ನ ಬಹುನಿರೀಕ್ಷಿತ 2021ರ ಕೊಡಿಯಾಕ್ ಎಸ್‍ಯುವಿಯನ್ನು ಪರಿಚಯಿಸಲು ಭರ್ಜರಿ ಸಜ್ಜಾಗುತ್ತಿದೆ. ಇದರ ಭಾಗವಾಗಿ ಸ್ಕೋಡಾ ಎಲ್ಇಡಿ ಹೆಡ್ ಲೈಟ್ ಗಳಿಂದ ಸುತ್ತುವರೆದ ಆಕರ್ಷಕ ಟೀಸರ್ ಅನ್ನು ಬಿಡುಗಡೆಗೊಳಿಸಿದೆ.

ಇತ್ತೀಚೆಗೆ ಸ್ಕೊಡಾ ಈ ಹೊಸ ಕೊಡಿಯಾಕ್ ಎಸ್‍ಯುವಿಯ ರೇಖಾಚಿತ್ರಗಳನ್ನು ಬಹಿರಂಗಪಡಿಸಿತು, ಇದು ವಿನ್ಯಾಸದ ವಿಷಯದಲ್ಲಿ ಏನನ್ನು ನಿರೀಕ್ಷಿಸಬಹುದು ಎಂಬುದರ ಒಂದು ನೋಟವನ್ನು ನೀಡುತ್ತದೆ. ಇನ್ನು ಹೊಸ ಟೀಸರ್ ಚಿತ್ರ ತೆಳ್ಳನೆಯ ಎಲ್ಇಡಿ ಹೆಡ್ ಲೈಟ್ ಗಳಿಂದ ಸುತ್ತುವರೆದಿದೆ. ಟೀಸರ್ ನಲ್ಲಿ ತೆಳ್ಳನೆಯ ಹೆಡ್‌ಲೈಟ್‌ಗಳನ್ನು ಬಹಿರಂಗಪಡಿಸುತ್ತದೆ ಮತ್ತು ಅವುಗಳು ಕೆಳಭಾಗದಲ್ಲಿ ಇರಿಸಲಾಗಿರುವ ಪ್ರತ್ಯೇಕ ಎಲ್‌ಇಡಿ ಮಾಡ್ಯೂಲ್‌ನೊಂದಿಗೆ ಸಂಯೋಜಿಸಿದ ಹೊಸ ನಾಲ್ಕು ಹೈ ಲುಕ್ ಅನ್ನು ಸೃಷ್ಟಿಸುತ್ತವೆ.

ಬಾನೆಟ್ ಅನ್ನು ಸಹ ಮರುವಿನ್ಯಾಸಗೊಳಿಸಲಾಗಿದೆ ಮತ್ತು ಪಾಗ್ ಲ್ಯಾಂಪ್ ಸ್ವಲ್ಪ ಸರಿಸಲಾಗಿದೆ. ನಂತರ ಮುಂಭಾಗದ ಏಪ್ರನ್ ಅನ್ನು ಅಲ್ಯೂಮಿನಿಯಂ ಒಳಸೇರಿಸುವಿಕೆಯೊಂದಿಗೆ ಎರಡೂ ಬದಿಯಲ್ಲಿ ಎಲ್-ಆಕಾರದ ಅಂಶಗಳಿಂದ ರಚಿಸಲಾದ ವಿಶಾಲವಾದ ಏರ್ ಇನ್ ಟೆಕ್ ಅನ್ನು ಹೊಂದಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಕೊಡಿಯಾಕ್ ಎಸ್‍ಯುವಿಯ ಟೈಲ್ ಗೇಟ್ ಕ್ರಿಸ್ಟಲ್ ರಚನೆಗಳನ್ನು ಹೊಂದಿವೆ. ಇನ್ನು ಈ ಹೊಸ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯು 7 ಸೀಟರ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ.

ಈ ಹೊಸ 2021ರ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯು ಇದೇ ತಿಂಗಳ 13 ರಂದು ಜಾಗತಿಕ ಮಟ್ಟದಲ್ಲಿ ಅನಾವರಣವಾಗಲಿದೆ. 2021ರ ಕೊಡಿಯಾಕ್ ಎಸ್‍ಯುವಿಯು ದೇಶಿಯ ಮಾರುಕಟ್ಟೆಯಲ್ಲಿಯು ಬಿಡುಗಡೆಯಾಗಲಿದೆ. ಈ ಎಸ್‍ಯುವಿಯು ಈ ವರ್ಷದ ಆಗಸ್ಟ್ ಅಥವಾ ಸೆಪ್ಟೆಂಬರ್ ವೇಳೆಗೆ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಈ ಹೊಸ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಅನಾವರಣಗೊಳಿಸಲಾಗಿತ್ತು. ಹೊಸ ಕೊಡಿಯಾಕ್ ಆಕರ್ಷಕ ಲುಕ್ ಮತ್ತು ನೂತನ ಫೀಚರ್ಸ್‍ಗಳಲ್ಲಿ ಬಿಡುಗಡೆಯಾಗಲಿದೆ. ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಈಗಾಗಲೇ ಭಾರತದಲ್ಲಿ ರೋಡ್ ಟೆಸ್ಟ್ ಅನ್ನು ನಡೆಸಲಾಗಿದೆ.

ಸ್ಕೋಡಾ ಕೊಡಿಯಾಕ್ ಎಸ್‍ಯುವಿಯಲ್ಲಿ 2.0 ಲೀಟರ್ ಟಿಎಸ್ಐ, ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 187 ಬಿಹೆಚ್‍ಪಿ ಪವರ್ ಮತ್ತು 320 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.
MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು

ಈ ಎಂಜಿನ್ ನೊಂದಿಗೆ 7-ಸ್ಪೀಡ್ ಡ್ಯುಯಲ್-ಕ್ಲಚ್ ಗೇರ್ ಬಾಕ್ಸ್ ಅನ್ನು ನೀಡಲಾಗುತ್ತದೆ. ಕೊಡಿಯಾಕ್ ಆಲ್-ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಈ ಎಸ್‍ಯುವಿಯಲ್ಲಿ 360 ಡಿಗ್ರಿ ಕ್ಯಾಮರವನ್ನು ಅಳವಡಿಸಲಾಗಿದೆ.

2021ರ ಕೊಡಿಯಾಕ್ ಆಫ್-ರೋಡ್ ಫೀಚರ್ಸ್‍ಗಳನ್ನು ಹೊಂದಿರಬಹುದು. ಹೊಸ ಎಸ್‌ಯುವಿಯು ಸ್ಟೈಲ್ ಎಂಬ ಮೂಲ ಮಾದರಿ ಹಾಗೂ ಲೌರಿನ್ ಅಂಡ್ ಕ್ಲೆಮೆಂಟ್ ಎಂಬ ಟಾಪ್ ಮಾದರಿಗಳಲ್ಲಿ ಲಭ್ಯವಿರಲಿದೆ. ಕೊಡಿಯಾಕ್ ಸ್ಕೌಟ್ ಈ ಸೆಗ್‍ಮೆಂಟಿನಲ್ಲಿರುವ ಇತರ ಎರಡು ರೂಪಾಂತರಗಳಿಗಿಂತ ಉತ್ತಮವಾದ ಆಫ್-ರೋಡರ್ ಆಗಿರಲಿದೆ.

ಈ ಎಸ್‍ಯುವಿನಲ್ಲಿ 18 ಇಂಚಿನ ಅಲಾಯ್ ವ್ಹೀಲ್‍ಗಳು, ಎಲ್‍ಇಡಿ ಹೆಡ್‍ಲ್ಯಾಂಪ್, ಗ್ರಿಲ್, ರೂಫ್ ರೈಲ್ಸ್, ವಿಂಡೋಸ್ ಮತ್ತು ಒಆರ್‍ವಿಎಂ ಹೌಸಿಂಗ್, ಮುಂಭಾಗ ಮತ್ತು ಹಿಂಭಾಗದ ಅಂಡರ್‍ಬಾಡಿ ಪ್ರೊಟೆಕ್ಷನ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್‍ಗಳಿವೆ.

ಹೊಸ ಕೊಡಿಯಾಕ್ ಇಂಟಿರಿಯರ್‍ನಲ್ಲಿ ಪ್ರಮುಖ ಬದಲಾವಣೆಗಳನ್ನು ಹೊಂದಿರುತ್ತದೆ. ಇಂಟಿರಿಯರ್ ಪ್ರೀಮಿಯಂ ಲುಕ್ ಅನ್ನು ಹೊಂದಿದೆ. ಒಳಭಾಗದಲ್ಲಿ ಏರ್‍ಬ್ಯಾಗ್‍ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಪವರ್ ಹೊಂದಾಣಿಕೆ ಮಾಡಬಹುದಾದ ಫ್ರಂಟ್ ಡ್ರೈವರ್ ಮತ್ತು ಪ್ರಯಾಣಿಕರ ಸೀಟ್‍ಗಳು ಮತ್ತು ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್‍ಗಳಿವೆ.

ಕೊಡಿಯಾಕ್ ಮಾದರಿಯು ಸ್ಕೋಡಾ ಕಂಪನಿಯ ಪ್ರಮುಖ ಎಸ್‍ಯುವಿಗಳಲ್ಲಿ ಒಂದಾಗಿದೆ. ಸ್ಕೋಡಾ ಕೊಡಿಯಾಕ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಹೀಂದ್ರಾ ಜಿ4, ಟೊಯೋಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.