ಬಿಡುಗಡೆಗೆ ಸಜ್ಜಾದ 2021ರ ಸ್ಕೋಡಾ ಆಕ್ಟೀವಿಯಾ ಕಾರಿನ ಇಂಟಿರಿಯರ್ ಚಿತ್ರಗಳು ಬಹಿರಂಗ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ತನ್ನ ನಾಲ್ಕನೇ ತಲೆಮಾರಿನ ಆಕ್ಟೀವಿಯಾ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಮುಂದಿನ ತಿಂಗಳು ಹೊಸ ಸ್ಕೋಡಾ ಆಕ್ಟೀವಿಯಾ ಕಾರು ಪ್ರಮುಖ ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಗೆ ಪ್ರವೇಶಿಸಲಿದೆ.

ಬಿಡುಗಡೆಗೆ ಸಜ್ಜಾದ 2021ರ ಸ್ಕೋಡಾ ಆಕ್ಟೀವಿಯಾ ಕಾರಿನ ಇಂಟಿರಿಯರ್ ಚಿತ್ರಗಳು ಬಹಿರಂಗ

ಈ ನಾಲ್ಕನೇ ತಲೆಮಾರಿನ ಸ್ಕೊಡಾ ಆಕ್ಟೀವಿಯಾ ಕಾರು ಶೀಘ್ರದಲ್ಲೇ ಅಧಿಕೃತವಾಗಿ ಬಿಡುಗಡೆಯಾಗಲಿದೆ ಎಂದು ವರದಿಗಳಾಗಿದೆ. ಆದರೆ ಈ ಹೊಸ ಕಾರಿನ ಬಿಡುಗಡೆಯ ದಿನಾಂಕ ಬಹಿರಂಗವಾಗಿಲ್ಲ, ಕರೋನಾ ಅಟ್ಟಹಾಸ ಹೆಚ್ಚಾಗಿರುವುದರಿಂದ ಈ ಸ್ಕೊಡಾ ಆಕ್ಟೀವಿಯಾ ಕಾರಿನ ಬಿಡುಗಡೆಯು ತಡವಾಗಿದೆ. ಇನ್ನು ಸ್ಕೋಡಾ ಕಂಪನಿಯು ಔರಂಗಾಬಾದ್‌ನ ಘಟಕದಲ್ಲಿ ತನ್ನ ಆಕ್ಟೀವಿಯಾ ಕಾರಿನ ಉತ್ಪಾದನೆಯನ್ನು ಈಗಗಾಲೇ ಪ್ರಾರಂಭಿಸಿದೆ.

ಬಿಡುಗಡೆಗೆ ಸಜ್ಜಾದ 2021ರ ಸ್ಕೋಡಾ ಆಕ್ಟೀವಿಯಾ ಕಾರಿನ ಇಂಟಿರಿಯರ್ ಚಿತ್ರಗಳು ಬಹಿರಂಗ

ಈ ನಾಲ್ಕನೇ ತಲೆಮಾರಿನ ಸ್ಕೋಡಾ ಆಕ್ಟೀವಿಯಾ ಕಾರು ಡೀಲರುಗಳ ಬಳಿ ತಲುಪಲು ಪ್ರಾರಂಭವಾಗಿದೆ. ಇದರ ಇಂಟಿರಿಯರ್ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಸ್ಕೋಡಾ ಆಕ್ಟೀವಿಯಾದ ಹಿಂದಿನ ತಲೆಮಾರಿನಕಾರನ್ನು 2013ರಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿದ್ದರು.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಗೆ ಸಜ್ಜಾದ 2021ರ ಸ್ಕೋಡಾ ಆಕ್ಟೀವಿಯಾ ಕಾರಿನ ಇಂಟಿರಿಯರ್ ಚಿತ್ರಗಳು ಬಹಿರಂಗ

ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬೇಡಿಕೆಯೊಂದಿಗೆ ಉತ್ತಮ ಮಾರಾಟವನ್ನು ಕಂಡಿತು. ಇದರಿಂದ ಹೊಸ ಸ್ಕೋಡಾ ಆಕ್ಟೀವಿಯಾ ಕಾರು ಹಲವು ಬದಲಾವಣೆಗಳೊಂದಿಗೆ ಭಾರತದಲ್ಲಿ ಮತ್ತೊಮ್ಮೆ ಬಿಡುಗಡೆಯಾಗಲಿದೆ.

ಬಿಡುಗಡೆಗೆ ಸಜ್ಜಾದ 2021ರ ಸ್ಕೋಡಾ ಆಕ್ಟೀವಿಯಾ ಕಾರಿನ ಇಂಟಿರಿಯರ್ ಚಿತ್ರಗಳು ಬಹಿರಂಗ

ಹೊಸ ಸ್ಕೋಡಾ ಆಕ್ಟೀವಿಯಾ ಕಾರಿನ ಹಿಂದಿನ ಮಾದರಿಗೆ ಹೋಲಿಸಿದರೆ ನಯವಾದ ವಿನ್ಯಾಸವನ್ನು ಹೊಂದಿದೆ. ಈ ಹೊಸ ಕಾರಿನ ಗ್ರೀಲ್ ಅಗಲವಾಗಿ ಮತ್ತು ಅಗ್ರೇಸಿವ್ ಆಗಿದೆ. ಮುಂಭಾಗದ ಬಂಪರ್ ವಿನ್ಯಾಸವನ್ನು ಸಹ ಬದಲಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಬಿಡುಗಡೆಗೆ ಸಜ್ಜಾದ 2021ರ ಸ್ಕೋಡಾ ಆಕ್ಟೀವಿಯಾ ಕಾರಿನ ಇಂಟಿರಿಯರ್ ಚಿತ್ರಗಳು ಬಹಿರಂಗ

ಇನ್ನು ಮುಂಭಾಗದಲ್ಲಿ ವಿಶಾಲವಾದ ಏರ್ ಡ್ಯಾಮ್ ಜೊತೆಗೆ ಸಮತಲವಾದ ಎಲ್ಇಡಿ ಫಾಗ್ ಲ್ಯಾಂಪ್‌ಗಳನ್ನು ಎರಡೂ ಬದಿಗಳಲ್ಲಿ ಇರಿಸಲಾಗಿದ್ದು, ಎರಡು ಯುನಿಟ್ ಗಳನ್ನು ಕನೆಕ್ಟ್ ಮಾಡುವ ತೆಳುವಾದ ಕ್ರೋಮ್ ಸ್ಟ್ರಿಪ್ ಇದೆ. ಇದು ಕಂಪನಿಯ ಮ್ಯಾಟ್ರಿಕ್ಸ್ ಎಲ್ಇಡಿ ಹೆಡ್ ಲೈಟ್ ಅನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾದ 2021ರ ಸ್ಕೋಡಾ ಆಕ್ಟೀವಿಯಾ ಕಾರಿನ ಇಂಟಿರಿಯರ್ ಚಿತ್ರಗಳು ಬಹಿರಂಗ

ಹಿಂಭಾಗದಲ್ಲಿ ಅಗ್ರೇಸಿವ್ ಆಗಿ ಕಾಣುವ ಬೂಟ್ ಲಿಡ್ ಅನ್ನು ಹೊಂದಿದೆ. ಇನ್ನು ಬೂಟ್ ಲಿಡ್ ಉದ್ದಕ್ಕೆ ಸ್ಕೋಡಾ ಎಂಬ ಬ್ಯಾಡ್ಜ್ ಅನ್ನು ಅಳವಡಿಸಿದ್ದಾರೆ. ಈ ಸೆಡಾನ್ ಹೊಸ ಅಲಾಯ್ ವ್ಹೀಲ್ ವಿನ್ಯಾಸವನ್ನು ಸಹ ಪಡೆಯುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಬಿಡುಗಡೆಗೆ ಸಜ್ಜಾದ 2021ರ ಸ್ಕೋಡಾ ಆಕ್ಟೀವಿಯಾ ಕಾರಿನ ಇಂಟಿರಿಯರ್ ಚಿತ್ರಗಳು ಬಹಿರಂಗ

2021ರ ಸ್ಕೋಡಾ ಆಕ್ಟೀವಿಯಾ ಕಾರಿನ ಒಳಭಾಗದಲ್ಲಿ ಹೊಸ ಕ್ಯಾಬಿನ್ ವಿನ್ಯಾಸವನ್ನು ಪಡೆದುಕೊಂಡಿದೆ. ಒಳಭಾಗದಲ್ಲಿ ಹೊಸ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಈಗ ಬ್ರ್ಯಾಂಡ್‌ನ ಕಾಕ್‌ಪಿಟ್ ವಿನ್ಯಾಸವನ್ನು ಒಳಗೊಂಡ 10.25-ಇಂಚಿನ ಡಿಸ್ ಪ್ಲೇಯನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ ಪ್ಲೇ ಗಾಗಿ ಸೆಡಾನ್ ಮತ್ತೊಂದು 10.25-ಇಂಚಿನ ಡಿಸ್ ಪ್ಲೇಯನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾದ 2021ರ ಸ್ಕೋಡಾ ಆಕ್ಟೀವಿಯಾ ಕಾರಿನ ಇಂಟಿರಿಯರ್ ಚಿತ್ರಗಳು ಬಹಿರಂಗ

ಹೊಸ ಆಕ್ಟೀವಿಯಾ ಕಾರಿನಲ್ಲಿ ವಿಡಬ್ಲ್ಯೂ ಗ್ರೂಪ್‌ನ 2.0 ಎಲ್ ಟಿಎಸ್‌ಐ ಟರ್ಬೋಚಾರ್ಜ್ಡ್ ಡೈರೆಕ್ಟ್ ಇಂಜೆಕ್ಷನ್ ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗುತದೆ. ಈ ಎಂಜಿನ್ 190 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು 1.5-ಲೀಟರ್ ಟಿಎಸ್ಐ, ನಾಲ್ಕು ಸಿಲಿಂಡರ್, ಪೆಟ್ರೋಲ್ ಎಂಜಿನ್ 148 ಬಿಹೆಚ್‌ಪಿ ಪವರ್ ಮತ್ತು 320 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಬಿಡುಗಡೆಗೆ ಸಜ್ಜಾದ 2021ರ ಸ್ಕೋಡಾ ಆಕ್ಟೀವಿಯಾ ಕಾರಿನ ಇಂಟಿರಿಯರ್ ಚಿತ್ರಗಳು ಬಹಿರಂಗ

ಯುರೋ ಎನ್‍‍‍ಸಿ‍ಎಪಿ ನಡೆಸಿದ ಕ್ರ್ಯಾಶ್ ಟೆಸ್ಟ್ ನಲ್ಲಿ ಸ್ಕೋಡಾ ಆಕ್ಟೀವಾ ಸಂಪೂರ್ಣ 5 ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ. ಇನ್ನು ಈ ಹೊಸ ಸ್ಕೋಡಾ ಆಕ್ಟೀವಿಯಾ ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುತ್ತದೆ. ಈ ಹೊಸ ಸ್ಕೋಡಾ ಆಕ್ಟೀವಾ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಇದು ಬಿಡುಗಡೆಯಾದ ಬಳಿಕ ಹ್ಯುಂಡೈ ಎಲಾಂಟ್ರಾ ಕಾರಿಗೆ ಪೈಪೋಟಿ ನೀಡುತ್ತದೆ.

Article Published On: Wednesday, June 2, 2021, 12:24 [IST]
English summary
2021 Skoda Octavia Spied Once Again Ahead Of Its India Launch. Read In Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+