ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಸ್ಕೋಡಾ ಇಂಡಿಯಾ ಕಂಪನಿಯು ಹೊಸ ತಲೆಮಾರಿನ ಆಕ್ಟೀವಿಯಾ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಯುರೋಪ್ ಮಾರುಕಟ್ಟೆಗಳಲ್ಲಿ ಈಗಾಗಲೇ ಈ ಹೊಸ ತಲೆಮಾರಿನ ಸ್ಕೋಡಾ ಆಕ್ಟೀವಿಯಾ ಕಾರು ಮಾರಾಟವಾಗುತ್ತಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹಿಂದಿನ ತಲೆಮಾರಿನ ಸ್ಕೋಡಾ ಆಕ್ಟೀವಿಯಾ ಕಾರನ್ನು 2013ರಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿದ್ದರು. ಈ ಕಾರು ಉತ್ತಮವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗಿದೆ. ಆದರೆ ಸ್ಕೋಡಾ ಕಂಪನಿಯು ಈ ಆಕ್ಟೀವಿಯಾ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿಲ್ಲ. ಆದರೆ ಕಳೆದ ವರ್ಷದ ಕೊನೆಯಲ್ಲಿ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಆಕ್ಟೀವಿಯಾ ಕಾರನ್ನು ಬಿಡುಗಡೆಗೊಳಿಸಬೇಕಿತ್ತು. ಆದರೆ ಸ್ಕೋಡಾ ಕಂಪನಿಯು ಈ ಕಾರಿನ ಬಿಡುಗಡೆಯನ್ನು ಈ ವರ್ಷಕ್ಕೆ ಮುಂದೂಡಿದರು.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹೊಸ ಆಕ್ಟೀವಿಯಾ ಕಾರನ್ನು ಈ ವರ್ಷದ ಮಧ್ಯಂತರ ಅವಧಿಯಲ್ಲಿ ಬಿಡುಗಡೆಗೊಳಿಸಲಿದೆ ಎಂದು ಸ್ಕೋಡಾ ಕಂಪನಿಯು ಹೇಳಿದೆ. ಸ್ಕೋಡಾ ಇಂಡಿಯಾ ಕಂಪನಿಯು ಹೊಸ ತಲೆಮಾರಿನ ಆಕ್ಟೀವಿಯಾ ಕಾರನ್ನು ಈ ವರ್ಷದ ಜೂನ್ ತಿಂಗಳಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಇನ್ನು ಸ್ಕೋಡಾ ಆಕ್ಟೀವಿಯಾ ಕಾರು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಇದೀಗ ಮತ್ತೊಮ್ಮೆ ಈ ಐಷಾರಾಮಿ ಸ್ಕೋಡಾ ಆಕ್ಟೀವಿಯಾ ಕಾರು ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡಿದೆ. ಈ ಹೊಸ ಆಕ್ಟೀವಿಯಾ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಚಿತ್ರಗಳನ್ನು ರಶ್ಲೇನ್ ಬಹಿರಂಗಪಡಿಸಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹೊಸ ಆಕ್ಟೀವಿಯಾ ಕಾರು ಹೊಸ ಎಲ್ಇಡಿ ಹೆಡ್ ಲೈಟ್ ಮತ್ತು ಎಲ್ಇಡಿ ಡಿಆರ್ಎಲ್ ಗಳನ್ನು ಹೊಂದಿದೆ. ಇದರೊಂದಿಗೆ ಎಲ್ಇಡಿ ಪಾಗ್ ಲ್ಯಾಂಪ್ ಅನ್ನು ಸಹ ಹೊಂದಿದೆ. ಇದರೊಂದಿಗೆ ಎಲ್‌ಇಡಿ ಟೈಲ್-ಲೈಟ್ ಮತ್ತು ಹೊಸ 17 ಇಂಚಿನ ‘ರೋಟಾರೆ ಏರೋ' ಅಲಾಯ್ ವ್ಹೀಲ್ ಗಳನ್ನು ಹೊಂದಿದೆ.

MOST READ: 2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಇಂಟಿರಿಯರ್‍‍ನಲ್ಲಿ ಎಲೆಕ್ಟ್ರಾನಿಕ್ ಆಗಿ ಅಡ್ಜಸ್ಟ್ ಮಾಡಬಹುದಾದ ಫ್ರಂಟ್ ಸೀಟ್ ಮುಂಭಾಗದ ಸೀಟ್‍ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍‍ನೆಟ್ ಕನೆಕ್ಟಿವಿಟಿ ಫೀಚರ್ಸ್‍‍ಗಳೊಂದಿಗೆ 10 ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್‍ ಸಿಸ್ಟಂ ಅನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹೊಸ ಸ್ಕೋಡಾ ಅಕ್ಟೀವಾ ಕ್ರ್ಯಾಶ್ ಟೆಸ್ಟ್ ನಲ್ಲಿ ಉತ್ತಮ ರೇಟಿಂಗ್ ಪಡೆದುಕೊಂಡಿದೆ. 2020ರ ಸ್ಕೋಡಾ ಆಕ್ಟೀವಿಯಾ ಹೊಸ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯುರೋ ಎನ್‍‍‍ಸಿ‍ಎಪಿ ನಡೆಸಿದ ಕ್ರ್ಯಾಶ್ ಟೆಸ್ಟ್ ನಲ್ಲಿ ಸ್ಕೋಡಾ ಆಕ್ಟೀವಾ ಸಂಪೂರ್ಣ 5 ಸ್ಟಾರ್ ರೇಟಿಂಗ್ ಪಡೆದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಸೈಡ್ ಬ್ಯಾರಿಯರ್ ಟೆಸ್ಟ್ ನಲ್ಲಿ ಕಾರಿನ ಕ್ರಿಟಿಕಲ್ ಬಾಡಿಯು ಉತ್ತಮ ರಕ್ಷಣೆಯನ್ನು ಹೊಂದಿದೆ ಎಂದು ರೇಟಿಂಗ್ ನೀಡಲಾಗಿದೆ. ಹೊಸ ಸ್ಕೋಡಾ ಅಕ್ಟೀವಿಯಾ ಚಿಲ್ಡ್ ಒಕಿಪ್ಯಾಡ್ ಪ್ರೊಟಕ್ಷನ್ ಟೆಸ್ಟ್ ನಲ್ಲಿ 43.2 ಅಂಕಗಳನ್ನು ಗಳಿಸಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಈ ಕಾರು 2,686 ಎಂಎಂ ವ್ಹೀಲ್‍‍ಬೇಸ್ ಹೊಂದಿದೆ. ಹೊಸ ಆಕ್ಟೀವಿಯಾದ ಬೂಟ್ ಸ್ಪೇಸ್ 600 ಲೀಟರ್‍ ಆಗಿದ್ದು, ಹಿಂದಿನ ಕಾರಿಗೆ ಹೋಲಿಸಿದರೆ 30 ಲೀಟರ್‍‍ನಷ್ಟು ಹೆಚ್ಚಾಗಿದೆ. ಹೊಸ ಕಾರಿನಲ್ಲಿ ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕರಾದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದ ಬ್ಲ್ಯಾಕ್ ಗ್ರಿಲ್‍‍ನಲ್ಲಿ ಡ್ಯುಯಲ್ ಸ್ಪ್ಲಿಟ್ ಹೆಡ್‍‍ಲ್ಯಾಂಪ್‍‍ಗಳನ್ನು ಹೊಂದಿರಲಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಇನ್ನು ಹೊಸ ಸ್ಕೋಡಾ ಆಕ್ಟೀವಿಯಾ ಕಾರಿನಲ್ಲಿ ವಿಡಬ್ಲ್ಯೂ ಗ್ರೂಪ್‌ನ 2.0 ಎಲ್ ಟಿಎಸ್‌ಐ ಟರ್ಬೋಚಾರ್ಜ್ಡ್ ಡೈರೆಕ್ಟ್ ಇಂಜೆಕ್ಷನ್ ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಬಹುದು. ಈ ಎಂಜಿನ್ 190 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಸೆಡಾನ್ ಆಗಿರಲಿದೆ.

Article Published On: Monday, January 4, 2021, 14:39 [IST]
English summary
New Skoda Octavia Spied With Emission Test Equipment. Read In Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+