ಬಹುನಿರೀಕ್ಷಿತ ಸ್ಕೋಡಾ ಸ್ಲಾವಿಯಾ ಕಾರು ಬಿಡುಗಡೆ ಮಾಹಿತಿ ಬಹಿರಂಗ
ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ತನ್ನ ಹೊಸ ಸ್ಲಾವಿಯಾ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಸ್ಕೋಡಾ ಸ್ಲಾವಿಯಾ(Skoda Slavia) ಸೆಡಾನ್ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.

ಸ್ಕೋಡಾ ಸ್ಲಾವಿಯಾ ಕಾರಿನ ಖರೀದಿಗಾಗಿ ಅಧಿಕೃತ ಬುಕ್ಕಿಂಗ್‌ಗಳನ್ನು ಈಗಾಗಲೇ ಪ್ರಾರಂಭಿಸಿದ್ದಾರೆ. ಈ ಹೊಸ ಮಾದರಿಯನ್ನು ಖರೀದಿಸಲು ಬಯಸುವ ಗ್ರಾಹಕರು ರೂ.11,000 ಟೋಕನ್ ಮೊತ್ತವನ್ನು ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಈ ಹೊಸ ಸ್ಕೋಡಾ ಸ್ಲಾವಿಯಾ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷದ ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ. ಇನ್ನು ಈ ಹೊಸ ಕಾರಿನ ವಿತರಣೆಯು ಮುಂದಿನ ವರ್ಷದ ಏಪ್ರಿಲ್ ತಿಂಗಳಲ್ಲಿ ಪ್ರಾರಂಭವಾಗುತ್ತದೆ.

ಭಾರತದಲ್ಲಿ ಸ್ಕೋಡಾ ಸ್ಲಾವಿಯಾ ಜಾಗತಿಕ ಪ್ರಥಮ ಪ್ರದರ್ಶನವನ್ನು ಮಾಡಲು ಸಿದ್ಧವಾಗಿದೆ. ಫೋಕ್ಸ್‌ವ್ಯಾಗನ್ ಗ್ರೂಪ್‌ನ ಇಂಡಿಯಾ ಪ್ಲಾನ್ 2.0 ಅಡಿಯಲ್ಲಿ ಇದು ಬ್ರಾಂಡ್‌ನ ಎರಡನೇ ಮಾದರಿಯಾಗಿದೆ, ಇದು ಹೊಸ ಹೂಡಿಕೆ ಮತ್ತು ಉತ್ಪನ್ನಗಳ ಶ್ರೇಣಿಯನ್ನು ತರುತ್ತದೆ. ರ‍್ಯಾಪಿಡ್ ಸೆಡಾನ್ ಅನ್ನು ಬದಲಿಸಲು, ಹೊಸ ಸ್ಕೋಡಾ ಸ್ಲಾವಿಯಾ ಫೋಕ್ಸ್‌ವ್ಯಾಗನ್ ಹೆಚ್ಚು ಸ್ಥಳೀಯ ಎಂಕ್ಯೂಬಿ ಎಒ ಇನ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ.

ಕುಶಾಕ್ ಕಾಂಪ್ಯಾಕ್ಟ್ ಎಸ್‍ಯುವಿಗೆ ಇದೇ ಪ್ಲಾಟ್‌ಫಾರ್ಮ್ ಆಧಾರವಾಗಿದೆ. ಹೊಸ ಸ್ಕೋಡಾ ಸ್ಲಾವಿಯಾ ಕಾರು ಜೆಕ್ ಬ್ರ್ಯಾಂಡ್‌ನ ಇತ್ತೀಚಿನ ವಿನ್ಯಾಸ ಶೈಲಿಯನ್ನು ಅನುಸರಿಸುತ್ತದೆ ಮತ್ತು ಇದನ್ನು MQB A0-IN ಪ್ಲಾಟ್‌ಫಾರ್ಮ್‌ನಲ್ಲಿ ನಿರ್ಮಿಸಲಾಗುವುದು, ಈ ಪ್ಲಾಟ್‌ಫಾರ್ಮ್ ವಿವಿಧ ಬಾಡಿಯ ಶೈಲಿಗಳು ಮತ್ತು ಎಂಜಿನ್ ಆಯ್ಕೆಗಳನ್ನು ಸರಿಹೊಂದಿಸಲು ಸಾಕಷ್ಟು ಬಹುಮುಖವಾಗಿದೆ.

ಇನ್ನು ಮುಂಬರುವ ಫೋಕ್ಸ್‌ವ್ಯಾಗನ್ ಮಿಡ್ ಸೈಜ್ ಸೆಡಾನ್, ವರ್ಚಸ್ ಎಂದು ಕರೆಯಲ್ಪಡುತ್ತದೆ, ಈ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿರಲಿದೆ, ಸ್ಲಾವಿಯಾ ಈ ಹೊಸ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ ಮೊದಲ ಸೆಡಾನ್ ಆಗಿರುತ್ತದೆ. ಸ್ಕೋಡಾ ಸ್ಲಾವಿಯಾ ಕಾರಿನ ಮುಂಭಾಗದಲ್ಲಿ ಕ್ರೋಮ್ ಸರೌಂಡ್ ಜೊತೆಗೆ ಸಿಗ್ನೇಚರ್ ಬಟರ್‌ಫ್ಲೈ ಗ್ರಿಲ್ ಇದೆ. ಗ್ರಿಲ್ ನಯವಾದ ಹೆಡ್‌ಲ್ಯಾಂಪ್‌ಗಳಿಂದ ಸುತ್ತುವರಿದಿದೆ.

ಇದರ ಹೆಡ್‌ಲ್ಯಾಂಪ್‌ಗಳು ಸ್ಲಾವಿಯಾದ ಮುಂಭಾಗದ ತುದಿಗೆ ಬಹಳಷ್ಟು ಆಕರ್ಷಕ ಪಾತ್ರವನ್ನು ಸೇರಿಸುತ್ತವೆ. ಇದು ಎಲ್ಇಡಿ ಯುನಿಟ್ ಆಗಿದೆ ಮತ್ತು ಅವುಗಳೊಳಗೆ ಎಲ್-ಆಕಾರದ ಎಲ್ಇಡಿ ಡಿಆರ್ಎಲ್ ಗಳನ್ನು ಹೊಂದಿದೆ. ಮುಂಭಾಗದ ಬಂಪರ್ ಕೆಲವು ಕಟ್ಸ್ ಮತ್ತು ಕ್ರೀಸ್‌ಗಳನ್ನು ಮತ್ತು ಹನಿಗೂಬ್ ಅಂಶವನ್ನು ಪಡೆಯುತ್ತದೆ.

ವೃತ್ತಾಕಾರದ ಫಾಗ್ ಲ್ಯಾಂಪ್ ಗಳು ಹ್ಯಾಲೊಜೆನ್ ಬಲ್ಬ್‌ನಿಂದ ಚಾಲಿತವಾಗಿವೆ ಮತ್ತು ಫಾಗ್ ಲ್ಯಾಂಪ್ ಗಳ ಬಳಿ ಇನ್ವರ್ಟಡ್ ಎಲ್ ಆಕಾರದ ಅಂಶವನ್ನು ಇರಿಸಲಾಗುತ್ತದೆ. ಬಾನೆಟ್ ಕೆಲವು ಫಾಂಟ್ ಲೈನ್ ಗಳನ್ನು ಹೊಂದಿದ್ದು ಅದು ಸೆಡಾನ್ ಹೆಚ್ಚು ಮಸ್ಕಲರ್ ಆಗಿ ಕಾಣುವಂತೆ ಮಾಡುತ್ತದೆ ಮತ್ತು ನೋಡಲು ಹೆಚ್ಚು ಆಕರ್ಷಕವಾಗಿದೆ.

ಈ ಹೊಸ ಸ್ಕೋಡಾ ಸ್ಲಾವಿಯಾ ಮೂರು ರೂಪಾಂತರಗಳಲ್ಲಿ ಲಭ್ಯವಿದೆ ಮತ್ತು ಐದು ವಿಭಿನ್ನ ಬಣ್ಣಗಳಲ್ಲಿ ಹೊಂದಬಹುದು: ಇದು ಟೊರಂಡೊ ರೆಡ್, ಕ್ಯಾಂಡಿ ವೈಟ್, ಕಾರ್ಬನ್ ಸ್ಟೀಲ್, ರಿಫ್ಲೆಕ್ಸ್ ಸಿಲ್ವರ್ ಮತ್ತು ಕ್ರಿಸ್ಟಲ್ ಬ್ಲೂ ಬಣ್ಣಗಳ ಆಯ್ಜೆಯನ್ನು ಹೊಂದಿವೆ. ಇನ್ನು ಈ ಸ್ಲಾವಿಯಾ ಕಾರು ಆಕ್ಟೀವ್, ಆಂಬಿಷನ್ ಮತ್ತು ಸ್ಟೈಲ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿರಲಿದೆ.

ಈ ಕಾರಿನ ಇಂಟಿರಿಯರ್ ನಲ್ಲಿ 8-ಇಂಚಿನ ಟಿಎಫ್ಟಿ ಡಿಸ್ ಪ್ಲೇ ಮತ್ತು ಇದು ಇನ್ಸ್ ಟ್ರೂಮೆಂಟ್ ಆಗಿ ಕರ್ತವ್ಯಗಳನ್ನು ನಿರ್ವಹಿಸುತ್ತದೆ. ಈ ಡಿಜಿಟಲ್ ಇನ್ಸ್ ಟ್ರೂಮೆಂಟ್ ಪ್ರಸ್ತುತ ಫ್ಯೂಯಲ್ ದಕ್ಷತೆ, ಸರಾಸರಿ ಇಂಧನ ದಕ್ಷತೆ, ಇಂಧನ ಮಟ್ಟಗಳು, ಓಡೋಮೀಟರ್, ಸ್ಪೀಡೋಮೀಟರ್, ಇತ್ಯಾದಿ ಸೇರಿದಂತೆ ಬಹಳಷ್ಟು ಮಾಹಿತಿಯನ್ನು ಪ್ರದರ್ಶಿಸುತ್ತದೆ. ಖಚಿತವಾಗಿ ಪ್ರೀಮಿಯಂ ಮತ್ತು ಅಲಂಕಾರಿಕವಾಗಿ ಕಾಣುತ್ತದೆ.

ಈ ಸ್ಕೋಡಾ ಸ್ಲಾವಿಯಾ ಕಾರಿನಲ್ಲಿ 10-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೈನ್ ಮೆಂಟ್ ಯುನಿಟ್ ಹೊಂದಿದೆ. ಇದರಲ್ಲಿ ಸ್ಮಾರ್ಟ್‌ಫೋನ್‌ಗೆ ಕನೆಕ್ಟೆಡ್ ಸೂಟ್ ಅನ್ನು ಪಡೆಯುತ್ತದೆ. ಇದು ಆಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಅನ್ನು ಒಳಗೊಂಡಿದೆ. ಉತ್ತಮ ಗುಣಮಟ್ಟದ ಸ್ಪೀಕರ್‌ಗಳನ್ನು ಹಿಂದಿವೆ, ಉನ್ನತ-ಸ್ಪೆಕ್ ಶೈಲಿಯ ರೂಪಾಂತರವು ಸಬ್-ವೂಫರ್ ಅನ್ನು ಸಹ ಹೊಂದಿದೆ.

ಹೊಸ ಸ್ಕೋಡಾ ಸ್ಲಾವಿಯಾ ಕಾರು ಆಯಾಮಗಳ ಬಗ್ಗೆ ಹೇಳುವುದಾದರೆ, ಇದು 4,541 ಎಂಎಂ ಉದ್ದ, 1,752 ಅಗಲ ಮತ್ತು 1,487 ಎಂಎಂ ಎತ್ತರವನ್ನು ಹೊಂದಿದೆ. ಇನ್ನು ಸ್ಕೋಡಾ ಸ್ಲಾವಿಯಾ ಕಾರು 2,651 ಎಂಎಂ ವ್ಹೀಲ್‌ಬೇಸ್ ಅನ್ನು ಒಳಗೊಂಡಿದೆ. ಈ ಹೋಂಡಾ ಸಿಟಿ ಸೆಡಾನ್ ಹೊಸ ಸ್ಲಾವಿಯಾಗಿಂತಲೂ ಉದ್ದವಾಗಿದೆ ಮತ್ತು ಎತ್ತರವಾಗಿದೆ, ಆದರೆ ಸ್ಕೋಡಾ ಸ್ಲಾವಿಯಾ ಕಾರು ಇತರ ಪ್ರತಿಸ್ಪರ್ಧಿಗಳಾದ ಹ್ಯುಂಡೈ ವೆರ್ನಾ ಮತ್ತು ಮಾರುತಿ ಸುಜುಕಿ ಸಿಯಾಜ್ ಎರಡಕ್ಕಿಂತಲೂ ದೊಡ್ಡದಾಗಿದೆ. ಇನ್ನು ಸ್ಲಾವಿಯಾ ತನ್ನ ಎಲ್ಲಾ ಪ್ರತಿಸ್ಪರ್ಧಿಗಳಿಗಿಂತ ಅತಿ ಉದ್ದದ ವ್ಹೀಲ್‌ಬೇಸ್ ಅನ್ನು ಹೊಂದಿದೆ.

ಸ್ಕೋಡಾ ಸ್ಲಾವಿಯಾ 1.0-ಲೀಟರ್ TSI ಮೂರು-ಸಿಲಿಂಡರ್ ಎಂಜಿನ್ ಮತ್ತು 1.5-ಲೀಟರ್ ನಾಲ್ಕು-ಸಿಲಿಂಡರ್ TSI ಎಂಜಿನ್ ಜೊತೆಗೆ ಎರಡೂ ಟರ್ಬೋಚಾರ್ಜ್ಡ್ ಪೆಟ್ರೋಲ್ ಮೋಟಾರ್‌ಗಳಾಗಿವೆ. ಇದರಲ್ಲಿ 1.0-ಲೀಟರ್ TSI ಮೂರು-ಸಿಲಿಂಡರ್ ಎಂಜಿನ್ 113 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕರ್ನವಾಟರ್ ಆಯ್ಕೆಯನ್ನು ನೀಡಲಾಗುತ್ತದೆ.

ಇನ್ನು ದೊಡ್ಡದಾದ 1.5-ಲೀಟರ್ ಎಂಜಿನ್ 148 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್ ಮತ್ತು 7-ಸ್ಪೀಡ್ DSG ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಸ್ಕೋಡಾ ಸ್ಲಾವಿಯಾ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಟಿ, ಹ್ಯುಂಡೈ ವೆರ್ನಾ ಮತ್ತು ಮಾರುತಿ ಸುಜುಕಿ ಸಿಯಾಜ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications