ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸುಜುಕಿ ಜಿಮ್ನಿ ಲಾಂಗ್‌ ವೀಲ್ಹ್‌ಬೆಸ್ ಎಸ್‍ಯುವಿ

ಅಂತರರಾಷ್ಟ್ರೀಯ ಮಾರುಕಟ್ಟೆಗಲ್ಲಿ ಭರ್ಜರಿ ಬೇಡಿಕೆಯೊಂದಿಗೆ ಆಫ್-ರೋಡರ್ ಸುಜುಕಿ ಜಿಮ್ನಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಪ್ರಸ್ತುತ ತಲೆಮಾರಿನ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿಯು 2018ದಿಂದ ಮಾರಾಟವಾಗುತ್ತಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸುಜುಕಿ ಜಿಮ್ನಿ ಲಾಂಗ್‌ ವೀಲ್ಹ್‌ಬೆಸ್ ಎಸ್‍ಯುವಿ

ವರದಿಗಳ ಪ್ರಕಾರ, ಈ ಐಕಾನಿಕ್ ಆಫ್-ರೋಡರ್ ಸುಜುಕಿ ಜಿಮ್ನಿ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಇನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿರುವುದರಿಂದ ಮೂರು ಡೋರಿನ ಸುಜುಕಿ ಜಿಮ್ನಿ ಮಾದರಿಯನ್ನು ಭಾರತದಿಂದ ಲ್ಯಾಟಿನ್ ಅಮೆರಿಕ, ಮಧ್ಯಪ್ರಾಚ್ಯ ಮತ್ತು ಆಫ್ರಿಕನ್ ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುತ್ತದೆ. 2020ರ ಆಟೋ ಎಕ್ಸ್‌ಪೋ ಸಂದರ್ಭದಲ್ಲಿ ಮಾರುತಿ ಸುಜುಕಿ ಭಾರತದಲ್ಲಿ ಜಿಮ್ನಿಯನ್ನು ಪ್ರದರ್ಶಿಸಿದರು. ಇದು ಆಫ್-ರೋಡ್ ವಾಹನ ಪ್ರಿಯರಿಗೆ ಹೆಚ್ಚಿನ ಕುತೂಹಲ ಹುಟ್ಟು ಹಾಕಿತು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸುಜುಕಿ ಜಿಮ್ನಿ ಲಾಂಗ್‌ ವೀಲ್ಹ್‌ಬೆಸ್ ಎಸ್‍ಯುವಿ

ಸುಜುಕಿ ಜಿಮ್ನಿಯ ಲಾಂಗ್‌ ವೀಲ್ಹ್‌ಬೆಸ್ ಆವೃತ್ತಿಯು ಇತ್ತೀಚೆಗೆ ದಕ್ಷಿಣ ಯುರೋಪಿನಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಆದರೆ ಸಂಪೂರ್ಣವಾಗಿ ಮರೆಮಾಚಿ ಈ ಎಸ್‍ಯುವಿಯು ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಸದ್ಯ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೂರು ಡೋರಿನ ಜಿಮ್ನಿ ಮಾದರಿಯನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸುಜುಕಿ ಜಿಮ್ನಿ ಲಾಂಗ್‌ ವೀಲ್ಹ್‌ಬೆಸ್ ಎಸ್‍ಯುವಿ

ಆದರೆ ಐದು ಡೋರಿನ ಮಾದರಿಯು ತರಲು ಸುಜುಕಿ ಜಿಮ್ನಿ ಲಾಂಗ್‌ ವೀಲ್ಹ್‌ಬೆಸ್ ಆವೃತ್ತಿಯನ್ನು ಪರೀಕ್ಷಿಸುತ್ತಿರಬಹುದು. ಯುರೋಪ್ ಮಾರುಕಟ್ಟೆಗಳಲ್ಲಿ ಕಮರ್ಷಿಯಲ್ ಪಿಕಪ್ ಟ್ರಕ್ ಆವೃತ್ತಿಗಳಿಗೆ ಬೇಡಿಕೆ ಹೆಚ್ಚು ಇರುವುದರಿಂದಾಗಿ, ಪಿಕಪ್ ಟ್ರಕ್ ಆವೃತ್ತಿಯಾಗುವ ಸಾಧ್ಯತೆಗಳು ಕೂಡ ಇದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸುಜುಕಿ ಜಿಮ್ನಿ ಲಾಂಗ್‌ ವೀಲ್ಹ್‌ಬೆಸ್ ಎಸ್‍ಯುವಿ

ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಲಾಂಗ್‌ ವೀಲ್ಹ್‌ಬೆಸ್ ಆವೃತ್ತಿಯ ಜಿಮ್ನಿ ಎಸ್‍ಯುವಿಯನ್ನು ಪರಿಚಯಿಸಬಹುದು. ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಮಾದರಿಯು ಲಂಬವಾದ ಗ್ರಿಲ್ ಸ್ಲ್ಯಾಟ್‌ಗಳು, ವೃತ್ತಾಕಾರದ ಹೆಡ್‌ಲ್ಯಾಂಪ್‌ಗಳು, ಮಾರುಕಟ್ಟೆಯಲ್ಲಿ ಮಾದರಿಯಲ್ಲಿರುವಂತಹ ಅಲಾಯ್ ವ್ಹೀಲ್, ವಿಂಟೇಜ್ ಟರ್ನ್ ಇಂಡಿಕೇಟರ್ಸ್ ಮತ್ತು ಟೈಲ್‌ಗೇಟ್-ಮೌಂಟಡ್ ಸ್ಪೇರ್ ವ್ಹೀಲ್ ಅನ್ನು ಒಳಗೊಂಡಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸುಜುಕಿ ಜಿಮ್ನಿ ಲಾಂಗ್‌ ವೀಲ್ಹ್‌ಬೆಸ್ ಎಸ್‍ಯುವಿ

ಸುಜುಕಿ ಜಿಮ್ನಿ ಎಸ್‍ಯುವಿಯು ಯುರೋಪಿಯನ್ ದೇಶಗಳಲ್ಲಿ ಬಹುಬೇಡಿಕೆಯನ್ನು ಪಡೆದುಕೊಂಡಿದೆ, ಅಲ್ಲದೇ ಸುಜುಕಿ ಜಿಮ್ನಿ ತವರು ಜಪಾನ್ ನಲ್ಲಿಯು ಬೇಡಿಕೆ ಹೆಚ್ಚಾಗಿದೆ. ಸುಜುಕಿ ಕಂಪನಿಯ ಜಪಾನ್ ನಲ್ಲಿರುವ ಕೊಸೈನ ಘಟಕದಲ್ಲಿ ಉತ್ಪಾದನೆಯನ್ನು ಗರಿಷ್ಠ ಪ್ರಮಾಣಕ್ಕೆ ಏರಿಸಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸುಜುಕಿ ಜಿಮ್ನಿ ಲಾಂಗ್‌ ವೀಲ್ಹ್‌ಬೆಸ್ ಎಸ್‍ಯುವಿ

ಇನ್ನು ಜಿಮ್ನಿಯನ್ನು ಇತ್ತೀಚೆಗೆ ಮೆಕ್ಸಿಕೊದಲ್ಲಿ ಸುಜುಕಿ ಕಂಪನಿಯು ಬಿಡುಗಡೆಗೊಳಿಸಿತ್ತು. ಇದು ಕೇವಲ 72 ಗಂಟೆಗಳ ಅವಧಿಯಲ್ಲಿ ಸೋಲ್ಡ್ ಔಟ್ ಆಯ್ತು. ಇನ್ನು ಈ ಜಿಮ್ನಿ ಎಸ್‍ಯುವಿಯು ಜಾಗತಿಕವಾಗಿ ಅನಾವರಣಗೊಂಡು 1.5 ವರ್ಷಗಳ ಬಳಿಕ ಭಾರತದ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿತು.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸುಜುಕಿ ಜಿಮ್ನಿ ಲಾಂಗ್‌ ವೀಲ್ಹ್‌ಬೆಸ್ ಎಸ್‍ಯುವಿ

ಈ ಮಿನಿ-ಎಸ್‌ಯುವಿ 2019 ರ 'ವರ್ಲ್ಡ್ ಅರ್ಬನ್ ಕಾರ್ ಅಫ್ ದಿ ಇಯರ್' ಎಂಬ ಪ್ರತಿಷ್ಠಿತ ಪ್ರಶಸ್ತಿಯನ್ನು ಕೂಡ ತನ್ನದಾಗಿಸಿಕೊಂಡಿದೆ. ಹೊಸ ಜಿಮ್ನಿ ಲ್ಯಾಡರ್-ಫ್ರೇಮ್ ಚಾಸಿಸ್ ಅನ್ನು ಆಧರಿಸಿದೆ. ಇದು 3 ಲಿಂಕ್ ಆಕ್ಸಲ್ ಸಸ್ಪೆಂಷನ್ ಅನ್ನು ಹೊಂದಿದೆ. ಇದು ಕಠಿಣ ಭೂಪ್ರದೇಶಗಳಲ್ಲಿ ಸುಗಮವಾಗಿ ಸಾಗಲು ನೆರವಾಗುತ್ತದೆ. ಈ ಮಿನಿ ಎಸ್‍ಯುವಿಯಲ್ಲಿ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸುಜುಕಿ ಜಿಮ್ನಿ ಲಾಂಗ್‌ ವೀಲ್ಹ್‌ಬೆಸ್ ಎಸ್‍ಯುವಿ

ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಅಥವಾ 4 ಸ್ಪೀಡ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಭಾರತದಲ್ಲಿ ಬಿಡುಗಡೆಯಾದರೆ ಈ ಜಿಮ್ನಿ ಎಸ್‍‍ಯುವಿ 33 ವರ್ಷಗಳ ಕಾಲ ದೇಶದಲ್ಲಿ ಮಾರಾಟವಾಗಿದ್ದ ಜನಪ್ರಿಯ ಜಿಪ್ಸಿ ಎಸ್‍‍ಯುವಿಯ ಉತ್ತರಾಧಿಕಾರಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸುಜುಕಿ ಜಿಮ್ನಿ ಲಾಂಗ್‌ ವೀಲ್ಹ್‌ಬೆಸ್ ಎಸ್‍ಯುವಿ

ಭಾರತದಲ್ಲಿ ಆಫ್-ರೋಡ್ ವಾಹನ ಎಂದು ಹೇಳಿದಾಗ ಮೊದಲು ಯೋಚನೆಗೆ ಬರುವುದು ಮಹೀಂದ್ರಾ ಥಾರ್ ಎಂದೇ ಹೇಳಬಹುದು. ಆದರೆ ಅದೇ ರೀತಿ ಉತ್ತಮ ಆಫ್-ರೋಡ್ ಸಾಮರ್ಥ್ಯವನ್ನು ಹೊಂದಿರುವ ಜಿಮ್ನಿ ಒಂದು ವೇಳೆ ಭಾರತದಲ್ಲಿ ಬಿಡುಗಡೆಗೊಂಡರೆ ಥಾರ್ ಎಸ್‍ಯುವಿಗೆ ಪ್ರಬಲ ಎದುರಾಳಿ ಆಗಿರುತ್ತದೆ.

Article Published On: Tuesday, March 16, 2021, 19:38 [IST]
English summary
Suzuki Jimny LWB Spied, Platform Testing For 5-Door Jimny. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+