Just In
- 8 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 9 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 10 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 10 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವರ್ಫುಲ್ ಟರ್ಬೋ ಪೆಟ್ರೋಲ್ ಎಂಜಿನ್ನೊಂದಿಗೆ ಭಾರತದಲ್ಲಿ ಬಿಡುಗಡೆಯಾಗಲಿದೆ ಸುಜುಕಿ ಜಿಮ್ನಿ
ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ದೇಶೀಯ ಮಾರುಕಟ್ಟೆಯಲ್ಲಿ ಜಿಮ್ನಿ ಆಫ್-ರೋಡರ್ ಎಸ್ಯುವಿಯನ್ನು ಪರಿಚಯಿಸಲಿದೆ. ಜಿಮ್ನಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಆಫ್-ರೋಡ್ ಎಸ್ಯುವಿಯಾಗಿದೆ.
ಈ ಜಿಮ್ನಿ ಎಸ್ಯುವಿಯನ್ನು ಮಾರುತಿ ಸುಜುಕಿ ಕಂಪನಿಯು 2020ರ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಲಾಗಿತ್ತು.ವರದಿಗಳ ಪ್ರಕಾರ ಮಾರುತಿ ಸುಜುಕಿ ಜಿಮ್ನಿ 5-ಡೋರ್ ಎಸ್ಯುವಿಯು ಮುಂದಿನ ವರ್ಷದ ಜುಲೈ ತಿಂಗಳಿನಲ್ಲಿ ಬಿಡುಗಡೆಗೊಳಿಸಬಹುದು. ಇನ್ನು ಸುಜುಕಿ ಜಿಮ್ನಿ 5-ಡೋರ್ ಎಸ್ಯುವಿಯ ಉತ್ಪಾದನೆಗೆ ಸಿದ್ಧಗೊಂಡಿರುವ ಮಾದರಿಯನ್ನು ಮುಂದಿನ ವರ್ಷ ನಡೆಯುವ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಬಹುದು ಎಂದು ನಿರೀಕ್ಷಿಸುತ್ತೇವೆ.
ಈ ಜಿಮ್ನಿ ಎಸ್ಯುವಿಯು ಒಟ್ಟಾರೆ 3,850 ಎಂಎಂ ಉದ್ದ, 1,645 ಎಂಎಂ ಅಗಲ ಮತ್ತು 1,730 ಎಂಎಂ ಎತ್ತರವನ್ನು ಹೊಂದಿದೆ.ಇನ್ನು ಈ ಎಸ್ಯುವಿ 2,550 ಎಂಎಂ ವ್ಹೀಲ್ಬೇಸ್ ಅನ್ನು ಹೊಂದಿದೆ. ಸಾಮಾನ್ಯ 3-ಡೋರಿನ ರೂಪಾಂತರಕ್ಕೆ ಹೋಲಿಸಿದರೆ, ಒಟ್ಟಾರೆ ಉದ್ದವು 300 ಎಂಎಂ ಮತ್ತು ವ್ಹೀಲ್ಬೇಸ್ ಉದ್ದವು 300 ಎಂಎಂ ನಷ್ಟು ಹೆಚ್ಚಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಇನ್ನು ಜಿಮ್ನಿ 5-ಡೋರ್ ಎಸ್ಯುವಿಯು ರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ನೊಂದಿಗೆ ಬಿಡುಗಡೆಯಾಗಲಿದೆ ಎಂದು ವರದಿಗಳಾಗಿದೆ. ಈ ಜಿಮ್ನಿ ಮೈಲ್ಡ್ ಹೈಬ್ರಿಡ್ ಸಿಸ್ಟಂ ಹೊಂದಿರುವ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಪಡೆಯುವ ನಿರೀಕ್ಷೆಯಿದೆ. ಹೊಸ ಮಾದರಿಯು ಜಿಮ್ನಿ ಸಿಯೆರಾವನ್ನು ಆಧರಿಸಿದೆ.
ಇನ್ನು 5-ಡೋರ್ ಸುಜುಕಿ ಜಿಮ್ನಿ ಎಸ್ಯುವಿಯಲ್ಲಿ 1.5-ಲೀಟರ್ ನಾಲ್ಕು ಸಿಲಿಂಡರ್ ಕೆ-ಸೀರಿಸ್ ಇನ್-ಲೈನ್ ಡಿಒಹೆಚ್ಸಿ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 6,000 ಆರ್ಪಿಎಂನಲ್ಲಿ 101 ಬಿಹೆಚ್ಪಿ ಪವರ್ ಮತ್ತು 4,000 ಆರ್ಪಿಎಂನಲ್ಲಿ 130 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ
ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್ಮಿಷನ್ನೊಂದಿಗೆ ಸ್ಟ್ಯಾಂಡರ್ಡ್ನಂತೆ ಜೋಡಿಸಲಾಗಿದ್ದು, ನಾಲ್ಕು-ಸ್ಪೀಡ್ ಟಾರ್ಕ್ ಕರ್ನವಾಟರ್ ಯುನಿಟ್ ಆಯ್ಕೆಯನ್ನು ನೀಡಲಾಗಿದೆ. ಈ ಜಿಮ್ನಿ ಮಾದರಿಯು ಈ ಎಂಜಿನ್ನ ಟರ್ಬೋಚಾರ್ಜ್ಡ್ ಆವೃತ್ತಿಯನ್ನು ಪಡೆಯಬಹುದು; ಆದೆರೆ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ.
ಜಿಮ್ನಿ ಆಫ್-ರೋಡ್ ಎಸ್ಯುವಿಯಲ್ಲಿ 15 ಇಂಚಿನ ವ್ಹೀಲ್ ಅನ್ನು ಹೊಂದಿರುತ್ತದೆ. ಐದು ಡೋರುಗಳ ಜಿಮ್ನಿ ಇನ್ನು ನಾಲ್ಕು ಮೀಟರ್ ಉದ್ದದ ಮಾದರಿಯಾಗಿದೆ. ಭಾರತದಲ್ಲಿ ಇದು ತೆರಿಗೆ ಪ್ರಯೋಜನಗಳನ್ನು ಪಡೆಯುತ್ತದೆ. 2,550 ಎಂಎಂ ವ್ಹೀಲ್ ಬೇಸ್ ಉದ್ದವು ಕಾಂಪ್ಯಾಕ್ಟ್ ಎಸ್ಯುವಿಗಳಿಗಿಂತ ಹೆಚ್ಚಿನದಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ
ಇದು ಸುಮಾರು 2,500 ಎಂಎಂ ವ್ಹೀಲ್ಬೇಸ್ ಹೊಂದಿದೆ ಆದರೆ ಮಧ್ಯಮ ಗಾತ್ರದ ಎಸ್ಯುವಿಗಿಂತ ಚಿಕ್ಕದಾಗಿದೆ. ಇದರಿಂದ 5-ಡೋರ್ ಜಿಮ್ನಿ ಮಾದರಿಯು ಕಾಂಪ್ಯಾಕ್ಟ್ ಎಸ್ಯುವಿ ಮತ್ತು ಮಧ್ಯಮ ಗಾತ್ರದ ಎಸ್ಯುವಿಯ ನಡುವಿನ ವಿಭಾಗದಲ್ಲಿ ಇರಿಸಬಹುದು.
5-ಡೋರ್ ಜಿಮ್ನಿ ಎಸ್ಯುವಿಯ ವ್ಹೀಲ್ಬೇಸ್ ಮಹೀಂದ್ರಾ ಥಾರ್ಗಿಂತ 100 ಎಂಎಂ ಉದ್ದವಿರುತ್ತದೆ, ಒಟ್ಟಾರೆ ಜಿಮ್ನಿ ಆಫ್-ರೋಡ್ ಎಸ್ಯುವಿಯು ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ, ಅಗ್ರೇಸಿವ್ ಲುಕ್ ಮತ್ತು ಸಾಟಿಯಿಲ್ಲದ ಆಫ್-ರೋಡ್ ಸಾಮರ್ಥ್ಯವನ್ನು ಕೂಡ ಹೊಂದಿರುತ್ತದೆ.
ಉತ್ತಮ ಆಫ್-ರೋಡ್ ಸಾಮರ್ಥ್ಯವನ್ನು ಹೊಂದಿರುವ ಜಿಮ್ನಿ ಭಾರತದಲ್ಲಿ ಬಿಡುಗಡೆಗೊಂಡರೆ ಥಾರ್ ಎಸ್ಯುವಿಗೆ ಪ್ರಬಲ ಎದುರಾಳಿ ಆಗುತ್ತದೆ. 2020ರ ಆಟೋ ಎಕ್ಸ್ಪೋ ಸಂದರ್ಭದಲ್ಲಿ ಮಾರುತಿ ಸುಜುಕಿ ಭಾರತದಲ್ಲಿ ಜಿಮ್ನಿಯನ್ನು ಪ್ರದರ್ಶಿಸಿದಾಗ ಆಫ್-ರೋಡ್ ವಾಹನ ಪ್ರಿಯರಿಗೆ ಹೆಚ್ಚಿನ ಕುತೂಹಲ ಹುಟ್ಟು ಹಾಕಿತು.
ಒಟ್ಟಿನಲ್ಲಿ ಭಾರತದಲ್ಲಿ ಬಿಡುಗಡೆಯಾದರೆ ಈ ಬಹುನಿರೀಕ್ಷಿತ ಸುಜುಕಿ 5-ಡೋರ್ ಜಿಮ್ನಿ ಎಸ್ಯುವಿಯು 33 ವರ್ಷಗಳ ಕಾಲ ದೇಶದಲ್ಲಿ ಮಾರಾಟವಾಗಿದ್ದ ಜನಪ್ರಿಯ ಜಿಪ್ಸಿ ಮಾದರಿಯ ಉತ್ತರಾಧಿಕಾರಿಯಾಗಲಿದೆ ಎಂದು ಹೇಳಲಾಗುತ್ತಿದೆ.