ಆಫ್ ರೋಡ್ ಚಾಲನೆಯಲ್ಲೂ ಗಮನಸೆಳೆದ Tata Punch ಹೊಸ ಟೀಸರ್

ಟಾಟಾ ಮೋಟಾರ್ಸ್ ಕಂಪನಿಯು(Tata Motors) ಕಂಪನಿಯು ತನ್ನ ಬಹುನೀರಿಕ್ಷಿತ ಪಂಚ್(Punch) ಮೈಕ್ರೊ ಎಸ್‌ಯುವಿ ಮಾದರಿಯನ್ನು ಶೀಘ್ರದಲ್ಲೇ ಅನಾವರಣಗೊಳಿಸಲಿದ್ದು, ಕಂಪನಿಯು ಹೊಸ ಕಾರು ಅನಾವರಣಕ್ಕೂ ಮುನ್ನ ಹೊಸ ಕಾರಿನ ಮತ್ತೊಂದು ಆಫ್ ರೋಡ್ ಕೌಶಲ್ಯತೆಯ ಟೀಸರ್ ವಿಡಿಯೋ ಹಂಚಿಕೊಂಡಿದೆ.

ಆಫ್ ರೋಡ್ ಚಾಲನೆಯಲ್ಲೂ ಗಮನಸೆಳೆದ Tata Punch ಹೊಸ ಟೀಸರ್

ಪಂಚ್ ಕಾರಿನ ಮೂಲಕ ಎಂಟ್ರಿ ಲೆವಲ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವ ತವಕದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದು, ಪಂಚ್ ಮಾದರಿಯು ಸಣ್ಣ ಗಾತ್ರದ ಕಾರುಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಉತ್ತಮ ಚಾಲನಾ ವೈಶಿಷ್ಟ್ಯತೆಯನ್ನು ಪಡೆದುಕೊಂಡಿದೆ.

ಆಫ್ ರೋಡ್ ಚಾಲನೆಯಲ್ಲೂ ಗಮನಸೆಳೆದ Tata Punch ಹೊಸ ಟೀಸರ್

ಹೊಸ ಕಾರು ಆಕರ್ಷಕ ವಿನ್ಯಾಸ, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಅತ್ಯತ್ತಮವಾಗಿದ್ದು, ಹೊಸ ಕಾರು ಆಫ್ ರೋಡ್‌ನಲ್ಲೂ ಸರಾಗ ಚಾಲನೆಗಾಗಿ ಸೆಗ್ಮೆಂಟ್ ಬೆಸ್ಟ್ ಗ್ರೌಂಡ್ ಕ್ಲಿಯೆರೆನ್ಸ್ ಸೇರಿದಂತೆ ಹಲವು ವಿಶೇಷತೆಗಳನ್ನು ಪಡೆದುಕೊಂಡಿದೆ.

ಆಫ್ ರೋಡ್ ಚಾಲನೆಯಲ್ಲೂ ಗಮನಸೆಳೆದ Tata Punch ಹೊಸ ಟೀಸರ್

ಬೆಸ್ಟ್ ಗ್ರೌಂಡ್ ಕ್ಲಿಯೆರೆನ್ಸ್ ಮೂಲಕ ಆಫ್-ರೋಡ್ ಚಾಲನೆಯಲ್ಲೂ ಗಮನಸೆಳೆಯಲಿರುವ ಪಂಚ್ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಕಾರ್ಯಕ್ಷಮತೆ ಹೊಂದಿದ್ದು, ಹೊಸ ಕಾರು ಮುಂಬರುವ ದಸರಾ ವೇಳೆಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರು ಖರೀದಿಗೆ ಇನ್ನು ಕೂಡಾ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸುವ ಮುನ್ನವೇ ಡೀಲರ್ಸ್ ಮಟ್ಟದಲ್ಲಿ ಆಸಕ್ತ ಗ್ರಾಹಕರು ಬುಕ್ಕಿಂಗ್ ಸಲ್ಲಿಕೆ ಮಾಡುತ್ತಿದ್ದು, ಹೊಸ ಕಾರು ಮಾದರಿಯನ್ನು ಆರಂಭದಲ್ಲೇ ಖರೀದಿಸಲು ಮೈಕ್ರೊ ಎಸ್‌ಯುವಿ ಕಾರು ಪ್ರಿಯರು ಮುಗಿಬಿದ್ದಿದ್ದಾರೆ.

ಆಫ್ ರೋಡ್ ಚಾಲನೆಯಲ್ಲೂ ಗಮನಸೆಳೆದ Tata Punch ಹೊಸ ಟೀಸರ್

ಪಂಚ್ ಕಾರು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಾದ ಆಲ್‌ಟ್ರೊಜ್ ಕಾರು ಉತ್ಪಾದನೆಗಾಗಿ ಬಳಕೆ ಮಾಡಲಾಗಿರುವ ALFA-ARC ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್‌ನಲ್ಲಿಯೇ ಉತ್ಪಾದನೆ ಮಾಡಲಾಗುತ್ತಿದ್ದು, ನೆಕ್ಸಾನ್ ಮಾದರಿಯಲ್ಲೇ ಹೊರನೋಟ ಹೊಂದಿರುವ ಹೊಸ ಕಾರು ಗಾತ್ರದಲ್ಲಿ ಮಾತ್ರವೇ ತುಸು ಚಿಕ್ಕದಾಗಿರಲಿದೆ.

ಆಫ್ ರೋಡ್ ಚಾಲನೆಯಲ್ಲೂ ಗಮನಸೆಳೆದ Tata Punch ಹೊಸ ಟೀಸರ್

ಹೊಸ ಕಾರುಗಳ ಮಾದರಿಗಳ ಮೂಲಕ ಜನಪ್ರಿಯತೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಪಂಚ್ ಕಾರಿನ ಭಾರೀ ನೀರಿಕ್ಷೆಯಿಟ್ಟುಕೊಂಡಿದ್ದು, ಹೊಸ ಕಾರಿನ ಮೂಲಕ ಉತ್ತಮ ಮಾರುಕಟ್ಟೆ ಪಾಲು ತನ್ನದಾಗಿಸಿಕೊಳ್ಳಲು ಎದುರು ನೋಡುತ್ತಿದೆ.

ಆಫ್ ರೋಡ್ ಚಾಲನೆಯಲ್ಲೂ ಗಮನಸೆಳೆದ Tata Punch ಹೊಸ ಟೀಸರ್

ಹೊಸ ಪಂಚ್ ಮೈಕ್ರೊ ಎಸ್‌ಯುವಿ ಮಾದರಿಯು ಎಂಟ್ರಿ ಲೆವಲ್ ಕಾರು ಮಾದರಿಯಲ್ಲೇ ಹಲವಾರು ಹೊಸ ಸುಧಾರಿತ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದ್ದು, ಹೊಸ ಕಾರಿನ ಕುರಿತು ಈಗಾಗಲೇ ಒಂದೊಂದೆ ಮಾಹಿತಿ ಹಂಚಿಕೊಳ್ಳುತ್ತಿರುವ ಕಂಪನಿಯು ಎಂಟ್ರಿ ಲೆವಲ್ ಕಾರು ಮಾದರಿಗಳಲ್ಲೇ ಭಾರೀ ಬೇಡಿಕೆ ಪಡೆದುಕೊಳ್ಳುವ ಯೋಜನೆಯಲ್ಲಿದೆ.

ಆಫ್ ರೋಡ್ ಚಾಲನೆಯಲ್ಲೂ ಗಮನಸೆಳೆದ Tata Punch ಹೊಸ ಟೀಸರ್

ಪಂಚ್ ಕಾರು ಆಕರ್ಷಕ ವಿನ್ಯಾಸ, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಸೆಗ್ಮೆಂಟ್ ಬೆಸ್ಟ್ ಫಿಚರ್ಸ್, ಅತ್ಯುತ್ತಮ ಗ್ರೌಂಡ್ ಕ್ಲಿಯೆರೆನ್ಸ್ ಸೇರಿದಂತೆ ಹಲವು ವಿಶೇಷತೆಗಳನ್ನು ಪಡೆದುಕೊಂಡಿದ್ದು, ಹೊಸ ಕಾರು ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲಿ ಅತ್ಯುತ್ತಮ ಡಿಸೈನ್ ಹೊಂದಿದೆ.

ಆಫ್ ರೋಡ್ ಚಾಲನೆಯಲ್ಲೂ ಗಮನಸೆಳೆದ Tata Punch ಹೊಸ ಟೀಸರ್

ಪಂಚ್ ಕಾರಿನಲ್ಲಿ ವಿಭಜಿತವಾಗಿರುವ ಹೆಡ್‌ಲ್ಯಾಂಪ್ ಸೆಟ್ಅಪ್, ಹ್ಯುಮಿನಿಟಿ ಲೈನ್ ಗ್ರಿಲ್, ಬಂಪರ್‌ಗೆ ಹೊಂದಿಕೊಂಡಿರುವ ಬಾಡಿ ಕ್ಲಾಡಿಂಗ್, ವ್ಹೀಲ್ ಆರ್ಚ್, ಹೊರಭಾಗದಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ, 16-ಇಂಚಿನ ಅಲಾಯ್ ವ್ಹೀಲ್, ಕ್ರಿಸ್ ಲೈನ್ ಹೊಂದಿರುವ ಬ್ಯಾನೆಟ್, ರೂಫ್ ರೈಲ್ಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

ಆಫ್ ರೋಡ್ ಚಾಲನೆಯಲ್ಲೂ ಗಮನಸೆಳೆದ Tata Punch ಹೊಸ ಟೀಸರ್

ಹಾಗೆಯೇ ಹೊಸ ಕಾರಿನಲ್ಲಿ ಟಾಟಾ ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ 7.0-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕ್ವಾರಿಷ್ ಏರ್ ಕಾನ್ ವೆಂಟ್ಸ್, ತ್ರಿ ಸ್ಪೋಕ್ ಪ್ಲ್ಯಾಟ್ ಬಾಟಮ್ ಸ್ಟೀರಿಂಗ್ ವೀಲ್ಹ್, ಹ್ವಾಕ್ ಕಂಟ್ರೋಲ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಡಿಜಿಟಲ್ ಟಾಚೊ ಮೀಟರ್, ಅನಲಾಗ್ ಸ್ಪೀಡೋ ಮೀಟರ್ ಸೇರಿದಂತೆ ವಿವಿಧ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.

ಆಫ್ ರೋಡ್ ಚಾಲನೆಯಲ್ಲೂ ಗಮನಸೆಳೆದ Tata Punch ಹೊಸ ಟೀಸರ್

ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಡ್ಯಯಲ್ ಫ್ರಂಟ್ ಏರ್‌ಬ್ಯಾಗ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಟೈರ್ ಪ್ರೆಷರ್ ಮಾನಿಟಿಂಗ್ ಸಿಸ್ಟಂ, ಹೈ ಸ್ಪೀಡ್ ಅಲರ್ಟ್ ಸೌಲಭ್ಯಗಳಿಲಿವೆ.

ಆಫ್ ರೋಡ್ ಚಾಲನೆಯಲ್ಲೂ ಗಮನಸೆಳೆದ Tata Punch ಹೊಸ ಟೀಸರ್

ಪಂಚ್ ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು 1.2-ಲೀಟರ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.2-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪರಿಚಯಿಸುವ ಸಾಧ್ಯತೆಗಳಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.

ಆಫ್ ರೋಡ್ ಚಾಲನೆಯಲ್ಲೂ ಗಮನಸೆಳೆದ Tata Punch ಹೊಸ ಟೀಸರ್

ಹೊಸ ಪಂಚ್ ಕಾರು ಮಾರುಕಟ್ಟೆಯಲ್ಲಿರುವ ಮಾರುತಿ ಇಗ್ನಿಸ್, ಹ್ಯುಂಡೈ ಸ್ಯಾಂಟ್ರೊ ಜೊತೆಗೆ ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್ ಕಾರುಗಳ ಎಂಟ್ರಿ ಲೆವಲ್ ವೆರಿಯೆಂಟ್ ಪೈಪೋಟಿ ನೀಡುವ ನೀರಿಕ್ಷೆಯಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

Article Published On: Tuesday, September 14, 2021, 19:10 [IST]
English summary
New tata punch micro suv new video
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+