27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಟಾಟಾ ಮೋಟಾರ್ಸ್(Tata Motors) ಕಂಪನಿಯು ದಸರಾ ಸಂಭ್ರಮಕ್ಕೂ ಮುನ್ನ ಹೊಸ ಪಂಚ್(Punch) ಕಾರು ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರು ಎಂಟ್ರಿ ಲೆವಲ್ ಕಾರುಗಳಲ್ಲೇ ಅತಿ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಪಂಚ್ ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತ್ಯುತ್ತಮ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಬೆಲೆ ವಿಚಾರವಾಗಿ ಗ್ರಾಹಕರನ್ನು ಸೆಳೆಯಲಿದ್ದು, ಹೊಸ ಕಾರು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ಅತ್ಯುತ್ತಮ ಕಾರು ಮಾದರಿಯಾಗಿ ಗುರುತಿಸಿಕೊಳ್ಳಲಿದೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಹೊಸ ಮೈಕ್ರೊ ಎಸ್‌ಯುವಿ ಮಾದರಿಯು ಎಂಟ್ರಿ ಲೆವಲ್ ಕಾರು ಮಾದರಿಯಲ್ಲೇ ಹಲವಾರು ಹೊಸ ಸುಧಾರಿತ ತಂತ್ರಜ್ಞಾನ ಸೌಲಭ್ಯಗಳ ಪ್ರೇರಣೆ ಪಡೆದುಕೊಂಡಿದ್ದು, ಹೊಸ ಕಾರಿನ ಕುರಿತು ಈಗಾಗಲೇ ಒಂದೊಂದೆ ಮಾಹಿತಿ ಹಂಚಿಕೊಳ್ಳುತ್ತಿರುವ ಕಂಪನಿಯು ಹೊಸ ಕಾರಿನ ಬಗೆಗೆ ಸಾಕಷ್ಟು ಕುತೂಹಲ ಹುಟ್ಟುಹಾಕುತ್ತಿದೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಟಾಟಾ ಮೋಟಾರ್ಸ್ ಕಂಪನಿಯು ಹಂಚಿಕೊಂಡಿರುವ ಹೊಸ ಮಾಹಿತಿಯಲ್ಲಿ ಪಂಚ್ ಕಾರು ಕಂಪನಿಯ ಹೊಸ ಐರಾ ಕಾರ್ ಟೆಕ್ನಾಲಜಿ ಹೊಂದಿರಲಿದೆ ಎನ್ನಲಾಗಿದ್ದು, ಒಂದೇ ಸೂರಿನಡಿ 27 ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲು ಐರಾ(iRA) ಸಹಕಾರಿಯಾಗಿದೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಸ್ಮಾರ್ಟ್‌ಫೋನ್ ಸಂಪರ್ಕಿತ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನವನ್ನು ಕನೆಕ್ಟ್ ನೆಕ್ಸ್ಟ್ ಎಂಬ ಡೆಡಿಕೇಟೆಡ್ ಆ್ಯಪ್ ಮೂಲಕವೇ ಕಾರಿನ ಹಲವು ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಣ ಮಾಡಬಹುದಾಗಿದ್ದು, ರಿಮೋಟ್ ಲಾಕ್/ಅನ್ ಲಾಕ್, ರಿಮೋಟ್ ಹಾರ್ನ್, ಡಿಸ್ಟೆನ್ಸ್ ಟು ಎಂಟಿ ಚೆಕ್ ಸೇರಿದಂತೆ ಹಲವಾರು ಫೀಚರ್ಸ್ ಇದರಲ್ಲಿ ನೀಡಲಾಗಿದೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಐರಾ ಟೆಕ್ನಾಲಜಿಯ ಮೂಲಕ ಕಾರಿನ ಸೆಕ್ಯೂರಿಟಿ ಸ್ಟೆಟಸ್, ಲೈವ್ ವೆಹಿಕಲ್ ಡಯಾಗ್ನೋಸ್ಟಿಕ್ಸ್ ಸೇರಿದಂತೆ ಹಲವಾರು ಲೋಕೇಶನ್ ಬೆಸ್ಡ್ ಸರ್ವೀಸ್'ಗಳನ್ನು ನೀಡಲಿದ್ದು, ಆಲ್‌ಟ್ರೊಜ್ ಐ-ಟರ್ಬೊ ನಂತರ ಇದೀಗ ಪಂಚ್ ಮಾದರಿಯಲ್ಲಿ ಜೋಡಿಸಲಾಗುತ್ತಿದೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಐರಾದಲ್ಲಿರುವ ವಾಯ್ಸ್ ಅಸಿಸ್ಟೆನ್ಸ್ ಸೌಲಭ್ಯದೊಂದಿಗೆ ಇಂಗ್ಲಿಷ್, ಹಿಂದಿ ಸೇರಿದಂತೆ 70ಕ್ಕೂ ಹೆಚ್ಚು ಭಾಷೆಗಳಲ್ಲಿನ ವಾಯ್ಸ್ ಕಮಾಂಡ್‌ಗಳನ್ನು ಅರ್ಥಮಾಡಿಕೊಳ್ಳಲಿದ್ದು, ಕಾರು ಪ್ರಯಾಣದ ವೇಳೆ ಯಾವುದೇ ಮ್ಯಾನುವಲ್ ಬಟನ್ ಬಳಕೆ ಮಾಡದೆ ನಿಮ್ಮ ಅಗತ್ಯ ಸೇವೆಗಳನ್ನು ಧ್ವನಿ ಗ್ರಹಿಕೆಯ ಮೂಲಕವೇ ಸೇವೆ ಪಡೆದುಕೊಳ್ಳಬಹುದಾಗಿದೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಇನ್ನು ಹೊಸ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಪಂಚ್ ಕಾರು ಮಾರಾಟಗೊಳ್ಳಲಿದ್ದು, ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಪಂಚ್ ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು ಟಿಯಾಗೋ ಮಾದರಿಯಲ್ಲಿರುವ 1.2-ಲೀಟರ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.2-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪರಿಚಯಿಸುವ ಸಾಧ್ಯತೆಗಳಿವೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಸೆಗ್ಮೆಂಟ್ ಬೆಸ್ಟ್ ಫಿಚರ್ಸ್ ಪಡೆದುಕೊಳ್ಳಲಿರುವ ಟಾಟಾ ಪಂಚ್ ಕಾರು ಅತ್ಯುತ್ತಮ ಗ್ರೌಂಡ್ ಕ್ಲಿಯೆರೆನ್ಸ್ ಸೇರಿದಂತೆ ಹಲವು ವಿಶೇಷತೆಗಳನ್ನು ಪಡೆದುಕೊಂಡಿದ್ದು, ಹೊಸ ಕಾರು ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲಿ ಅತ್ಯುತ್ತಮ ಡಿಸೈನ್ ಹೊಂದಿದೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಪಂಚ್ ಕಾರಿನಲ್ಲಿ ವಿಭಜಿತವಾಗಿರುವ ಹೆಡ್‌ಲ್ಯಾಂಪ್ ಸೆಟ್ಅಪ್, ಹ್ಯುಮಿನಿಟಿ ಲೈನ್ ಗ್ರಿಲ್, ಬಂಪರ್‌ಗೆ ಹೊಂದಿಕೊಂಡಿರುವ ಬಾಡಿ ಕ್ಲಾಡಿಂಗ್, ವ್ಹೀಲ್ ಆರ್ಚ್, ಹೊರಭಾಗದಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ, 16-ಇಂಚಿನ ಅಲಾಯ್ ವ್ಹೀಲ್, ಕ್ರಿಸ್ ಲೈನ್ ಹೊಂದಿರುವ ಬ್ಯಾನೆಟ್, ರೂಫ್ ರೈಲ್ಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಹಾಗೆಯೇ ಹೊಸ ಕಾರಿನಲ್ಲಿ ಟಾಟಾ ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ 7.0-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕ್ವಾರಿಷ್ ಏರ್ ಕಾನ್ ವೆಂಟ್ಸ್, ತ್ರಿ ಸ್ಪೋಕ್ ಪ್ಲ್ಯಾಟ್ ಬಾಟಮ್ ಸ್ಟೀರಿಂಗ್ ವೀಲ್ಹ್, ಹ್ವಾಕ್ ಕಂಟ್ರೋಲ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಡಿಜಿಟಲ್ ಟಾಚೊ ಮೀಟರ್, ಅನಲಾಗ್ ಸ್ಪೀಡೋ ಮೀಟರ್ ಸೇರಿದಂತೆ ವಿವಿಧ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಡ್ಯಯಲ್ ಫ್ರಂಟ್ ಏರ್‌ಬ್ಯಾಗ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಟೈರ್ ಪ್ರೆಷರ್ ಮಾನಿಟಿಂಗ್ ಸಿಸ್ಟಂ, ಹೈ ಸ್ಪೀಡ್ ಅಲರ್ಟ್ ಸೌಲಭ್ಯಗಳಿಲಿವೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಹೊಸ ಕಾರಿನಲ್ಲಿ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಮಾದರಿಯಾಗಲಿದ್ದು, 12 ಮಾದರಿಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.29 ಲಕ್ಷ ಬೆಲೆ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಹೊಸ ಕಾರು ಮಾರುತಿ ಸುಜುಕಿ ಮತ್ತು ಹ್ಯುಂಡೈ ಐ10 ನಿಯೋಸ್ ಮಾದರಿಯಲ್ಲಿಯೇ ವ್ಹೀಲ್ ಬೆಸ್ ಹೊಂದಿದ್ದು, ಉತ್ತಮವಾದ ಕ್ಯಾಬಿನ್ ಸ್ಥಳಾವಕಾಶ ಹೊಂದಿದೆ. ಹೊಸ ಕಾರು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್ ಹೊಂದಿದೆ.

27 ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನ ಹೊಂದಿರಲಿದೆ Tata Punch

ಹೊಸ ಕಾರನ್ನು ಅರಿಜೊನಾ ಬ್ಲ್ಯೂ, ಡೇ ಟೋನಾ ಗ್ರೆ, ಪ್ಯೂರ್ ಸಿಲ್ವರ್, ಬ್ರೊನ್ಜ್, ಆರೇಂಜ್, ವೈಟ್ ಮತ್ತು ಸ್ಟೋನ್‌ಹೆನ್ಸ್ ಸೇರಿ ಪ್ರಮುಖ ಆರು ಬಣ್ಣಗಳ ಆಯ್ಕೆಯಲ್ಲಿ ಪರಿಚಯಿಸಬಹುದಾಗಿದ್ದು, ಹೊಸ ಕಾರಿನಲ್ಲಿ ಡ್ಯುಯಲ್ ಟೋನ್ ಮಾದರಿಯನ್ನು ಸಹ ಬಿಡುಗಡೆ ಮಾಡಲಾಗುತ್ತಿದೆ.

Article Published On: Thursday, September 30, 2021, 12:47 [IST]
English summary
New tata punch to get ira car connected tech details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+