ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಟಾಟಾ ನ್ಯೂ ಜನರೇಷನ್ ಸಫಾರಿ

ಟಾಟಾ ಮೋಟಾರ್ಸ್ ಕಂಪನಿಯು ಇದೇ ತಿಂಗಳು ಮಧ್ಯಂತರದಲ್ಲಿ ತನ್ನ ಹೊಚ್ಚ ಹೊಸ ಸಫಾರಿ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡಲಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್‌ಗಳಲ್ಲಿ ಹೊಸ ಸಫಾರಿ ಕಾರನ್ನು ಸ್ಟಾಕ್ ಮಾಡುತ್ತಿರುವುದು ಕಂಡುಬಂದಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಟಾಟಾ ನ್ಯೂ ಜನರೇಷನ್ ಸಫಾರಿ

ಸಫಾರಿ ಎಸ್‌ಯುವಿ ಕಾರು ಖರೀದಿಗಾಗಿ ಟಾಟಾ ಮೋಟಾರ್ಸ್ ಕಂಪನಿಯು ಇದೇ ತಿಂಗಳು 4ರಂದು ಅಧಿಕೃತವಾಗಿ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಗೆ ಪೈಪೋಟಿಯಾಗಿ ಆಕರ್ಷಕ ಬೆಲೆ ಮತ್ತು ಅತ್ಯುತ್ತಮ ತಾಂತ್ರಿಕ ಅಂಶಗಳನ್ನು ಪಡೆದುಕೊಳ್ಳಲಿದೆ. ಸಫಾರಿ ಹೊಸ ಕಾರು ಟಾಟಾ ಕಂಪನಿಯ OMEGA ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಸನ ಸೌಲಭ್ಯಗಳ ಆಯ್ಕೆ ಹೊಂದಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಟಾಟಾ ನ್ಯೂ ಜನರೇಷನ್ ಸಫಾರಿ

ಹೊಸ ತಲೆಮಾರಿನ ಸಫಾರಿ ಮಾದರಿಯು ಎಸ್‌ಯುವಿ ಸೆಗ್ಮೆಂಟ್ ಫಸ್ಟ್ ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಸಫಾರಿ ಕಾರು ಹ್ಯಾರಿಯರ್ ಕಾರಿಗಿಂತಲೂ 63 ಎಂಎಂ ಹೆಚ್ಚುವರಿ ಉದ್ದಳತೆಯೊಂದಿಗೆ ಮೂರನೇ ಸಾಲಿನ ಆಸನಗಳನ್ನು ಹೊಂದಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಟಾಟಾ ನ್ಯೂ ಜನರೇಷನ್ ಸಫಾರಿ

2021ರ ಸಫಾರಿಯಲ್ಲಿ ಮೂರನೇ ಸಾಲಿನ ಆಸನ ಸೌಲಭ್ಯವನ್ನು ಹೊರತುಪಡಿಸಿ ಸದ್ಯ ಮಾರುಕಟ್ಟೆಯಲ್ಲಿರುವ ಹ್ಯಾರಿಯರ್ ಕಾರು ಮಾದರಿಯೆಂತೆಯೇ ಬಹುತೇಕ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದ್ದು, ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್ ಮತ್ತು ಎಕ್ಸ್‌ಜೆಡ್ ಪ್ಲಸ್ ವೆರಿಯೆಂಟ್‌ಗಳನ್ನು ಹೊಂದಿರುವ ಸಫಾರಿ ಕಾರು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಬೆಲೆ ಹೊಂದಿರಲಿವೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಟಾಟಾ ನ್ಯೂ ಜನರೇಷನ್ ಸಫಾರಿ

ಹೊಸ ಕಾರು ಹ್ಯಾರಿಯರ್‌ಗಿಂತಲೂ ರೂ.1.50 ಲಕ್ಷದಿಂದ ರೂ. 2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳುವ ನೀರಿಕ್ಷೆಯಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಸಫಾರಿ ಕಾರು ಆರಂಭಿಕವಾಗಿ ರೂ. 15 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 22 ಲಕ್ಷ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ. ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿರುವ ಹೊಸ ಸಫಾರಿ ಕಾರಿನಲ್ಲಿ ಟಾಟಾ ಕಂಪನಿಯು ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡುತ್ತದೆ.

ಸಫಾರಿ ಆರಂಭಿಕ ಆವೃತ್ತಿಯಾದ ಎಕ್ಸ್ಇ ವೆರಿಯೆಂಟ್‌ನಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ರೋಲ್ ಓವರ್ ಮಿಟಿಗೇಷನ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟೆಲಿಸ್ಕೋಪಿಕ್ ಸ್ಟೀರಿಂಗ್ ವೀಲ್ಹ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಸೌಲಭ್ಯವಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಟಾಟಾ ನ್ಯೂ ಜನರೇಷನ್ ಸಫಾರಿ

ಮಧ್ಯಮ ಕ್ರಮಾಂಕದ ಎಕ್ಸ್‌ಟ್ ಆವೃತ್ತಿಯಲ್ಲಿ ಆರಂಭಿಕ ಮಾದರಿಗಳಲ್ಲಿ ಕೆಲವು ಫೀಚರ್ಸ್‌ಗಳ ಜೊತೆಗೆ ಟೈರ್ ಪ್ರೆಷರ್ ಮಾನಿಟರ್, ಆಟೋ ಡಿಮ್ಮಿಂಗ್ ಇನ್‌ಸೈಡ್ ರಿಯರ್ ವ್ಯೂ ಮಿರರ್, 18-ಇಂಚಿನ ಅಲಾಯ್ ವೀಲ್ಹ್, ಆಟೋ ಕ್ಲೈಮೆಟ್ ಕಂಟ್ರೋಲ್, ಆಟೋ ಹೆಡ್‌ಲೈಟ್ಸ್ ಮತ್ತು ವೈಪರ್ಸ್, ಪವರ್ ಫೋಲ್ಡಿಂಗ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಗ್ ಮಿರರ್, ಕೀ ಲೆಸ್ ಎಂಟ್ರಿ, ಆ್ಯಂಬಿಯೆಂಟ್ ಮೋಡ್ ಮತ್ತು ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ನೀಡಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಟಾಟಾ ನ್ಯೂ ಜನರೇಷನ್ ಸಫಾರಿ

ಟಾಪ್ ಎಂಡ್‌ನಲ್ಲಿರುವ ಎಕ್ಸ್‌ಟಿ ಪ್ಲಸ್ ಮತ್ತು ಎಕ್ಸ್‌ಜೆಡ್ ಆವೃತ್ತಿಗಳಲ್ಲಿ ಆರಂಭಿಕ ಮಾದರಿಗಳಲ್ಲಿನ ಹಲವು ಫೀಚರ್ಸ್‌ನೊಂದಿಗೆ ಪನೊರಮಿಕ್ ಸನ್‌ರೂಫ್, ಸೈಡ್ ಕರ್ಟೈನ್ ಏರ್‌ಬ್ಯಾಗ್, ಹಿಲ್ ಡಿಸೆಂಟ್ ಕಂಟ್ರೋಲ್, ಟೈರೈನ್ ರೆಸ್ಪಾನ್ಸ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 18-ಇಂಚಿನ ಮಷಿನ್ ಕಟ್ ಅಯಾಲ್ ವೀಲ್ಹ್, ಜೆಕ್ಸಾನ್ ಹೆಚ್‌ಡಿಐ ಹೆಡ್‌ಲೈಟ್ಸ್, ಫ್ರಂಟ್ ಫಾಗ್ ಲೈಟ್ಸ್, ಕಾರ್ನರಿಂಗ್ ಫಂಕ್ಷನ್, ಟೆರೈನ್ ರೆನ್ಪಾನ್ಸ್ ಮೋಡ್, 8.8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಟಾಟಾ ನ್ಯೂ ಜನರೇಷನ್ ಸಫಾರಿ

ಜೊತೆಗೆ 7 ಇಂಚಿನ ಡಿಜಿಟಲ್ ಡಿಸ್‌ಪ್ಲೇ, 9 ಜೆಬಿಎಲ್ ಸ್ಪೀಕರ್ಸ್ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಮತ್ತು ಹೈ ಎಂಡ್ ಮಾದರಿಯಲ್ಲಿ ಮಾತ್ರ ಪನೊರಮಿಕ್ ಸನ್‌ರೂಫ್ ಸೌಲಭ್ಯ ನೀಡಲಾಗಿದ್ದು, ಮಹೀಂದ್ರಾ ಎಕ್ಸ್‌ಯುವಿ500, ಎಂಜಿ ಹೆಕ್ಟರ್ ಪ್ಲಸ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಟಾಟಾ ನ್ಯೂ ಜನರೇಷನ್ ಸಫಾರಿ

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರಿನಲ್ಲಿ ಹ್ಯುಂಡೈನಿಂದ ಎರವಲು ಪಡೆದುಕೊಳ್ಳಲಾದ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಅಳವಡಿಸಿದ್ದು, ಹೊಸ ಎಂಜಿನ್ ಮಾದರಿಯು ಆರು ಸ್ಪೀಡ್ ಮ್ಯಾನುವಲ್ ಮತ್ತು ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆಗಳೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಎಂಜಿನ್ ಕಾರ್ಯಕ್ಷಮತೆ ಪಡೆದುಕೊಂಡಿದೆ.

More from DriveSpark

Article Published On: Monday, February 1, 2021, 14:59 [IST]
English summary
2021 Tata Safari Arrives At Dealerships Ahead Of India Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+