Just In
- 3 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 4 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 6 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 7 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯ ಸನಿಹದಲ್ಲೂ ರೋಡ್ ಟೆಸ್ಟಿಂಗ್ನಲ್ಲಿ ಕಂಡುಬಂದ ಟಾಟಾ ಸಫಾರಿ
ಇದೇ ತಿಂಗಳು 26ರಂದು ಅನಾವರಣಗೊಳ್ಳಲಿರುವ ಟಾಟಾ ಹೊಚ್ಚ ಹೊಸ ಸಫಾರಿ ಎಸ್ಯುವಿ ಕಾರು ಎಸ್ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವ ತವಕದಲ್ಲಿದ್ದು, ಹೊಸ ಕಾರು ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗಲೂ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಮುಂದುವರಿಸಲಾಗಿದೆ.
ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಹೊಂದಿರುವ ಟಾಟಾ ಸಫಾರಿ ಎಸ್ಯುವಿ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ಗಳೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದೆ. ಹೊಸ ಕಾರಿನ ಉತ್ಪಾದನಾ ಪ್ರಕ್ರಿಯೆಗೂ ಈಗಾಗಲೇ ಚಾಲನೆ ನೀಡಿರುವ ಟಾಟಾ ಕಂಪನಿಯು ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಮುಂದುವರಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಹೊಸ ತಲೆಮಾರಿನ ಸಫಾರಿ ಮಾದರಿಯು ಎಸ್ಯುವಿ ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಹ್ಯಾರಿಯರ್ ಎಸ್ಯುವಿಯ ಮುಂದುವರಿದ ಭಾಗವಾಗಿರುವ ಸಫಾರಿ ಕಾರು ಮೂರನೇ ಸಾಲಿನ ಆಸನದೊಂದಿಗೆ ಫುಲ್ ಸೈಜ್ ಎಸ್ಯುವಿ ಪ್ರಿಯರನ್ನು ಸೆಳೆಯಲಿದೆ.
OMEGA ಕಾರು ಉತ್ಪಾದನಾ ತಂತ್ರಜ್ಞಾನದ ಮೂಲಕ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿರುವ ಟಾಟಾ ಕಂಪನಿಯು ಹೊಸ ಪ್ಲ್ಯಾಟ್ಫಾರ್ಮ್ ಮೂಲಕ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯುತ್ತಿದೆ.
ಸಫಾರಿ ಎಸ್ಯುವಿ ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದ್ದು, ಹೊಸ ಕಾರಿನಲ್ಲಿ ಸ್ಪೋರ್ಟಿ ಮಾದರಿಯ ಆಸನಗಳೊಂದಿಗೆ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್ ಮೌಂಟೆಡ್, ತ್ರೀ ಜೋನ್ ಕ್ಲೈಮೆಟ್ ಕಂಟ್ರೋಲ್, ವಿವಿಧ ಡ್ರೈವ್ ಮೋಡ್, ಪನೊರಮಿಕ್ ಸನ್ರೂಫ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್ಗಳಿವೆ.
ಜೊತೆಗೆ ಹೊಸ ಕಾರಿನಲ್ಲಿ ಫ್ರಂಟ್ ಮತ್ತು ಸೀಟ್ ಸೈಡ್ನಲ್ಲಿ ಕರಟೈನ್ ಏರ್ಬ್ಯಾಗ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಕ್ರೂಸ್ ಕಂಟ್ರೋಲ್, ಆಟೋ ಡಿಮ್ಮಿಂಗ್, 9-ಇಂಚಿನ ಟಚ್ಸ್ಕ್ರೀನ್ ಆಟೋಮೋಟಿವ್ ಹೆಡ್ ಯುನಿಟ್, 9 ಜೆಬಿಎಲ್ ಸಿಸ್ಟಂ ಜೊತೆ ಆ್ಯಂಪಿಯರ್ ಸ್ಪೀಕರ್ಸ್ ಮತ್ತು ಬ್ರಾಂಡ್ ನ್ಯೂ ಐರಾ ಕನೆಕ್ಟೆಡ್ ಫೀಚರ್ಸ್ ಹೊಂದಿರಲಿದೆ.
ಹೊಸ ಐರಾ ಕನೆಕ್ಟೆಡ್ ಫೀಚರ್ಸ್ನಲ್ಲಿ ಸುಮಾರು 70ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ ಸೌಲಭ್ಯವಿದ್ದು, ಒಂದೇ ಸೂರಿನಡಿ ಕಾರಿನ ಬಹುತೇಕ ತಾಂತ್ರಿಕ ಅಂಶಗಳನ್ನು ನಿಯಂತ್ರಣ ಮಾಡಬಹುದಲ್ಲದೆ ತಾಂತ್ರಿಕ ದೋಷಗಳನ್ನು ಅತಿ ಸುಲಭವಾಗಿ ಪತ್ತೆ ಮಾಡಬಹುದಾಗಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಐರಾ ಕಾರ್ ಕನೆಕ್ಟೆಡ್ ಫೀಚರ್ಸ್ನಲ್ಲಿ ರಿಮೋಟ್ ಕಂಟ್ರೋಲ್ ಲಾಕ್/ ಅನ್ಲಾಕ್, ರಿಮೋಟ್ ಹೆಡ್ಲೈಟ್ಸ್ ಆನ್/ಆಫ್, ರಿಮೋಟ್ ಡಿಟಿಇ, ಸ್ಟೊಲನ್ ವೆಹಿಕಲ್ ಟ್ರ್ಯಾಕಿಂಗ್, ರಿಮೋಟ್ ಇಂಮೊಬಿಲೈಝಷನ್(ವಾಹನದ ಎಂಜಿನ್ ನಿಷ್ಕಯಗೊಳಿಸಿಸುವುದು), ಎಮರ್ಜೆನ್ಸಿ ಎಸ್ಎಂಎಸ್, ಜಿಯೋ ಫೆನ್ಸಿಂಗ್, ಟೈಮ್ ಫೆನ್ಸಿಂಗ್ ಅಲರ್ಟ್ ಮತ್ತು ವ್ಯಾಲೆಟ್ ಮೋಡ್ ಸೇರಿ ಹಲವಾರು ಫೀಚರ್ಸ್ಗಳಿವೆ.
ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕನೆಕ್ಟೆಡ್ ಫೀಚರ್ಸ್ ಅನ್ನು ಈಗಾಗಲೇ ನೆಕ್ಸಾನ್ ಎಲೆಕ್ಟ್ರಿಕ್ ಮಾದರಿಯಲ್ಲಿ ಪರೀಕ್ಷಾರ್ಥವಾಗಿ ಜೋಡಣೆ ಮಾಡಿದ್ದು, ಇದೀಗ ಮತ್ತಷ್ಟು ಹೊಸ ವೈಶಿಷ್ಟ್ಯತೆಗಳನ್ನು ಸೇರ್ಪಡೆಗೊಳಿಸುವ ಮೂಲಕ ಆಲ್ಟ್ರೊಜ್ ಐಟರ್ಬೊ ಮತ್ತು ಸಫಾರಿ ಕಾರು ಮಾದರಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಇನ್ನು ಹೊಸ ಸಫಾರಿ ಕಾರಿನಲ್ಲಿ ಹ್ಯಾರಿಯರ್ ಮಾದರಿಯಲ್ಲೇ 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗುತ್ತಿದ್ದು, ಹೊಸ ಎಂಜಿನ್ನಲ್ಲಿ 6 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ನೊಂದಿಗೆ 170-ಬಿಹೆಚ್ಪಿ, 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.