ನ್ಯೂ ಜನರೇಷನ್ ಸಫಾರಿ ಕಾರಿನ ಬುಕ್ಕಿಂಗ್ ಮೊತ್ತವನ್ನು ರೂ. 30 ಸಾವಿರಕ್ಕೆ ನಿಗದಿಪಡಿಸಲಿದೆ ಟಾಟಾ
ಟಾಟಾ ಮೋಟಾರ್ಸ್ ಕಂಪನಿಯು ಮುಂದಿನ ಕೆಲವೇ ವಾರಗಳಲ್ಲಿ ನ್ಯೂ ಜನರೇಷನ್ ಸಫಾರಿ ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದು, ಇದೇ ತಿಂಗಳು 4ರಿಂದ ಹೊಸ ಕಾರು ಖರೀದಿಗೆ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸುತ್ತಿದೆ.

ಹೊಸ ಸಫಾರಿ ಕಾರು ಖರೀದಿಗೆ ರೂ.30 ಸಾವಿರ ಬುಕ್ಕಿಂಗ್ ಮೊತ್ತವನ್ನು ನಿಗದಿಪಡಿಸಲಾಗುತ್ತಿದ್ದು, 4ರಿಂದ ಗ್ರಾಹಕರು ಹೊಸ ಕಾರು ಖರೀದಿಗೆ ಆನ್‌ಲೈನ್ ಅಥವಾ ನೇರವಾಗಿ ಡೀಲರ್ಸ್ ಬಳಿಯಲ್ಲೂ ಕೂಡಾ ಬುಕ್ಕಿಂಗ್ ದಾಖಲಿಸಬಹುದಾಗಿದೆ. ಹೊಸ ಕಾರು ಈಗಾಗಲೇ ಡೀಲರ್ಸ್ ಯಾರ್ಡ್‌ಗಳಲ್ಲಿ ಸ್ಟಾಕ್ ಮಾಡಲಾಗುತ್ತಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಆಕರ್ಷಕ ಬೆಲೆ ಪಡೆದುಕೊಳ್ಳಲಿದೆ.

ಒಮೆಗಾ(OMEGA) ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿರುವ ಹೊಸ ಸಫಾರಿ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಸನ ಸೌಲಭ್ಯಗಳ ಆಯ್ಕೆ ಹೊಂದಿದ್ದು, ಹ್ಯಾರಿಯರ್ ಕಾರಿಗಿಂತಲೂ 63 ಎಂಎಂ ಹೆಚ್ಚುವರಿ ಉದ್ದಳತೆಯೊಂದಿಗೆ ಮೂರನೇ ಸಾಲಿನ ಆಸನಗಳನ್ನು ಹೊಂದಿದೆ.

2021ರ ಸಫಾರಿಯಲ್ಲಿ ಮೂರನೇ ಸಾಲಿನ ಆಸನ ಸೌಲಭ್ಯವನ್ನು ಹೊರತುಪಡಿಸಿ ಸದ್ಯ ಮಾರುಕಟ್ಟೆಯಲ್ಲಿರುವ ಹ್ಯಾರಿಯರ್ ಕಾರು ಮಾದರಿಯೆಂತೆಯೇ ಬಹುತೇಕ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿರುವ ಹೊಸ ಸಫಾರಿ ಕಾರು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಗ್ರಾಹಕರ ಬೇಡಿಕೆಯೆಂತೆ ಹೊಸ ಸಫಾರಿ ಕಾರು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್ ಮತ್ತು ಎಕ್ಸ್‌ಜೆಡ್ ಪ್ಲಸ್ ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಕಾರು ಹ್ಯಾರಿಯರ್‌ಗಿಂತಲೂ ರೂ.1.50 ಲಕ್ಷದಿಂದ ರೂ. 2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳುವ ನೀರಿಕ್ಷೆಯಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಸಫಾರಿ ಕಾರು ಆರಂಭಿಕವಾಗಿ ರೂ. 15 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 22 ಲಕ್ಷ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಮಹೀಂದ್ರಾ ಎಕ್ಸ್‌ಯುವಿ500, ಎಂಜಿ ಹೆಕ್ಟರ್ ಪ್ಲಸ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

ಒಮೆಗಾ ಪ್ಲ್ಯಾಟ್‌ಫಾರ್ಮ್‌ನಿಂದಾಗಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿರುವ ಹೊಸ ಸಫಾರಿ ಕಾರಿನಲ್ಲಿ ಟಾಟಾ ಕಂಪನಿಯು ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡುತ್ತದೆ.

ಆರಂಭಿಕ ಮಾದರಿಯಾದ ಎಕ್ಸ್ಇ ವೆರಿಯೆಂಟ್‌ನಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ರೋಲ್ ಓವರ್ ಮಿಟಿಗೇಷನ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟೆಲಿಸ್ಕೋಪಿಕ್ ಸ್ಟೀರಿಂಗ್ ವೀಲ್ಹ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಸೌಲಭ್ಯವಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎಕ್ಸ್‌ಟಿ ಆವೃತ್ತಿಯಲ್ಲಿ ಆರಂಭಿಕ ಮಾದರಿಗಳಲ್ಲಿ ಕೆಲವು ಫೀಚರ್ಸ್‌ಗಳ ಜೊತೆಗೆ ಟೈರ್ ಪ್ರೆಷರ್ ಮಾನಿಟರ್, ಆಟೋ ಡಿಮ್ಮಿಂಗ್ ಇನ್‌ಸೈಡ್ ರಿಯರ್ ವ್ಯೂ ಮಿರರ್, 18-ಇಂಚಿನ ಅಲಾಯ್ ವೀಲ್ಹ್, ಆಟೋ ಕ್ಲೈಮೆಟ್ ಕಂಟ್ರೋಲ್, ಆಟೋ ಹೆಡ್‌ಲೈಟ್ಸ್ ಮತ್ತು ವೈಪರ್ಸ್, ಪವರ್ ಫೋಲ್ಡಿಂಗ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಗ್ ಮಿರರ್, ಕೀ ಲೆಸ್ ಎಂಟ್ರಿ, ಆ್ಯಂಬಿಯೆಂಟ್ ಮೋಡ್ ಮತ್ತು ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ನೀಡಲಾಗಿದೆ.

ಟಾಪ್ ಎಂಡ್‌ನಲ್ಲಿರುವ ಎಕ್ಸ್‌ಟಿ ಪ್ಲಸ್ ಮತ್ತು ಎಕ್ಸ್‌ಜೆಡ್ ಆವೃತ್ತಿಗಳಲ್ಲಿ ಆರಂಭಿಕ ಮಾದರಿಗಳಲ್ಲಿನ ಹಲವು ಫೀಚರ್ಸ್‌ನೊಂದಿಗೆ ಪನೊರಮಿಕ್ ಸನ್‌ರೂಫ್, ಸೈಡ್ ಕರ್ಟೈನ್ ಏರ್‌ಬ್ಯಾಗ್, ಹಿಲ್ ಡಿಸೆಂಟ್ ಕಂಟ್ರೋಲ್, ಟೈರೈನ್ ರೆಸ್ಪಾನ್ಸ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 18-ಇಂಚಿನ ಮಷಿನ್ ಕಟ್ ಅಯಾಲ್ ವೀಲ್ಹ್, ಜೆಕ್ಸಾನ್ ಹೆಚ್‌ಡಿಐ ಹೆಡ್‌ಲೈಟ್ಸ್, ಫ್ರಂಟ್ ಫಾಗ್ ಲೈಟ್ಸ್, ಕಾರ್ನರಿಂಗ್ ಫಂಕ್ಷನ್, ಟೆರೈನ್ ರೆನ್ಪಾನ್ಸ್ ಮೋಡ್, 8.8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಜೊತೆಗೆ 7 ಇಂಚಿನ ಡಿಜಿಟಲ್ ಡಿಸ್‌ಪ್ಲೇ, 9 ಜೆಬಿಎಲ್ ಸ್ಪೀಕರ್ಸ್ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಮತ್ತು ಹೈ ಎಂಡ್ ಮಾದರಿಯಲ್ಲಿ ಮಾತ್ರ ಪನೊರಮಿಕ್ ಸನ್‌ರೂಫ್ ಸೌಲಭ್ಯ ನೀಡಲಾಗಿದ್ದು, ಆರು ಸ್ಪೀಡ್ ಮ್ಯಾನುವಲ್ ಮತ್ತು ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಮಾದರಿಯು 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.


Click it and Unblock the Notifications








