ವಿನೂತನ ಫೀಚರ್ಸ್‌ಗಳೊಂದಿಗೆ ನ್ಯೂ ಜನರೇಷನ್ ಟಾಟಾ ಸಫಾರಿ ಎಸ್‌ಯುವಿ ಅನಾವರಣ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಸಫಾರಿ ಎಸ್‌ಯುವಿ ಕಾರಿನ ಹೊಸ ಆವೃತ್ತಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದ್ದು, ಹೊಸ ಸಫಾರಿ ಎಸ್‌ಯುವಿ ಕಾರು ಮಾದರಿಯು ವಿನೂತನ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲು ಸಿದ್ದವಾಗಿದೆ.

 ನ್ಯೂ ಜನರೇಷನ್ ಟಾಟಾ ಸಫಾರಿ ಎಸ್‌ಯುವಿ ಅನಾವರಣ

ಸಫಾರಿ ಹೊಸ ಕಾರು ಮಾದರಿಯ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಫೆಬ್ರುವರಿ 4ರಂದು ಹೊಸ ಕಾರು ಖರೀದಿಗೆ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಿದ್ದು, ಬುಕ್ಕಿಂಗ್ ಆರಂಭಿಸಿದ ಮುಂದಿನ ಕೆಲವೇ ವಾರಗಳಲ್ಲಿ ಬಿಡುಗಡೆಗೊಳಿಸಲಿದೆ. ಹೊಸ ಕಾರು ಟಾಟಾ ಕಂಪನಿಯ OMEGA ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದ್ದು, ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯುತ್ತಿದೆ.

 ನ್ಯೂ ಜನರೇಷನ್ ಟಾಟಾ ಸಫಾರಿ ಎಸ್‌ಯುವಿ ಅನಾವರಣ

ಹೊಸ ಸಫಾರಿ ಕಾರು ಮಾದರಿಯು ಒಟ್ಟು ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್ ಮತ್ತು ಎಕ್ಸ್‌ಜೆಡ್ ಪ್ಲಸ್ ವೆರಿಯೆಂಟ್ ಪಡೆದುಕೊಂಡಿದೆ.

 ನ್ಯೂ ಜನರೇಷನ್ ಟಾಟಾ ಸಫಾರಿ ಎಸ್‌ಯುವಿ ಅನಾವರಣ

ಹೊಸ ತಲೆಮಾರಿನ ಸಫಾರಿ ಮಾದರಿಯು ಎಸ್‌ಯುವಿ ಸೆಗ್ಮೆಂಟ್ ಫಸ್ಟ್ ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಹ್ಯಾರಿಯರ್ ಎಸ್‌ಯುವಿಯ ಮುಂದುವರಿದ ಭಾಗವಾಗಿರುವ ಸಫಾರಿ ಕಾರು 63 ಎಂಎಂ ಹೆಚ್ಚುವರಿ ವೀಲ್ಹ್‌ಬೆಸ್‌ನೊಂದಿಗೆ ಮೂರನೇ ಸಾಲಿನ ಆಸನಗಳನ್ನು ಹೊಂದಿದೆ.

 ನ್ಯೂ ಜನರೇಷನ್ ಟಾಟಾ ಸಫಾರಿ ಎಸ್‌ಯುವಿ ಅನಾವರಣ

ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಗ್ರಾಹಕರನ್ನು ಆಕರ್ಷಿಸಲಿದ್ದು, 6 ಸೀಟರ್ ಮಾದರಿಯು 2+2+2 ಮಾದರಿಯ ಆಸನಗಳನ್ನು ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯ ಆಸನಗಳನ್ನು ಹೊಂದಿದೆ. ಅತ್ಯುತ್ತಮ ಲೆದರ್ ಆಸನಗಳನ್ನು ಅರಾಮದಾಯಕ ಪ್ರಯಾಣಕ್ಕೆ ಅನುಕೂಕವಾಗಿದ್ದು, ಸಾಫ್ಟ್‌ಟಚ್ ಮಟಿರಿಯಲ್‌ಗಳು ಕಾರಿನ ಒಳಭಾಗಕ್ಕೆ ಮತ್ತಷ್ಟು ಐಷಾರಾಮಿ ಲುಕ್ ನೀಡಲಿವೆ.

 ನ್ಯೂ ಜನರೇಷನ್ ಟಾಟಾ ಸಫಾರಿ ಎಸ್‌ಯುವಿ ಅನಾವರಣ

ಹೊಸ ಕಾರಿನಲ್ಲಿರುವ ಫೀಚರ್ಸ್‌ಗಳು ವೆರಿಯೆಂಟ್‌ಗಳಿಗೆ ಅನುಗುಣವಾಗಿ ಬದಲಾಗಲಿದ್ದು, ಆರಂಭಿಕ ಕಾರು ಮಾದರಿಯಾದ ಎಕ್ಸ್ಇ ಆವೃತ್ತಿಯಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ರೋಲ್ ಓವರ್ ಮಿಟಿಗೇಷನ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟೆಲಿಸ್ಕೋಪಿಕ್ ಸ್ಟೀರಿಂಗ್ ವೀಲ್ಹ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಪಡೆದುಕೊಂಡಿದೆ.

 ನ್ಯೂ ಜನರೇಷನ್ ಟಾಟಾ ಸಫಾರಿ ಎಸ್‌ಯುವಿ ಅನಾವರಣ

ಎಕ್ಸ್ಎಂ ಆವೃತ್ತಿಯಲ್ಲಿ ಆರಂಭಿಕ ಮಾದರಿಯಲ್ಲಿ ಕೆಲವು ಫೀಚರ್ಸ್‌ಗಳ ಜೊತೆಗೆ ಫ್ರಂಟ್ ಫಾಗ್ ಲ್ಯಾಂಪ್ಸ್, ರಿಯರ್ ವೈಪರ್, ಫಾಲೋ ಮೀ ಹೋಂ ಹೆಡ್‌ಲೈಟ್ಸ್, ವಿವಿಧ ಡ್ರೈವ್ ಮೋಡ್, 7 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 6 ಸ್ಪೀಕರ್ಸ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಸೌಲಭ್ಯಗಳಿವೆ.

 ನ್ಯೂ ಜನರೇಷನ್ ಟಾಟಾ ಸಫಾರಿ ಎಸ್‌ಯುವಿ ಅನಾವರಣ

ಎಕ್ಸ್‌ಟ್ ಆವೃತ್ತಿಯಲ್ಲಿ ಆರಂಭಿಕ ಮಾದರಿಗಳಲ್ಲಿ ಕೆಲವು ಫೀಚರ್ಸ್‌ಗಳ ಜೊತೆಗೆ ಟೈರ್ ಪ್ರೆಷರ್ ಮಾನಿಟರ್, ಆಟೋ ಡಿಮ್ಮಿಂಗ್ ಇನ್‌ಸೈಡ್ ರಿಯರ್ ವ್ಯೂ ಮಿರರ್, 18-ಇಂಚಿನ ಅಲಾಯ್ ವೀಲ್ಹ್, ಆಟೋ ಕ್ಲೈಮೆಟ್ ಕಂಟ್ರೋಲ್, ಆಟೋ ಹೆಡ್‌ಲೈಟ್ಸ್ ಮತ್ತು ವೈಪರ್ಸ್, ಪವರ್ ಫೋಲ್ಡಿಂಗ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಗ್ ಮಿರರ್, ಕೀ ಲೆಸ್ ಎಂಟ್ರಿ, ಆ್ಯಂಬಿಯೆಂಟ್ ಮೋಡ್ ಮತ್ತು ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ನೀಡಲಾಗಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

 ನ್ಯೂ ಜನರೇಷನ್ ಟಾಟಾ ಸಫಾರಿ ಎಸ್‌ಯುವಿ ಅನಾವರಣ

ಎಕ್ಸ್‌ಟ್ ಪ್ಲಸ್ ಮತ್ತು ಎಕ್ಸ್‌ಜೆಡ್ ಆವೃತ್ತಿಗಳಲ್ಲಿ ಆರಂಭಿಕ ಮಾದರಿಗಳಲ್ಲಿ ಫೀಚರ್ಸ್‌ನೊಂದಿಗೆ ಪನೊರಮಿಕ್ ಸನ್‌ರೂಫ್, ಸೈಡ್ ಕರ್ಟೈನ್ ಏರ್‌ಬ್ಯಾಗ್, ಹಿಲ್ ಡಿಸೆಂಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 18-ಇಂಚಿನ ಮಷಿನ್ ಕಟ್ ಅಯಾಲ್ ವೀಲ್ಹ್, ಜೆಕ್ಸಾನ್ ಹೆಚ್‌ಡಿಐ ಹೆಡ್‌ಲೈಟ್ಸ್, ಫ್ರಂಟ್ ಫಾಗ್ ಲೈಟ್ಸ್, ಕಾರ್ನರಿಂಗ್ ಫಂಕ್ಷನ್, ಟೆರೈನ್ ರೆನ್ಪಾನ್ಸ್ ಮೋಡ್, 8.8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ.

 ನ್ಯೂ ಜನರೇಷನ್ ಟಾಟಾ ಸಫಾರಿ ಎಸ್‌ಯುವಿ ಅನಾವರಣ

ಜೊತೆಗೆ 7 ಇಂಚಿನ ಡಿಜಿಟಲ್ ಡಿಸ್‌ಪ್ಲೇ, 9 ಜೆಬಿಎಲ್ ಸ್ಪೀಕರ್ಸ್ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಮತ್ತು ಹೈ ಎಂಡ್ ಮಾದರಿಯಲ್ಲಿ ಮಾತ್ರ ಪನೊರಮಿಕ್ ಸನ್‌ರೂಫ್ ಸೌಲಭ್ಯ ನೀಡಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

 ನ್ಯೂ ಜನರೇಷನ್ ಟಾಟಾ ಸಫಾರಿ ಎಸ್‌ಯುವಿ ಅನಾವರಣ

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಸಫಾರಿ ಕಾರಿನಲ್ಲಿ ಹ್ಯಾರಿಯರ್‌ನಲ್ಲಿ ಬಳಕೆ ಮಾಡಿರುವ 2.0-ಲೀಟರ್ ಕ್ರೆಯೊಟಿಕ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಹೊಸ ಕಾರು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಈ ಮೂಲಕ ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಎಂಜಿ ಹೆಕ್ಟರ್ ಪ್ಲಸ್, ಬಿಡುಗಡೆಗಾಗಿ ಸಿದ್ದವಾಗಿರುವ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಹ್ಯುಂಡೈ 7 ಸೀಟರ್ ಕ್ರೆಟಾ ಕಾರು ಮಾದರಿಗಳ ಜೊತೆಗೆ ಫುಲ್ ಸೈಜ್ ಎಸ್‌ಯುವಿ ಕಾರುಗಳಿಗೂ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

More from DriveSpark

Article Published On: Tuesday, January 26, 2021, 20:35 [IST]
English summary
New Tata Safari Unveiled Ahead Of Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+