ಬಿಡುಗಡೆಯಾಗಲಿದೆ ಅಧಿಕ ಮೈಲೇಜ್ ನೀಡುವ ಟಾಟಾ ಟಿಯಾಗೋ ಸಿಎನ್‌ಜಿ ಮಾದರಿ

ಟಾಟಾ ಮೋಟಾರ್ಸ್ ಕಂಪನಿಯ ಟಿಯಾಗೊ ಹ್ಯಾಚ್‌ಬ್ಯಾಕ್ ದೇಶೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಮಾದರಿಗಳಲ್ಲಿ ಒಂದಾಗಿದೆ. ಅಲ್ಲದೇ ಟಾಟಾ ಪೋರ್ಟ್ಫೋಲಿಯೊದಲ್ಲಿ ಟಿಯಾಗೋ ಯಶ್ವಸ್ವಿ ಮಾದರಿಯಾಗಿದೆ.

ಬಿಡುಗಡೆಯಾಗಲಿದೆ ಅಧಿಕ ಮೈಲೇಜ್ ನೀಡುವ ಟಾಟಾ ಟಿಯಾಗೋ ಸಿಎನ್‌ಜಿ ಮಾದರಿ

ಬ್ರ್ಯಾಂಡ್‌ನ ಇಂಪ್ಯಾಕ್ಟ್ ವಿನ್ಯಾಸದಡಿಯಲ್ಲಿ ಉತ್ಪಾದಿಸಿದ ಮೊದಲ ಮಾದರಿ ಇದಾಗಿದೆ. ಟಿಯಾಗೋ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ 2016ರಲ್ಲಿ ಪ್ರಾರಂಭಿಸಲಾಗಿತ್ತು. ತಂತ್ರಜ್ಞಾನ ಮತ್ತು ಡ್ರೈವಿಂಗ್ ಡೈನಾಮಿಕ್ಸ್ ವಿಷಯದಲ್ಲಿ ಇದು ಬ್ರ್ಯಾಂಡ್‌ಗೆ ಅದ್ಭುತ ಮಾದರಿಯಾಗಿದೆ. 2018ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಎಂಬ ಖ್ಯಾತಿಯನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಅಧಿಕ ಮೈಲೇಜ್ ನೀಡುವ ಟಾಟಾ ಟಿಯಾಗೋ ಸಿಎನ್‌ಜಿ ಮಾದರಿ

ಮಾರುತಿ ಸುಜುಕಿ ತನ್ನ ಎಸ್-ಸಿಎನ್‌ಜಿ ಸರಣಿಯನ್ನು ವಿಸ್ತರಿಸಿದ್ದು ಹೆಚ್ಚಿನ ಇಂಧನ ದಕ್ಷತೆಯನ್ನು ಗುರಿಯಾಗಿಸಿಕೊಂಡು ಹೆಚ್ಚುವರಿ ಖರೀದಿ ಆಯ್ಕೆಯನ್ನು ಒದಗಿಸಿತು. ಟಾಟಾ ಮೋಟಾರ್ಸ್ ಸಿಎನ್‌ಜಿ-ಸ್ಪೆಕ್ ಟಿಯಾಗೋ ಮತ್ತು ಟೀಗೋರ್ ಅನ್ನು ಪರಿಚಯಿಸುತ್ತದೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಬಿಡುಗಡೆಯಾಗಲಿದೆ ಅಧಿಕ ಮೈಲೇಜ್ ನೀಡುವ ಟಾಟಾ ಟಿಯಾಗೋ ಸಿಎನ್‌ಜಿ ಮಾದರಿ

ಇದೀಗ ಟಿಯಾಗೋ ಸಿಎನ್‌ಜಿ ಕಾರು ಭಾರತದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಮಾದರಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳನ್ನು ಗಾಡಿವಾಡಿ ಬಹಿರಂಗಪಡಿಸಿವೆ. ವರದಿಗಳ ಪ್ರಕಾರ ಈ ಹೊಸ ಟಾಟಾ ಟಿಯಾಗೋ ಸಿಎನ್‌ಜಿ 30 ಕಿ.ಮೀ ಮೈಲೇಜ್ ಅನ್ನು ನೀಡಬಹುದು.

ಬಿಡುಗಡೆಯಾಗಲಿದೆ ಅಧಿಕ ಮೈಲೇಜ್ ನೀಡುವ ಟಾಟಾ ಟಿಯಾಗೋ ಸಿಎನ್‌ಜಿ ಮಾದರಿ

ಈ ಹೊಸ ಟಿಯಾಗೋ ಸಿಎನ್‌ಜಿ ಕಾರಿನಲ್ಲಿ 1.2-ಲೀಟರ್ ಗ್ಯಾಸೋಲಿನ್ ಯುನಿಟ್ ಅನ್ನು ಅಳವಡಿಸಬಹುದು. ಇದು ಸ್ಟ್ಯಾಂಡರ್ಡ್ ಮಾದರಿಗಿಂತ ಕಡಿಮೆ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸಬಹುದು.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಯಾಗಲಿದೆ ಅಧಿಕ ಮೈಲೇಜ್ ನೀಡುವ ಟಾಟಾ ಟಿಯಾಗೋ ಸಿಎನ್‌ಜಿ ಮಾದರಿ

ಈ ವರ್ಷದ ಆರಂಭದಲ್ಲಿ ಟಾಟಾ ಕಂಪನಿಯು ಬಿಎಸ್ 6 ಆವೃತ್ತಿಯಲ್ಲಿ ಟಿಯಾಗೋ ಕಾರನ್ನು ಬಿಡುಗಡೆಗೊಳಿಸಿತು. ನಂತರದಲ್ಲಿ ಇದು ಬ್ರ್ಯಾಂಡ್‌ನ ಹೊಸ 'ಫಾರೆವರ್' ಮಾದರಿಗಳ ಭಾಗವಾಯಿತು.

ಬಿಡುಗಡೆಯಾಗಲಿದೆ ಅಧಿಕ ಮೈಲೇಜ್ ನೀಡುವ ಟಾಟಾ ಟಿಯಾಗೋ ಸಿಎನ್‌ಜಿ ಮಾದರಿ

ಟಾಟಾ ಟಿಯಾಗೋ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ನಲ್ಲಿ 4-ಸ್ಟಾರ್ ಅಡಲ್ಟ್ ಸುರಕ್ಷತಾ ರೇಟಿಂಗ್ ಅನ್ನು ಪಡೆದುಕೊಂಡಿದೆ. ಇನ್ನು ಈ ಟಿಯಾಗೋ ಕಾರಿನಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದಾರೆ.

MOST READ: 2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಬಿಡುಗಡೆಯಾಗಲಿದೆ ಅಧಿಕ ಮೈಲೇಜ್ ನೀಡುವ ಟಾಟಾ ಟಿಯಾಗೋ ಸಿಎನ್‌ಜಿ ಮಾದರಿ

ಟಾಟಾ ಟಿಯಾಗೋ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿದೆ. ಈ ಕಾರಿನಲ್ಲಿ 1.2-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಅಧಿಕ ಮೈಲೇಜ್ ನೀಡುವ ಟಾಟಾ ಟಿಯಾಗೋ ಸಿಎನ್‌ಜಿ ಮಾದರಿ

ಈ ಹ್ಯಾಚ್‌ಬ್ಯಾಕ್‌ನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಮತ್ತು ಪವರ್-ಫೋಲ್ಡಿಂಗ್ ವಿಂಗ್ ಮಿರರ್ ನೊಂದಿಗೆ 7.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಅಧಿಕ ಮೈಲೇಜ್ ನೀಡುವ ಟಾಟಾ ಟಿಯಾಗೋ ಸಿಎನ್‌ಜಿ ಮಾದರಿ

ಟಾಟಾ ಕಂಪನಿಯು ಶೀಘ್ರದಲ್ಲೇ ಈ ಟಿಯಾಗೋ ಸಿಎನ್‌ಜಿ ಕಾರನ್ನು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಇದನ್ನು ಹೊರತುಪಡಿಸಿ ಟಾಟಾ ತನ್ನ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ವೆರಿಯೆಂಟ್, ಸಫಾರಿ ಮತ್ತು ಹೆಚ್‌ಬಿಎಕ್ಸ್ ಮಿನಿ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ.

Most Read Articles

Kannada
English summary
Tata Tiago CNG Spied On Test, Launch Expected Soon. Read In Kannada.
Story first published: Friday, January 8, 2021, 20:05 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X