Tigor EV ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ ಪಡೆದುಕೊಂಡ Tata Motors

Tata Motors ಕಂಪನಿಯು ಹೊಸ ಕಾರುಗಳ ಗುಣಮಟ್ಟ, ಪ್ರಯಾಣಿಕರ ಸುರಕ್ಷಾ ವೈಶಿಷ್ಟ್ಯತೆಗಳ ವಿಚಾರವಾಗಿ ಮುಂಚೂಣಿ ಸಾಧಿಸುತ್ತಿದ್ದು, ಬಜೆಟ್ ಬೆಲೆಯ ಕಾರು ಮಾದರಿಯಲ್ಲೂ ಕೂಡಾ ಅತ್ಯುತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಂಡಿದೆ.

Tigor EV ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ ಪಡೆದುಕೊಂಡ Tata Motors

ಇತ್ತೀಚೆಗೆ ಬಿಡುಗಡೆಯಾದ Tigor EV ಕಾರು ಮಾದರಿಯು ಸಹ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಳ್ಳುವ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚು ಸುರಕ್ಷಿತ ಎಂಬುವುದನ್ನು ಖಾತ್ರಿಪಡಿಸಿದೆ. Nexon ಮಾದರಿಯಿಂದ ಆರಂಭವಾದ Tata ಕಾರುಗಳ ಗುಣಮಟ್ಟದ ಆದ್ಯತೆಯು ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ Tigor EV ಕೂಡಾ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಒದಗಿಸುವಲ್ಲಿ ಶಕ್ತವಾಗಿರುವುದು ಬಹಿರಂಗವಾಗಿದೆ.

Tigor EV ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ ಪಡೆದುಕೊಂಡ Tata Motors

#SaferCarsForIndia ಅಭಿಯಾನದಡಿ ಭಾರತೀಯ ಕಾರುಗಳ ಗುಣಮಟ್ಟ ಮತ್ತು ಸುರಕ್ಷಾ ವೈಶಿಷ್ಟ್ಯತೆಯ ಬಂಡವಾಳವನ್ನು ಬಯಲು ಮಾಡುತ್ತಿರುವ ಗ್ಲೋಬಲ್ ಎನ್‌ಸಿಎಪಿ ಸಂಸ್ಥೆಯು Tata ಹೊಸ Tigor EV ಕಾರು ಮಾದರಿಗೆ 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ನೀಡುವ ಮೂಲಕ ಖರೀದಿಗೆ ಉತ್ತಮವಾದ ಕಾರು ಮಾದರಿಯೆಂದು ಘೋಷಣೆ ಮಾಡಿದೆ.

Tigor EV ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ ಪಡೆದುಕೊಂಡ Tata Motors

ಕಾರುಗಳ ಗುಣಮಟ್ಟ ಮತ್ತು ಸುರಕ್ಷಾ ವೈಶಿಷ್ಟ್ಯತೆಗಳ ಆಧಾರದ ಮೇಲೆ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ನೀಡುವ ಗ್ಲೋಬಲ್ ಎನ್‌ಸಿಎಪಿ ಸಂಸ್ಥೆಯು ಭಾರತದಲ್ಲಿ ಮಾರಾಟವಾಗುವ ಹಲವಾರು ಕಾರು ಮಾದರಿಗಳಿಗೆ ಕಳಪೆ ಮಾದರಿಯೆಂದು ಘೋಷಿಸಿದೆ.

Tigor EV ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ ಪಡೆದುಕೊಂಡ Tata Motors

ಗುಣಮಟ್ಟ ಮತ್ತು ಕಾರಿನಲ್ಲಿರುವ ಸುರಕ್ಷಾ ಫೀಚರ್ಸ್ ಆಧರಿಸಿ ಅಪಘಾತದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಎಷ್ಟು ಪ್ರಮಾಣದ ಸುರಕ್ಷತೆ ಒದಗಿಸುತ್ತದೆ ಎನ್ನುವುದರ ಆಧಾರದ ಮೇಲೆ ಸೊನ್ನೆ, 1, 2, 3, 4 ಮತ್ತು 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ನೀಡಲಾಗುತ್ತದೆ.

Tigor EV ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ ಪಡೆದುಕೊಂಡ Tata Motors

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಎಂದು ಕರೆಯಿಸಿಕೊಳ್ಳಲು ಕನಿಷ್ಠ 3 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಅವಶ್ಯವಿದ್ದು, Tata ನಿರ್ಮಾಣ ಮಾಡಿರುವ ಇತ್ತೀಚೆಗಿನ ಬಹುತೇಕ ಕಾರುಗಳು 4 ಮತ್ತು 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿವೆ.

Tigor EV ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ ಪಡೆದುಕೊಂಡ Tata Motors

Tigor EV ಮಾದರಿಯೊಂದಿಗೆ Tigor Petrol ಮಾದರಿಯು ಸಹ 4 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ನೊಂದಿಗೆ ಅಪಘಾತದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸುತ್ತಿದ್ದು, ಭಾರತದಲ್ಲಿ ಹಲವು ಕಾರು ಮಾದರಿಗಳು 1 ಮತ್ತು 2 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಮೂಲಕ ಕಳಪೆ ಮಾದರಿಯಾಗಿ ಗುರುತಿಸಿಕೊಂಡಿವೆ.

Tigor EV ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ ಪಡೆದುಕೊಂಡ Tata Motors

ಆದರೆ ಹೊಸ ಕಾರುಗಳ ಉತ್ಪಾದನೆಯಲ್ಲಿ ಮಹತ್ವದ ಬದಲಾವಣೆ ತಂದಿರುವ Tata Motors ಕಂಪನಿಯು ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಪ್ರತಿಸ್ಪರ್ಧಿಗೆ ಪೈಪೋಟಿ ನೀಡುತ್ತಿದ್ದು, Tigor EV ಮಾದರಿಯು ವಯಸ್ಕ ಪ್ರಯಾಣಿಕರ ಸುರಕ್ಷತೆಯಲ್ಲಿ 17 ಅಂಕಗಳಿಗೆ 12 ಅಂಕಗಳನ್ನು ಮತ್ತು ಮಕ್ಕಳ ಸುರಕ್ಷತೆಗಾಗಿ 49 ಅಂಕಗಳಲ್ಲಿ 37.24 ಅಂಕ ಗಳಿಸಿದೆ.

Tata Motors ಕಂಪನಿಯು ಜಿಪ್‌ಟ್ರಾನ್ ತಂತ್ರಜ್ಞಾನದೊಂದಿಗೆ 2021ರ Tigor EV ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

Tigor EV ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ ಪಡೆದುಕೊಂಡ Tata Motors

ಹೊಸ Tigor EV ಮಾದರಿಯು XE, XM, XZ+ ಮತ್ತು XZ+ ಡ್ಯುಯಲ್ ಟೋನ್ ವೆರಿಯೆಂಟ್ ಒಳಗೊಂಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 13.14 ಲಕ್ಷ ಬೆಲೆ ಹೊಂದಿದೆ.

Tigor EV ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ ಪಡೆದುಕೊಂಡ Tata Motors

ಹೊಸ ತಂತ್ರಜ್ಞಾನ ಪ್ರೇರಿತ 55kW ಎಲೆಕ್ಟ್ರಿಕ್ ಮೋಟಾರ್‌ ಮತ್ತು 26kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆಯು ಕಾರಿನ ಕಾರ್ಯಕ್ಷಮತೆ ಹೆಚ್ಚಳದೊಂದಿಗೆ ಮೈಲೇಜ್‌ನಲ್ಲೂ ಸಾಕಷ್ಟು ಸುಧಾರಣೆಗೊಂಡಿದ್ದು, ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 306 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

Tigor EV ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ ಪಡೆದುಕೊಂಡ Tata Motors

ಹೊಸ ಕಾರಿನಲ್ಲಿ Tata ಕಂಪನಿಯು ಹೊಸ ವಿನ್ಯಾಸದ ಹೆಡ್‌ಲ್ಯಾಂಪ್‌ಗಳು, ಹೊಸ ಫ್ರಂಟ್ ಗ್ರಿಲ್ ಜೊತೆ ಟ್ರೈ ಅರೊ ಡಿಸೈನ್, ಮರುವಿನ್ಯಾಸಗೊಳಿಸಲಾದ ಟೈಲ್‌ಲ್ಯಾಂಪ್, ಕಲರ್ ಆಕ್ಸೆಂಟ್, 15 ಇಂಚಿನ ಹೈಪರ್ ಸ್ಟೈಲ್ ಅಲಾಯ್ ವೀಲ್ಹ್ ನೀಡಲಾಗಿದೆ.

Tigor EV ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ ಪಡೆದುಕೊಂಡ Tata Motors

Tigor EV ಮಾದರಿಗಾಗಿ ಮೊದಲ ಬಾರಿಗೆ 30ಕ್ಕೂ ಹೆಚ್ಚು ತಾಂತ್ರಿಕ ಅಂಶಗಳನ್ನು ನಿಯಂತ್ರಿಸಬಹುದಾದ ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ಬಳಕೆ ಮಾಡಲಾಗಿದ್ದು, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಕ್ಲೈಮೆಟ್ ಕಂಟ್ರೋಲ್, ಮೊಬೈಲ್ ಚಾರ್ಜಿಂಗ್ ಪೋರ್ಟ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಮತ್ತು 316-ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ನೀಡಲಾಗಿದೆ.

Tigor EV ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ ಪಡೆದುಕೊಂಡ Tata Motors

ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ರಿಮೋಟ್ ಲಾಕಿಂಗ್, ಡ್ಯುಯಲ್ ಏರ್‌ಬ್ಯಾಗ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಬಿಲಿಟಿ ಕಂಟ್ರೋಲ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಮತ್ತು ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯ ಹೊಂದಿದೆ.

Tigor EV ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ ಪಡೆದುಕೊಂಡ Tata Motors

ಹೊಸ Tigor EV ಆವೃತ್ತಿಯಲ್ಲಿರುವ 26kWh ಲೀಥಿಯಂ ಅಯಾನ್ ಬ್ಯಾಟರಿಯನ್ನು ಹೋಂ ಚಾರ್ಜರ್ ಮೂಲಕ ಪೂರ್ತಿಯಾಗಿ ಚಾರ್ಜ್ ಮಾಡಲು ಗರಿಷ್ಠ 8 ಗಂಟೆಗಳ ಸಮಯಾವಕಾಶ ತೆಗೆದುಕೊಂಡರೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯದ ಮೂಲಕ ಕೇವಲ 1 ಗಂಟೆಯಲ್ಲಿ ಶೇ. 80 ರಷ್ಟು ಚಾರ್ಜ್ ಮಾಡಬಹುದಾಗಿದೆ.

Most Read Articles

Kannada
English summary
New tata tigor ev scores 4 stars in global ncap s vehicle crash test
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X