Just In
- 38 min ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 2 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 12 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 14 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- Sports
ಸ್ಪಿನ್ ಆಗಲು ಆರಂಭವಾದರೆ ಜಗತ್ತು ಅಳಲು ಆರಂಭಿಸುತ್ತದೆ: ಪಿಚ್ ಬಗ್ಗೆ ಟೀಕೆಗೆ ಆಸಿಸ್ ಸ್ಪಿನ್ನರ್ ತಿರುಗೇಟು
- News
ದೇಶ ಉದ್ದೇಶಿಸಿ ಮೋದಿ ಭಾಷಣ; ಮನ್ ಕೀ ಬಾತ್ ಮುಖ್ಯಾಂಶಗಳು
- Movies
ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿರುವ ಮೆಗಾಸ್ಟಾರ್ ಅಮಿತಾಭ್ ಬಚ್ಚನ್
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿತರಣೆ ಆರಂಭಿಸಿದ ಟೊಯೊಟಾ
ಟೊಯೊಟಾ ತನ್ನ 2021ರ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ಬೆಲೆಯು ದೆಹಲಿಯ ಎಕ್ಸ್ ಶೋರೂಂ ಪ್ರಕಾರ ರೂ.29.98 ದಿಂದ ರೂ.37.58 ಲಕ್ಷಗಳಾಗಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿ ವಿತರಣೆಗಳು ಪ್ರಾರಂಭವಾಗಿದ್ದು, ಮೊದಲ ಯುನಿಟ್ ಅನ್ನು ಗುರಗಾಂವ್‌ನಲ್ಲಿ ಎಂಜಿಎಫ್ ಟೊಯೋಟಾ ವಿತರಿಸಿದೆ. ಈ ಹೊಸ ಟೊಯೋಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, 2021ರ ಫಾರ್ಚೂನರ್ ಫೇಸ್‌ಲಿಫ್ಟ್ ಸಂಯೋಜಿತ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ನವೀಕರಿಸಿದ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಹೊಂದಿವೆ.

ಇದರೊಂದಿಗೆ ಕ್ರೋಮ್ ಸರೌಂಡ್‌ನೊಂದಿಗೆ ದೊಡ್ಡ ಫ್ರಂಟ್ ಗ್ರಿಲ್, ಫಾಗ್ ಲ್ಯಾಂಪ್‌ಗಳಿಗಾಗಿ ಹೊಸ ಹೌಸಿಂಗ್‌ಗಳೊಂದಿಗೆ ನವೀಕರಿಸಿದ ಫ್ರಂಟ್ ಬಂಪರ್ ಹೊಂದಿದೆ. ಹೊಸ 18 ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಇನ್ನು ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಈಗ ಹೆಚ್ಚು ಪ್ರೀಮಿಯಂ ಆಗಿ ನವೀಕರಿಸಿದ್ದು, ಕೆಲವು ಹೊಸ ಫೀಚರೆ ಅನ್ನು ಅಳವಡಿಸಿದೆ. ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗಿನ ಹೊಸ 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಕನೆಕ್ಟಿವಿಟಿ ಕಾರು ತಂತ್ರಜ್ಞಾನವನ್ನು ಹೊಂದಿದೆ.

ಇದರೊಂದಿಗೆ ವೆಂಟಿಲೇಟಡ್ ಮುಂಭಾಗದ ಸೀಟುಗಳು, ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 11-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ, ಆಂಬಿಯೆಂಟ್ ಲೈಟಿಂಗ್ ಮತ್ತು ಇತರ ಫೀಚರ್ ಗಳನ್ನು ಒಳಗೊಂಡಿದೆ. ಟೊಯೊಟಾ ಫಾರ್ಚೂನರ್ ಪ್ರತಿಸ್ಪರ್ಧಿಗಳಿಗೆ ಹೋಲಿಸಿದರೆ ಫೀಚರ್ ಗಳಲ್ಲಿ ಹಿಂದೆ ಇತ್ತು, ಆದರೆ ಹೊಸ ಅಪ್ದೇಟ್ ಗಳನ್ನು ಪಡೆದು ಈ ಅಪವಾದಗಳಿಗೆ ಉತ್ತರ ನೀಡಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಫಾರ್ಚೂನರ್ ಫೇಸ್‌ಲಿಫ್ಟ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಎಸ್‍ಯುವಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿದೆ. 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದನ್ನು ಐದು-ಸ್ಪೀಡ್ ಮ್ಯಾನುವಲ್ ಅಥವಾ ಆರು-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಹೊಂದಿಕೆಯಾದಾಗ ಡೀಸೆಲ್ ಎಂಜಿನ್ 177 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಆರು-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ಜೋಡಿಸಲಾದ ಯುನಿಟ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಡೀಸೆಲ್ ಎಂಜಿನ್‌ನಿಂದ ಚಾಲಿತವಾಗಿದ್ದು ಟೂ ವ್ಹೀಲ್ ಮತ್ತು ಫ್ಹೋರ್ ವ್ಹೀಲ್ ಡ್ರೈವ್ ಕಾನ್ಫಿಗರೇಶನ್‌ಗಳಲ್ಲಿ ಹೊಂದಿರುತ್ತದೆ. ಹಿಂದಿನ ಫಾರ್ಚೂನರ್ ಮಾದರಿಗೆ ಹೋಲಿಸಿದರೆ ಫಾರ್ಚೂನರ್ ಫೇಸ್‌ಲಿಫ್ಟ್ ಹಲವಾರು ಅಪ್ಡೇಟ್ ಗಳನ್ನು ಪಡೆದುಕೊಂಡಿದೆ.

ಭಾರತದ ಎಸ್‍ಯುವಿ ವಿಭಾಗದಲ್ಲಿ ಈ ಹೊಸ ಮಾದರಿಯು ಸಂಚಲವನ್ನು ಮೂಡಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಉತ್ತಮ ಆಫ್-ರೋಡ್ ಸಾಮರ್ಥ್ಯವನ್ನು ಹೊಂದಿದೆ.