ದುಬಾರಿ ಬೆಲೆ ನಡುವೆಯೂ ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಫಾರ್ಚೂನರ್ ಫೇಸ್‌ಲಿಫ್ಟ್

ಟೊಯೊಟಾ ಕಂಪನಿಯು ಕಳೆದ ಹಿಂದಷ್ಟೇ ತನ್ನ ಜನಪ್ರಿಯ ಎಸ್‌ಯುವಿ ಕಾರು ಮಾದರಿಯಾದ ಫಾರ್ಚೂನರ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆಗೊಳಿಸಿದ್ದು, ಹೊಸ ಕಾರು ಬಿಡುಗಡೆಯಾದ ಮೊದಲ ತಿಂಗಳ ಅವಧಿಯಲ್ಲೇ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದೆ.

ದುಬಾರಿ ಬೆಲೆ ನಡುವೆಯೂ ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಫಾರ್ಚೂನರ್ ಫೇಸ್‌ಲಿಫ್ಟ್

ಫಾರ್ಚೂನರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಸ್ಟ್ಯಾಂಡರ್ಡ್ ಮತ್ತು ಲೆಜೆಂಡರ್ ಎನ್ನುವ ಎರಡು ಆವೃತ್ತಿಗಳೊಂದಿಗೆ ಬಿಡುಗಡೆಗಡೆಗೊಂಡಿದ್ದು, ಹೊಸ ಕಾರು ದುಬಾರಿ ಬೆಲೆ ನಡುವೆಯೂ ಇದುವರೆಗೆ ಬರೋಬ್ಬರಿ 5 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ. ಹೊಸ ಕಾರಿನ ವಿತರಣೆಯು ಈಗಾಗಲೇ ಆರಂಭಗೊಂಡಿದ್ದು, ನಿಗದಿತ ಅವಧಿಯಲ್ಲಿ ಬೇಡಿಕೆ ಪೂರೈಕೆಗಾಗಿ ಕಂಪನಿಯು ಕಾರಿನ ಉತ್ಪಾದನೆ ಹೆಚ್ಚಿಸಿದ್ದು, ಫಾರ್ಚೂನರ್ ಕಾರು ಮೊದಲ ಬಾರಿಗೆ ಫುಲ್ ಎಸ್‌ಯುವಿಯಲ್ಲಿ ಈ ಮಟ್ಟದ ಬೇಡಿಕೆ ಪಡೆದುಕೊಂಡಿದೆ.

ದುಬಾರಿ ಬೆಲೆ ನಡುವೆಯೂ ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಫಾರ್ಚೂನರ್ ಫೇಸ್‌ಲಿಫ್ಟ್

ವಾರ್ಷಿಕವಾಗಿ 1 ಸಾವಿರದಿಂದ 1,200 ಯುನಿಟ್ ಮಾರಾಟ ಶ್ರೇಣಿ ಹೊಂದಿರುವ ಫಾರ್ಚೂನರ್ ಕಾರು ಮಾದರಿಯು ಮೊದಲ ಬಾರಿಗೆ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸದಾಗಿ ಪರಿಚಯಿಸಲಾದ ಲೆಜೆಂಡರ್ ಆವೃತ್ತಿಯು ಭಾರೀ ಪ್ರಮಾಣದ ಬೇಡಿಕೆಗೆ ಕಾರಣವಾಗಿದೆ.

ದುಬಾರಿ ಬೆಲೆ ನಡುವೆಯೂ ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಫಾರ್ಚೂನರ್ ಫೇಸ್‌ಲಿಫ್ಟ್

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ಬೆಲೆಯು ದೆಹಲಿಯ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.29.98 ಲಕ್ಷಗಳಿಂದ ಟಾಪ್ ಎಂಡ್ ಮಾದರಿಯು ರೂ.37.48 ಲಕ್ಷಗಳಾಗಿದ್ದು, ಲೆಜೆಂಡರ್ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ವಿನೂತನ ಫೀಚರ್ಸ್‌ಗಳೊಂದಿಗೆ ಹೈ ಎಂಡ್ ಮಾದರಿಯಾಗಿ ಮಾರಾಟವಾಗುತ್ತಿದೆ.

ದುಬಾರಿ ಬೆಲೆ ನಡುವೆಯೂ ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಫಾರ್ಚೂನರ್ ಫೇಸ್‌ಲಿಫ್ಟ್

2021ರ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ ಹೊಸ ಕಾರು ಸಂಯೋಜಿತ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ನವೀಕರಿಸಿದ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಹೊಂದಿದ್ದು, ಇದರೊಂದಿಗೆ ಕ್ರೋಮ್ ಸರೌಂಡ್‌ನೊಂದಿಗೆ ದೊಡ್ಡ ಫ್ರಂಟ್ ಗ್ರಿಲ್, ಫಾಗ್ ಲ್ಯಾಂಪ್‌ಗಳಿಗಾಗಿ ಹೊಸ ಹೌಸಿಂಗ್‌ಗಳೊಂದಿಗೆ ನವೀಕರಿಸಿದ ಫ್ರಂಟ್ ಬಂಪರ್ ಪಡೆದುಕೊಂಡಿದೆ.

ದುಬಾರಿ ಬೆಲೆ ನಡುವೆಯೂ ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಫಾರ್ಚೂನರ್ ಫೇಸ್‌ಲಿಫ್ಟ್

ಹೊಸದಾಗಿ 18 ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದ್ದು, ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲೂ ಇದೀಗ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ನವೀಕರಿಸಲಾಗಿದೆ.

ದುಬಾರಿ ಬೆಲೆ ನಡುವೆಯೂ ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಫಾರ್ಚೂನರ್ ಫೇಸ್‌ಲಿಫ್ಟ್

ವೈರ್‌ಲೆಸ್ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಸರ್ಪೊಟ್ ಮಾಡುವ ಹೊಸ 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಕನೆಕ್ಟಿವಿಟಿ ಕಾರು ತಂತ್ರಜ್ಞಾನವನ್ನು ಹೊಂದಿದ್ದು, ವೆಂಟಿಲೇಟಡ್ ಮುಂಭಾಗದ ಸೀಟುಗಳು, ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 11-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ, ಆಂಬಿಯೆಂಟ್ ಲೈಟಿಂಗ್ ಮತ್ತು ಇತರೆ ಫೀಚರ್ಸ್‌ಗಳನ್ನು ಒಳಗೊಂಡಿದೆ.

ದುಬಾರಿ ಬೆಲೆ ನಡುವೆಯೂ ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಫಾರ್ಚೂನರ್ ಫೇಸ್‌ಲಿಫ್ಟ್

ಫಾರ್ಚೂನರ್‌ನಲ್ಲಿ ಹೊಸದಾಗಿ ಪರಿಚಯಿಸಿರುವ ಲೆಜೆಂಡರ್ ವೆರಿಯೆಂಟ್ ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚು ಸ್ಪೋರ್ಟಿ ವಿನ್ಯಾಸವನ್ನು ಹೊಂದಿದ್ದು, ಲೆಜೆಂಡರ್ ವೆರಿಯೆಂಟ್ ಎಸ್‍ಯುವಿಯ ಮುಂಭಾಗದಲ್ಲಿ ಸ್ಟ್ಯಾಂಡರ್ಡ್ ಮಾದರಿಗಿಂತ ಆಕರ್ಷಕವಾಗಿ ಗ್ರಿಲ್ ಅನ್ನು ಅಳವಡಿಸಲಾಗಿದೆ.

ದುಬಾರಿ ಬೆಲೆ ನಡುವೆಯೂ ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಫಾರ್ಚೂನರ್ ಫೇಸ್‌ಲಿಫ್ಟ್

ಲೆಜೆಂಡರ್ ಆವೃತ್ತಿಯಲ್ಲಿ ಸಂಪೂರ್ಣವಾಗಿ ಹೊಸ ವಿನ್ಯಾಸದ ಎಲ್ಇಡಿ ಹೆಡ್‌ಲ್ಯಾಂಪ್ ಗಳು, ಹೊಸ ಅಲಾಯ್ ವ್ಹೀಲ್ ಗಳು ಮತ್ತು ವಿಶೇಷ ಡ್ಯುಯಲ್-ಟೋನ್ ಬಣ್ನಗಳನ್ನು ಹೊಂದಿದ್ದು, ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

ದುಬಾರಿ ಬೆಲೆ ನಡುವೆಯೂ ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಫಾರ್ಚೂನರ್ ಫೇಸ್‌ಲಿಫ್ಟ್

ಹೊಸ ಕಾರಿನಲ್ಲಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿದ್ದು, 2.7-ಲೀಟರ್ ಪೆಟ್ರೋಲ್ ಎಂಜಿನ್ 166-ಬಿಹೆಚ್‍ಪಿ 245-ಎನ್ಎಂ ಟಾರ್ಕ್ ಉತ್ಪಾದಿಸಿದ್ದಲ್ಲಿ ಡೀಸೆಲ್ ಎಂಜಿನ್ ಮಾದರಿಯು 177-ಬಿಹೆಚ್‍ಪಿ, 420-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ದುಬಾರಿ ಬೆಲೆ ನಡುವೆಯೂ ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಫಾರ್ಚೂನರ್ ಫೇಸ್‌ಲಿಫ್ಟ್

ಇನ್ನು ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಮಾದರಿಯು ಟೂ ವ್ಹೀಲ್ ಮತ್ತು ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ ಹೊಂದಿರಲಿದ್ದು, ಲೆಜೆಂಡರ್ ಮಾದರಿಯನ್ನು ಕೇವಲ ಟೂ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ ಅಭಿವೃದ್ದಿಗೊಳಿಸಲಾಗಿದೆ.

More from DriveSpark

Article Published On: Thursday, February 4, 2021, 21:00 [IST]
English summary
New Toyota Fortuner & Legender Receive Over 5,000 Bookings. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+