ಶೀಘ್ರದಲ್ಲೇ ಅನಾವರಣವಾಗಲಿದೆ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿ

ಜಪಾನ್ ಮೂಲದ ವಾಹನ ತಯಾರಕ ಕಂಪನಿಯಾದ ಟೊಯೊಟಾ ತನ್ನ ಹೊಸ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ತಲೆಮಾರಿನ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯನ್ನು ಪ್ರಮುಖ ಬದಲಾವಣೆಯೊಂದಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಪರಿಚಯಿಸಲಿದೆ.

ಶೀಘ್ರದಲ್ಲೇ ಅನಾವರಣವಾಗಲಿದೆ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿ

ಈ ಹೊಸ ಲ್ಯಾಂಡ್ ಕ್ರೂಸರ್ 300 ಅನಾವರಣದ ಬಗ್ಗೆ ಹೊಸ ದಾಖಲೆಯೊಂದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಸೋರಿಕೆಯಾದ ದಾಖಲೆಯ ಪ್ರಕಾರ, 2022ರ ಟೊಯೊಟಾ ಲ್ಯಾಂಡ್ ಕ್ರೂಸರ್ 30 ಎಸ್‍ಯುವಿಯು ಈ ತಿಂಗಳ ಅಂತ್ಯದ ವೇಳೆಗೆ ತನ್ನ ಜಾಗತಿಕ ಅನಾವರಣವಾಗಲಿದೆ. ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯು ಜಿಆರ್, ಜಿಎಕ್ಸ್-ಆರ್, ಜಿಆರ್-ಎಸ್, ಮತ್ತು ಝಡ್ಎಕ್ಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿರುತ್ತದೆ.

ಶೀಘ್ರದಲ್ಲೇ ಅನಾವರಣವಾಗಲಿದೆ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿ

ಬಹುದೀರ್ಘ ಕಾಲದಿಂದಲೂ ಟೊಯೊಟಾ ಲ್ಯಾಂಡ್ ಕ್ರೂಸರ್ ಜನಪ್ರಿಯ ಎಸ್‍ಯುವಿಯಾಗಿದೆ. ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಟೊಯೊಟಾ ತನ್ನ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು 1951ರಲ್ಲಿ ಬಿಡುಗಡೆಗೊಳಿಸಿತ್ತು.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಶೀಘ್ರದಲ್ಲೇ ಅನಾವರಣವಾಗಲಿದೆ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿ

ಕಳೆದ ಕೆಲವು ವರ್ಷಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಜನಪ್ರಿಯತೆಯು ಕಡಿಮೆಯಾಗಿದೆ. ಟೊಯೊಟಾ ಲ್ಯಾಂಡ್ ಕ್ರೂಸರ್ ಒಂದು ಕಾಲದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಿದ ಎಸ್‍ಯುವಿಯಾಗಿದೆ.

ಶೀಘ್ರದಲ್ಲೇ ಅನಾವರಣವಾಗಲಿದೆ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿ

ಹಿಂದಿನ ಮಾದರಿ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ 4.5-ಲೀಟರ್ ವಿ8 ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿದೆ. ಹೊಸ ಲ್ಯಾಂಡ್ ಕ್ರೂಸರ್ ಎಸ್‍ಯುವಿಯಲ್ಲಿ 3.5-ಲೀಟರ್ ಟರ್ಬೋಚಾರ್ಜ್ಡ್ ವಿ6 ಪೆಟ್ರೋಲ್ ಎಂಜಿನ್ ಮತ್ತು ಅದರ ಹೈಬ್ರಿಡ್ ರೂಪಾಂತರವನ್ನು ಆಯ್ದ ಮಾರುಕಟ್ಟೆಗಳಲ್ಲಿ ಬಿಡುಗಡೆಗೊಳಿಸಬಹುದು.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಶೀಘ್ರದಲ್ಲೇ ಅನಾವರಣವಾಗಲಿದೆ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿ

ಇನ್ನು ಇದರೊಂದಿಗೆ 3.3-ಲೀಟರ್ ಆರು-ಪಾಟ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ನೀಡಬಹುದು. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯ ಲ್ಯಾಡರ್ ಫ್ರೇಮ್ ಚಾಸಿಸ್ ಅನ್ನು ಆಧರಿಸಿದೆ.

ಶೀಘ್ರದಲ್ಲೇ ಅನಾವರಣವಾಗಲಿದೆ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿ

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಅನ್ನು ಕಂಪನಿಯ ಟಿಎನ್‌ಜಿಎ ಮಾಡ್ಯುಲರ್ ಪ್ಲಾಟ್‌ಫಾರ್ಮ್ ಅನ್ನು ಹೊಂದಿರುತ್ತದೆ. ಹೊಸ ಪ್ಲಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸುತ್ತಿರುವ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯ ತೂಕದಲ್ಲಿ ಗಮನಾರ್ಹವಾಗಿ ಇಳಿಕೆಯಾಗಬಹುದು. ಪವರ್ ಮತ್ತು ಟಾರ್ಕ್ ಅಂಕಿ ಅಂಶದಲ್ಲಿ ಕೂಡ ಇಳಿಕೆಯಾಗುವ ಸಾಧ್ಯತೆಗಳಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಶೀಘ್ರದಲ್ಲೇ ಅನಾವರಣವಾಗಲಿದೆ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿ

ಈ ಟೊಯೊಟಾ ಲ್ಯಾಂಡ್ ಕ್ರೂಸರ್ ಹೊಸ ವಿನ್ಯಾಸವನ್ನು ಹೊಂದಿರುತ್ತದೆ. ಈ ಎಸ್‍ಯುವಿಯಲ್ಲಿ ಹೊಸ ಟ್ರೆಪೆಜಾಯಿಡಲ್ ಗ್ರಿಲ್ ಅನ್ನು ಅಳವಡಿಸಬಹುದು. ಇನ್ನು ಇಂಟಿರಿಯರ್ ನಲ್ಲಿ ಹೊಸ ಫೀಚರ್ಸ್‍ಗಳನ್ನು ಒಳಗೊಂಡಿರುತ್ತದೆ.

ಶೀಘ್ರದಲ್ಲೇ ಅನಾವರಣವಾಗಲಿದೆ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿ

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯು ಹೆಚ್ಚು ಐಷಾರಾಮಿಯಾಗಿರಲಿದೆ ಮತ್ತು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿರಬಹುದು ಎಂದು ನಿರೀಕ್ಷಿಸುತ್ತೇವೆ. ಹಿಂದಿನ ತಲೆಮಾರಿಯಂತೆ ಹೊಸ ತಲೆಮಾರಿನ ಟೊಯೊಟಾ ಲ್ಯಾಂಡ್ ಕ್ರೂಸರ್ ಹಿಂದಿನ ಮಾದರಿಯಂತೆ ಉತ್ತಮ ಆಫ್-ರೋಡಿಂಗ್ ಸಾಮರ್ಥ್ಯವನ್ನು ಹೊಂದಿರಬಹುದು.

ಶೀಘ್ರದಲ್ಲೇ ಅನಾವರಣವಾಗಲಿದೆ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿ

ಅನೇಕ ಮಾರುಕಟ್ಟೆಗಳಲ್ಲಿ, ಲ್ಯಾಂಡ್ ಕ್ರೂಸರ್ 200 ಎಸ್‍ಯುವಿಯನ್ನು ಸ್ಥಗಿತಗೊಳಿಸಲಾಗುತ್ತದೆ. ಈ ಮಾದರಿಯನ್ನು ಬದಲಾಯಿಸಿ ಹೆಚ್ಚು ಐಷಾರಾಮಿ ಫೀಚರ್ ಗಳೊಂದಿಗೆ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯನ್ನು ಹಲವು ಅಂತರರಾಷ್ಟ್ರೀಯ ಮಾರುಕಟ್ತೆಗಳಲ್ಲಿ ಬಿಡುಗಡೆಗೊಳಿಸಲು ಟೊಯೊಟಾ ಸಜ್ಜಾಗುತ್ತಿದೆ.

Most Read Articles

Kannada
Read more on ಟೊಯೊಟಾ toyota
English summary
New Toyota Land Cruiser To Debut By End Of May 2021. Read In Kannada.
Story first published: Monday, May 17, 2021, 21:30 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X