Just In
- 34 min ago Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- 1 hr ago ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- 1 hr ago ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- 2 hrs ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
Don't Miss!
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Movies ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೇ ಅನಾವರಣವಾಗಲಿದೆ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್ಯುವಿ
ಜಪಾನ್ ಮೂಲದ ವಾಹನ ತಯಾರಕ ಕಂಪನಿಯಾದ ಟೊಯೊಟಾ ತನ್ನ ಹೊಸ ಲ್ಯಾಂಡ್ ಕ್ರೂಸರ್ 300 ಎಸ್ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ತಲೆಮಾರಿನ ಲ್ಯಾಂಡ್ ಕ್ರೂಸರ್ 300 ಎಸ್ಯುವಿಯನ್ನು ಪ್ರಮುಖ ಬದಲಾವಣೆಯೊಂದಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಪರಿಚಯಿಸಲಿದೆ.
ಈ ಹೊಸ ಲ್ಯಾಂಡ್ ಕ್ರೂಸರ್ 300 ಅನಾವರಣದ ಬಗ್ಗೆ ಹೊಸ ದಾಖಲೆಯೊಂದು ಆನ್ಲೈನ್ನಲ್ಲಿ ಸೋರಿಕೆಯಾಗಿದೆ. ಸೋರಿಕೆಯಾದ ದಾಖಲೆಯ ಪ್ರಕಾರ, 2022ರ ಟೊಯೊಟಾ ಲ್ಯಾಂಡ್ ಕ್ರೂಸರ್ 30 ಎಸ್ಯುವಿಯು ಈ ತಿಂಗಳ ಅಂತ್ಯದ ವೇಳೆಗೆ ತನ್ನ ಜಾಗತಿಕ ಅನಾವರಣವಾಗಲಿದೆ. ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್ಯುವಿಯು ಜಿಆರ್, ಜಿಎಕ್ಸ್-ಆರ್, ಜಿಆರ್-ಎಸ್, ಮತ್ತು ಝಡ್ಎಕ್ಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿರುತ್ತದೆ.
ಬಹುದೀರ್ಘ ಕಾಲದಿಂದಲೂ ಟೊಯೊಟಾ ಲ್ಯಾಂಡ್ ಕ್ರೂಸರ್ ಜನಪ್ರಿಯ ಎಸ್ಯುವಿಯಾಗಿದೆ. ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಟೊಯೊಟಾ ತನ್ನ ಲ್ಯಾಂಡ್ ಕ್ರೂಸರ್ ಎಸ್ಯುವಿಯನ್ನು 1951ರಲ್ಲಿ ಬಿಡುಗಡೆಗೊಳಿಸಿತ್ತು.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಕಳೆದ ಕೆಲವು ವರ್ಷಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್ಯುವಿಯ ಜನಪ್ರಿಯತೆಯು ಕಡಿಮೆಯಾಗಿದೆ. ಟೊಯೊಟಾ ಲ್ಯಾಂಡ್ ಕ್ರೂಸರ್ ಒಂದು ಕಾಲದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಿದ ಎಸ್ಯುವಿಯಾಗಿದೆ.
ಹಿಂದಿನ ಮಾದರಿ ಲ್ಯಾಂಡ್ ಕ್ರೂಸರ್ ಎಸ್ಯುವಿಯ 4.5-ಲೀಟರ್ ವಿ8 ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿದೆ. ಹೊಸ ಲ್ಯಾಂಡ್ ಕ್ರೂಸರ್ ಎಸ್ಯುವಿಯಲ್ಲಿ 3.5-ಲೀಟರ್ ಟರ್ಬೋಚಾರ್ಜ್ಡ್ ವಿ6 ಪೆಟ್ರೋಲ್ ಎಂಜಿನ್ ಮತ್ತು ಅದರ ಹೈಬ್ರಿಡ್ ರೂಪಾಂತರವನ್ನು ಆಯ್ದ ಮಾರುಕಟ್ಟೆಗಳಲ್ಲಿ ಬಿಡುಗಡೆಗೊಳಿಸಬಹುದು.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು
ಇನ್ನು ಇದರೊಂದಿಗೆ 3.3-ಲೀಟರ್ ಆರು-ಪಾಟ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ನೀಡಬಹುದು. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಲ್ಯಾಂಡ್ ಕ್ರೂಸರ್ 300 ಎಸ್ಯುವಿಯ ಲ್ಯಾಡರ್ ಫ್ರೇಮ್ ಚಾಸಿಸ್ ಅನ್ನು ಆಧರಿಸಿದೆ.
ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಅನ್ನು ಕಂಪನಿಯ ಟಿಎನ್ಜಿಎ ಮಾಡ್ಯುಲರ್ ಪ್ಲಾಟ್ಫಾರ್ಮ್ ಅನ್ನು ಹೊಂದಿರುತ್ತದೆ. ಹೊಸ ಪ್ಲಾಟ್ಫಾರ್ಮ್ನಲ್ಲಿ ಅಭಿವೃದ್ದಿಪಡಿಸುತ್ತಿರುವ ಲ್ಯಾಂಡ್ ಕ್ರೂಸರ್ 300 ಎಸ್ಯುವಿಯ ತೂಕದಲ್ಲಿ ಗಮನಾರ್ಹವಾಗಿ ಇಳಿಕೆಯಾಗಬಹುದು. ಪವರ್ ಮತ್ತು ಟಾರ್ಕ್ ಅಂಕಿ ಅಂಶದಲ್ಲಿ ಕೂಡ ಇಳಿಕೆಯಾಗುವ ಸಾಧ್ಯತೆಗಳಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ
ಈ ಟೊಯೊಟಾ ಲ್ಯಾಂಡ್ ಕ್ರೂಸರ್ ಹೊಸ ವಿನ್ಯಾಸವನ್ನು ಹೊಂದಿರುತ್ತದೆ. ಈ ಎಸ್ಯುವಿಯಲ್ಲಿ ಹೊಸ ಟ್ರೆಪೆಜಾಯಿಡಲ್ ಗ್ರಿಲ್ ಅನ್ನು ಅಳವಡಿಸಬಹುದು. ಇನ್ನು ಇಂಟಿರಿಯರ್ ನಲ್ಲಿ ಹೊಸ ಫೀಚರ್ಸ್ಗಳನ್ನು ಒಳಗೊಂಡಿರುತ್ತದೆ.
ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್ಯುವಿಯು ಹೆಚ್ಚು ಐಷಾರಾಮಿಯಾಗಿರಲಿದೆ ಮತ್ತು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿರಬಹುದು ಎಂದು ನಿರೀಕ್ಷಿಸುತ್ತೇವೆ. ಹಿಂದಿನ ತಲೆಮಾರಿಯಂತೆ ಹೊಸ ತಲೆಮಾರಿನ ಟೊಯೊಟಾ ಲ್ಯಾಂಡ್ ಕ್ರೂಸರ್ ಹಿಂದಿನ ಮಾದರಿಯಂತೆ ಉತ್ತಮ ಆಫ್-ರೋಡಿಂಗ್ ಸಾಮರ್ಥ್ಯವನ್ನು ಹೊಂದಿರಬಹುದು.
ಅನೇಕ ಮಾರುಕಟ್ಟೆಗಳಲ್ಲಿ, ಲ್ಯಾಂಡ್ ಕ್ರೂಸರ್ 200 ಎಸ್ಯುವಿಯನ್ನು ಸ್ಥಗಿತಗೊಳಿಸಲಾಗುತ್ತದೆ. ಈ ಮಾದರಿಯನ್ನು ಬದಲಾಯಿಸಿ ಹೆಚ್ಚು ಐಷಾರಾಮಿ ಫೀಚರ್ ಗಳೊಂದಿಗೆ ಲ್ಯಾಂಡ್ ಕ್ರೂಸರ್ 300 ಎಸ್ಯುವಿಯನ್ನು ಹಲವು ಅಂತರರಾಷ್ಟ್ರೀಯ ಮಾರುಕಟ್ತೆಗಳಲ್ಲಿ ಬಿಡುಗಡೆಗೊಳಿಸಲು ಟೊಯೊಟಾ ಸಜ್ಜಾಗುತ್ತಿದೆ.