Just In
- 33 min ago ವಂದೇ ಭಾರತ್ ಸ್ಲೀಪರ್, ಸೂಪರ್ ಆಪ್.. ರೈಲ್ವೆಯಿಂದ ಬಿಗ್ ಪ್ಲ್ಯಾನ್: ನೀವು ತಿಳಿಯಬೇಕಾದ ವಿಚಾರಗಳಿವು!
- 45 min ago ಕೋಟಿ ಬೆಲೆಯ ಲ್ಯಾಂಡ್ರೋವರ್ ಖರೀದಿಸಿದ ಗಾಯಕಿ: ಹೆಣ್ಮಕ್ಳೇ ಸ್ಟ್ರಾಂಗು ಗುರು ಎಂದ ನೆಟ್ಟಿಗರು!
- 3 hrs ago Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- 15 hrs ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
Don't Miss!
- Finance ಎರಡು ದಿನ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ, 144 ಸೆಕ್ಷನ್ ಜಾರಿ, ದಿನಾಂಕ ವಿವರ
- Technology ವಿವೋ T3x 5G ಫೋನಿನ ಫಸ್ಟ್ ಸೇಲ್ ಯಾವಾಗ?..ಆಫರ್ ಬೆಲೆ ಎಷ್ಟು?
- News ₹8 Lakh Gold: ಆಟೋದಲ್ಲೇ ಬಿಟ್ಟಿದ್ದ 8 ಲಕ್ಷ ರೂ. ಚಿನ್ನಾಭರಣವಿದ್ದ ಬ್ಯಾಗ್ ಮರಳಿ ಸಿಕ್ಕಿದ್ದೆ ರೋಚಕ
- Lifestyle ಮೊದಲ ಯತ್ನದಲ್ಲೇ ಯುಪಿಎಸ್ಸಿ ಪಾಸ್..! ಸ್ಫೂರ್ತಿಯಾಗಿದ್ದು ವಿರಾಟ್..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Movies "ದಪ್ಪ ಇದ್ದೀಯಾ ಅಂದ್ರೆ ದಿನ ಯಾರೊಂದಿಗೋ ಇದ್ದೀಯಾ ಅನ್ನೂ ಕೆಟ್ಟ ಮನ:ಸ್ಥಿತಿಯಿದೆ"; ನಟಿ ನೀತು
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್ಸಿ300 ಎಸ್ಯುವಿ
ಜಪಾನ್ ಮೂಲದ ಟೊಯೊಟಾ ಕಂಪನಿಯು ತನ್ನ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್(300 ಸೀರಿಸ್) ಎಸ್ಯುವಿಯನ್ನು ಇತ್ತೀಚೆಗೆ ಜಾಗತಿಕ ಮಟ್ಟದಲ್ಲಿ ಅನಾವರಣಗೊಳಿಸಿತ್ತು. ಈ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಸ್ಯುವಿಯು ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ.
ಲ್ಯಾಂಡ್ ಕ್ರೂಸರ್ ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಜನಪ್ರಿಯ ಮತ್ತು ಐಕಾನಿಕ್ ಎಸ್ಯುವಿಗಳಲ್ಲಿ ಒಂದಾಗಿದೆ. ಲ್ಯಾಂಡ್ ಕ್ರೂಸರ್ ಪ್ರಾಡೊ ಮತ್ತು ಎಲ್ಸಿ200 ಈ ಹಿಂದೆ ಭಾರತದಲ್ಲಿ ಮಾರಾಟವಾಗಿದ್ದವು. ಕೆಲವು ವರದಿಗಳ ಪ್ರಕಾರ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಲ್ಸಿ300 ಎಸ್ಯುವಿಯನ್ನು ಇದೇ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಳಿಸಬಹುದು. ನ್ಯೂ ಜನರೇಷನ್ ಮಾದರಿಯನ್ನು ಹಿಂದಿನದಕ್ಕಿಂತ ಹೆಚ್ಚು ಆಧುನಿಕ ಮತ್ತು ಪ್ರೀಮಿಯಂ ಮಾದರಿಯಾಗಿದೆ. ಲ್ಯಾಂಡ್ ಕ್ರೂಸರ್ ಬ್ರ್ಯಾಂಡ್ ಹೆಸರು ಇಂದಿಗೂ ಜನಪ್ರಿಯ ಬ್ರ್ಯಾಂಡ್ ಆಗಿದೆ.
ಟೊಯೊಟಾ ಕಂಪನಿಯು ಲ್ಯಾಂಡ್ ಕ್ರೂಸರ್ ಎಸ್ಯುವಿಯನ್ನು 1951 ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿತು. ಇದುವರೆಗೂ 170 ದೇಶಗಳಲ್ಲಿ ಲ್ಯಾಂಡ್ ಕ್ರೂಸರ್ನ 1.04 ಕೋಟಿ ಯೂನಿಟ್ಗಳನ್ನು ಮಾರಾಟ ಮಾಡಲಾಗಿದೆ.
ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್ಯುವಿಯು ಹೊಸ ಟಿಎನ್ಜಿಎ (ಟೊಯೋಟಾ ನ್ಯೂ ಗ್ಲೋಬಲ್ ಆರ್ಕಿಟೆಕ್ಚರ್) ಪ್ಲಾಟ್ಫಾರ್ಮ್ ಅನ್ನು ಆಧರಿಸಿದ ಬ್ರಾಂಡ್ನ ಮೊದಲ ಬಾಡಿ-ಆನ್-ಫ್ರೇಮ್ ವಾಹನ ಇದಾಗಿದೆ.
2022ರ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್ಸಿ300 ಎಸ್ಯುವಿಯಲ್ಲಿ ಕೆಲವು ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡಲಾಗಿದೆ. ಬ್ರ್ಯಾಂಡ್ನ ಹೊಸ ಪ್ರಮುಖ ಎಸ್ಯುವಿ ಹೆಚ್ಚು ಪ್ರಮುಖವಾದ ಗ್ರಿಲ್, ಹೊಸ ಲೈಟಿಂಗ್ ಸೆಟಪ್, ಪರಿಷ್ಕೃತ ಟೈಲ್ಗೇಟ್ ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ ಟೈಲ್ಲ್ಯಾಂಪ್ಗಳನ್ನು ಕೂಡ ಪಡೆಯುತ್ತದೆ.
ಈ ಹೊಸ ಎಸ್ಯುವಿಯ ಇಂಟಿರಿಯರ್ ನಲ್ಲಿ ದೊಡ್ಡ ಟ್ಯಾಬ್ಲೆಟ್ ಶೈಲಿಯ ಇನ್ಫೋಟೈನ್ಮೆಂಟ್ ಸಿಸ್ಟಂ ಮತ್ತು ಹೊಸ ಡ್ಯಾಶ್ಬೋರ್ಡ್ ವಿನ್ಯಾಸವನ್ನು ಪಡೆಯುತ್ತದೆ. ಪ್ರಸ್ತುತ ಮಾದರಿಯಂತಲ್ಲದೆ 4ಹೈ ಮತ್ತು 4ಲೋ ಮೋಡ್ಗಳನ್ನು ಹೊಂದಿರುವ ದೊಡ್ಡ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಕೂಡ ಒಳಗೊಂಡಿದೆ.
ಎಸ್ಯುವಿಯಲ್ಲಿ ಫಿಸಿಕಲ್ ಡಯಲ್ಗಳನ್ನು ಹೊಂದಿರುವ ಗೇಜ್ ಕ್ಲಸ್ಟರ್ ಮತ್ತು ಇನ್ಫೋ ಡಿಸ್ ಪ್ಲೇ, ಹೀಟಡ್ ಸೀಟುಗಳು, ಜೆಬಿಎಲ್ ಆಡಿಯೋ, ಟೊಯೊಟಾ ಸೇಫ್ಟಿ ಸೆನ್ಸ್ ಪ್ಯಾಕೇಜ್ ಮತ್ತು ಇತರ ಹಲವಾರು ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿವೆ.
ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್ಯುವಿಯು ವಿಶ್ವದ ಮೊದಲ ಎಲೆಕ್ಟ್ರಾನಿಕ್ ಕೈನೆಟಿಕ್ ಡೈನಾಮಿಕ್ ಸಸ್ಪೆಂಕ್ಷನ್ ಸಿಸ್ಟಂ (ಇ-ಕೆಡಿಎಸ್ಎಸ್) ಅನ್ನು ಒಳಗೊಂಡಿದೆ. ಮಲ್ಟಿ-ಟೆರೈನ್ ಮಾನಿಟರ್ ಅನ್ನು ಒಳಗೊಂಡಿರುವ ಬ್ರ್ಯಾಂಡ್ನ ಮೊದಲ ಮಾದರಿಯಾಗಿದೆ,
2022ರ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್ಯುವಿಯು ಎರಡು ಎಂಜಿನ್ ಆಯ್ಕೆಗಳೊಂದಿಗೆ ಬರುತ್ತದೆ. ಇದು 3.5 ಎಲ್ ವಿ6 ಟ್ವಿನ್-ಟರ್ಬೊ ಪೆಟ್ರೋಲ್ ಮತ್ತು 3.3 ಎಲ್ ವಿ6 ಟ್ವಿನ್-ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಗಳಾಗಿವೆ.
ಇದರಲ್ಲಿ 3.5-ಲೀಟರ್ರ್ ವಿ6 ಟ್ವಿನ್-ಟರ್ಬೊ ಎಂಜಿನ್ ಅನ್ನು 409 ಬಿಹೆಚ್ಪಿ ಪವರ್ ಮತ್ತು 650 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು 3.3-ಲೀಟರ್ ಟ್ವಿನ್-ಟರ್ಬೊ ವಿ6 ಂಜಿನ್ 304 ಬಿಹೆಚ್ಪಿ ಪವರ್ ಮತ್ತು 700 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಈ ಎಂಜಿನ್ ಗಳೊಂದಿಗೆ 10-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್ಯುವಿಯು ಉತ್ತಮ ಆಫ್-ರೋಡ್ ಎಸ್ಯುವಿಯಾಗಿದೆ. ಎಲ್ಲಾ ಕಡೆಗಳಲ್ಲಿಯು ಧೈರ್ಯವಾಗಿ ಈ ಕರೆದೊಯ್ಯಬಹುದು. ಈ ಎಸ್ಯುವಿ ಭಾರತೀಯ ಮಾರುಕಟ್ಟೆಯಲ್ಲಿಯು ಈ ವರ್ಷದ ಅಂತ್ಯದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದೆ.