ಕೋವಿಡ್ ಸಂಕಷ್ಟ: ಧೀಡಿರ್ ಕುಸಿತ ಕಂಡ ಹೊಸ ವಾಹನಗಳ ಬುಕ್ಕಿಂಗ್ ಪ್ರಕ್ರಿಯೆ

ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಲಾಕ್ಡೌನ್ ಘೋಷಣೆ ಮಾಡಲಾಗಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮ ಆಟೋ ಉದ್ಯಮ ಮತ್ತೆ ನೆಲಕಚ್ಚುವ ಭೀತಿಯಲ್ಲಿದೆ.

ಕೋವಿಡ್ ಸಂಕಷ್ಟ: ಧೀಡಿರ್ ಕುಸಿತ ಕಂಡ ಹೊಸ ವಾಹನಗಳ ಬುಕ್ಕಿಂಗ್ ಪ್ರಕ್ರಿಯೆ

ಕಳೆದ ವರ್ಷದ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಣೆಯ ಹಾದಿಯಲ್ಲಿದ್ದ ಆಟೋ ಉದ್ಯಮವು ಇದೀಗ ಮತ್ತೆ ಸಂಕಷ್ಟ ಎದುರಿಸುತ್ತಿದ್ದು, ದೇಶಾದ್ಯಂತ ಹಲವು ಆಟೋ ಕಂಪನಿಗಳು ಈಗಾಗಲೇ ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದರೆ ಇನ್ನು ಕೆಲವು ವಾಹನ ಕಂಪನಿಗಳು ಉದ್ಯೋಗಿಗಳ ಆರೋಗ್ಯದ ದೃಷ್ಠಿಯಿಂದ ಹೊಸ ವಾಹನಗಳ ಉತ್ಪಾದನೆಯನ್ನೇ ತಾತ್ಕಾಲಿಕವಾಗಿ ಬಂದ್ ಮಾಡಿವೆ.

ಕೋವಿಡ್ ಸಂಕಷ್ಟ: ಧೀಡಿರ್ ಕುಸಿತ ಕಂಡ ಹೊಸ ವಾಹನಗಳ ಬುಕ್ಕಿಂಗ್ ಪ್ರಕ್ರಿಯೆ

ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ವಾಹನ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಹೊಸ ಸುರಕ್ಷಾ ಕ್ರಮಗಳೊಂದಿಗೆ ಕೆಲವೇ ಕೆಲವು ಕಂಪನಿಗಳು ಮಾತ್ರ ವಾಹನ ಉತ್ಪಾದನೆ ಕೈಗೊಳ್ಳುತ್ತಿವೆ.

ಕೋವಿಡ್ ಸಂಕಷ್ಟ: ಧೀಡಿರ್ ಕುಸಿತ ಕಂಡ ಹೊಸ ವಾಹನಗಳ ಬುಕ್ಕಿಂಗ್ ಪ್ರಕ್ರಿಯೆ

ಇದರ ನಡುವೆ ಹೊಸ ವಾಹನಗಳ ಖರೀದಿಗೆ ಬುಕ್ಕಿಂಗ್ ಸಲ್ಲಿಕೆ ತೀವ್ರ ಕಂಡಿರುವುದಲ್ಲದೆ ಈಗಾಗಲೇ ಬುಕ್ಕಿಂಗ್ ಸಲ್ಲಿಕೆ ಮಾಡಿದ್ದ ಲಕ್ಷಾಂತರ ಹೊಸ ವಾಹನ ಖರೀದಿದಾರರು ಈಗಾಗಲೇ ಮಾಡಲಾಗಿರುವ ಬುಕ್ಕಿಂಗ್ ಹಿಂಪಡೆಯುತ್ತಿದ್ದಾರೆ.

ಕೋವಿಡ್ ಸಂಕಷ್ಟ: ಧೀಡಿರ್ ಕುಸಿತ ಕಂಡ ಹೊಸ ವಾಹನಗಳ ಬುಕ್ಕಿಂಗ್ ಪ್ರಕ್ರಿಯೆ

ಸದ್ಯದ ಪರಿಸ್ಥಿತಿಯಲ್ಲಿ ಹೊಸ ವಾಹನ ಖರೀದಿಯು ಆರ್ಥಿಕ ಸಂಕಷ್ಟ ಇನ್ನಷ್ಟು ಹೆಚ್ಚಳವಾಗುವ ಭೀತಿಯಿಂದ ಹೊಸ ವಾಹನ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಈ ಪರಿಸ್ಥಿತಿ ಸುಧಾರಣೆಯಾಗಲು ಇನ್ನು ಕೆಲ ತಿಂಗಳುಗಳೇ ಬೇಕಾಗಬಹುದು ಎನ್ನಲಾಗುತ್ತಿದೆ.

ಕೋವಿಡ್ ಸಂಕಷ್ಟ: ಧೀಡಿರ್ ಕುಸಿತ ಕಂಡ ಹೊಸ ವಾಹನಗಳ ಬುಕ್ಕಿಂಗ್ ಪ್ರಕ್ರಿಯೆ

ಇನ್ನು ಕೋವಿಡ್ ಹೆಚ್ಚಿರುವುದರಿಂದ ವಾಹನ ಮಾರಾಟ ಮಳಿಗೆಗಳಿಗೆ ಗ್ರಾಹಕರ ನೇರ ಭೇಟಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಸುರಕ್ಷತೆಯ ದೃಷ್ಠಿಯಿಂದ ಆನ್‌ಲೈನ್ ಮೂಲಕ ಬುಕ್ಕಿಂಗ್ ಪ್ರಕ್ರಿಯೆ ನಡೆಸುವುದು ಮತ್ತು ಗ್ರಾಹಕರ ಮನೆ ಬಾಗಿಲಿಗೆ ಸುರಕ್ಷಾ ಕ್ರಮಗಳೊಂದಿಗೆ ವಾಹನಗಳ ವಿತರಣೆ ಮಾಡಲಾಗುತ್ತಿದೆ.

ಕೋವಿಡ್ ಸಂಕಷ್ಟ: ಧೀಡಿರ್ ಕುಸಿತ ಕಂಡ ಹೊಸ ವಾಹನಗಳ ಬುಕ್ಕಿಂಗ್ ಪ್ರಕ್ರಿಯೆ

ಇದೇ ಕಾರಣಕ್ಕೆ ಏಪ್ರಿಲ್ ಮತ್ತು ಮೇ ಅವಧಿಯಲ್ಲಿ ಹೊಸ ವಾಹನಗಳ ಬಿಡುಗಡೆಗೆ ಸಿದ್ದವಾಗಿದ್ದ ವಿವಿಧ ಆಟೋ ಕಂಪನಿಗಳು ಹೊಸ ಯೋಜನೆ ಮುಂದೂಡಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನಗಳ ಮಾರಾಟವನ್ನು ಸುಧಾರಿಸುವತ್ತ ಗಮನಹರಿಸಿವೆ.

ಕೋವಿಡ್ ಸಂಕಷ್ಟ: ಧೀಡಿರ್ ಕುಸಿತ ಕಂಡ ಹೊಸ ವಾಹನಗಳ ಬುಕ್ಕಿಂಗ್ ಪ್ರಕ್ರಿಯೆ

ಕೋವಿಡ್‌ನಿಂದಾಗಿ ಮುಂಜಾಗ್ರತ ಕ್ರಮವಾಗಿ ಲಭ್ಯವಿರುವ ಉದ್ಯೋಗಿಗಳೊಂದಿಗೆ ಡಿಜಿಟಲ್ ವ್ಯವಹಾರಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಸಂಕಷ್ಟ ಪರಿಸ್ಥಿತಿಯಲ್ಲಿ ಆಟೋ ಉದ್ಯಮಕ್ಕೆ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಸದ್ಯಕ್ಕೆ ಸಾಕಷ್ಟು ಸಹಕಾರಿಯಾಗುತ್ತಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕೋವಿಡ್ ಸಂಕಷ್ಟ: ಧೀಡಿರ್ ಕುಸಿತ ಕಂಡ ಹೊಸ ವಾಹನಗಳ ಬುಕ್ಕಿಂಗ್ ಪ್ರಕ್ರಿಯೆ

ಹೊಸ ವಾಹನಗಳ ಮಾರಾಟವು ಪರಿಸ್ಥಿತಿಗೆ ಅನುಗುಣವಾಗಿ ಏರಿಳಿಕೆ ಆಗುತ್ತಿದ್ದರೂ ಕರೋನಾ ವೈರಸ್ ಪರಿಣಾಮದಿಂದಾಗಿ ಭಾರೀ ಹಿನ್ನಡೆ ಅನುಭವಿಸಬೇಕಿದ್ದ ಆಟೋ ಕಂಪನಿಗಳಿಗೆ ವಾಹನಗಳ ಮಾರಾಟವನ್ನು ಸರಳ ಮತ್ತು ಸುರಕ್ಷಿತವಾಗಿಸಲು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳು ಸಾಕಷ್ಟು ಬಳಕೆಯಾಗುತ್ತಿವೆ.

ಕೋವಿಡ್ ಸಂಕಷ್ಟ: ಧೀಡಿರ್ ಕುಸಿತ ಕಂಡ ಹೊಸ ವಾಹನಗಳ ಬುಕ್ಕಿಂಗ್ ಪ್ರಕ್ರಿಯೆ

ಹೊಸ ವಾಹನ ಖರೀದಿಗಾಗಿ ಬಹುತೇಕ ಗ್ರಾಹಕರು ನೇರವಾಗಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡುವುದು ಸಾಮಾನ್ಯವಾಗಿರುತ್ತದೆ. ಆದರೆ ಕರೋನಾ ವೈರಸ್ ಪರಿಣಾಮ ಗ್ರಾಹಕರನ್ನು ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಖರೀದಿ ಪ್ರಕ್ರಿಯೆಯತ್ತ ಸೆಳೆಯಲು ಆಟೋ ಕಂಪನಿಗಳು ಕಳೆದ ವರ್ಷ ಮಾಡಿದ ಹೊಸ ಪ್ರಯತ್ನವು ಇದೀಗ ವಾಹನ ಮಾರಾಟಕ್ಕೆ ತುಸು ಪ್ರಯೋಜಕಾರಿಯಾಗುತ್ತಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಕೋವಿಡ್ ಸಂಕಷ್ಟ: ಧೀಡಿರ್ ಕುಸಿತ ಕಂಡ ಹೊಸ ವಾಹನಗಳ ಬುಕ್ಕಿಂಗ್ ಪ್ರಕ್ರಿಯೆ

ಕೋವಿಡ್ 19 ಹರಡುವಿಕೆಗೂ ಮೊದಲೇ ಹಲವಾರು ಆಟೋ ಕಂಪನಿಗಳು ಆನ್‌ಲೈನ್ ಪ್ಲ್ಯಾಟ್ ತೆರೆದಿದ್ದರೂ ಬಳಕೆದಾರರ ಸಂಖ್ಯೆಯು ತೀರಾ ವಿರಳವಾಗಿತ್ತು. ಆದರೆ ಕರೋನಾ ವೈರಸ್ ಹೆಚ್ಚಳವಾಗುತ್ತಿದ್ದಂತೆ ಸಾಮಾಜಿಕ ಅಂತರ ಯಾವಾಗ ಅಗತ್ಯವಾಯಿತೋ ಆಗಿನಿಂದ ವಾಹನ ಮಾರಾಟಕ್ಕಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳ ಬಳಕೆಯತ್ತ ಗ್ರಾಹಕರು ಒಲವು ತೋರುತ್ತಿದ್ದಾರೆ.

Article Published On: Tuesday, April 27, 2021, 10:55 [IST]
English summary
Bookings and enquiry for vehicles dropped significantly during second wave of Covid-19.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+