Just In
- 20 min ago
ಫೋಕ್ಸ್ವ್ಯಾಗನ್ ಐಡಿ.4 ಜಿಟಿಎಕ್ಸ್ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರಿನ ಟೀಸರ್ ಬಿಡುಗಡೆ
- 21 min ago
ಕೇವಲ 48 ನಿಮಿಷಗಳಲ್ಲಿ ಸೋಲ್ಡ್ ಔಟ್ ಆದ ಕೆಟಿಎಂ 1290 ಸೂಪರ್ ಡ್ಯೂಕ್ ಆರ್ಆರ್
- 2 hrs ago
ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ
- 2 hrs ago
ದುಬಾರಿ ಬೆಲೆಯ ಲ್ಯಾಂಡ್ ರೋವರ್ ಡಿಫೆಂಡರ್ ಎಸ್ಯುವಿ ಖರೀದಿಸಿದ ನಟ ಅರ್ಜುನ್ ಕಪೂರ್
Don't Miss!
- Sports
ಸ್ವಿಗ್ಗಿಯಿಂದ ರೋಹಿತ್ ಶರ್ಮಾಗೆ ಅವಮಾನ ; ಕಿಡಿಕಾರಿದ ಫ್ಯಾನ್ಸ್
- News
ಪುಟ್ಟೇನಹಳ್ಳಿ ಡಬಲ್ ಮರ್ಡರ್ : ಆರೋಪಿಗಳು ಅಂದರ್ ಆಗಿದ್ದೇ ಥ್ರಿಲ್ಲಿಂಗ್ !
- Lifestyle
ರಕ್ತದಲ್ಲಿ ಕಬ್ಬಿಣದಂಶ ಹೆಚ್ಚಾದರೆ ಆಯುಸ್ಸು ಕಡಿಮೆಯಾಗುವುದು
- Education
NEET PG Admit Card 2021: ನೀಟ್ ಪಿಜಿ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Finance
ಸುಮಾರು 5,550 ಕೋಟಿ ರು ಡಿವಿಡೆಂಡ್ ಘೋಷಿಸಿದ ಟಿಸಿಎಸ್
- Movies
'ಅಮಿತಾಭ್ ಮಗಳ ಪಾತ್ರ ಮಾಡ್ತಿದ್ದೇನೆ' ಎಂದಾಗ ರಶ್ಮಿಕಾ ಪೋಷಕರ ಪ್ರತಿಕ್ರಿಯೆ ಹೇಗಿತ್ತು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
ಜನಪ್ರಿಯ ವಾಹನ ತಯಾರಕ ಕಂಪನಿಯಾದ ಫೋಕ್ಸ್ವ್ಯಾಗನ್ ತನ್ನ ಹೊಸ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರನ್ನು ಅನಾವರಣಗೊಳಿಸಿದೆ. ಜಿಟಿಐ ಸರಣಿಯ ಆರನೇ ವಾರ್ಷಿಕೋತ್ಸವದ ಭಾಗವಾಗಿ ಲಿಮಿಟೆಡ್ ಎಡಿಷನ್ ಆಗಿ ಈ ಮಾದರಿಯನ್ನು ಪರಿಚಯಿಸಲಾಗುತ್ತದೆ.

ಫೋಕ್ಸ್ವ್ಯಾಗನ್ ಕಂಪನಿಯು 1996ರಿಂದ ಇಲ್ಲಿಯವರೆಗೂ ಪ್ರತಿ ಪ್ರತಿ ಐದು ವರ್ಷಗಳಿಗೊಮ್ಮೆ ಇದೇ ರೀತಿಯ ಲಿಮಿಟೆಡ್ ಎಡಿಷನ್ ಅನ್ನು ಪರಿಚಯಿಸುತ್ತಾರೆ. ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರಿನ ಮಾರಾಟವನ್ನು ಮುಂದಿನ ತಿಂಗಳು ಪ್ರಾರಂಭಿಸಬಹುದು. ಈ ಕಾರಿನಲ್ಲಿ 45 ಎಂಬ ಬ್ಯಾಡ್ಜ್ ಅನ್ನು ಹಲವು ಕಡೆಗಳಲ್ಲಿ ನೀಡಲಾಗಿದೆ.

ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರಿನಲ್ಲಿ 19-ಇಂಚಿನ 'ಸ್ಕಾಟ್ಸ್ಡೇಲ್' ಅಲಾಯ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಐಕಾನಿಕ್ ಜಿಟಿಐ ಮಾದರಿಗಳಿಗೆ ಗೌರವವಾಗಿ ರಿಮ್ನ ಸುತ್ತಲೂ ಕಿರಿದಾದ ಕೆಂಪು ಪಿನ್ಸ್ಟ್ರೈಪ್ ಅನ್ನು ನೀಡಿದೆ. ಸ್ಟೀಯರಿಂಗ್ ವ್ಹೀಲ್ ನಲ್ಲಿ 45 ಬ್ಯಾಡ್ಜ್ ಅನ್ನು ಆಳವಡಿಸಲಾಗಿದೆ.

ಈ ಕ್ಲಬ್ಸ್ಪೋರ್ಟ್ ಸ್ಪೆಷಲ್ ಎಡಿಷನ್ ನಲ್ಲಿ 2.0-ಲೀಟರ್, ನಾಲ್ಕು-ಸಿಲಿಂಡರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 300 ಬಿಹೆಚ್ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್ಯುವಿ300

ಇನ್ನು ಈ ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು ಕೇವಲ 5.6 ಸೆಕೆಂಡುಗಳಲ್ಲಿ 0 ದಿಂದ 100 ಕಿ,ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಈ ಕಾರು ವಿಶೇಷ ರೇಸ್ ಪ್ಯಾಕೇಜ್ನೊಂದಿಗೆ ಸ್ಟ್ಯಾಂಡರ್ಡ್ನಂತೆ ಸಜ್ಜುಗೊಂಡಿದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ

ಇದು ಇತರ ಜಿಟಿಐ ಮಾದರಿಗಳಲ್ಲಿ ಇದು ಲಭ್ಯವಿಲ್ಲ, ಅಕ್ರಾಪೊವಿಕ್ ಸ್ಪೋರ್ಟ್ಸ್ ಎಕ್ಸಾಸ್ಟ್ ಸಿಸ್ಟಂ ಅನ್ನು ತರುತ್ತದೆ. ಇನ್ನು ಈ ಕಾರಿನ ಟಾಪ್ ಸ್ಪೀಡ್ ಅನ್ನು ಗಂಟೆಗೆ 250 ಕಿ.ಮೀ.ಗೆ ಸೀಮಿತಗೊಳಿಸಿದ್ದಾರೆ. ಈ ಜಿಟಿಐ ಕ್ಲಬ್ಸ್ಪೋರ್ಟ್ ಕಾರಿನ ಟಾಪ್-ವೆರಿಯೆಂಟ್ ನಲ್ಲಿ ಎಲ್ಇಡಿ ಮ್ಯಾಟ್ರಿಕ್ಸ್ ಹೆಡ್ಲೈಟ್ಗಳನ್ನು ಅನ್ನು ಅಳವಡಿಸಿದ್ದಾರೆ.

ಇನ್ನು ಭಾರತೀಯ ಮಾರುಕಟ್ಟೆಗೆ ಸಂಬಂದಿಸಿದಂತೆ, ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್ವ್ಯಾಗನ್ ತನ್ನ ಹೊಸ ಟಿಗ್ವಾನ್ ಫೇಸ್ಲಿಫ್ಟ್ ಎಸ್ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಟಿಗ್ವಾನ್ ಎಸ್ಯುವಿಯು ಭಾರತದಲ್ಲಿ ಹೊಸ ಅವತಾರದಲ್ಲಿ ಬಿಡುಗಡೆಯಾಗಲಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಫೋಕ್ಸ್ವ್ಯಾಗನ್ ಕಂಪನಿ ಈ ಹೊಸ ಟಿಗ್ವಾನ್ 5 ಸೀಟರ್ ಅನ್ನು ಇದೇ ತಿಂಗಳಲ್ಲಿ ಬಿಡುಗಡೆಗೊಳಿಸಲಿದೆ ಎಂದು ವರದಿಯಾಗಿದೆ. ಟಿಗ್ವಾನ್ ಫೇಸ್ಲಿಫ್ಟ್ ಅನ್ನು 2020ರಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಧಿಕೃತವಾಅನಾವರಣಗೊಳಿಸಲಾಯಿತು. ಹಿಂದಿನ ಮಾದರಿ ಟಿಗ್ವಾನ್ ಎಸ್ಯುವಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದಾಗ 6 ದಶಲಕ್ಷಕ್ಕೂ ಹೆಚ್ಚಿನ ಯುನಿಟ್ ಗಳು ಮಾರಾಟವಾಗಿತ್ತು.

ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರನ್ನು ಭಾರತೀಯ ಮಾರುಕಟೆಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿಲ್ಲ. ಆದರೆ ಮುಂದಿನ ತಿಂಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೀಮಿತ ಸಂಖ್ಯೆಯಲ್ಲಿ ಈ ಸ್ಪೆಷಲ್ ಎಡಿಷನ್ ಅನ್ನು ಮಾರಟಗೊಳಿಸಲಾಗುತದೆ.