ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಪೊಲೊ

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ಕಮ್ಫನಿಯು ಭಾರತೀಯ ಮಾರುಕಟ್ಟೆಯಲ್ಲಿ ಅಟ್ಲಾಸ್ ಕ್ರಾಸ್ ಮತ್ತು ಟೈಗನ್ ಎಸ್‍ಯುವಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಿದೆ. ಇನ್ನು ಹೊಸ ತಲೆಮಾರಿನ ವೆಂಟೊ ಸೆಡಾನ್ ಅನ್ನು ಈ ವರ್ಷದ ಅಂತ್ಯದ ಮೊದಲು ಬಿಡುಗಡೆ ಮಾಡಲಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಪೊಲೊ

ಇದರ ನಡುವೆ ಕುತೂಹಲಕಾರಿಯಾಗಿ, ಹೊಸ ಫೋಕ್ಸ್‌ವ್ಯಾಗನ್ ಪೊಲೊ ಹ್ಯಾಚ್‌ಬ್ಯಾಕ್ ಅನ್ನು ಭಾರತೀಯ ಮಾರುಕಟ್ಟೆಗಾಗಿ ಸಿದ್ಧಪಡಿಸುತ್ತಿದೆ. ಇದು ಪ್ರಸ್ತುತ ಪೊಲೊ ಹ್ಯಾಚ್‌ಬ್ಯಾಕ್ ಗಿಂತ ಹಲವು ಬದಲಾವಣೆಗಳೊಂದಿಗೆ ಬಿಡುಗಡೆಯಾಗುತ್ತದೆ ಎಂದು ವರದಿಯಾಗಿದೆ. ಇದು ಸುಮಾರು 10 ವರ್ಷಗಳ ಬಳಿಕ ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ. ನ್ಯೂ ಜನರೇಷನ್ ಫೋಕ್ಸ್‌ವ್ಯಾಗನ್ ಪೊಲೊ ಎಂಕ್ಯೂಬಿ ಎಒ ಇನ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಪೊಲೊ

ಫೋಕ್ಸ್‌ವ್ಯಾಗನ್ ಮೊದಲು 2017 ರಲ್ಲಿ ಪರಿಚಯಿಸಲಾದ ಗ್ಲೋಬಲ್-ಸ್ಪೆಕ್ ಪೊಲೊ ಹ್ಯಾಚ್‌ಬ್ಯಾಕ್ ಅನ್ನು ಅಪ್‌ಗ್ರೇಡ್ ಮಾಡುತ್ತದೆ. ಹೊಸ ಮಾದರಿಯು ಗಮನಾರ್ಹವಾದ ವಿನ್ಯಾಸ ಬದಲಾವಣೆಗಳನ್ನು ಮತ್ತು ಹೊಸ ಎಂಜಿನ್‌ಗಳ ಜೊತೆಗೆ ನವೀಕರಿಸಿದ ಕ್ಯಾಬಿನ್ ಅನ್ನು ಸ್ವೀಕರಿಸುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಪೊಲೊ

ನ್ಯೂ ಜನರೇಷನ್ ಫೋಕ್ಸ್‌ವ್ಯಾಗನ್ ಪೊಲೊ ಹ್ಯಾಚ್‌ಬ್ಯಾಕ್ ಲೀಟರ್ 3-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಪಡೆಯುವ ಸಾಧ್ಯತೆಯಿದೆ. ಈ ಎಂಜಿನ್ 110 ಬಿಹೆಚ್‌ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಪೊಲೊ

ಪರ್ಫಾಮೆನ್ಸ್-ಆಧಾರಿತ ವೆರಿಯೆಂಟ್ 1.5-ಲೀಟರ್, 4-ಸಿಲಿಂಡರ್ ಎಂಜಿನ್ ಅನ್ನು ಸ್ವೀಕರಿಸುವ ಸಾಧ್ಯತೆಯಿದೆ. ಈ ಎಂಜಿನ್ ಎರಡು ರೀತಿಯಲ್ಲಿ ಟ್ಯೂನ್ ಮಾಡಲಾಗುತ್ತದೆ. ಒಂದು 131 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, ಇನ್ನೊಂದು 150 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: 2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಪೊಲೊ

ಹೊಸ ಎಂಜಿನ್‌ಗಳು ಮೈಲ್ಡ್-ಹೈಬ್ರಿಡ್ ಸಿಸ್ಟಂನ ಪ್ರಯೋಜನ ಪಡೆಯಬಹುದು, ಇದು ಬೆಲ್ಟ್-ಚಾಲಿತ ಸ್ಟಾರ್ಟರ್-ಆವರ್ತಕವನ್ನು ಹೊಂದಿರುವ 48ವಿ ಲಿ-ಅಯಾನ್ ಬ್ಯಾಟರಿಯನ್ನು ಒಳಗೊಂಡಿರುತ್ತದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಪೊಲೊ

ಮಾರುಕಟ್ಟೆಯಲ್ಲಿರುವ ಫೋಕ್ಸ್‌ವ್ಯಾಗನ್ ಪೊಲೊ ಹ್ಯಾಚ್‌ಬ್ಯಾಕ್ 1.0 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 110 ಬಿಹೆಚ್‍ಪಿ ಪವರ್ ಮತ್ತು 175 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲ್ಪಟ್ಟಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಪೊಲೊ

ಟಾಪ್-ಸ್ಪೆಕ್ ಮಾದರಿಯು 1.0 ಎಲ್ ಟರ್ಬೋಚಾರ್ಜ್ಡ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನಾವಾಟರ್ ಆಗಿ ಇರುತ್ತದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಪೊಲೊ

ಹೊಸ ಫೋಕ್ಸ್‌ವ್ಯಾಗನ್ ಪೊಲೊ ಇಂಟಿರಿಯರ್ ಮತ್ತು ಫೀಚರ್ ಗಳು ಮುಂಬರುವ ಟೈಗನ್ ಮಿಡ್ ಎಸ್‍ಯುವಿ ಮತ್ತು ಹೊಸ ವೆಂಟೊ ಸೆಡಾನ್ ನೊಂದಿಗೆ ಹಂಚಿಕೊಳ್ಳುವ ನಿರೀಕ್ಷೆಯಿದೆ. ಇದು ವೋಕ್ಸ್‌ವ್ಯಾಗನ್‌ಗೆ ಅದರ ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಹೊಸ ಫೋಕ್ಸ್‌ವ್ಯಾಗನ್ ಪೊಲೊ 2022 ರಲ್ಲಿ ಪರಿಚಯಿಸಲಾಗುವುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
Next-Gen Volkswagen Polo In The Works For India. Read In Kannada.
Story first published: Monday, January 18, 2021, 20:09 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X