ಹೊಸ ವಿನ್ಯಾಸದಲ್ಲಿ ಅನಾವರಣಗೊಂಡ ಫೋಕ್ಸ್‌ವ್ಯಾಗನ್ ಪೊಲೊ ಫೇಸ್‌ಲಿಫ್ಟ್ ಕಾರು

ಜನಪ್ರಿಯ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ ಫೇಸ್‌ಲಿಫ್ಟೆಡ್ ಪೊಲೊ ಕಾರನ್ನು ಅನಾವರಣಗೊಳಿಸಿದೆ. ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಆರನೇ ತಲೆಮಾರಿನ ಮಾದರಿಯು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿದೆ.

ಹೊಸ ವಿನ್ಯಾಸದಲ್ಲಿ ಅನಾವರಣಗೊಂಡ ಫೋಕ್ಸ್‌ವ್ಯಾಗನ್ ಪೊಲೊ ಫೇಸ್‌ಲಿಫ್ಟ್ ಕಾರು

ಹೊಸ ಪೊಲೊ ಫೇಸ್‌ಲಿಫ್ಟ್ ಕಾರಿನ ಹೊರ ಭಾಗದಲ್ಲಿ ಮತ್ತು ಒಳಭಾಗದಲ್ಲಿ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದೆ. ಈ ಹೊಸ ಪೊಲೊ ಎಂಕ್ಯೂಬಿ ಎಒ ಪ್ಲಾಟ್ ಫಾರ್ಮ್ ಅನ್ನು ಆಧರಿಸಿದೆ. ಇದೇ ಪ್ಲಾಟ್ ಫಾರ್ಮ್ ಅಡಿಯಲ್ಲಿ ನ್ಯೂ ಜನರೇಷನ್ ಸ್ಕೋಡಾ ಫ್ಯಾಬಿಯಾ ಕಾರನ್ನು ಉತ್ಪಾದಿಸಲಾಗುತ್ತದೆ. ಇನ್ನು 2021ರ ಫೋಕ್ಸ್‌ವ್ಯಾಗನ್ ಪೊಲೊ ದೊಡ್ಡ ಗಾಲ್ಫ್ ಮಾದರಿಯ ವಿನ್ಯಾಸದೊಂದಿಗೆ ಹೋಲುವಂತಿದೆ.

ಹೊಸ ವಿನ್ಯಾಸದಲ್ಲಿ ಅನಾವರಣಗೊಂಡ ಫೋಕ್ಸ್‌ವ್ಯಾಗನ್ ಪೊಲೊ ಫೇಸ್‌ಲಿಫ್ಟ್ ಕಾರು

ಫೇಸ್‌ಲಿಫ್ಟೆಡ್ ಟಿಗ್ವಾನ್ ಮತ್ತು ಗಾಲ್ಫ್‌ನಂತೆ ಇದು ಹೊಸ ಎಲ್‌ಇಡಿ ಲೈಟಿಂಗ್ ಬಾರ್ ಅನ್ನು ಪಡೆಯುತ್ತದೆ ಮತ್ತು ಸ್ಟ್ಯಾಂಡರ್ಡ್ ಎಲ್ಇಡಿ ಕಿರಣಗಳೊಂದಿಗೆ ಹೆಡ್‌ಲ್ಯಾಂಪ್‌ಗಳು ಮೊದಲಿಗಿಂತ ತೀಕ್ಷ್ಣವಾಗಿವೆ. ಹೈ-ಎಂಡ್ ರೂಪಾಂತರಗಳು ಮೊದಲ ಬಾರಿಗೆ ಮ್ಯಾಟ್ರಿಕ್ಸ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ವಿನ್ಯಾಸದಲ್ಲಿ ಅನಾವರಣಗೊಂಡ ಫೋಕ್ಸ್‌ವ್ಯಾಗನ್ ಪೊಲೊ ಫೇಸ್‌ಲಿಫ್ಟ್ ಕಾರು

ಹೊಸದಾಗಿ ವಿನ್ಯಾಸಗೊಳಿಸಲಾದ ಅಲಾಯ್ ವ್ಹೀಲ್‌ಗಳು ಪ್ಯಾಕೇಜಿನ ಭಾಗವಾಗಿದೆ. ಹಿಂಭಾಗದಲ್ಲಿ, ನವೀಕರಿಸಿದ ವಿಡಬ್ಲ್ಯೂ ಗಾಲ್ಫ್‌ ಮಾದರಿಯಲ್ಲಿರುವಂತೆ ಸಿ-ಆಕಾರದ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಮರುವಿನ್ಯಾಸಗೊಳಿಸಿದೆ.

ಹೊಸ ವಿನ್ಯಾಸದಲ್ಲಿ ಅನಾವರಣಗೊಂಡ ಫೋಕ್ಸ್‌ವ್ಯಾಗನ್ ಪೊಲೊ ಫೇಸ್‌ಲಿಫ್ಟ್ ಕಾರು

ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನಲ್ಲಿ ಪೋಲೊ ಬ್ಯಾಡ್ಜ್ ಅನ್ನು ಟೈಲ್‌ಗೇಟ್‌ನ ಮಧ್ಯದಲ್ಲಿ ಇರಿಸಲಾಗಿದೆ. ಆರ್-ಲೈನ್ ಟ್ರಿಮ್ 16 ಇಂಚಿನ ವ್ಹೀಲ್ ಗಳು ಮತ್ತು ಎಕ್ಸಾಸ್ಟ್ ಪೈಪ್ ಗಳನ್ನು ಒಳಗೊಂಡಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ವಿನ್ಯಾಸದಲ್ಲಿ ಅನಾವರಣಗೊಂಡ ಫೋಕ್ಸ್‌ವ್ಯಾಗನ್ ಪೊಲೊ ಫೇಸ್‌ಲಿಫ್ಟ್ ಕಾರು

ಇನ್ನು ಹೊಸ ಪೊಲೊ ಕಾರಿನ ಕ್ಯಾಬಿನ್‌ನಲ್ಲಿ 9.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಆಲ್-ಡಿಜಿಟಲ್ 10.25-ಇಂಚಿನ ಡ್ರೈವರ್ ಡಿಸ್ ಪ್ಲೇ ಮತ್ತು ಆರ್ಟಿಯಾನ್‌ನಲ್ಲಿರುವಂತೆ ಟಚ್ ಕ್ಲೈಮೇಂಟ್ ಕಂಟ್ರೋಲ್ ಅನ್ನು ಹೊಂದಿದೆ.

ಹೊಸ ವಿನ್ಯಾಸದಲ್ಲಿ ಅನಾವರಣಗೊಂಡ ಫೋಕ್ಸ್‌ವ್ಯಾಗನ್ ಪೊಲೊ ಫೇಸ್‌ಲಿಫ್ಟ್ ಕಾರು

ಕಾರ್ಯಕ್ಷಮತೆಗೆ ಸಂಬಂಧಿಸಿದಂತೆ ಈ ಹೊಸ ಕಾರಿನಲ್ಲಿ 1.0-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 80 ಬಿಹೆಚ್‍ಪಿ ಪವರ್ ಮತ್ತು 93 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ 5-ಸ್ಪೀಡ್ ಎಂಟಿ ಜೊತೆ ಜೋಡಿಸಲ್ಪಟ್ಟಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಹೊಸ ವಿನ್ಯಾಸದಲ್ಲಿ ಅನಾವರಣಗೊಂಡ ಫೋಕ್ಸ್‌ವ್ಯಾಗನ್ ಪೊಲೊ ಫೇಸ್‌ಲಿಫ್ಟ್ ಕಾರು

ಇನ್ನು 1.0-ಲೀಟರ್ ಟಿಎಸ್ಐ ಎಂಜಿನ್ ಅನ್ನು ನೀಡಲಾಗಿದೆ. ಈ ಎಂಜಿನ್ 95 ಅಥವಾ 110 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಪೊಲೊ ಕಾರಿನಲ್ಲಿ ಡೀಸೆಲ್ ಎಂಜಿನ್ ಅನ್ನು ನೀಡಲಾಗಿಲ್ಲ.

ಹೊಸ ವಿನ್ಯಾಸದಲ್ಲಿ ಅನಾವರಣಗೊಂಡ ಫೋಕ್ಸ್‌ವ್ಯಾಗನ್ ಪೊಲೊ ಫೇಸ್‌ಲಿಫ್ಟ್ ಕಾರು

ಇನ್ನು ಸಿಎನ್‌ಜಿ ಚಾಲಿತ 1.0 ಟಿಜಿಐ 90 ಬಿಹೆಚ್‍ಪಿ ಪವರ್ ಮತ್ತು 160 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಕಾರ್ಯಕ್ಷಮತೆ-ಸ್ಪೆಕ್ ಜಿಟಿಐ ಮಾಹಿತಿಗಳನ್ನು ನಂತರ ಘೋಷಿಸಬಹುದು. ಆದರೆ ಜಿಟಿಐ ಮಾದರಿಯಲ್ಲಿ 2.0 ಲೀಟರ್ ನಾಲ್ಕು-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಹೊಸ ವಿನ್ಯಾಸದಲ್ಲಿ ಅನಾವರಣಗೊಂಡ ಫೋಕ್ಸ್‌ವ್ಯಾಗನ್ ಪೊಲೊ ಫೇಸ್‌ಲಿಫ್ಟ್ ಕಾರು

ಈ ಎಂಜಿನ್ 200 ಬಿಹೆಚ್‍ಪಿ ಪವರ್ ಉತ್ಪಾದನೆ ಮುಂದುವರೆತ್ತದೆ ಎಂದು ನಿರೀಕ್ಷಿಸುತ್ತೇವೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಸ್ಟ್ಯಾಂಡರ್ಡ್ ಅಥವಾ ಏಳು-ಸ್ಪೀಡ್ ಡಿಎಸ್‌ಜಿಯನ್ನು ಜೋಡಿಸಬಹುದು.

More from DriveSpark

Article Published On: Thursday, April 22, 2021, 12:19 [IST]
English summary
2021 Volkswagen Polo Facelift Unveiled With Updates Inside And Out. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+