ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆಗೊಳಿಸಿದ ಫೋಕ್ಸ್‌ವ್ಯಾಗನ್

ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಚಿತ್ರಗಳನ್ನು ಬಿಡುಗಡೆಗೊಳಿಸಿವೆ.

ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆಗೊಳಿಸಿದ ಫೋಕ್ಸ್‌ವ್ಯಾಗನ್

ಟೀಸರ್ ಚಿತ್ರಗಳಲ್ಲಿ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ವಿವಿಧ ಸ್ಟೈಲಿಂಗ್ ಮತ್ತು ವಿನ್ಯಾಸ ಅಂಶಗಳನ್ನು ಪ್ರದರ್ಶಿಸಿದ್ದಾರೆ. ಫೋಕ್ಸ್‌ವ್ಯಾಗನ್ ಕಂಪನಿಯು ಈ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿದ್ದರು. ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯು ಭಾರತದಲ್ಲಿ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಫೋಕ್ಸ್‌ವ್ಯಾಗನ್ 2.0 ಯೋಜನೆಯಡಿಯಲ್ಲಿ ಬಿಡುಗಡೆಯಾಗಲಿರುವ ಮೊದಲ ಮಾದರಿ ಟೈಗನ್ ಆಗಿರಲಿದೆ.

ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆಗೊಳಿಸಿದ ಫೋಕ್ಸ್‌ವ್ಯಾಗನ್

ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಟಿಎಸ್ಐ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ ಎಂದು ಫೋಕ್ಸ್‌ವ್ಯಾಗನ್ ಬಹಿರಂಗಪಡಿಸಲಾಗಿದೆ. ಟಿ-ರಾಕ್ ಮಾದರಿಯಲ್ಲಿ ಕಂಡುಬರುವಂತಹ ಲೀಟರ್ 1.5 ಲೀಟರ್ ಅಥವಾ 1.0-ಲೀಟರ್ ಲೀಟರ್ ಎಂಬ ಮಾಹಿತಿಯನ್ನು ಕಂಪನಿಯು ಬಹಿರಂಗಪಡಿಸಿಲ್ಲ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆಗೊಳಿಸಿದ ಫೋಕ್ಸ್‌ವ್ಯಾಗನ್

ಇದರಲ್ಲಿ 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 148 ಬಿಹೆಚ್‍ಪಿ ಪವರ್ ಮತ್ತು 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆಗೊಳಿಸಿದ ಫೋಕ್ಸ್‌ವ್ಯಾಗನ್

ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಹೆಸರನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. ಈ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆಗೊಳಿಸಿದ ಫೋಕ್ಸ್‌ವ್ಯಾಗನ್

ಹೊಸ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯ ವಿನ್ಯಾಸವು ಟಿ-ಕ್ರಾಸ್ ಎಸ್‍ಯುವಿಗೆ ಹೋಲುತ್ತದೆ. ಮುಂಭಾಗದಲ್ಲಿ ಸಾಕಷ್ಟು ಪ್ರಮಾಣದ ಕ್ರೋಮ್ ಅನ್ನು ಬಳಸಲಾಗುತ್ತದೆ ಗ್ರಿಲ್ ಕ್ರೋಮ್ ಅಲಂಕರಿಸುವಿಕೆಯೊಂದಿಗೆ ಸ್ಲ್ಯಾಟ್‌ಗಳನ್ನು ಪಡೆಯುತ್ತದೆ.

ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆಗೊಳಿಸಿದ ಫೋಕ್ಸ್‌ವ್ಯಾಗನ್

ಹೆಡ್‌ಲ್ಯಾಂಪ್‌ಗಳು ನಯವಾದ ಯುನಿಟ್ ಗಳಾಗಿವೆ ಮತ್ತು ಗ್ರಿಲ್‌ನ ವಿಸ್ತೃತ ಭಾಗದಂತೆ ಕಾಣುತ್ತವೆ. ಫಾಗ್ ಲ್ಯಾಂಪ್ ಗಳ ಸುತ್ತ ಕ್ರೋಮ್ ಸ್ಟ್ರಿಪ್ ಇದೆ ಮತ್ತು ಸ್ಕಿಡ್ ಪ್ಲೇಟ್ ಇದಕ್ಕೆ ಬಹಳ ಮಸ್ಕಲರ್ ನಿಲುವನ್ನು ನೀಡುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆಗೊಳಿಸಿದ ಫೋಕ್ಸ್‌ವ್ಯಾಗನ್

ಇನ್ನು ಎಸ್‍ಯುವಿಯ ಹಿಂಭಾಗದ ಬಗ್ಗೆ ಹೇಳುವುದಾದರೆ, ಅನನ್ಯವಾಗಿ ವಿನ್ಯಾಸಗೊಳಿಸಲಾದ ಟೈಲ್ ಲ್ಯಾಂಪ್ ಅನ್ನು ಹೊಂದಿದೆ. ಇದು ಆಲ್-ಎಲ್ಇಡಿ ಆಗಿದ್ದು, ಅದು ಬೂಟ್‌ನಾದ್ಯಂತ ಚಲಿಸುತ್ತದೆ. ಮಧ್ಯದಲ್ಲಿ ಫೋಕ್ಸ್‌ವ್ಯಾಗನ್ ಲೋಗೋವನ್ನು ಇರಿಸಲಾಗಿದೆ.

ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆಗೊಳಿಸಿದ ಫೋಕ್ಸ್‌ವ್ಯಾಗನ್

ಮುಂಭಾಗದಲ್ಲಿರುವಂತೆಯೇ, ಹಿಂಭಾಗದಲ್ಲಿ ಸ್ಕಿಡ್ ಪ್ಲೇಟ್ ಮತ್ತು ಅದರ ಮೇಲೆ ಕ್ರೋಮ್ ಅಲಂಕರಿಸುವ ಬಂಪರ್ ಹೊಂದಿದೆ. ಇನ್ನು ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಈ ವಿಭಾಗದ ಕಾರುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಆಧುನಿಕ ಫಿಚರ್ ಗಳೊಂದಿಗೆ ಪ್ರೀಮಿಯಂ ಕಾಣುವ ಕ್ಯಾಬಿನ್ ಪಡೆಯುವ ನಿರೀಕ್ಷೆಯಿದೆ.

ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆಗೊಳಿಸಿದ ಫೋಕ್ಸ್‌ವ್ಯಾಗನ್

ಇದರಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಎಲೆಕ್ಟ್ರಿಕ್ ಸನ್‌ರೂಫ್, ಮಲ್ಟಿ ಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಮುಂತಾದ ಫೀಚರ್ ಗಳನ್ನು ಹೊಂದಿರಲಿದೆ.

ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆಗೊಳಿಸಿದ ಫೋಕ್ಸ್‌ವ್ಯಾಗನ್

ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ ಎಂಕ್ಯೂಬಿ ಎಒ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ ಮತ್ತು ಈ ಪ್ಲಾಟ್‌ಫಾರ್ಮ್ ಪಡೆದ ಭಾರತದ ಮೊದಲ ವಾಹನವಾಗಿದೆ. ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.

Article Published On: Wednesday, January 6, 2021, 12:13 [IST]
English summary
Volkswagen Taigun Teased Again On Social Media. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+