Just In
- 5 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 7 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 8 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 9 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಫೋಕ್ಸ್ವ್ಯಾಗನ್ ಟಿಗ್ವಾನ್ ಫೇಸ್ಲಿಫ್ಟ್ ಎಸ್ಯುವಿ
ಜರ್ಮನಿ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್ವ್ಯಾಗನ್ ತನ್ನ ಟಿಗ್ವಾನ್ ಫೇಸ್ಲಿಫ್ಟ್ ಎಸ್ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಹೊಸ ಫೋಕ್ಸ್ವ್ಯಾಗನ್ ಟಿಗ್ವಾನ್ ಫೇಸ್ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಎಸ್ಯುವಿಗಳಲ್ಲಿ ಒಂದಾಗಿದೆ.
ಅಧಿಕೃತ ಬಿಡುಗಡೆಗೂ ಮುನ್ನ ಫೋಕ್ಸ್ವ್ಯಾಗನ್ ವೆಬ್ಸೈಟ್ನಲ್ಲಿ ಟಿಗ್ವಾನ್ ಫೇಸ್ಲಿಫ್ಟ್ ಎಸ್ಯುವಿಯ ಹೆಸರನ್ನು ಪಟ್ಟಿಮಾಡಿದೆ. ಇನ್ನು ಈ ಟಿಗ್ವಾನ್ ಎಸ್ಯುವಿಯು ಭಾರತೀಯ ಮಾರುಕಟ್ಟೆಗೆ ಹೊಸದಲ್ಲ, ಈ ಹಿಂದೆ ಮಾರಾಟದಲ್ಲಿತ್ತು. ಆದರೆ ಇದೀಗ ಫೋಕ್ಸ್ವ್ಯಾಗನ್ ಕಂಪನಿಯು ಟಿಗ್ವಾನ್ ಎಸ್ಯುವಿಯನ್ನು ಹೊಸ ಅವತಾರದಲ್ಲಿ ಪರಿಚಯಿಸಿದೆ. ಟಿಗ್ವಾನ್ ಎಸ್ಯುವಿ ಎಲ್ಲಾ ಹೊಸ ವಿನ್ಯಾಸ, ನೂತನ ವೈಶಿಷ್ಟ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಹೊಸ ಎಂಜಿನ್ ಅನ್ನು ಪಡೆದುಕೊಂಡಿದೆ.
ಹೊಸ ಟಿಗ್ವಾನ್ ವಿನ್ಯಾಸದ ಬಗ್ಗೆ ಹೇಳುವುದಾದರೆ, ಸ್ವಲ್ಪ ಇದು ದೇಶದಲ್ಲಿ ಮಾರಾಟವಾಗಿದ್ದ ಅದರ ಹಿಂದಿನ ಮಾದರಿಗೆ ಸ್ವಲ್ಪ ಹೋಲುತ್ತದೆ. ಆದರೆ ಕೆಲವು ಟ್ವೀಕ್ಗಳಿವೆ.ಇನ್ನು ಈ ಹೊಸ ಫೋಕ್ಸ್ವ್ಯಾಗನ್ ಟಿಗ್ವಾನ್ ಎಸ್ಯುವಿ ನಯವಾದ ಹೆಡ್ಲ್ಯಾಂಪ್ಗಳನ್ನು ಒಳಗೊಂಡಿದೆ. ಅದು ಈಗ ಎಲ್ಇಡಿ ಮ್ಯಾಟ್ರಿಕ್ಸ್ ತಂತ್ರಜ್ಞಾನವನ್ನು ಹೊಂದಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್ಯುವಿ300
ಕ್ರೋಮ್ನ ಫಿನಿಶಿಂಗ್ ಗ್ರಿಲ್ ಮತ್ತು ಮರುವಿನ್ಯಾಸಗೊಳಿಸಲಾದ ಬಂಪರ್ ಮತ್ತು ಏರ್ ಟೆಕ್ ಅನ್ನು ಒಳಗೊಂಡಿದೆ. ಬಂಪರ್ ಮೇಲೆ ಇರಿಸಲಾಗಿರುವ ಮುಂಭಾಗದ ಸೆನ್ಸಾರ್ ಗಳನ್ನು ಹೊಂದಿದೆ. ಹೊಸ ಟಿಗ್ವಾನ್ ವಿನ್ಯಾಸದ ವಿಷಯದಲ್ಲಿ ಹೆಚ್ಚು ಬದಲಾವಣೆಗಳನ್ನು ಕಂಡು ಬಂದಿಲ್ಲ.. ಆದರೆ ಇದು ವಿಡಬ್ಲ್ಯೂ ಮಾದರಿಗಳಿಗೆ ವಿಶಿಷ್ಟವಾಗಿದೆ. ಹೊಸ ಟಿಗ್ವಾನ್ ಈಗ 18 ಇಂಚಿನ ಅಲಾಯ್ ವ್ಹೀಲ್ಗಾಗಿ ಹೊಸ ವಿನ್ಯಾಸವನ್ನು ಹೊಂದಿದೆ.
ಇನ್ನು ಕ್ರೋಮ್ ಫಿನಿಶಿಂಗ್ ಹೊಂದಿರುವ ವಿಂಡೋ ಲೈನ್ ಇದರ ಪ್ರೀಮಿಯಂ ಲುಕ್ ಅನ್ನು ಹೆಚ್ಚಿಸುತ್ತದೆ.ಇದು ಹೊಸ ಎಸ್ಯುವಿಯು ತನ್ನ ಏಳು ಸೀಟುಗಳ ಟಿಗ್ವಾನ್ ಆಲ್ಸ್ಪೇಸ್ಗೆ ಹೋಲುತ್ತದೆ. ಇದು ಸ್ಪ್ಲಿಟ್-ಸ್ಟೈಲ್ ಎಲ್ಇಡಿ ಹೆಡ್ಲ್ಯಾಂಪ್ಗಳು, ಬಂಪರ್ನಲ್ಲಿ ಕ್ರೋಮ್ ಅಸ್ಸೆಂಟ್ ಗಳು, ದೊಡ್ಡ ಪ್ರತಿಫಲಿತ ಸ್ಟ್ರಿಪ್ ಮತ್ತು ಬೂಟ್ ಲಿಡ್ ಮಧ್ಯದಲ್ಲಿ ಇರಿಸಲಾಗಿರುವ ವಿಡಬ್ಲ್ಯೂ ಬ್ಯಾಡ್ಜ್ ಅನ್ನು ಒಳಗೊಂಡಿದೆ.
MOST READ: ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ
ಇನ್ನು ಶಾರ್ಕ್ ಫಿನ್ ಆಂಟೆನಾ, ಸಿಲ್ವರ್-ಫಿನಿಶ್ಡ್ ರೂಫ್-ರೈಲ್ ಮತ್ತು ಸಂಯೋಜಿತ ರೂಫ್ ಸ್ಪಾಯ್ಲರ್ ಹೊಂದಿದೆ. ಟಿಗ್ವಾನ್ ಆಲ್ಸ್ಪೇಸ್ನಂತೆಯೇ ಇದರ ಕ್ಯಾಬಿನ್ ವಿನ್ಯಾಸವನ್ನು ಕೂಡ ನೋಡಬಹುದು.
ಇದರ ಇಂಟಿರಿಯರ್ ನಲ್ಲಿ ಕ್ಲೈಮೇಂಟ್ ಕಂಟ್ರೋಲ್ ಗಾಗಿ ಟಚ್ ಪ್ಯಾನಲ್ ಸೇರಿದಂತೆ ಒಂದೆರಡು ಹೊಸ ವೈಶಿಷ್ಟ್ಯಗಳನ್ನು ಸೇರಿಸಲಾಗಿದೆ. ಇದರೊಂದಿಗೆ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕನೆಕ್ಟ್ ಆಗಿರುವ 8 ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು
ಇನ್ನು ಇದರಲ್ಲಿ ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಸ್ಕಫ್ ಪ್ಲೇಟ್ಗಳು, ಪನೋರಮಿಕ್ ಸನ್ರೂಫ್ ಮತ್ತು 30 ಮಾದರಿಯ ಅಂಬೈಟ್ ಲೈಟ್ ಗಳನ್ನು ಹೊಂದಿವೆ.
ಹೊಸ ಟಿಗ್ವಾನ್ ಹಿಂಭಾಗದಲ್ಲಿ ಎಸಿ ವೆಂಟ್ಸ್, ವೈರ್ಲೆಸ್ ಮೊಬೈಲ್ ಚಾರ್ಜಿಂಗ್ ಜೊತೆಗೆ ಅನೇಕ ಯುಎಸ್ಬಿ ಸ್ಲಾಟ್ಗಳು, ಕೂಲ್ಡ್ ಗ್ಲೋವ್ಬಾಕ್ಸ್ ಮತ್ತು ಬಳಕೆಯ ಸುಲಭವಾದ ಕನೆಕ್ಟಿವಿಟಿ ಹೊಂದಿರುವ ತಂತ್ರಜ್ಞಾನದವನ್ನು ಹೊಂದಿದೆ.
ಫೋಕ್ಸ್ವ್ಯಾಗನ್ ಟಿಗ್ವಾನ್ ಎಸ್ಯುವಿಯಲ್ಲಿ ಸುರಕ್ಷತೆಗಾಗಿ, ಆರು ಏರ್ಬ್ಯಾಗ್ಗಳು, ಎಬಿಎಸ್, ಇಎಸ್ಪಿ, (ಎಎಸ್ಆರ್) ಆಂಟಿ-ಸ್ಪಿಲ್ ಕಂಟ್ರೋಲ್, ಆಟೋ-ಹೋಲ್ಡ್, ಹಿಲ್ ಸ್ಟಾರ್ಟ್ ಅಸಿಸ್ಟ್ & ಹಿಲ್ ಡಿಸೆಂಟ್ ಕಂಟ್ರೋಲ್, (ಟಿಪಿಎಂಎಸ್) ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಹಿಂಭಾಗದಲ್ಲಿ 3 ಹೆಡ್ರೆಸ್ಟ್ಗಳು, 3- ಪಾಯಿಂಟ್ ಸೀಟ್ ಬೆಲ್ಟ್ಗಳು, ಐಎಸ್ಒಫಿಕ್ಸ್ ಚೈಲ್ಡ್ ಸೀಟ್ ಆಂಕರ್, ಡ್ರೈವರ್ ಅಲರ್ಟ್ ಸಿಸ್ಟಂ ಮತ್ತು ಎಲ್ಇಡಿ ಕಾರ್ನರಿಂಗ್ ಲ್ಯಾಂಪ್ ಅನ್ನು ಹೊಂದಿದೆ.
ಇನ್ನು ಈ ಹೊಸ ಎಸ್ಯುವಿಯಲ್ಲಿ 2.0-ಲೀಟರ್ ಟಿಎಸ್ಐ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 190 ಬಿಹೆಚ್ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಡಿಎಸ್ಜಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದರಲ್ಲಿ ಆಲ್-ವೀಲ್-ಡ್ರೈವ್ ಸಿಸ್ಟಂ ಅನ್ನು ನೀಡಲಾಗಿದೆ.
ಈ ಹೊಸ ಫೋಕ್ಸ್ವ್ಯಾಗನ್ ಟಿಗ್ವಾನ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಟ್ಯೂಸಾನ್, ಜೀಪ್ ಕಂಪಾಸ್ ಮತ್ತು ಮುಂಬರುವ ಸಿಟ್ರನ್ ಸಿ5 ಏರ್ಕ್ರಾಸ್ ಎಸ್ಯುವಿಗಳಿಗೆ ಪೈಪೋಟಿ ನೀಡುತ್ತದೆ.