ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ Volkswagen Virtus ಕಾರು

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ Volkswagen ಭಾರತದಲ್ಲಿ ತನ್ನ ಹೊಸ Virtus ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ Volkswagen Virtus ಕಾರು ಭಾರತದಲ್ಲಿ ಹಲವು ಬಾರಿ ಸ್ಫಾಟ್ ಟೆಸ್ಟ್ ಅನ್ನು ನಡೆಸಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ Volkswagen Virtus ಕಾರು

ಹೊಸ Volkswagen Virtus ಕಾರು ಈ ವರ್ಷದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬೇಕಿತ್ತು. ಆದರೆ ಕರೋನಾ ಆತಂಕದಿಂದ ಈ ಹೊಸ Virtus ಕಾರಿನ ಬಿಡುಗಡೆಯನ್ನು Volkswagen ಮುಂದೂಡಿಕೆ ಮಾಡಲಾಗಿದೆ. ಇತ್ತೀಚೆಗೆ ಆಟೋಕಾರ್ ಇಂಡಿಯಾದೊಂದಿಗೆ ಮಾತನಾಡಿದ Volkswagen ಪ್ಯಾಸೆಂಜರ್ ಕಾರ್ಸ್ ಇಂಡಿಯಾ ಬ್ರಾಂಡ್ ನಿರ್ದೇಶಕರಾದ ಆಶಿಶ್ ಗುಪ್ತಾ, ನಾವು ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ Virtus ಕಾರಿನ ಉತ್ಪಾದನೆಯನ್ನು ಆರಂಭಿಸಲಿದ್ದೇವೆ ಮತ್ತು ಏಪ್ರಿಲ್ ಅಂತ್ಯದ ವೇಳೆಗೆ ಮಾರುಕಟ್ಟೆಯ ಪರಿಚಯವಿರುತ್ತದೆ ಎಂದು ಹೇಳಿದರು.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ Volkswagen Virtus ಕಾರು

ಹೊಸ Volkswagen Virtus ಸೆಡಾನ್ ಅನ್ನು ಎಂಕ್ಯೂಬಿ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿ ಪಡಿಸಲಾಗುತ್ತದೆ. Volkswagen ಕಂಪನಿಯು ಈ ಹೊಸ ಸೆಡಾನ್ ಅನ್ನು ಸ್ಥಳಿಯವಾಗಿ ಅಭಿವೃದ್ದಿ ಪಡಿಸಬಹುದು ಎಂದು ಹೇಳಲಾಗುತ್ತಿದೆ. ಸ್ಕೋಡಾ-ಫೋಕ್ಸ್‌ವ್ಯಾಗನ್ ಇಂಡಿಯಾ 2.0 ಯೋಜನೆಯಡಿ ಎಂಕ್ಯೂಬಿ ಪ್ಲಾಟ್‌ಫಾರ್ಮ್ ಅನ್ನು ಎಂಕ್ಯೂಬಿ ಎಒ ಇನ್ ಎಂದು ಸ್ಥಳೀಕರಿಸಲಾಗುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ Volkswagen Virtus ಕಾರು

ಇನ್ನು ಟೈಗನ್ ಮಿಡ್ ಸೈಜ್ ಎಸ್‍ಯುವಿಯು ಇದೇ ಪ್ಲಾಟ್‌ಫಾರ್ಮ್ ಅಡಿಯಲ್ಲಿ ತಯಾರುಸಲಾಗಿದೆ. ಇದರ ಪರಿಣಾಮವಾಗಿ, volkswagen virtus ಕಾರನ್ನು ಭಾರತೀಯ ಮಾರುಕಟ್ಟೆಗೆ ಪ್ರತ್ಯೇಕವಾಗಿ ತಯಾರಿಸಲು ಮೂಲ ಮಾದರಿಯಾಗಿ ಬಳಸಲಾಬಹುದು. ಇನ್ನು Volkswagen Virtus ಕಾರಿನ ಆಯಾಮಗಳು ಜಾಗತಿಕ-ಸ್ಪೆಕ್ ವರ್ಚಸ್‌ನಂತೆಯೇ ಇರುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ Volkswagen Virtus ಕಾರು

ಇದು 4,482 ಮಿಮೀ ಉದ್ದ, 1,751 ಮಿಮೀ ಅಗಲ ಮತ್ತು 1,472 ಮಿಮೀ ಎತ್ತರವನ್ನು ಹೊಂದಿದೆ. ಇನ್ನು ಈ ಸೆಡಾನ್ 2,651 ಎಂಎಂ ವ್ಹೀಲ್‌ಬೇಸ್‌ ಅನ್ನು ಹೊಂದಿದೆ. ಹೊಸ ಸೆಡಾನ್ ಮಾದರಿಗೆ ಯಾವ ಟಿಎಸ್‌ಐ ಎಂಜಿನ್ ಅನ್ನು ಅಳವಡಿಸಬಹುದು ಎಂದು ಇನ್ನೂ ಸ್ಪಷ್ಟವಾಗಿಲ್ಲ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ Volkswagen Virtus ಕಾರು

ಆದರೆ ವಿಡಬ್ಲ್ಯೂ 1.5-ಲೀಟರ್ ಮತ್ತು 1.0-ಲೀಟರ್ ಎಂಜಿನ್ ಆಯ್ಕೆಗಳನ್ನು ನೀಡುವ ಸಾಧ್ಯತೆಗಳಿದೆ. ದೇಶದಲ್ಲಿ ಮಾರಾಟವಾಗುವ ಹಲವಾರು ಮಾದರಿಗಳಲ್ಲಿ ಈ ಎರಡು ಎಂಜಿನ್ ಗಳನ್ನು ನೀಡಲಾಗಿದೆ. ಇದರಲ್ಲಿ 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 5500 ಆರ್‌ಪಿಎಂನಲ್ಲಿ 108 ಬಿಹೆಚ್‍ಪಿ ಪವರ್ ಮತ್ತು 1750 ಆರ್‌ಪಿಎಂನಲ್ಲಿ 175 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ Volkswagen Virtus ಕಾರು

ಇನ್ನು 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 5000 ಆರ್‌ಪಿಎಂನಲ್ಲಿ 148 ಬಿಹೆಚ್‍ಪಿ ಪವರ್ ಮತ್ತು 1500 ಆರ್‌ಪಿಎಂನಲ್ಲಿ 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟವಾಗುವ Volkswagen Virtus ಸೆಡಾನ್ ಕಾರಿನಲ್ಲಿರುವ ಎಲ್ಇಡಿ ಲೈಟಿಂಗ್, ಸ್ಟ್ರಾಂಗ್ ಹೆಲ್ಡರ್ ಲೈನ್, ಫ್ರಂಟ್ ಫ್ಯಾಸಿಯಾ ಮತ್ತು ಅಲಾಯ್ ವೀಲ್ಸ್ ಅನ್ನು ಇಂಡಿಯನ್-ಸ್ಪೆಕ್ ಕೂಡ ಹೊಂದಿರುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ Volkswagen Virtus ಕಾರು

ಇನ್ನು ಈ ಹೊಸ Volkswagen Virtus ಸೆಡಾನ್ ಇಂಟಿರಿಯರ್ ನಲ್ಲಿ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್ಸ್ ಟ್ರೂಮೆಂಟ್ ನ್ಸೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಡ್ಯುಯಲ್ ಏರ್‌ಬ್ಯಾಗ್‌ಗಳು ಮತ್ತು ಇತರ ಫೀಚರ್ ಗಳನ್ನು ಹೊಂದಿರಲಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ Volkswagen Virtus ಕಾರು

ಇನ್ನು Volkswagen ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಸ್ವಾತಂತ್ರ್ಯ ದಿನಚರಣೆಯ ಸಂಭ್ರಮದ ಪ್ರಯುಕ್ತ ಪೊಲೊ ಹ್ಯಾಚ್‌ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ವಿಶೇಷ ರಿಯಾಯಿತಿಯನ್ನು ಇತ್ತೀಚೆಗೆ ಘೋಷಿಸಿದ್ದಾರೆ. ಈ ರಿಯಾಯಿತಿಗಳು ಈ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ. Volkswagen ಪೊಲೊ ಮತ್ತು ವೆಂಟೊ ಕಾರುಗಳ ಮೇಲೆ ಎಕ್ಸ್‌ಚೇಂಜ್ ಬೋನಸ್ ಮತ್ತು ಲಾಯಲ್ಟಿ ಬೋನಸ್ ರಿಯಾಯಿತಿಗಳನ್ನು ನೀಡಲಾಗುತ್ತಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ Volkswagen Virtus ಕಾರು

Volkswagen ಪೊಲೊ ಕಾರು ಟ್ರೆಂಡ್‌ಲೈನ್, ಕಂಫರ್ಟ್‌ಲೈನ್, ಕಂಫರ್ಟ್‌ಲೈನ್ ಟಿಎಸ್ಐ ಹೈಲೈನ್ ಪ್ಲಸ್ ಟಿಎಸ್ಐ ಮತ್ತು ಜಿ ಟಿಎಸ್ಐಟಿ ಎಂಬ ಐದು ರೂಪಾಂತರಗಳಲ್ಲಿ ಲಭ್ಯವಿದೆ. ಪೊಲೊ ಕಾರಿನ ಎಲ್ಲಾ ರೂಪಾಂತರಗಳ ಮೇಲೆ ರೂ.20,000 ವರೆಗಿನ ಎಕ್ಸ್‌ಚೇಂಜ್ ಬೋನಸ್ ಮತ್ತು ರೂ.10,000 ವರೆಗಿನ ಲಾಯಲ್ಟಿ ಬೋನಸ್ ಲಭ್ಯವಿದೆ. ಇನ್ನು Volkswagen ವೆಂಟೊ ಕಾರು ಕಂಫರ್ಟ್‌ಲೈನ್, ಹೈಲೈನ್ ಮತ್ತು ಹೈಲೈನ್ ಪ್ಲಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ Volkswagen Virtus ಕಾರು

ಈ ಸೆಡಾನ್ ಮೂರು ರೂಪಾಂತರಗಳ ಮೇಲೆ ರೂ.25 ಸಾವಿರ ವರೆಗಿನ ಎಕ್ಸ್‌ಚೇಂಜ್ ಬೋನಸ್ ಮತ್ತು ರೂ.15,000 ವರೆಗಿನ ಲಾಯಲ್ಟಿ ಬೋನಸ್ ಲಭ್ಯವಿದೆ. ಇನ್ನು ಫೋಕ್ಸ್‌ವ್ಯಾಗನ್ ಕಂಪನಿಯು ಟಿ-ರಾಕ್ ಮತ್ತು ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿಗಳಿಗೂ ರಿಯಾಯಿತಿಗಳನ್ನು ನೀಡಲಾಗಿದೆ. ಅವುಗಳು ಸದ್ಯಕ್ಕೆ ಅಧಿಕೃತ ಡೀಲ್‌ಗಳನ್ನು ಹೊಂದಿಲ್ಲ. ಅಲ್ಲದೆ, ರಿಯಾಯಿತಿ ಕೊಡುಗೆಗಳು ವಿವಿಧ ರಾಜ್ಯಗಳ ನಡುವೆ ಬದಲಾಗುತ್ತವೆ, ಆದ್ದರಿಂದ ನಿಮ್ಮ ಹತ್ತಿರದ ಫೋಕ್ಸ್‌ವ್ಯಾಗನ್ ಶೋರೂಮ್‌ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಗಳನ್ನು ತಿಳಿಯಬಹುದು.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ Volkswagen Virtus ಕಾರು

ಹೊಸ Volkswagen Virtus ಸೆಡಾನ್ ಅನ್ನು ಭಾರತದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಅಂತರರಾಷ್ಟ್ರೀಯ-ಸ್ಪೆಕ್ Volkswagen Virtus ಮಾದರಿಯನ್ನು ದೊಡ್ಡ ಬದಲಾವಣೆಗಳಿಲ್ಲದೇ ಭಾರತದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಈ ಸೆಡಾನ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಟಿ, ಹ್ಯುಂಡೈ ವೆರ್ನಾ ಮತ್ತು ಮಾರುತಿ ಸುಜುಕಿ ಸಿಯಾಜ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
New volkswagen virtus india launch details vento replacement
Story first published: Saturday, August 21, 2021, 10:18 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X