ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ಭಾರತದಲ್ಲಿ ತನ್ನ ಹೊಸ ವಿರ್ಟಸ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ, ಈ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ಭಾರತದಲ್ಲಿ ಮತ್ತೊಮ್ಮೆ ಸ್ಫಾಟ್ ಟೆಸ್ಟ್ ಅನ್ನು ನಡೆಸಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳನ್ನು ಆಟೋಕಾರ್ ಇಂಡಿಯಾ ಬಹಿರಂಗಪಡಿಸಿದೆ. ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಸೆಡಾನ್ ಅನ್ನು ಎಂಕ್ಯೂಬಿ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿ ಪಡಿಸಲಾಗುತ್ತದೆ. ಫೋಕ್ಸ್‌ವ್ಯಾಗನ್ ಕಂಪನಿಯು ಈ ಹೊಸ ಸೆಡಾನ್ ಅನ್ನು ಸ್ಥಳಿಯವಾಗಿ ಅಭಿವೃದ್ದಿ ಪಡಿಸಬಹುದು ಎಂದು ಹೇಳಲಾಗುತ್ತಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಸ್ಕೋಡಾ-ಫೋಕ್ಸ್‌ವ್ಯಾಗನ್ ಇಂಡಿಯಾ 2.0 ಯೋಜನೆಯಡಿ ಎಂಕ್ಯೂಬಿ ಪ್ಲಾಟ್‌ಫಾರ್ಮ್ ಅನ್ನು ಎಂಕ್ಯೂಬಿ ಎಒ ಇನ್ ಎಂದು ಸ್ಥಳೀಕರಿಸಲಾಗುವುದು. ಇದರ ಪರಿಣಾಮವಾಗಿ, ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರನ್ನು ಭಾರತೀಯ ಮಾರುಕಟ್ಟೆಗೆ ಪ್ರತ್ಯೇಕವಾಗಿ ತಯಾರಿಸಲು ಮೂಲ ಮಾದರಿಯಾಗಿ ಬಳಸಲಾಬಹುದು.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಸ್ಕೋಡಾ ಆಟೋ ಇಂಡಿಯಾದ ಸೇಲ್ಸ್ ಮತ್ತು ಸರ್ವಿಸ್ ವಿಭಾಗದ ನಿರ್ದೇಶಕರಾದ ಝ್ಯಾಕ್ ಹೋಲಿಸ್ ಅವರು ಭಾರತದಲ್ಲಿ ಹೊಸ ಸೆಡಾನ್ ಬಿಡುಗಡೆ ಮಾಡಲು ಯೋಜಿಸಿದೆ ಎಂದು ಇತ್ತೀಚೆಗೆ ಖಚಿತಪಡಿಸಿದ್ದಾರೆ. ಮುಂದಿನ ಹೊಸ ಸೆಡಾನ್ ಎಂಕ್ಯೂಬಿ ಎಒ ಐನ್ ಪ್ಲಾಟ್‌ಫಾರ್ಮ್ ಆಧಾರವಾಗಿರಲಿದೆ ಎಂಬುದನ್ನು ಅವರು ಹೇಳಿದ್ದಾರೆ

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಹೊಸ ಸೆಡಾನ್ ಮಾದರಿಗೆ ಯಾವ ಟಿಎಸ್‌ಐ ಎಂಜಿನ್ ಅನ್ನು ಅಳವಡಿಸಬಹುದು ಎಂದು ಇನ್ನೂ ಸ್ಪಷ್ಟವಾಗಿಲ್ಲವಾದರೂ, ವಿಡಬ್ಲ್ಯೂ 1.5-ಲೀಟರ್ ಯುನಿಟ್‌ ಮತ್ತು 1.0-ಲೀಟರ್ ಯುನಿಟ್ ಎರಡನ್ನೂ ನೀಡುವ ಸಾಧ್ಯತೆಗಳಿದೆ.

MOST READ: ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ದೇಶದಲ್ಲಿ ಮಾರಾಟವಾಗುವ ಹಲವಾರು ಮಾದರಿಗಳಲ್ಲಿ ಈ ಎರಡು ಎಂಜಿನ್ ಗಳನ್ನು ನೀಡಲಾಗಿದೆ. ಇದು ಎರಡೂ ಜನಪ್ರಿಯ ಮತ್ತು ಉತ್ತಮ ಯಶಸ್ವಿಯನ್ನು ಕಂಡ ಎಂಜಿನ್ ಗಳಾಗಿವೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಇದರಲ್ಲಿ 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 5500 ಆರ್‌ಪಿಎಂನಲ್ಲಿ 108 ಬಿಹೆಚ್‍ಪಿ ಪವರ್ ಮತ್ತು 1750 ಆರ್‌ಪಿಎಂನಲ್ಲಿ 175 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದೆಡೆ, 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 5000 ಆರ್‌ಪಿಎಂನಲ್ಲಿ 148 ಬಿಹೆಚ್‍ಪಿ ಪವರ್ ಮತ್ತು 1500 ಆರ್‌ಪಿಎಂನಲ್ಲಿ 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟವಾಗುವ ಫೋಕ್ಸ್‌ವ್ಯಾಗನ್ ವಿರ್ಟಸ್ ಸೆಡಾನ್ ನಲ್ಲಿರುವಂತ ಎಲ್ಇಡಿ ಲೈಟಿಂಗ್, ಸ್ಟ್ರಾಂಗ್ ಹೆಲ್ಡರ್ ಲೈನ್, ಫ್ರಂಟ್ ಫ್ಯಾಸಿಯಾ ಮತ್ತು ಅಲಾಯ್ ವೀಲ್ಸ್ ಅನ್ನು ಇಂಡಿಯನ್-ಸ್ಪೆಕ್ ಕೂಡ ಹೊಂದಿರುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಇನ್ನು ಈ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಸೆಡಾನ್ ಇಂಟಿರಿಯರ್ ನಲ್ಲಿ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್ಸ್ ಟ್ರೂಮೆಂಟ್ ನ್ಸೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಡ್ಯುಯಲ್ ಏರ್‌ಬ್ಯಾಗ್‌ಗಳು ಮತ್ತು ಇತರ ಫೀಚರ್ ಗಳನ್ನು ಒಳಗೊಂಡಿರುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಸೆಡಾನ್ ಅನ್ನು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಅಂತರರಾಷ್ಟ್ರೀಯ-ಸ್ಪೆಕ್ ಫೋಕ್ಸ್‌ವ್ಯಾಗನ್ ವಿರ್ಟಸ್ ಮಾದರಿಯನ್ನು ದೊಡ್ಡ ಬದಲಾವಣೆಗಳಿಲ್ಲದೇ ಭಾರತದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ.

More from DriveSpark

Article Published On: Friday, February 26, 2021, 20:17 [IST]
English summary
Volkswagen Vitrus Spotted Testing Once Again. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+