ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ಭಾರತದಲ್ಲಿ ತನ್ನ ಹೊಸ ವಿರ್ಟಸ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ಭಾರತದಲ್ಲಿ ಹಲವು ಬಾರಿ ಸ್ಫಾಟ್ ಟೆಸ್ಟ್ ಅನ್ನು ನಡೆಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ಭಾರತದಲ್ಲಿ ಮುಂದಿನ ವರ್ಷದ ಜನವರಿ-ಮಾರ್ಚ್ ತಿಂಗಳುಗಳ ನಡುವಿನ ಅವಧಿಯಲ್ಲಿ ಬಿಡುಗಡೆಗೊಳಿಸಬಹುದು ಎಂದು ವರದಿಗಳಾಗಿದೆ. ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಸೆಡಾನ್ ಅನ್ನು ಎಂಕ್ಯೂಬಿ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿ ಪಡಿಸಲಾಗುತ್ತದೆ. ಫೋಕ್ಸ್‌ವ್ಯಾಗನ್ ಕಂಪನಿಯು ಈ ಹೊಸ ಸೆಡಾನ್ ಅನ್ನು ಸ್ಥಳಿಯವಾಗಿ ಅಭಿವೃದ್ದಿ ಪಡಿಸಬಹುದು ಎಂದು ಹೇಳಲಾಗುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಸ್ಕೋಡಾ-ಫೋಕ್ಸ್‌ವ್ಯಾಗನ್ ಇಂಡಿಯಾ 2.0 ಯೋಜನೆಯಡಿ ಎಂಕ್ಯೂಬಿ ಪ್ಲಾಟ್‌ಫಾರ್ಮ್ ಅನ್ನು ಎಂಕ್ಯೂಬಿ ಎಒ ಇನ್ ಎಂದು ಸ್ಥಳೀಕರಿಸಲಾಗುತ್ತದೆ. ಇದರ ಪರಿಣಾಮವಾಗಿ, ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರನ್ನು ಭಾರತೀಯ ಮಾರುಕಟ್ಟೆಗೆ ಪ್ರತ್ಯೇಕವಾಗಿ ತಯಾರಿಸಲು ಮೂಲ ಮಾದರಿಯಾಗಿ ಬಳಸಲಾಬಹುದು.

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಸ್ಕೋಡಾ ಆಟೋ ಇಂಡಿಯಾದ ಸೇಲ್ಸ್ ಮತ್ತು ಸರ್ವಿಸ್ ವಿಭಾಗದ ನಿರ್ದೇಶಕರಾದ ಝ್ಯಾಕ್ ಹೋಲಿಸ್ ಅವರು ಭಾರತದಲ್ಲಿ ಹೊಸ ಸೆಡಾನ್ ಬಿಡುಗಡೆ ಮಾಡಲು ಯೋಜಿಸಿದೆ ಎಂದು ಈಗಾಗಲೇ ಖಚಿತಪಡಿಸಿದ್ದಾರೆ. ಮುಂದಿನ ಹೊಸ ಸೆಡಾನ್ ಎಂಕ್ಯೂಬಿ ಎಒ ಐನ್ ಪ್ಲಾಟ್‌ಫಾರ್ಮ್ ಆಧಾರವಾಗಿರಲಿದೆ ಎಂಬುದನ್ನು ಅವರು ಹೇಳಿದ್ದಾರೆ

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಹೊಸ ಸೆಡಾನ್ ಮಾದರಿಗೆ ಯಾವ ಟಿಎಸ್‌ಐ ಎಂಜಿನ್ ಅನ್ನು ಅಳವಡಿಸಬಹುದು ಎಂದು ಇನ್ನೂ ಸ್ಪಷ್ಟವಾಗಿಲ್ಲವಾದರೂ, ವಿಡಬ್ಲ್ಯೂ 1.5-ಲೀಟರ್ ಮತ್ತು 1.0-ಲೀಟರ್ ಎಂಜಿನ್ ಆಯ್ಕೆಗಳನ್ನು ನೀಡುವ ಸಾಧ್ಯತೆಗಳಿದೆ. ದೇಶದಲ್ಲಿ ಮಾರಾಟವಾಗುವ ಹಲವಾರು ಮಾದರಿಗಳಲ್ಲಿ ಈ ಎರಡು ಎಂಜಿನ್ ಗಳನ್ನು ನೀಡಲಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಇದರಲ್ಲಿ 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 5500 ಆರ್‌ಪಿಎಂನಲ್ಲಿ 108 ಬಿಹೆಚ್‍ಪಿ ಪವರ್ ಮತ್ತು 1750 ಆರ್‌ಪಿಎಂನಲ್ಲಿ 175 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 5000 ಆರ್‌ಪಿಎಂನಲ್ಲಿ 148 ಬಿಹೆಚ್‍ಪಿ ಪವರ್ ಮತ್ತು 1500 ಆರ್‌ಪಿಎಂನಲ್ಲಿ 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟವಾಗುವ ಫೋಕ್ಸ್‌ವ್ಯಾಗನ್ ವಿರ್ಟಸ್ ಸೆಡಾನ್ ಕಾರಿನಲ್ಲಿರುವ ಎಲ್ಇಡಿ ಲೈಟಿಂಗ್, ಸ್ಟ್ರಾಂಗ್ ಹೆಲ್ಡರ್ ಲೈನ್, ಫ್ರಂಟ್ ಫ್ಯಾಸಿಯಾ ಮತ್ತು ಅಲಾಯ್ ವೀಲ್ಸ್ ಅನ್ನು ಇಂಡಿಯನ್-ಸ್ಪೆಕ್ ಕೂಡ ಹೊಂದಿರುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಇನ್ನು ಈ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಸೆಡಾನ್ ಇಂಟಿರಿಯರ್ ನಲ್ಲಿ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್ಸ್ ಟ್ರೂಮೆಂಟ್ ನ್ಸೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಡ್ಯುಯಲ್ ಏರ್‌ಬ್ಯಾಗ್‌ಗಳು ಮತ್ತು ಇತರ ಫೀಚರ್ ಗಳನ್ನು ಹೊಂದಿರಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಸೆಡಾನ್ ಅನ್ನು ಭಾರತದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಅಂತರರಾಷ್ಟ್ರೀಯ-ಸ್ಪೆಕ್ ಫೋಕ್ಸ್‌ವ್ಯಾಗನ್ ವಿರ್ಟಸ್ ಮಾದರಿಯನ್ನು ದೊಡ್ಡ ಬದಲಾವಣೆಗಳಿಲ್ಲದೇ ಭಾರತದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ.

More from DriveSpark

Article Published On: Thursday, May 20, 2021, 15:25 [IST]
English summary
Volkswagen Virtus Based Sedan India Launch In Early 2022. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+