ಹೊಸ ಫೀಚರ್ಸ್‌ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್‌ವ್ಯಾಗನ್ ಪೊಲೊ
ಫೋಕ್ಸ್‌ವ್ಯಾಗನ್ ಪೊಲೊ ಕಾರು ನಮ್ಮ ಮಾರುಕಟ್ಟೆಯಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಬಹುಬೇಡಿಕೆಯಿಂದ ಮಾರಾಟವಾಗುತ್ತಿರುವ ಮಾದರಿಯಾಗಿದೆ. ಇದೀಗ ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ನ್ಯೂ ಜನರೇಷನ್ ಪೊಲೊ ಕಾರನ್ನು ಅಭಿವೃದ್ಧಿ ಪಡಿಸುತ್ತಿದೆ. ಇದು ಆರನೇ ತಲೆಮಾರಿನ ಪೊಲೊ ಆಗಿರುತ್ತದೆ.

ಇತ್ತೀಚೆಗೆ ಆಟೊಕಾರ್ ಇಂಡಿಯಾಕ್ಕೆ ನೀಡಿದ ಸಂದರ್ಶನದಲ್ಲಿ, ಫೋಕ್ಸ್‌ವ್ಯಾಗನ್ ಪ್ಯಾಸೆಂಜರ್ ಕಾರ್ಸ್ ಇಂಡಿಯಾದ ಬ್ರ್ಯಾಂಡ್ ಡೈರೆಕ್ಟರ್ ಆಶಿಶ್ ಗುಪ್ತಾ ಅವರು, ಭಾರತದಲ್ಲಿ ಪೊಲೊ ಬಿಡುಗಡೆಯ ಬಗ್ಗೆ ಅಧ್ಯಯನ ನಡೆಯುತ್ತಿದೆ. ಇದರ ಬೇಡಿಕೆಯ ಪರಿಗಣಿಸಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಪೊಲೊ ಮಾದರಿಯು ಜಾಗಾತಿಕ ಮಟ್ಟದಲ್ಲಿ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ.

ಇಂಡಿಯಾ-ಸ್ಪೆಕ್ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರು ಸಬ್-4 ಮೀಟರ್ ಉದ್ದವಿರುತ್ತದೆ ಮತ್ತು ಇದು ಸ್ಥಳೀಯ ಎಂಕ್ಯೂಬಿ-ಅಒ ಮಾಡ್ಯುಲರ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿ ತಯಾರಿಸಲಾಗುತ್ತದೆ. ಪೊಲೊ ಕಾರು ಎಂಕ್ಯೂಬಿ-ಅಒ ಮಾಡ್ಯುಲರ್ ಮತ್ತು ವೇರಿಯಬಲ್ ಪ್ಲಾಟ್‌ಫಾರ್ಮ್ ಎಂದು ಹೇಳಿಕೊಳ್ಳಲಾಗಿದ್ದು, ಇದು ಹಲವಾರು ನವೀನ ಸಹಾಯ ಮತ್ತು ಸುರಕ್ಷತಾ ತಂತ್ರಜ್ಙಾನಗಳನ್ನು ಹೊಂದಿಕೊಳ್ಳುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇದು ಹೆಚ್ಚಿನ ಸಾಮರ್ಥ್ಯದ ಉಕ್ಕುಗಳನ್ನು ಬಳಸುತ್ತದೆ. ಅದು ಗಮನಾರ್ಹವಾಗಿ ಹಗುರವಾಗಿರುತ್ತದೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಿಲ್ಲ. ಆದರೆ ಪೊಲೊ ಕಾರಿನ ಹೊರಭಾಗದ ವಿನ್ಯಾಸವು ಜಾಗತಿಕ ಮಾದರಿಯಂತೆಯೇ ಇರಬಹುದು.

ಈ ಹ್ಯಾಚ್‌ಬ್ಯಾಕ್ ನಲ್ಲಿ ಆಪಲ್ ಕಾರ್ ಪ್ಲೇ ಆಂಡ್ರಾಯ್ಡ್ ಆಟೋ ಕನಕ್ಟಿವಿಟಿ ಹೊಂದಿರುವ 6.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿರುತ್ತದೆ. ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಎಸಿ ವೆಂಟ್ಸ್, ಸೆನ್ಸಸರಿಗ್ ವೈಪರ್‌ಗಳು, ಕಾರ್ನರಿಂಗ್ ಲೈಟ್ಸ್ ಅನ್ನು ಒಳಗೊಂಡಿರುತ್ತದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಇದರೊಂದಿಗೆ ಕಾರ್ನರಿಂಗ್ ಲೈಟ್, ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್, ಆಂಬಿಯೆಂಟ್ ಲೈಟ್‌ಗಳು ಮತ್ತು ಹೆಚ್ಚಿನ ಫೀಚರ್ ಗಳನ್ನು ಹೊಂದಿರುತ್ತದೆ. ಇನ್ನು ಸುರಕ್ಷತೆಗಾಗಿ ಡ್ಯುಯಲ್ ಫ್ರಂಟಲ್ ಏರ್‌ಬ್ಯಾಗ್‌ಗಳು, ಎಬಿಎಸ್ ವಿಥ್ ಇಬಿಡಿ, ಆಟೋ-ಡಿಮ್ಮಿಂಗ್ ಐಆರ್ವಿಎಂ, ಆಂಟಿ ಪಿಂಚ್ ಪವರ್ ವಿಂಡೋಸ್, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿರುತ್ತದೆ

ನ್ಯೂ ಜನರೇಷನ್ ಫೋಕ್ಸ್‌ವ್ಯಾಗನ್ ಪೊಲೊ ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳೊಂದಿಗೆ ಬರಬಹುದು. ಇದರಲ್ಲಿ 1.0 ಎಲ್ ಎಂಪಿಐ ಎಂಜಿನ್ 76 ಬಿಹೆಚ್‍ಪಿ ಪವರ್ ಮತ್ತು 95 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಇನ್ನು 1.0 ಎಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 110 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹಿಂದಿನದನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಿದರೆ, ಟರ್ಬೊ-ಪೆಟ್ರೋಲ್ ಯುನಿಟ್ ಅನ್ನು 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಹೊಂದಬಹುದು.

ನ್ಯೂ ಜನರೇಷನ್ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಬೆಲೆಯು ಪ್ರಸ್ತುತ ಮಾದರಿಗಿಂತ ತುಸು ದುಬಾರಿಯಾಗಿರುತ್ತದೆ. ಈ ಪೊಲೊ ಸುಧಾರಿತ ಸ್ಟೈಲಿಂಗ್, ನವೀಕರಿಸಿದ ಒಳಾಂಗಣ ಮತ್ತು ಹೆಚ್ಚಿನ ವೈಶಿಷ್ಟ್ಯಗಳಿಂದ ಕೂಡಿರುತ್ತದೆ.

ಒಟ್ಟಾರೆಯಾಗಿ ನ್ಯೂ ಜನರೇಷನ್ ಫೋಕ್ಸ್‌ವ್ಯಾಗನ್ ಪೊಲೊ ಹೊಸ ಅವತರದಲ್ಲಿ ಭಾರತದಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಪೊಲೊ ಮಾದರಿಯು ಭಾರತದಲ್ಲಿ ಬಿಡುಗಡೆಯಾದರೆ ಹ್ಯುಂಡೈ ಐ20 ಮತ್ತು ಟಾಟಾ ಆಲ್ಟ್ರೊಜ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications