ತಡವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಮಾರುತಿ ಆಲ್ಟೋ ಕಾರಿನ ಬಿಡುಗಡೆ

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ನ್ಯೂ ಜನರೇಷನ್ ಆಲ್ಟೋ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ನ್ಯೂ ಜನರೇಷನ್ ಮಾರುತಿ ಸುಜುಕಿ ಆಲ್ಟೋ ಕಾರು ಈಗಾಗಲೇ ಬಾರತದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ತಡವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಮಾರುತಿ ಆಲ್ಟೋ ಕಾರಿನ ಬಿಡುಗಡೆ

ಮಾರುತಿ ಸುಜುಕಿ ಕಂಪನಿಯು ಈ ನ್ಯೂ ಜನರೇಷನ್ ಆಲ್ಟೋ ಕಾರನ್ನು ಈ ವರ್ಷದಲ್ಲೇ ಭಾರತದಲ್ಲಿ ಬಿಡುಗಡೆಗೊಳಿಸಲು ಯೋಜಿಸಲಾಗಿತ್ತು. ಆದರೆ ಹೊಸ ವರದಿಗಳ ಪ್ರಕಾರ ಮುಂದಿನ ವರ್ಷದ ಮಧ್ಯಾಂತರ ಅವಧಿಯಲ್ಲಿ ಬಿಡುಗಡೆಗೊಳಿಸಲಾಗುತ್ತದೆ. ನ್ಯೂ ಜನರೇಷನ್ ಮಾರುತಿ ಸುಜುಕಿ ಆಲ್ಟೋ ಕಾರು ಬಿಡುಗಡೆ ವಿಳಂಬದ ಹಿಂದಿನ ನಿಖರ ಕಾರಣ ಇನ್ನೂ ಬಹಿರಂಗಗೊಂಡಿಲ್ಲ. ಆದರೆ ಕರೋನಾ ಮಹಾಮಾರಿ ಮುಖ್ಯ ಕಾರಣವಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ತಡವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಮಾರುತಿ ಆಲ್ಟೋ ಕಾರಿನ ಬಿಡುಗಡೆ

ನ್ಯೂ ಜನರೇಷನ್ ಮಾರುತಿ ಸುಜುಕಿ ಆಲ್ಟೋ ಮಾದರಿಯು ಒಟ್ಟಾರೆ ಪ್ರೊಫೈಲ್ ಅನ್ನು ಉಳಿಸಿಕೊಳ್ಳುತ್ತದೆ ಎಂದು ನಿರೀಕ್ಷಿಸುತ್ತೇವೆ. ಮುಂಭಾಗ ಮತ್ತು ಹಿಂಭಾಗದಲ್ಲಿ ಸಣ್ಣ ಓವರ್‌ಹ್ಯಾಂಗ್‌ಗಳನ್ನು ಒಳಗೊಂಡಿರುತ್ತದೆ. ಮುಂಭಾಗ ಮತ್ತು ಹಿಂಭಾಗದಲ್ಲಿ ಸಣ್ಣ ಓವರ್‌ಹ್ಯಾಂಗ್‌ಗಳನ್ನು ಒಳಗೊಂಡಿರುತ್ತದೆ.

ತಡವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಮಾರುತಿ ಆಲ್ಟೋ ಕಾರಿನ ಬಿಡುಗಡೆ

ಈ ಹೊಸ ಕಾರಿನಲ್ಲಿ ಹೆಡ್‌ಲ್ಯಾಂಪ್‌ಗಳು, ಹೆಚ್ಚು ಪ್ರಮುಖವಾದ ಗ್ರಿಲ್ ಮತ್ತು ಹೊಸ ಟೈಲ್-ಲ್ಯಾಂಪ್ ಕ್ಲಸ್ಟರ್‌ಗಳ ವಿಷಯದಲ್ಲಿ ಹ್ಯಾಚ್‌ಬ್ಯಾಕ್ ಗಮನಾರ್ಹ ವಿನ್ಯಾಸ ಬದಲಾವಣೆಗಳನ್ನು ಪಡೆಯುವ ಸಾಧ್ಯತೆಯಿದೆ.

ತಡವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಮಾರುತಿ ಆಲ್ಟೋ ಕಾರಿನ ಬಿಡುಗಡೆ

ನ್ಯೂ ಜನರೇಷನ್ ಮಾರುತಿ ಸುಜುಕಿ ಆಲ್ಟೋ ಕಾರು ಹಾರ್ಟ್ಟೆಕ್ಟ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ ಎಂದು ವರದಿಯಾಗಿದೆ, ಇದು ಹೊಸ ಎಸ್-ಪ್ರೆಸ್ಸೊ ಮತ್ತು ವ್ಯಾಗನ್ಆರ್ ಕಾರುಗಳನ್ನು ಸಹ ಆಧಾರವಾಗಿದೆ.

ತಡವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಮಾರುತಿ ಆಲ್ಟೋ ಕಾರಿನ ಬಿಡುಗಡೆ

ಹೊಸ ಆಲ್ಟೋ ಕಾರಿನ ಗಾತ್ರವನ್ನು ಹೆಚ್ಚು ಇರಬಹುದು. ಇದರಿಂದ ಕಾರಿನ ಒಳಭಾಗದಲ್ಲಿ ಹೆಚ್ಚಿನ ಸ್ಪೇಸ್ ಅನ್ನು ಸಿಗುತ್ತದೆ. ಇನ್ನು ಈ ಕಾರಿನಲ್ಲಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ನೀಡಲಾಗುತ್ತದೆ. ಇದರಲ್ಲಿ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಫೀಚರ್ಸ್ ಅನ್ನು ನೀಡಬಹುದು.

ತಡವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಮಾರುತಿ ಆಲ್ಟೋ ಕಾರಿನ ಬಿಡುಗಡೆ

ಇನ್ನು ಈ ನ್ಯೂ ಜನರೇಷನ್ ಮಾರುತಿ ಸುಜುಕಿ ಆಲ್ಟೋ ಕಾರಿನಲ್ಲಿ ಸುರಕ್ಷತೆಗಾಗಿ, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ವಿಥ್ ಇಬಿಡಿ, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಡ್ರೈವರ್ ಮತ್ತು ಕೋ-ಡ್ರೈವರ್ ಸೀಟ್ ಬೆಲ್ಟ್ ರಿಮೈಂಡರ್ ಮತ್ತು ಸ್ಪೀಡ್ ಅಲರ್ಟ್ ಸಿಸ್ಟಂ ಸ್ಟ್ಯಾಂಡರ್ಡ್ ಆಗಿ ನೀಡಬಹುದು.

ತಡವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಮಾರುತಿ ಆಲ್ಟೋ ಕಾರಿನ ಬಿಡುಗಡೆ

ಹೊಸ ಆಲ್ಟೊ ಹ್ಯಾಚ್‌ಬ್ಯಾಕ್ ನಲ್ಲಿ ಅದೇ 796 ಸಿಸಿ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ನೀಡಬಹುದು, ಈ ಎಂಜಿನ್ 48 ಬಿಹೆಚ್‌ಪಿ ಮತ್ತು 69 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಸುಜುಕಿಯ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನವನ್ನು ಸಹ ಒಳಗೊಂಡಿರಬಹುದು.

ತಡವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಮಾರುತಿ ಆಲ್ಟೋ ಕಾರಿನ ಬಿಡುಗಡೆ

ಈ ಎಂಜಿನ್ ನೊಂದಿಗೆ ಮ್ಯಾನುವಲ್ ಮತ್ತು ಎಎಂಟಿ ಗೇರ್‌ಬಾಕ್ಸ್‌ಗಳನ್ನು ನೀಡಲಾಗುತ್ತದೆ. ಫ್ಯಾಕ್ಟರಿ ಕಿಟಡ್ ಸಿಎನ್‌ಜಿ ಕಿಟ್ ಅನ್ನು ಸಹ ಹೊಂದಿರಬಹುದು. ಒಟ್ಟಿನಲ್ಲಿ ನ್ಯೂ ಜನರೇಷನ್ ಮಾರುತಿ ಸುಜುಕಿ ಆಲ್ಟೋ ಕಾರು ಕೆಲವು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಯಾಗಬಹುದು.

Most Read Articles

Kannada
English summary
New Gen Maruti Alto Launch Delayed Further To 2022. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X