ಎಲೆಕ್ಟ್ರಿಕ್ ವಾಹನಗಳ ಉತ್ತೇಜನಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಹತ್ವದ ಯೋಜನೆ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ವಿವಿಧ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಹತ್ವದ ಯೋಜನೆ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ. ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಹತ್ವದ ಯೋಜನೆ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಹತ್ವದ ಯೋಜನೆ

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಕೇವಲ ನಗರಪ್ರದೇಶಗಳಿಗೆ ಮಾತ್ರ ಸೀಮಿತವಾಗಿರುವ ಇವಿ ವಾಹನಗಳ ಸಂಚಾರರವನ್ನು ಅಂತರ್‌ ಜಿಲ್ಲೆ ಹಾಗೂ ಅಂತರ್‌ರಾಜ್ಯಗಳ ನಡುವೆಯೂ ಪ್ರಯಾಣಿಸಲು ಸಹಕಾರಿಯಾಗುವಂತೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಬೃಹತ್ ಯೋಜನೆ ರೂಪಿಸಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಹತ್ವದ ಯೋಜನೆ

ಎಲೆಕ್ಟ್ರಿಕ್ ವಾಹನಗಳಿಗೆ ಸಹಕಾರಿಯಾಗುವಂತೆ ದೇಶಾದ್ಯಂತ ವಿಸ್ತರಿಸಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಚಾಲನೆ ನೀಡಿದ್ದು, ಆರಂಭಿಕ ಹಂತವಾಗಿ 22 ರಾಜ್ಯಗಳಲ್ಲಿ 650 ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ನಿರ್ಧರಿಸಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಹತ್ವದ ಯೋಜನೆ

ಹೊಸ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಈಗಾಗಲೇ ಭೂಸ್ವಾಧಿನ ಪ್ರಕ್ರಿಯೆಯನ್ನು ಸಹ ಪೂರ್ಣಗೊಳಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ವರ್ಷಾಂತ್ಯಕ್ಕೆ 138 ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆಯಲು ಟೆಂಡರ್ ಕರೆದಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಹತ್ವದ ಯೋಜನೆ

ಖಾಸಗಿ ಸಹಭಾಗಿತ್ವದಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗುತ್ತಿದ್ದು, ಅತಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಮಟ್ಟದ ಚಾರ್ಜ್ ಮಾಡಬಹುದಾಗಿದೆ. ಇದರಿಂದ ಕೇವಲ ನಗರಪ್ರದೇಶಗಳಿಗೆ ಮಾತ್ರ ಸೀಮಿತವಾಗಿರುವ ಇವಿ ವಾಹನಗಳ ಮೂಲಕ ದೂರದ ಪ್ರಯಾಣಕ್ಕೂ ಅನುಕೂಲಕರವಾಗಲಿದ್ದು, ಹೆಚ್ಚುತ್ತಿರುವ ಇಂಧನ ಬೆಲೆ ತಗ್ಗಿಸಲು ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಹೆಚ್ಚಿನ ಮಟ್ಟದ ವಿನಾಯ್ತಿಗಳನ್ನು ನೀಡುತ್ತಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಹತ್ವದ ಯೋಜನೆ

ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯೊಂದಿಗೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆ ಅಡಿ ಇದೀಗ ಮತ್ತೆ ಇವಿ ವಾಹನಗಳ ಖರೀದಿ ಮೇಲೆ ಪ್ರೋತ್ಸಾಹ ಧನ ಹೆಚ್ಚಿಸಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಹತ್ವದ ಯೋಜನೆ

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಹತ್ವದ ಯೋಜನೆ

ಆದರೆ ಭಾರತದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಯನ್ನು ತಗ್ಗಿಸಲು ತುರ್ತಾಗಿ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಹೆಚ್ಚಿಸಲು ಮುಂದಾಗಿರುವ ಕೇಂದ್ರ ಸರ್ಕಾರವು ಫೇಮ್ 2 ಯೋಜನೆಗೆ ಕೆಲವು ತಿದ್ದುಪಡಿ ತರುವ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಸಬ್ಸಡಿ ಪ್ರಮಾಣವನ್ನು ಚಾಲ್ತಿಯಲ್ಲಿರುವ ಪ್ರಮಾಣಕ್ಕಿಂತ ಶೇ.50 ರಷ್ಟು ಹೆಚ್ಚಳ ಮಾಡಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಹತ್ವದ ಯೋಜನೆ

ಹೊಸ ತಿದ್ದುಪಡಿಯ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಸಬ್ಸಿಡಿ ಪ್ರಮಾಣವನ್ನು ಬ್ಯಾಟರಿ ಪ್ಯಾಕ್ ಆಧರಿಸಿ ಪ್ರತಿ ಕಿಲೋವ್ಯಾಟ್‌ಗೆ ರೂ. 15 ಸಾವಿರ ಏರಿಕೆ ಮಾಡಲಾಗಿದ್ದು, ಹೊಸ ತಿದ್ದುಪಡಿಯ ನಂತರ ಪ್ರತಿ ಇವಿ ಸ್ಕೂಟರ್ ಖರೀದಿ ಮೇಲೆ ಗ್ರಾಹಕರು ರೂ. 5 ಸಾವಿರದಿಂದ ರೂ.30 ಸಾವಿರದಷ್ಟು ಉಳಿತಾಯ ಮಾಡಬಹುದಾಗಿದೆ.

Article Published On: Friday, July 2, 2021, 8:45 [IST]
English summary
NHAI To Develop EV Charging Stations Across National Highways. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+