ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ಬಂಪರ್ ಆಫರ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ನಿಸ್ಸಾನ್ ಇಂಡಿಯಾ ತನ್ನ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ಭರ್ಜರಿ ಆಫರ್ ಅನ್ನು ಘೋಷಿಸಿದೆ. ನಿಸ್ಸಾನ್ ಕಂಪನಿಯು ತನ್ನ ಕಿಕ್ಸ್ ಎಸ್‍ಯುವಿ ಮಾರಾಟವನ್ನು ಹೆಚ್ಚಿಸಲು ಭರ್ಜರಿ ರಿಯಾಯಿತಿಗಳನ್ನು ಘೋಷಿಸಲಾಗಿದೆ.

ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ಬಂಪರ್ ಆಫರ್

ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕಿಕ್ಸ್ ಎಸ್‍ಯುವಿಯ ಮೇಲೆ ರೂ.85,000 ಗಳವರೆಗೆ ರಿಯಾಯಿತಿಯನ್ನು ನೀಡಲಾಗಿದೆ. ಇದರಲ್ಲಿ ನಗದು ರಿಯಾಯಿತಿ, ವಿನಿಮಯ ಬೋನಸ್, ಕಾರ್ಪೊರೇಟ್ ರಿಯಾಯಿತಿ ಮತ್ತು ಆನ್‌ಲೈನ್ ಬುಕ್ಕಿಂಗ್ ಕೂಡ ಸೇರಿದೆ. ಈ ರಿಯಾಯಿತಿಗಳು ಈ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ. ಈ ರಿಯಾಯಿತಿಗಳು ರೂಪಾಂತರಗಳು ಮತ್ತು ಸ್ಥಳಗಳಲ್ಲಿ ಬದಲಾಗಬಹುದು.

ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ಬಂಪರ್ ಆಫರ್

ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾದ ಪ್ರಕಾರ, ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ರೂ.20,000 ನಗದು ರಿಯಾಯಿತಿ ಮತ್ತು ರೂ.50,000 ವರೆಗಿನ ವಿನಿಮಯ ಬೋನಸ್ ಅನ್ನು ನೀಡಲಾಗುತ್ತದೆ. ಆಯ್ದ ಕಾರ್ಪೊರೇಟ್‌ಗಳು, ಸರ್ಕಾರಿ ನೌಕರರು, ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ವೈದ್ಯರಿಗೆ ಕಂಪನಿಯು ರೂ.10,000 ವರೆಗಿನ ವಿಶೇಷ ರಿಯಾಯಿತಿಯನ್ನು ನೀಡುತ್ತಾರೆ.

ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ಬಂಪರ್ ಆಫರ್

ಇನ್ನು ಈ ನಿಸ್ಸಾನ್ ಕಿಕ್ಸ್ ಎಸ್‍ಯುವಿಯನ್ನು ಬ್ರ್ಯಾಂಡ್‌ನ ವೆಬ್‌ಸೈಟ್ ಮೂಲಕ ಆನ್‌ಲೈನ್ ಬುಕ್ಕಿಂಗ್ ಮಾಡಿದರೆ ರೂ.5,000 ಬೋನಸ್ ಅನ್ನು ಪಡೆಯಬಹುದು. ಗಮನಿಸಬೇಕಾದ ಪ್ರಮುಖ ಅಂಶವೆಂದರೆ ನಗದು ರಿಯಾಯಿತಿ ಮತ್ತು ವಿನಿಮಯ ಬೋನಸ್ ಕೇವಲ ಟರ್ಬೊ ಪೆಟ್ರೋಲ್ ರೂಪಾಂತರಗಳಿಗೆ ಅನ್ವಯಿಸುತ್ತದೆ.

ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ಬಂಪರ್ ಆಫರ್

ಈ ನಿಸ್ಸಾನ್ ಕಿಕ್ಸ್ ಎಸ್‍ಯುವಿಗ ಬಗ್ಗೆ ಹೇಳುವುದಾದರೆ, ಇದರ ಬೇಸ್ ಸ್ಪೆಕ್ ಎಕ್ಸ್‌ಎಲ್ ಮತ್ತು ಎಕ್ಸ್‌ವಿ ಗಳಲ್ಲಿ 1.5-ಲೀಟರ್ ಹೆಚ್4ಕೆ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 142 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಜೊಡಿಸಲಾಗಿದೆ.

ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ಬಂಪರ್ ಆಫರ್

ಇನ್ನು ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮಿಡ್ ಸ್ಪೆಕ್ ಮತ್ತು ಟಾಪ್-ಸ್ಪೆಕ್ ರೂಪಾಂತರಗಳಲ್ಲಿ 1.3 ಲೀಟರ್ ನಾಲ್ಕು-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 156 ಬಿಹೆಚ್‍ಪಿ ಪವರ್ ಮತ್ತು 254 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ಬಂಪರ್ ಆಫರ್

ಈ ಎಂಜಿನ್ ನೊಂದಿಗೆ ಸ್ಟ್ಯಾಂಡರ್ಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್‌ ಅಥವಾ ಬ್ರ್ಯಾಂಡ್‌ನ ಹೊಸ ಎಕ್ಸ್-ಟ್ರೋನಿಕ್ ಸಿವಿಟಿ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ. ನಿಸ್ಸಾನ್ ಸರಣಿಯಲ್ಲಿ ಅತಿ ಹೆಚ್ಚು ಪವರ್‍ ಫುಲ್ ಎಂಜಿನ್ ಅನ್ನು ಕಿಕ್ಸ್ ಎಸ್‍ಯುವಿಯನ್ನು ಒಳಗೊಂಡಿದೆ.

ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ಬಂಪರ್ ಆಫರ್

ನಿಸ್ಸಾನ್ ಕಿಕ್ಸ್ ಎಸ್‍ಯುವಿಯಲ್ಲಿ ಹಲವಾರು ಫೀಚರ್‍ಗಳನ್ನು ಹೊಂದಿವೆ. ಈ ನಿಸ್ಸಾನ್ ಕಿಕ್ಸ್ ಟಾಪ್ ಅಂಡ್ ಕಾರುಗಳು ರಿಮೋಟ್ ಎಂಜಿನ್ ಸ್ಟಾರ್ಟ್, ಪುಶ್-ಬಟನ್ ಸ್ಟಾರ್ಟ್ ಮತ್ತು ಐಡಲ್ ಸ್ಟಾರ್ಟ್-ಸ್ಟಾಪ್ ಫೀಚರ್ಸ್ ಗಳನ್ನು ಹೊಂದಿದೆ.

ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ಬಂಪರ್ ಆಫರ್

ಈ ಎಸ್‍ಯುವಿಯಲ್ಲಿ ಕ್ರೂಸ್ ಕಂಟ್ರೋಲ್, 'ಅರೌಂಡ್ ವ್ಯೂ ಮಾನಿಟರ್' 360 ಡಿಗ್ರಿ ಕ್ಯಾಮೆರಾ, ಹಿಲ್ ಸ್ಟಾರ್ಟ್ ಅಸಿಸ್ಟ್, ಲೆದರ್ ಸೀಟುಗಳು, ಕಾರ್ನರಿಂಗ್ ಫಾಗ್ ಲ್ಯಾಂಪ್‌ಗಳು, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್‌ಗಳು ಮತ್ತು ವೈಪರ್, ಕ್ರೂಸ್ ಕಂಟ್ರೋಲ್ ಮತ್ತು ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಅನ್ನು ಒಳಗೊಂಡಿದೆ.

ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ಬಂಪರ್ ಆಫರ್

ಈ ನಿಸ್ಸಾನ್ ಕಿಕ್ಸ್ ಪವರ್ ಫುಲ್ ಎಂಜಿನ್ ಮತ್ತು ನೂತನ ಫೀಚರ್ ಗಳನ್ನು ಒಳಗೊಂಡಿರುವ ಎಸ್‍ಯುವಿಯಾಗಿದೆ. ಈ ನಿಸ್ಸಾನ್ ಕಿಕ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಎಂಜಿ ಹೆಕ್ಟರ್ ಮತ್ತು ಹ್ಯುಂಡೈ ಕ್ರೆಟಾ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Tuesday, July 6, 2021, 9:55 [IST]
English summary
Nissan Kicks SUV Offered With Benefits. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+