Just In
- 7 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 9 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 10 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 10 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- Lifestyle
ಗುರುವಾರದ ದಿನ ಭವಿಷ್ಯ: ಈ ದಿನ ಹೇಗಿದೆ ನಿಮ್ಮ ರಾಶಿಫಲ
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್ಯುವಿಯ ಮೇಲೆ ಭಾರೀ ಡಿಸ್ಕೌಂಟ್
ಜನಪ್ರಿಯ ಕಾರು ತಯಾರಕ ಕಂಪನಿಯಾದ ನಿಸ್ಸಾನ್ ಇಂಡಿಯಾ ತನ್ನ ಕಿಕ್ಸ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್ ಅನ್ನು ಘೋಷಿಸಿದೆ. ನಿಸ್ಸಾನ್ ತನ್ನ ಕಿಕ್ಸ್ ಎಸ್ಯುವಿಯ ಮೇಲೆ ರೂ.95,000 ಗಳವರೆಗೆ ಆಫರ್ ಅನ್ನು ನೀಡಲಾಗುತ್ತಿದೆ.

ಜಪಾನ್ ಮೂಲದ ಕಾರು ತಯಾರಕ ನಿಸ್ಸಾನ್ ತನ್ನ ಕಿಕ್ಸ್ ಎಸ್ಯುವಿಯ ಮೇಲಿನ ಮಾರ್ಚ್ ತಿಂಗಳಿನ ಆಫರ್ ಅನ್ನು ಘೋಷಿಸಲಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ನಿಸ್ಸಾನ್ ಕಿಕ್ಸ್ ಎಸ್ಯುವಿಯ ಮಾರಾಟದಲ್ಲಿ ಕುಸಿತವನ್ನು ಕಂಡಿದೆ. ಇದರಿಂದ ಮಾರಾಟವನ್ನು ಹೆಚ್ಚಿಸಲು ತನ್ನ ಕಿಕ್ಸ್ ಎಸ್ಯುವಿಯ ಮೇಲೆ ರೂ.95,000 ಗಳವರೆಗಿನ ರಿಯಾಯಿತಿ ಘೋಷಿಸಲಾಗಿದೆ. ಈ ತಿಂಗಳ ಅಂತ್ಯದವರೆಗೂ ಈ ಆಫರ್ ಗಳು ಲಭ್ಯವಿರುತ್ತದೆ.

ನಿಸ್ಸಾನ್ ತನ್ನ ಕಿಕ್ಸ್ ಎಸ್ಯುವಿಯ ಮೇಲೆ ಒಟ್ಟು ರೂ.95,000 ವರೆಗೆ ಆಫರ್ ಅನ್ನು ಘೋಷಿಸಿದೆ. ಇದರಲ್ಲಿ ಇದರಲ್ಲಿ ರೂ.50,000 ಗಳ ಎಕ್ಸ್ಚೆಂಜ್ ಬೋನಸ್, ರೂ.25,000ಗಳ ನಗದು ರಿಯಾಯಿತಿ ಮತ್ತು ರೂ.20,000 ಲಾಯಲ್ಟಿ ಬೋನಸ್ ಅನ್ನು ಒಳಗೊಂಡಿದೆ. ಎನ್ಐಸಿ ಒಳಗೊಂಡ ಡೀಲರ್ ಗಳಲ್ಲಿ ಮಾತ್ರ ಈ ಆಫರ್ ಲಭ್ಯವಿರುತ್ತದೆ. ಇನ್ನು ಸ್ಥಳ ಮತ್ತು ರೂಪಾಂತರಗಳಿಗೆ ಅನುಗುಣವಾಗಿ ಈ ಆಫರ್ ಗಳು ಬದಲಾಗಬಹುದು.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್ಯುವಿ300

ನಿಸ್ಸಾನ್ ಎಸ್ಯುವಿಗ ಬಗ್ಗೆ ಹೇಳುವುದಾದರೆ, ಇದರ ಬೇಸ್ ಸ್ಪೆಕ್ ಎಕ್ಸ್ಎಲ್ ಮತ್ತು ಎಕ್ಸ್ವಿ ಗಳಲ್ಲಿ 1.5-ಲೀಟರ್ ಹೆಚ್4ಕೆ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 105 ಬಿಹೆಚ್ಪಿ ಪವರ್ ಮತ್ತು 142 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಜೊಡಿಸಲಾಗಿದೆ.

ಇನ್ನು ಹೊಸ ನಿಸ್ಸಾನ್ ಕಿಕ್ಸ್ ಮಿಡ್ ಸ್ಪೆಕ್ ಮತ್ತು ಟಾಪ್-ಸ್ಪೆಕ್ ರೂಪಾಂತರಗಳಲ್ಲಿ 1.3 ಲೀಟರ್ ನಾಲ್ಕು-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 156 ಬಿಹೆಚ್ಪಿ ಪವರ್ ಮತ್ತು 254 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ

ಈ ಎಂಜಿನ್ ನೊಂದಿಗೆ ಸ್ಟ್ಯಾಂಡರ್ಡ್ ಮ್ಯಾನ್ಯುವಲ್ ಗೇರ್ಬಾಕ್ಸ್ ಅಥವಾ ಬ್ರ್ಯಾಂಡ್ನ ಹೊಸ ಎಕ್ಸ್-ಟ್ರೋನಿಕ್ ಸಿವಿಟಿ ಗೇರ್ಬಾಕ್ಸ್ ಅನ್ನು ಜೋಡಿಸಲಾಗಿದೆ. ನಿಸ್ಸಾನ್ ಸರಣಿಯಲ್ಲಿ ಅತಿ ಹೆಚ್ಚು ಪವರ್ ಫುಲ್ ಎಂಜಿನ್ ಅನ್ನು ಒಳಗೊಂಡಿದೆ.

ಈ ನಿಸ್ಸಾನ್ ಕಿಕ್ಸ್ ಎಸ್ಯುವಿಯಲ್ಲಿ ಹಲವಾರು ನೂತನ ಫೀಚರ್ಗಳನ್ನು ಹೊಂದಿವೆ. ನಿಸ್ಸಾನ್ ಕಿಕ್ಸ್ ಟಾಪ್ ಅಂಡ್ ಕಾರುಗಳು ರಿಮೋಟ್ ಎಂಜಿನ್ ಸ್ಟಾರ್ಟ್, ಪುಶ್-ಬಟನ್ ಸ್ಟಾರ್ಟ್ ಮತ್ತು ಐಡಲ್ ಸ್ಟಾರ್ಟ್-ಸ್ಟಾಪ್ ಫೀಚರ್ ಗಳನ್ನು ಹೊಂದಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಈ ಎಸ್ಯುವಿಯಲ್ಲಿ ಕ್ರೂಸ್ ಕಂಟ್ರೋಲ್, 'ಅರೌಂಡ್ ವ್ಯೂ ಮಾನಿಟರ್' 360 ಡಿಗ್ರಿ ಕ್ಯಾಮೆರಾ, ಹಿಲ್ ಸ್ಟಾರ್ಟ್ ಅಸಿಸ್ಟ್, ಲೆದರ್ ಸೀಟುಗಳು, ಕಾರ್ನರಿಂಗ್ ಫಾಗ್ ಲ್ಯಾಂಪ್ಗಳು, ಆಟೋಮ್ಯಾಟಿಕ್ ಹೆಡ್ಲ್ಯಾಂಪ್ಗಳು ಮತ್ತು ವೈಪರ್, ಕ್ರೂಸ್ ಕಂಟ್ರೋಲ್ ಮತ್ತು ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಅನ್ನು ಕೂಡ ಒಳಗೊಂಡಿದೆ.

ಈ ನಿಸ್ಸಾನ್ ಕಿಕ್ಸ್ ಪವರ್ ಫುಲ್ ಎಂಜಿನ್ ಮತ್ತು ನೂತನ ಫೀಚರ್ ಗಳನ್ನು ಒಳಗೊಂಡಿರುವ ಎಸ್ಯುವಿಯಾಗಿದೆ. ಈ ಹೊಸ ನಿಸ್ಸಾನ್ ಕಿಕ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಎಂಜಿ ಹೆಕ್ಟರ್ ಮತ್ತು ಹ್ಯುಂಡೈ ಕ್ರೆಟಾ ಎಸ್ಯುವಿಗಳಿಗೆ ಪೈಪೋಟಿ ನೀಡುತ್ತದೆ.