ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಬಿಡುಗಡೆಯ ನಂತರ ಫೆಬ್ರವರಿ ಅವಧಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, ಅತ್ಯುತ್ತಮ ಬೇಡಿಕೆಯೊಂದಿಗೆ ಹೊಸ ಕಾರು ನಿಸ್ಸಾನ್ ಕಾರು ಮಾರಾಟ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಮೂಲಕ ಕಾರು ಮಾರಾಟ ಹೊಸ ಸಂಚಲನಕ್ಕೆ ಕಾರಣವಾಗಿರುವ ನಿಸ್ಸಾನ್ ಇಂಡಿಯಾ ಕಂಪನಿಯು ಅತಿ ಕಡಿಮೆ ಅವಧಿಯಲ್ಲಿ ಹೊಸ ಕಾರಿನೊಂದಿಗೆ ಅತ್ಯಧಿಕ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಫೆಬ್ರುವರಿ ಅವಧಿಯಲ್ಲಿ ಒಟ್ಟು 4,244 ಯುನಿಟ್ ಮಾರಾಟಗೊಂಡಿವೆ. ನಿಸ್ಸಾನ್ ಕಾರುಗಳ ಪೈಕಿ ಕಿಕ್ಸ್ ಕಾರಿಗೆ ಉತ್ತಮ ಬೇಡಿಕೆಯಿದ್ದರೂ ಮ್ಯಾಗ್ನೈಟ್ ಕಾರು ಮಾದರಿಯೇ ಮಾರಾಟದಲ್ಲಿ ಮುಂಚೂಣಿ ಹೊಂದಿದ್ದು, ಹೊಸ ಕಾರು ಬಿಡುಗಡೆಯಾದ ನಂತರ ಇದುವರೆಗೆ 6,582 ಯುನಿಟ್ ಗ್ರಾಹಕರ ಕೈ ಸೇರಿವೆ.

ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ಮ್ಯಾಗ್ನೈಟ್ ಕಾರು ಖರೀದಿಗಾಗಿ ಇದುವರೆಗೆ ಸುಮಾರು 40 ಸಾವಿರ ಬುಕ್ಕಿಂಗ್ ದಾಖಲಾಗಿದ್ದು, ಬುಕ್ಕಿಂಗ್ ಆಧಾರದ ಮೇಲೆ ಕಾರು ವಿತರಣೆ ಆರಂಭಿಸಿರುವ ನಿಸ್ಸಾನ್ ಕಂಪನಿಯು ನಿಗದಿತ ಪ್ರಮಾಣಕ್ಕಿಂತಲೂ ಹೆಚ್ಚು ಉತ್ಪಾದನೆ ಕೈಗೊಂಡಿದೆ.

ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಮ್ಯಾಗ್ನೈಟ್ ಕಾರಿನಲ್ಲಿ ಸದ್ಯ ಟಾಪ್ ಎಂಡ್ ಟರ್ಬೋ ಪೆಟ್ರೋಲ್ ಮಾದರಿಗಾಗಿ ಹೆಚ್ಚಿನ ಮಟ್ಟದ ಬುಕ್ಕಿಂಗ್ ಸಲ್ಲಿಕೆಯಾಗುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.35 ಲಕ್ಷ ಬೆಲೆ ಹೊಂದಿದೆ.

ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿ ಹೊಂದಿರುವ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದ್ದು, 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ನಾಲ್ಕು ಸ್ಟಾರ್ ರೇಟಿಂಗ್ ಪಡೆದಕೊಂಡಿರುವುದು ಕೂಡಾ ಮತ್ತಷ್ಟು ಬೇಡಿಕೆ ಹೆಚ್ಚಿಸುವ ನೀರಿಕ್ಷೆಯಿದೆ.

Article Published On: Tuesday, March 2, 2021, 8:45 [IST]
English summary
Nissan Achieves 4,244 Units Wholesales In 2021 February, Magnite Ledaing The Sale. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+