ನಿಸ್ಸಾನ್ ಸ್ಪರ್ಧೆಯಲ್ಲಿ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಗೆದ್ದ ಗ್ರಾಹಕ
ನಿಸ್ಸಾನ್ ಇಂಡಿಯಾ ಕಂಪನಿಯು ಮ್ಯಾಗ್ನೈಟ್ ಕಾರು ಮಾರಾಟದೊಂದಿಗೆ ಹಲವಾರು ದಾಖಲೆಗಳಿಗೆ ಕಾರಣವಾಗುತ್ತಿದ್ದು, ಕಳೆದ ತಿಂಗಳು ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಗಾಗಿ ತನ್ನ ಗ್ರಾಹಕರಿಗೆ ಹೊಸ ಕಾರನ್ನು ಗೆಲ್ಲುವ ಅವಕಾಶ ನೀಡಿತ್ತು.

ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸುವ ಸಲುವಾಗಿ ಲಕ್ಕಿ ಡ್ರಾ ಆಯೋಜಿಸಿದ್ದ ನಿಸ್ಸಾನ್ ಕಂಪನಿಯು 100 ಗ್ರಾಹಕರಿಗೆ ವಿಶೇಷ ಬಹುಮಾನಗಳನ್ನು ಘೋಷಣೆ ಮಾಡಿತ್ತು. ಇದೀಗ ಲಕ್ಕಿ ಡ್ರಾ ವಿಜೇತರ ಹೆಸರುಗಳನ್ನು ಘೋಷಣೆ ಮಾಡಲಾಗಿದ್ದು, ಮೊದಲ ಜೋಡಿಗೆ ಮ್ಯಾಗ್ನೈಟ್ ಕಾರಿನ ಮೇಲೆ ಶೇ.100 ರಷ್ಟು ಕ್ಯಾಶ್‌ಬ್ಯಾಕ್ ಆಫರ್‌ನೊಂದಿಗೆ ಉಚಿತವಾಗಿ ಕಾರು ವಿತರಣೆ ಮಾಡಿದೆ.

100 ಜನ ವಿಜೇತರಲ್ಲಿ ಮೊದಲ ಗ್ರಾಹಕರನಿಗೆ ಉಚಿತವಾಗಿ ಕಾರು ವಿತರಣೆಯಾದಲ್ಲಿ, 8 ಗ್ರಾಹಕರಿಗೆ ಉಚಿತವಾಗಿ ವೆರಿಯೆಂಟ್ ಅಪ್‌ಗ್ರೆಡ್ ಉಡುಗೊರೆ ನೀಡಲಾಗಿದೆ. ತದನಂತರ 25 ಗ್ರಾಹಕರಿಗೆ ಕಾರು ಖರೀದಿಯ ಮೇಲೆ 1 ವರ್ಷದ ವಿಸ್ತರಿತ ವಾರಂಟಿ ಕೊಡುಗೆ ನೀಡಲಾಗಿದ್ದು, ಇನ್ನುಳಿದ 66 ಗ್ರಾಹಕರಿಗೆ 2 ವರ್ಷಗಳ ಕಾಲ ಉಚಿತ ನಿರ್ವಹಣೆಯ ಪ್ಯಾಕೇಜ್ ಘೋಷಿಸಿದೆ.

ಘಾಜಿಯಾಬಾದ್ ಮೂಲದ ಸೌರಭ್ ಭಟ್ಟಾಚಾರ್ಯ ನಿಸ್ಸಾನ್ ಲಕ್ಕಿ ಡ್ರಾ ಗೆದ್ದ ಮೊದಲ ವಿಜೇತರಾಗಿದ್ದು, ನಮ್ಮ ಬೆಂಗಳೂರಿನ ಹಲವು ಸ್ಪರ್ಧಿಗಳು ಲಕ್ಕಿ ಡ್ರಾ ಸ್ಪರ್ಧೆಯಲ್ಲಿ ವಿವಿಧ ಉಡುಗೊರೆಗಳನ್ನು ಪಡೆದುಕೊಂಡಿದ್ದಾರೆ.

ಇನ್ನು ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.35 ಲಕ್ಷ ಬೆಲೆ ಪಡೆದುಕೊಂಡಿದ್ದು, ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಇನ್ನಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳನ್ನು ಹೊಂದಿರುವ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.


Click it and Unblock the Notifications