ವ್ಯಾಲೆಂಟೈನ್ಸ್ ಡೇ ಸ್ಪೆಷಲ್: ಗ್ರಾಹಕರಿಗೆ ನಿಸ್ಸಾನ್ ಮ್ಯಾಗ್ನೈಟ್ ಕಾರು ಗೆಲ್ಲುವ ಅವಕಾಶ..

ನಿಸ್ಸಾನ್ ಇಂಡಿಯಾ ಕಂಪನಿಯು ಮ್ಯಾಗ್ನೈಟ್ ಕಾರು ಮಾರಾಟದೊಂದಿಗೆ ಹಲವಾರು ದಾಖಲೆಗಳಿಗೆ ಕಾರಣವಾಗುತ್ತಿದ್ದು, ಫೆಬ್ರುವರಿ 14ರ ಪ್ರೇಮಿಗಳ ದಿನಾಚರಣೆಗಾಗಿ ತನ್ನ ಗ್ರಾಹಕರಿಗೆ ಹೊಸ ಕಾರನ್ನು ಗೆಲ್ಲುವ ಅವಕಾಶ ನೀಡಿದೆ.

ಗ್ರಾಹಕರಿಗೆ ನಿಸ್ಸಾನ್ ಮ್ಯಾಗ್ನೈಟ್ ಕಾರು ಗೆಲ್ಲುವ ಅವಕಾಶ..

ಹೌದು, ನಿಸ್ಸಾನ್ ಕಂಪನಿಯು ಫೆಬ್ರುವರಿ 14ರ ಪ್ರೇಮಿಗಳ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಿದ್ದು, ಲಕ್ಕಿ ಡ್ರಾ ಮೂಲಕ 100 ಗ್ರಾಹಕರಿಗೆ ಹಲವಾರು ಬಹುಮಾನಗಳನ್ನು ನೀಡಲು ನಿರ್ಧರಿಸಿದೆ. ಮೊದಲ ಲಕ್ಕಿ ಡ್ರಾ ವಿಜೇತ ಜೋಡಿಗೆ ಹೊಸ ಕಾರನ್ನು ಉಡುಗೊರೆಯಾಗಿ ನೀಡಲಿದ್ದು, 8 ಗ್ರಾಹಕರಿಗೆ ಉಚಿತವಾಗಿ ವೆರಿಯೆಂಟ್ ಅಪ್‌ಗ್ರೆಡ್, 25 ಗ್ರಾಹಕರಿಗೆ 1 ವರ್ಷದ ವಿಸ್ತರಿತ ವಾರಂಟಿ ಕೊಡುಗೆ ಮತ್ತು ಇನ್ನುಳಿದ 66 ಗ್ರಾಹಕರಿಗೆ 2 ವರ್ಷಗಳ ಕಾಲ ಉಚಿತ ನಿರ್ವಹಣೆಯ ಪ್ಯಾಕೇಜ್ ನೀಡಲು ನಿರ್ಧರಿಸಿದೆ.

ಗ್ರಾಹಕರಿಗೆ ನಿಸ್ಸಾನ್ ಮ್ಯಾಗ್ನೈಟ್ ಕಾರು ಗೆಲ್ಲುವ ಅವಕಾಶ..

ಹೊಸ ಮ್ಯಾಗ್ನೈಟ್ ಕಾರನ್ನು ಅನ್ನು ಕಾಯ್ದಿರಿಸಿರುವ ಮತ್ತು ಫೆಬ್ರವರಿ 12 ರವರೆಗೆ ವಿತರಣೆ ಪಡೆದುಕೊಳ್ಳಲಿರುವ ಎಲ್ಲಾ ಗ್ರಾಹಕರು ಈ ಲಕ್ಕಿ ಡ್ರಾದಲ್ಲಿ ಭಾಗಿಯಾಗಿರಲಿದ್ದು, ಪ್ರೇಮಿಗಳ ದಿನದಂದೇ ಉಡುಗೊರೆ ವಿತರಣೆಯಾಗಲಿವೆ.

ಗ್ರಾಹಕರಿಗೆ ನಿಸ್ಸಾನ್ ಮ್ಯಾಗ್ನೈಟ್ ಕಾರು ಗೆಲ್ಲುವ ಅವಕಾಶ..

ಇನ್ನು ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಗ್ರಾಹಕರಿಗೆ ನಿಸ್ಸಾನ್ ಮ್ಯಾಗ್ನೈಟ್ ಕಾರು ಗೆಲ್ಲುವ ಅವಕಾಶ..

ಹೊಸ ಕಾರು ಕಳೆದ ವಾರ ಬೆಲೆ ಹೆಚ್ಚಳ ಪಡೆದುಕೊಂಡ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಪಡೆದುಕೊಂಡಿದ್ದು, ಆರಂಭಿಕ ಆವೃತ್ತಿಯು ಮಾತ್ರ ರೂ. 50 ಸಾವಿರ ಬೆಲೆ ಹೆಚ್ಚಳ ಪಡೆದುಕೊಂಡಿದೆ. ಮ್ಯಾಗ್ನೈಟ್ ಕಾರಿನ ಆರಂಭಿಕ ಮಾದರಿಯ ಬೆಲೆ ಹೆಚ್ಚಳ ಹೊರತಾಗಿ ಇನ್ನುಳಿದ ಆವೃತ್ತಿಗಳ ಬೆಲೆಯನ್ನು ಮೊದಲಿನಂತೆಯೇ ಮುಂದುವರಿಸಲಾಗಿದ್ದು, ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ರೇಟಿಂಗ್ಸ್ ಪಡೆದುಕೊಂಡ ನಂತರ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಗ್ರಾಹಕರಿಗೆ ನಿಸ್ಸಾನ್ ಮ್ಯಾಗ್ನೈಟ್ ಕಾರು ಗೆಲ್ಲುವ ಅವಕಾಶ..

ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿ ಹೊಂದಿರುವ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

ಗ್ರಾಹಕರಿಗೆ ನಿಸ್ಸಾನ್ ಮ್ಯಾಗ್ನೈಟ್ ಕಾರು ಗೆಲ್ಲುವ ಅವಕಾಶ..

1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಗ್ರಾಹಕರಿಗೆ ನಿಸ್ಸಾನ್ ಮ್ಯಾಗ್ನೈಟ್ ಕಾರು ಗೆಲ್ಲುವ ಅವಕಾಶ..

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಗ್ರಾಹಕರಿಗೆ ನಿಸ್ಸಾನ್ ಮ್ಯಾಗ್ನೈಟ್ ಕಾರು ಗೆಲ್ಲುವ ಅವಕಾಶ..

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಗ್ರಾಹಕರಿಗೆ ನಿಸ್ಸಾನ್ ಮ್ಯಾಗ್ನೈಟ್ ಕಾರು ಗೆಲ್ಲುವ ಅವಕಾಶ..

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

Article Published On: Friday, February 12, 2021, 20:58 [IST]
English summary
Nissan Announces Valentines Program For Magnite Customers. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+