ಹೊಸ ಕಾರುಗಳ ವಾರಂಟಿ ಅವಧಿಯನ್ನು ಜುಲೈಗೆ ವಿಸ್ತರಿಸಿದ ನಿಸ್ಸಾನ್ ಇಂಡಿಯಾ
ನಿಸ್ಸಾನ್ ಇಂಡಿಯಾ ಕಂಪನಿಯು ಕೋವಿಡ್ ಪರಿಣಾಮ ತನ್ನ ಗ್ರಾಹಕರಿಗೆ ಹೆಚ್ಚುವರಿ ವಾರಂಟಿ ಆಫರ್ ನೀಡಿದ್ದು, ಈ ತಿಂಗಳಾಂತ್ಯಕ್ಕೆ ಕೊನೆಗೊಳ್ಳಲಿರುವ ವಾರಂಟಿ ಅವಧಿಯನ್ನು ಮುಂದಿನ ಜುಲೈ ಅಂತ್ಯದ ತನಕ ಮುಂದೂಡಿಕೆ ಮಾಡಿದೆ.

ಲಾಕ್‌ಡೌನ್ ಅವಧಿಯಲ್ಲಿ ಕೊನೆಗೊಳ್ಳಲಿರುವ ವಾಹನಗಳ ವಾರಂಟಿ ಅವಧಿಯನ್ನು ಬಹುತೇಕ ವಾಹನ ತಯಾಕರ ಕಂಪನಿಗಳು ಈಗಾಗಲೇ ವಿಸ್ತರಣೆ ಮಾಡಿದ್ದು, ಹೊಸ ವಾಹನಗಳ ನಿಗದಿತ ಅವಧಿಯ ಸೇವೆಗಳನ್ನು ಪಡೆಯಲು ಲಾಕ್‌ಡೌನ್ ವಿಧಿಸಿರುವ ಹಿನ್ನಲೆಯಲ್ಲಿ ವಾರಂಟಿ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ವಾಹನ ಮಾರಾಟಕ್ಕೆ ಕೆಲವು ಕಡೆಗಳಲ್ಲಿ ಷರತ್ತು ಬದ್ದ ಅವಕಾಶಗಳಿದ್ದರೂ ಗ್ರಾಹಕರ ಸೇವೆಗಳಲ್ಲಿ ಸಾಕಷ್ಟು ಅಡೆತಡೆಗಳು ಉಂಟಾಗುತ್ತಿವೆ.

ಹೀಗಾಗಿ ಲಾಕ್‌ಡೌನ್ ಅವಧಿಯಲ್ಲಿ ಮುಕ್ತಾಯಗೊಳ್ಳಲಿರುವ ನಿಗದಿತ ಅಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮುಕ್ತಾಯಗೊಂಡಿರುವ ಮತ್ತು ಮುಕ್ತಾಯಗೊಳ್ಳಬೇಕಿರುವ ಹೊಸ ಬೈಕ್‌ಗಳ ವಾರಂಟಿ ಅವಧಿಯನ್ನು ಜುಲೈ 31ರ ತನಕ ಮುಂದೂಡಲಾಗಿದ್ದು, ಲಾಕ್‌ಡೌನ್ ಸಂದರ್ಭದಲ್ಲಿ ವಾರಂಟಿ ಮುಕ್ತಾಯಗೊಳ್ಳುವುದನ್ನು ತಪ್ಪಿಸಲು ವಾರಂಟಿ ವಿಸ್ತರಿಸಲಾಗಿದೆ.

ಇನ್ನು ಹೆಚ್ಚುತ್ತಿರುವ ಕೋವಿಡ್ ಎರಡನೇ ಅಲೆಯ ಪರಿಣಾಮ ತಗ್ಗಿರುವ ಹೊಸ ವಾಹನಗಳ ಖರೀದಿಯ್ನು ಸುಧಾರಿಸಲು ವಿವಿಧ ಆಟೋ ಉತ್ಪಾದನಾ ಕಂಪನಿಗಳು ಹಲವಾರು ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ನಿಸ್ಸಾನ್ ಕಂಪನಿಯು ಕೂಡಾ ಕಿಕ್ಸ್ ಕಾರು ಖರೀದಿಗಾಗಿ ಮೇ ಅವಧಿಗೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದೆ.

ಹೊಸ ವಾಹನಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ವಿವಿಧ ವಾಹನ ಉತ್ಪಾದನಾ ಕಂಪನಿಗಳು ಆಕರ್ಷಕ ಆಫರ್‌ಗಳೊಂದಿಗೆ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ನಿಸ್ಸಾನ್ ಇಂಡಿಯಾ ಕಂಪನಿಯು ಕೂಡಾ ಕಿಕ್ಸ್ ಕಾರು ಮಾದರಿಯ ಮೇಲೆ ಮೇ ಅವಧಿಗಾಗಿ ಆಕರ್ಷಕ ಡಿಸ್ಕೌಂಟ್ ಆಫರ್ ನೀಡುತ್ತಿದೆ.

ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕವು ಲಭ್ಯವಿರಲಿದ್ದು, ಆಕರ್ಷಕ ಆಫರ್‌ಗಳು ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಿದೆ. ಕಿಕ್ಸ್ ಎಸ್‍ಯುವಿ ಮೇಲಿನ ರೂ.75 ಸಾವಿರ ಆಫರ್ ನೀಡಲಾಗುತ್ತಿದ್ದು, ಸದ್ಯ ವಾಹನ ವಿತರಣೆವಿಲ್ಲವಾದರೂ ಆನ್‌ಲೈನ್ ಬುಕ್ಕಿಂಗ್ ಲಭ್ಯವಿರಲಿದೆ.

ನಿಸ್ಸಾನ್ ಹೊಸ ಆಫರ್‌ಗಳಲ್ಲಿ ಕಿಕ್ಸ್ ಖರೀದಿಯ ಮೇಲೆ ಎಕ್ಸ್‌ಚೆಂಜ್, ಕ್ಯಾಶ್‌ಬ್ಯಾಕ್ ಮತ್ತು ಇತರೆ ಕೊಡುಗೆಗಳೊಂದಿಗೆ ವಿವಿಧ ರೂಪಾಂತರಗಳಿಗೆ ಅನುಗುಣವಾಗಿ ಇನ್ನಷ್ಟು ಆಫರ್ ಪಡೆದುಕೊಳ್ಳಬಹುದಾಗಿದೆ.
MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ರೂ.75 ಸಾವಿರದಲ್ಲಿ ರೂ.50 ಸಾವಿರ ಎಕ್ಸ್‌ಚೆಂಜ್ ಬೋನಸ್, ರೂ.20 ಸಾವಿರ ನಗದು ರಿಯಾಯಿತಿ ಮತ್ತು ರೂ.5 ಸಾವಿರ ಮೌಲ್ಯದ ಇತರೆ ಕೊಡುಗೆಗಳನ್ನು ಪಡೆದುಕೊಳ್ಳಲಿದೆ.

ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದರ ಬೇಸ್ ಸ್ಪೆಕ್ ಎಕ್ಸ್‌ಎಲ್ ಮತ್ತು ಎಕ್ಸ್‌ವಿ ಆವೃತ್ತಗಳಲ್ಲಿ 1.5-ಲೀಟರ್ ಹೆಚ್4ಕೆ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದ್ದು, ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 142 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೊಡಿಸಲಾಗಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಕಿಕ್ಸ್ ಕಾರಿನ ಮಿಡ್ ಸ್ಪೆಕ್ ಮತ್ತು ಟಾಪ್-ಸ್ಪೆಕ್ ರೂಪಾಂತರಗಳಲ್ಲಿ 1.3 ಲೀಟರ್ ಸಾಮರ್ಥ್ಯದ ನಾಲ್ಕು-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 156 ಬಿಹೆಚ್‍ಪಿ ಪವರ್ ಮತ್ತು 254 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.


Click it and Unblock the Notifications