Just In
- 3 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 5 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 5 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 5 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮ್ಯಾಗ್ನೈಟ್ ಕಾರಿಗೆ ಭರ್ಜರಿ ಬೇಡಿಕೆ- ಮಾರ್ಚ್ ಅವಧಿಯಲ್ಲಿ ಭಾರೀ ಬೆಳವಣಿಗೆ ಸಾಧಿಸಿದ ನಿಸ್ಸಾನ್
ನಿಸ್ಸಾನ್ ಇಂಡಿಯಾ ಕಂಪನಿಯು 2021ರ ಮಾರ್ಚ್ ಅವಧಿಯಲ್ಲಿನ ಕಾರು ಮಾರಾಟ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಿಸ್ಸಾನ್ ಕಂಪನಿಯು ಕಳೆದ ವರ್ಷದ ಮಾರ್ಚ್ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿದೆ.

2020ರ ಮಾರ್ಚ್ ಅವಧಿಯಲ್ಲಿ ಒಟ್ಟು 825 ಯನಿಟ್ ಕಾರುಗಳನ್ನು ಮಾತ್ರವೇ ಮಾರಾಟ ಮಾಡಿದ್ದ ನಿಸ್ಸಾನ್ ಕಂಪನಿಯು 2021ರ ಮಾರ್ಚ್‌ನಲ್ಲಿ 4,012 ಯುನಿಟ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಶೇ.386 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ. ಕಳೆದ ವರ್ಷದ ಮಾರ್ಚ್ ಅವಧಿಯಲ್ಲಿ ಲಾಕ್‌ಡೌನ್ ಆದ ಪರಿಣಾಮ ತೀವ್ರ ಹಿನ್ನಡೆ ಅನುಭವಿಸಿದ್ದ ಆಟೋ ಉತ್ಪಾದನಾ ಕಂಪನಿಗಳು ಈ ವರ್ಷದ ಮಾರ್ಚ್ ಅವಧಿಯಲ್ಲಿನ ಮಾರಾಟ ಬೆಳವಣಿಗೆ ಹೆಚ್ಚಿನ ಮಟ್ಟದ ಮುನ್ನಡೆ ಕಾಯ್ದುಕೊಂಡಿವೆ.

ಆದರೆ ತಿಂಗಳ ವಾಹನ ಮಾರಾಟದಲ್ಲಿ ಕಳೆದ ನಿಸ್ಸಾನ್ ಕಂಪನಿಯು ಕಳೆದ ಫೆಬ್ರವರಿ ಅವಧಿಗಿಂತಲೂ ಮಾರ್ಚ್ ಅವಧಿಯಲ್ಲಿ ಶೇ. 5 ರಷ್ಟು ಕುಸಿತ ಅನುಭಿಸಿದ್ದು, ಮ್ಯಾಗ್ನೈಟ್ ಕಾರು ಮಾದರಿಯ ಉತ್ಪಾದನೆ ಹೆಚ್ಚಳದೊಂದಿಗೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಸದ್ಯ ಕಾರು ಮಾರಾಟದಲ್ಲಿ ಹನ್ನೊಂದನೇ ಸ್ಥಾನದಲ್ಲಿರುವ ನಿಸ್ಸಾನ್ ಕಂಪನಿಯು ಮಾಗ್ನೈಟ್ ಕಾರು ಮಾದರಿಯ ಮೂಲಕ ಪ್ರತಿ ತಿಂಗಳು 6 ಸಾವಿರದಿಂದ 7 ಸಾವಿರ ಯುನಿಟ್ ಮಾರಾಟ ಗುರಿಹೊಂದಿದ್ದು, ಮಾಗ್ನೈಟ್ ಕಾರು ಮಾದರಿಯು ಬೆಲೆ ವಿಚಾರವಾಗಿ ಮಾರುತಿ ಮತ್ತು ಹ್ಯುಂಡೈ ಕಂಪನಿಗಳ ಹ್ಯಾಚ್‌ಬ್ಯಾಕ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಕೂಡಾ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದೆ.

ಮ್ಯಾಗ್ನೈಟ್ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.59 ಲಕ್ಷ ಬೆಲೆ ಪಡೆದುಕೊಂಡಿದ್ದು, ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಇನ್ನಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳೊಂದಿಗೆ ಮಾರಾಟಗೊಳ್ಳುತ್ತಿದ್ದು, ಅತ್ಯುತ್ತಮ ಬೆಲೆಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳ ಜೊತೆಗೆ ಹ್ಯಾಚ್‌ಬ್ಯಾಕ್ ಕಾರುಗಳಿಗೂ ಇದು ಉತ್ತಮ ಪೈಪೋಟಿಯಾಗಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ನಾಲ್ಕು ಸ್ಟಾರ್ ರೇಟಿಂಗ್ ಪಡೆದಕೊಂಡಿರುವುದು ಕೂಡಾ ಮತ್ತಷ್ಟು ಬೇಡಿಕೆ ಹೆಚ್ಚಿಸಿದೆ.